ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಆಶ್ವಯುಜ ಮಾಸ, ಶರದೃತು, ಶುಕ್ಲಪಕ್ಷ, ಸಪ್ತಮಿ ತಿಥಿ, ಮಂಗಳವಾರ, ಅಕ್ಟೋಬರ್ 12, 2021. ಮೂಲ ನಕ್ಷತ್ರ, ರಾಹುಕಾಲ: ಇಂದು ಮಧ್ಯಾಹ್ನ 2.59 ರಿಂದ ಇಂದು ಸಂಜೆ 4.27 ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.08. ಸೂರ್ಯಾಸ್ತ: ಸಂಜೆ 5.56
ತಾ.12-10-2021 ರ ಮಂಗಳವಾರದ ರಾಶಿಭವಿಷ್ಯ.
ಮೇಷ: ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ಉದ್ಯೋಗದ ಸ್ಥಾನ ಬದಲಾವಣೆಯ ವಿಚಾರವಾಗಿ ಚಿಂತೆ ಇರುವುದು. ಶುಭ ಸಂಖ್ಯೆ: 3
ವೃಷಭ: ಹಳೆಯ ಸಾಲ ಮರುಪಾವತಿಯಾಗುವುದು. ಬೇಡವಾದ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಂಭವವಿದೆ. ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಅತೀ ವಿಶ್ವಾಸಿಕರೇ ಎದುರಾಡುವ ಸಂಭವವಿದೆ. ಶುಭ ಸಂಖ್ಯೆ: 9
ಮಿಥುನ: ಅಗೌರವ ಆಗುವ ಸಂಭವ ಇರುವುದರಿಂದ ಸೂಕ್ಷ್ಮವಾಗಿರುವುದು ಉತ್ತಮ. ಅನಪೇಕ್ಷಿತರಿಗೆ ಉಪಕಾರ ಮಾಡುವದು ಸರಿಯಲ್ಲ. ಮಕ್ಕಳ ಚಿಂತೆ ಇರುವುದು. ವಧುವರರಿಗೆ ಮದುವೆಯ ಯೋಗ ಕೂಡಿಬರುವುದು. ಶುಭ ಸಂಖ್ಯೆ: 4
ಕಟಕ: ಸರಳತೆ ದುರುಪಯೋಗವಾಗದಂತೆ ನೋಡಿಕೊಳ್ಳಿ. ಉದ್ಯೋಗದಲ್ಲಿಯ ಕುಂದು ಕೊರತೆಗಳನ್ನು ನಿಭಾಯಿಸುವಿರಿ. ಮಹತ್ವದ ಅಧಿಕಾರ ದೊರೆಯುವ ಯೋಗವಿದೆ. ವ್ಯಾಪಾರದಲ್ಲಿ ಹೆಚ್ಚಿನ ಹಣ ಹೂಡಿಕೆ ಈಗ ಬೇಡ. ಶುಭ ಸಂಖ್ಯೆ: 7
ಸಿಂಹ: ಸಂಗಡಿಗರು ಸಹಕಾರ ತೋರುವುದರಿಂದ ನಿರಾತಂಕ ಜೀವನ ಇರುವುದು. ಆಶೆ ಆಕಾಂಕ್ಷಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವದು. ಉನ್ನತ ಶಿಕ್ಷಣದ ಕನಸು ಈಡೇರುವುದು. ಶುಭ ಸಂಖ್ಯೆ: 1
