Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ನಿರೀಕ್ಷೆಗೆ ತಕ್ಕಂತೆ ಕೆಲಸ ಆಗದೇ ಮಾನಸಿಕ ಅಶಾಂತಿ ಕಂಡುಬರುವುದು

Horoscope ಅಕ್ಟೋಬರ್ 18, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ನಿರೀಕ್ಷೆಗೆ ತಕ್ಕಂತೆ ಕೆಲಸ ಆಗದೇ ಮಾನಸಿಕ ಅಶಾಂತಿ ಕಂಡುಬರುವುದು
ದಿನ ಭವಿಷ್ಯ
Follow us
TV9 Web
| Updated By: ಆಯೇಷಾ ಬಾನು

Updated on: Oct 18, 2021 | 6:49 AM

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಆಶ್ವಯುಜ ಮಾಸ, ಶರದೃತು, ಶುಕ್ಲಪಕ್ಷ, ತ್ರಯೋದಶಿ ತಿಥಿ, ಸೋಮವಾರ, ಅಕ್ಟೋಬರ್ 18, 2021. ಪೂರ್ವಾಭಾದ್ರೆ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 7.36 ರಿಂದ ಇಂದು ಬೆಳಿಗ್ಗೆ 9.03 ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.09. ಸೂರ್ಯಾಸ್ತ: ಸಂಜೆ 5.52

ತಾ.18-10-2021 ರ ಸೋಮವಾರದ, ರಾಶಿಭವಿಷ್ಯ

ಮೇಷ: ಕೆಲಸದಲ್ಲಿ ಅಭಿವೃದ್ಧಿ ಇದೆ. ಹಣಕಾಸಿನ ವ್ಯವಹಾರವನ್ನು ತಾಳ್ಮೆಯಿಂದ ನಿಭಾಯಿಸಿ. ಮನೆಯಲ್ಲಿ ಸಂಭ್ರಮದ ವಾತಾವರಣ ಇರುವುದು. ಮಂಗಲ ಕಾರ್ಯ ಜರುಗುವವು. ಶುಭ ಸಂಖ್ಯೆ: 2

ವೃಷಭ: ಪರಿವಾರದಲ್ಲಿ ಹೊಸಕಳೆ ಬರುವುದು. ಕುಟುಂಬದಲ್ಲಿ ಸೌಖ್ಯ ಇರುವುದು. ಮಹತ್ವದ ಕೆಲಸಕ್ಕೆ ವಿಘ್ನ ಬರುವ ಸಾಧ್ಯತೆ ಇದೆ ಎಚ್ಚರಿಕೆವಹಿಸಿರಿ. ವ್ಯವಹಾರಗಳು ಲಾಭದಾಯಕವಾಗಿ ಇರುವವು. ಶುಭ ಸಂಖ್ಯೆ: 6

ಮಿಥುನ: ಅಪಮಾನ, ಅಪವಾದದಂತಹ ಸಮಸ್ಯೆಗೆ ಸಿಲುಕದಂತೆ ಜಾಗರೂಕರಾಗಿರಿ. ಈ ಸಮಯದಲ್ಲಿ ಮಾತನಾಡುವ ಬದಲು ಮಾತು ಕೇಳುವುದು ಉತ್ತಮ. ಮಕ್ಕಳು ಶಾಲಾ ಕಾಲೇಜುಗಳಲ್ಲಿ ಸಾಧನೆ ತೋರುವರು. ಶುಭ ಸಂಖ್ಯೆ: 9

ಕಟಕ: ಧನಮದಕ್ಕಿಂತ ವಿದ್ಯಾಮದ ಅಪಾಯಕಾರಿ ಆದರಿಂದ ತೊಂದರೆ ಆಗುವ ಸಾಧ್ಯತೆ ಇದೆ ವಿನಯದಿಂದ ವರ್ತಿಸಿರಿ. ಅಕಾಲಿಕ ಒತ್ತಡಗಳಿಂದ ಕಾರ್ಯಹಾನಿ. ಪ್ರೇಮಿಗಳಿಗೆ ಅಪೇಕ್ಷೆಯಂತೆ ಕಂಕಣಬಲ ಕೂಡಿಬರುವುದು. ಶುಭ ಸಂಖ್ಯೆ: 3

ಸಿಂಹ: ಮಾತಿನಂತೆಯೇ ಎಲ್ಲವೂ ನಡೆಯುವುದಿಲ್ಲ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಉದಯೋನ್ಮುಖ ಪ್ರತಿಭೆಗಳಿಗೆ ಅವಕಾಶ ದೊರೆಯುವುದು. ಲಾಭದಾಯಕ ಹುದ್ದೆ ದೊರೆಯುವುದು. ಶುಭ ಸಂಖ್ಯೆ: 8

