Horoscope Today- ದಿನ ಭವಿಷ್ಯ; ಈ ರಾಶಿಯವರು ಅಪಮಾನ, ಅಪವಾದದಂತಹ ಸಮಸ್ಯೆಗೆ ಸಿಲುಕದಂತೆ ಜಾಗರೂಕರಾಗಬೇಕಿದೆ
Horoscope ಅಕ್ಟೋಬರ್ 16, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.
ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಆಶ್ವಯುಜ ಮಾಸ, ಶರದೃತು, ಶುಕ್ಲಪಕ್ಷ, ಏಕಾದಶಿ ತಿಥಿ, ಶನಿವಾರ, ಅಕ್ಟೋಬರ್ 16, 2021. ಧನಿಷ್ಥೆ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 9.05 ರಿಂದ ಇಂದು ಬೆಳಿಗ್ಗೆ 10.33 ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.09. ಸೂರ್ಯಾಸ್ತ: ಸಂಜೆ 5.54
ತಾ.16-10-2021 ರ ಶನಿವಾರದ ರಾಶಿಭವಿಷ್ಯ:
ಮೇಷ: ಗುರಿಸಾಧನೆಗೆ ಇದು ಸೂಕ್ತ ಸಮಯ. ಪ್ರಯತ್ನಿಸಿದ ಕಾರ್ಯಗಳು ಕೈಗೂಡುವವು. ವಿದ್ಯಾರ್ಥಿಗಳಿಗೆ ಉನ್ನತ ಪ್ರಶಸ್ತಿ ದೊರಕುವ ಸಾಧ್ಯತೆ ಇರುವುದು. ಶುಭ ಸಂಖ್ಯೆ: 6
ವೃಷಭ: ಅಪಮಾನ, ಅಪವಾದದಂತಹ ಸಮಸ್ಯೆಗೆ ಸಿಲುಕದಂತೆ ಜಾಗರೂಕರಾಗಿರಿ. ಈ ಸಮಯದಲ್ಲಿ ಮಾತನಾಡುವ ಬದಲು ಮಾತು ಕೇಳುವುದು ಉತ್ತಮ. ಮಕ್ಕಳು ಶಾಲಾ ಕಾಲೇಜುಗಳಲ್ಲಿ ಸಾಧನೆ ತೋರುವರು. ಶುಭ ಸಂಖ್ಯೆ: 9
ಮಿಥುನ: ಧನಮದಕ್ಕಿಂತ ವಿದ್ಯಾಮದ ಅಪಾಯಕಾರಿ ಆದರಿಂದ ತೊಂದರೆ ಆಗುವ ಸಾಧ್ಯತೆ ಇದೆ ವಿನಯದಿಂದ ವರ್ತಿಸಿರಿ. ಅಕಾಲಿಕ ಒತ್ತಡಗಳಿಂದ ಕಾರ್ಯಹಾನಿ. ಪ್ರೇಮಿಗಳಿಗೆ ಅಪೇಕ್ಷೆಯಂತೆ ಕಂಕಣಬಲ ಕೂಡಿಬರುವುದು. ಶುಭ ಸಂಖ್ಯೆ: 1
ಕಟಕ: ಕುಟುಂಬದಲ್ಲಿ ವಾದ ಬೇಡ. ಉತ್ತಮ ಸಾಧನೆಯಿಂದ ಬಂಧುವರ್ಗದ ಪ್ರಶಂಸೆಗೆ ಪಾತ್ರರಾಗುವಿರಿ. ವ್ಯವಹಾರದಲ್ಲಿಯ ಚತುರತೆ ಒಳ್ಳೆಯ ಆದಾಯವನ್ನು ತಂದು ಕೊಡುವುದು. ಸಮತೋಲಿತ ಜೀವನವಿರುವುದು. ಶುಭ ಸಂಖ್ಯೆ: 8
ಸಿಂಹ: ಅಂತಃಶತ್ರುಗಳ ಕಾಟ ಹೆಚ್ಚಾಗುವ ಲಕ್ಷಣವಿದೆ. ಹಳೆಯ ಸಮಸ್ಯೆಗಳು ಮತ್ತೆ ಎದುರಾಗುವ ಸಂಭವವಿದೆ. ಚಂಚಲತೆ ಬೇಡ, ಹಿಡಿದ ಕಾರ್ಯವನ್ನು ಪೂರ್ಣಗೊಳಿಸಿ. ಆರ್ಥಿಕ ಲಾಭವಿದೆ ಆದರೆ ವಿದ್ಯೆಯಲ್ಲಿ ಹಿನ್ನಡೆ ಕಂಡುಬರುವುದು. ಶುಭ ಸಂಖ್ಯೆ: 2