ಕನ್ಯಾ: ಶತ್ರುಗಳ ಉಪಟಳವು ಆಗಾಗ ಕಂಡುಬಂದರೂ ಧೈರ್ಯದಿಂದ ಕಾರ್ಯ ಸಾಧಿಸುವಿರಿ. ಇಷ್ಟಸಿದ್ಧಿಯ ಕಾಲ ಇರುವುದರಿಂದ ಅನೇಕ ರೀತಿಯ ಭೋಗಭಾಗ್ಯಗಳು ಕೂಡಿಬರಲಿವೆ. ಸಾಂಸಾರಿಕ ಸಮಸ್ಯೆಗಳು ಪರಿಹಾರವಾಗುವವು. ಶುಭ ಸಂಖ್ಯೆ: 6
ತುಲಾ: ದೈಹಿಕ ಸಮಸ್ಯೆಗಳು ಉಲ್ಬಣವಾಗಿ ಕೆಲಸಕ್ಕೆ ತೊಂದರೆ ಉಂಟುಮಾಡುವ ಸಾಧ್ಯತೆ ಇದೆ. ಮನೆಯಲ್ಲಿ ಕಾರ್ಯ ವಿರೋಧ ಇರುವುದು. ಹಣಕಾಸಿನ ವಿಷಯದಲ್ಲಿ ಎಚ್ಚರಿಕೆಯ ನಡೆ ಅಗತ್ಯ. ಮಾತಿಗಿಂತ ಕೃತಿಗೆ ಮಹತ್ವ ಕೊಡಿ. ಶುಭ ಸಂಖ್ಯೆ: 8
ವೃಶ್ಚಿಕ: ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವವು. ಅಪೇಕ್ಷಿತ ಧನಸಹಾಯ ದೊರೆಯುವುದು. ಶುಭ ಸಂಖ್ಯೆ: 2
ಧನು: ಸಹೋದ್ಯೋಗಿಗಳೊಂದಿಗೆ ಮನಸ್ತಾಪವಾಗುವ ಯೋಗವಿದೆ. ಅಪೂರ್ಣ ನಿರ್ಣಯಗಳು ಅಪಾಯ ತರಬಹುದು. ಅತೀ ವಿಶ್ವಾಸಿಕರೇ ಮೋಸಮಾಡುವ ಸಂಭವವಿದೆ. ದೂರ ಪ್ರಯಾಣ ಅಥವಾ ಪರಸ್ಥಳವಾಸ ಸಂಭವ. ಶುಭ ಸಂಖ್ಯೆ: 3
ಮಕರ: ಆಸ್ತಿ ಖರೀದಿ ಅಥವಾ ಮಾರಾಟದ ವ್ಯವಹಾರಗಳು ಕುದುರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಯೋಗ್ಯತಾ ಮೀರಿ ದುಡಿಯುವ ಕಾರ್ಯಭಾರವಿರುವುದು. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದ ಯೋಗವಿದೆ. ಶುಭ ಸಂಖ್ಯೆ: 9
ಕುಂಭ: ಹಣಕಾಸಿನ ವ್ಯವಹಾರದಲ್ಲಿ ಧೈರ್ಯದಿಂದ ಕಾರ್ಯ ಸಾಧನೆ. ಅಪೇಕ್ಷಸದ ಲಾಭ ಸಂಭವ. ಗಡಿಬಿಡಿಯ ವಾತಾವತರಣ, ಬಿಡುವಿಲ್ಲದ ಕಾರ್ಯ, ಮಿತ್ರರೊಂದಿಗೆ ಜಟಾಪಟಿ ಸಂಭವ, ದೀಪದಾನ ಮಾಡಿರಿ. ಶುಭ ಸಂಖ್ಯೆ: 6
ಮೀನ: ಹೊಸ ಯೋಜನೆಗಳು ಬೇಡ. ಸ್ಥಳಾಂತರ, ವರ್ಗಾವಣೆ, ಮನೆ ಬದಲಿ, ಅಧಿಕಾರಿ ವರ್ಗದವರಿಂದ ಕಿರಿಕಿರಿ ಇರುವುದು. ಕೊಟ್ಟ ಸಾಲ ಮರುಪಾವತಿ ಆಗಲಾರದು, ವ್ಯಾಪರಿಗಳಿಗೆ ವ್ಯವಹಾರಿಕ ತೊಂದರೆ ಆಗುವ ಸಾಧ್ಯತೆ ಇದೆ. ಶುಭ ಸಂಖ್ಯೆ: 1