ಕನ್ಯಾ: ವ್ಯಕ್ತಿತ್ವಕ್ಕೆ ತಕ್ಕ ಗೌರವಗಳು ದೊರೆಯುವವು. ಚಾಣಾಕ್ಷತನದಿಂದ ಕಷ್ಟ ಪರಿಹರಿಸಿಕೊಳ್ಳುವಿರಿ. ಅಪೇಕ್ಷಿತ ಕಾರ್ಯಗಳು ಕೈಗೂಡುವವು. ಸಂಬಂಧಿಗಳಿಂದ ಸಹಕಾರ ದೊರೆಯುವುದು. ದೂರ ಪ್ರಯಾಣ, ಪರಸ್ಥಳವಾಸ ಸಂಭವ. ಶುಭ ಸಂಖ್ಯೆ: 5

ತುಲಾ: ನಿರೀಕ್ಷೆಗೆ ತಕ್ಕಂತೆ ಕೆಲಸ ಆಗದೇ ಮಾನಸಿಕ ಅಶಾಂತಿ ಕಂಡುಬರುವುದು. ವ್ಯವಹಾರಗಳಲ್ಲಿ ಹಾನಿಯಾಗುವ ಭಯ ಇರುವುದು. ಪರಿಣಿತರ ಅಥವಾ ಹಿರಿಯರ ಸಲಹೆಯಂತೆ ಮುಂದುವರೆಯಿರಿ. ವಿದ್ಯಾರ್ಥಿಗಳಿಗೆ ಒಳ್ಳೆಯ ಫಲವಿದೆ. ಶುಭ ಸಂಖ್ಯೆ: 7

ವೃಶ್ಚಿಕ: ಅನೇಕ ರೀತಿಯ ಲಾಭ ದೊರೆಯುವ ಸಾಧ್ಯತೆ ಇದೆ. ಆದರ್ಶ ವ್ಯಕ್ತಿತ್ವದಿಂದ ಜನ ಮನ್ನಣೆಗೆ ಪಾತ್ರರಾಗುವಿರಿ.ಎಲ್ಲ ಕೆಲಸಗಳೂ ಸಕಾಲದಲ್ಲಿ ಪೂರ್ಣವಾಗುವವು. ಕೌಟುಂಬಿಕ ವಿವಾದ ಕೊನೆಗೊಳ್ಳುವುದು. ಶುಭ ಸಂಖ್ಯೆ: 2

ಧನು: ಚಂಚಲಚಿತ್ತದಿಂದ ಕಾರ್ಯಹಾನಿಯಾಗುವ ಲಕ್ಷಣಗಳಿವೆ. ಆಸ್ತಿ ಸಂಬಂದಿತ ಕ್ರಯವಿಕ್ರಯ ವ್ಯವಹಾರಗಳು ಕುದುರುವವು. ಅನವಶ್ಯಕ ಮಾತಿನಿಂದ ಇಕ್ಕಟ್ಟಿಗೆ ಸಿಕ್ಕಿಕೊಳ್ಳುವ ಸಾಧ್ಯತೆ ಇದೆ. ತಜ್ಞರ ಸಹಾಯ ಪಡೆಯಿರಿ. ಶುಭ ಸಂಖ್ಯೆ: 9

ಮಕರ: ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯಪ್ರವೃತ್ತಿಯು ಉತ್ತಮ ಫಲಕೊಡುವದು. ಹಳೆಯ ಬಾಕಿ ವಸೂಲಾಗುವದು. ವ್ಯಾಜ್ಯಗಳು ಅಂತ್ಯಕಾಣುವವು. ಗ್ರಹ ಸೌಖ್ಯವಿರುವುದು. ಶುಭ ಸಂಖ್ಯೆ: 3

ಕುಂಭ: ಪ್ರಮುಖ ಯೋಜನೆಗಳ ಜವಾಬ್ದಾರಿ ಹೆಚ್ಚುವುದು. ಆರ್ಥಿಕ ಅಭಿವೃದ್ಧಿ ಕಂಡುಬರುವದು. ಸ್ನೇಹಿತರ ಭಿನ್ನಾಭಿಪ್ರಾಯ ಬಗೆಹರಿಯುವದು. ಶತೃಗಳೂ ಸೌಮ್ಯರಾಗುವ ಕಾಲ ಇರುವುದರಿಂದ ಅಪೇಕ್ಷಿತ ಕಾರ್ಯವನ್ನು ಸಾಧಿಸುವಿರಿ. ಶುಭ ಸಂಖ್ಯೆ: 4

ಮೀನ: ಕುಟುಂಬದಲ್ಲಿ ಮನಸ್ತಾಪ ಕಂಡುಬರುವುದು. ಗೌಪ್ಯ ವ್ಯವಹಾರಗಳನ್ನು ಸರಿದೂಗಿಸಲು ಸಾಧ್ಯವಾಗದೇ ಪರಿತಪಿಸುವಿರಿ. ಆಸಕ್ತಿ ಆಪತ್ತು ತರುವ ಸಂಭವವಿದೆ. ಮಹತ್ವದ ನಿರ್ಧಾರಗಳಿಗೆ ಇದು ಸೂಕ್ತಕಾಲವಲ್ಲ. ಹಣಹೂಡಿಕೆ ಈಗ ಬೇಡ. ಶುಭ ಸಂಖ್ಯೆ: 6

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಸಂಪರ್ಕ ಸಂಖ್ಯೆ: 9972848937