ಕನ್ಯಾ: ಅನಾವಶ್ಯಕ ತಿರುಗಾಟದಿಂದ ಆಲಸ್ಯ. ದುರ್ಜನರ ಸಹವಾಸ ದೋಷ ಕಂಡುಬರುವುದು. ಐಷಾರಾಮಿ ವಸ್ತುಗಳ ಖರೀದಿ ಸಂಭವ. ವ್ಯಾಪಾರ-ಉದ್ಯಮಗಳಲ್ಲಿ ತೃಪ್ತಿದಾಯಕ ಲಾಭವಿರುವುದು. ವಿದ್ಯಾರ್ಥಿಗಳಿಗೆ ಹಿನ್ನಡೆ ಇರುವುದು. ಶುಭ ಸಂಖ್ಯೆ: 7
ತುಲಾ: ಹೊಸ ಯೋಜನೆಗೆ ಸಂಬಂಧಿಸಿದಂತೆ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅ ರ್ಧಕ್ಕೆ ನಿಲ್ಲುವ ಸಂಭವವಿದೆ. ಶುಭ ಸಂಖ್ಯೆ: 4
ವೃಶ್ಚಿಕ: ಗಣ್ಯರೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿಯಾಗುವುದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸನ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಶುಭ ಸಂಖ್ಯೆ: 5
ಧನು: ಹಲವು ರೀತಿಯಿಂದ ಧನಾಗಮನವಿದ್ದು ಐಶ್ವರ್ಯವೃದ್ಧಿ, ಸಂಸಾರ ಸುಖ. ಅಪೇಕ್ಷಿತ ವಸ್ತು, ಪ್ರಾಪ್ತಿ, ಮಿತ್ರಾಗಮನ, ವಿಶೇಷ ಸಂತೋಷ ಪ್ರಸಂಗಗಳು ಒದಗಿ ಬಂದು ಸಂಭ್ರಮವೆನಿಸುತ್ತದೆ. ಶುಭ ಸಂಖ್ಯೆ: 9
ಮಕರ: ಅತಿಯಾದ ಆತ್ಮವಿಶ್ವಾಸ, ಆಲಸ್ಯದಿಂದ ಬಹುವಿಧವಾದ ಕಷ್ಟನಷ್ಟಗಳ ಅನುಭವವಾಗುವದು. ಸಹನೆಯಿಂದ ವ್ಯವಹರಿಸಿರಿ.ಗುರುಬಲ ವೃದ್ಧಿಸುವುದು. ಮದುವೆಯ ಸಂಭ್ರಮದ ವಾತಾವರಣ ಕಂಡುಬರುವುದು. ಹಿರಿಯರ ಮಾತಿನಂತೆ ನಡೆಯುವುದು ಉತ್ತಮ. ಶುಭ ಸಂಖ್ಯೆ: 6
ಕುಂಭ: ಆರಂಭದಲ್ಲಿ ಹರ್ಷ, ಉತ್ಸಾಹ ಇರುವದು ಕೊನೆಗೆ ಮನೋವ್ಯಥೆ. ಮನೆಯಲ್ಲಿ ಸಂತೋಷದ ವಾತಾವರಣ ಇರುವುದು. ಗ್ರಹೋಪಯೋಗಿ ವಸ್ತುಗಳ ಖರೀದಿ, ಮನೆ ರಿಪೇರಿ ಮೊದಲಾದ ಕೆಲಸಗಳಾಗುವವು. ಶ್ರೀಲಕ್ಷ್ಮೀಸ್ತೋತ್ರ ಪಠಿಸಿರಿ. ಶುಭ ಸಂಖ್ಯೆ: 3
ಮೀನ: ಏಕಾಂಗಿತನದ ಬೇಸರ ಪರಿಸರದಿಂದ ಹೊರಬಂದು ಹೊಸಬರೊಂದಿಗೆ ಬಾಳುವ ಸಂಕಲ್ಪ. ನಿರಾಕರಿಸಿದ್ದ ಜವಾಬ್ದಾರಿ ಪುನ: ಸುಪರ್ದಿಗೆ ಬಂದು ಮೆಚ್ಚುಗೆಯಾಗಿ ನಿಭಾವಣೆ. ಬಾಳ ಸಂಗಾತಿ ಜತೆಗಿನ ಚಿಕ್ಕ ಪುಟ್ಟ ಚರ್ಚೆಗಳೇ ಮುಂದೆ ವಿರಸಕ್ಕೆ ದಾರಿಯಾದೀತು. ಶುಭ ಸಂಖ್ಯೆ: 5