Horoscope Today- ದಿನ ಭವಿಷ್ಯ; ಈ ರಾಶಿಯವರು ಜೀವನದ ಹೊಸ ಆಯಾಮದೆಡೆಗೆ ಸಾಗುವ ಸೂಚನೆ

Horoscope ಅಕ್ಟೋಬರ್ 19, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರು ಜೀವನದ ಹೊಸ ಆಯಾಮದೆಡೆಗೆ ಸಾಗುವ ಸೂಚನೆ
ದಿನ ಭವಿಷ್ಯ
Follow us
TV9 Web
| Updated By: shruti hegde

Updated on: Oct 19, 2021 | 7:12 AM

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಆಶ್ವಯುಜ ಮಾಸ, ಶರದೃತು, ಶುಕ್ಲಪಕ್ಷ, ಚತುರ್ದಶಿ ತಿಥಿ, ಮಂಗಳವಾರ, ಅಕ್ಟೋಬರ್ 19, 2021. ಉತ್ತರಾಭಾದ್ರೆ ನಕ್ಷತ್ರ, ರಾಹುಕಾಲ: ಇಂದು ಮಧ್ಯಾಹ್ನ 2 ರಿಂದ ಇಂದು ಸಂಜೆ 4 ಗಂಟೆವರೆಗೆ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6:10. ಸೂರ್ಯಾಸ್ತ: ಸಂಜೆ 5.52

ತಾ.19-10-2021 ರ ಮಂಗಳವಾರದ ರಾಶಿಭವಿಷ್ಯ

ಮೇಷ ಆರ್ಥಿಕ ಸ್ಥಿತಿ ಸುಧಾರಿಸುವದು. ಮಕ್ಕಳ ಉದ್ಯೋಗದ ಸಮಸ್ಯೆಗೆ ಪರಿಹಾರ ದೊರೆಯುವದು. ಜೀವನದ ಹೊಸ ಆಯಾಮದೆಡೆಗೆ ಸಾಗುವ ಸೂಚನೆ ಇದೆ. ಶುಭ ಸಂಖ್ಯೆ: 5

ವೃಷಭ ಯೋಜನೆಗಳಿಗೆ ಪೂರ್ವ ತಯಾರಿ ಮಾಡುವ ಅಗತ್ಯತೆ ಕಂಡುಬರುವದು. ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವದು ಒಳಿತು. ಶುಭ ಸಂಖ್ಯೆ: 9

ಮಿಥುನ ಹಿತವಾದ ಮಾತುಗಳು ಗೌರವವನ್ನು ವೃದ್ಧಿಸುವವು. ಆರ್ಥಿಕ ಸಂಕಷ್ಟಗಳು ಎದುರಾಗುವವು. ಸಮಾಧಾನ ಚಿತ್ತದಿಂದ ಕಾರ್ಯ ನಿರ್ವಹಿಸಿರಿ. ಹಿತೈಷಿಗಳಂತೆ ವರ್ತಿಸುವವರಿಂದ ದೂರವಿರಿ. ಶುಭ ಸಂಖ್ಯೆ: 1

ಕರ್ಕ ಹಿರಿಯರಿಗೆ ಅನಾರೋಗ್ಯ ಸಂಭವ. ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಉದ್ಯೋಗ ಬದಲಿ ಮಾಡುವದು ಸದ್ಯಕ್ಕೆ ಬೇಡ. ಹಣಕಾಸಿನ ವಿಷಯದಲ್ಲಿ ಬಂಧುಗಳು ಸಹಕಾರ ತೋರುವರು. ಶುಭ ಸಂಖ್ಯೆ: 8

ಸಿಂಹ ಆತ್ಮೀಯರೊಂದಿಗೆ ಮನಸ್ತಾಪವಾಗುವ ಸಾಧ್ಯತೆಗಳಿವೆ. ಸ್ವಂತ ಉದ್ಯಮಿಗಳು ಉಂಟಾಗುವ ಹಾನಿಯಿಂದ ತಪ್ಪಿಸುವ ಉಪಾಯ ಮಾಡಿ. ವ್ಯಾಪಾರದ ವಿಷಯದಲ್ಲಿ ಮೋಸವಾಗುವ ಸಾಧ್ಯತೆ ಇದೆ. ಸಾಲಗಾರರು ಸಹಕಾರ ತೋರುವರು. ಶುಭ ಸಂಖ್ಯೆ: 4

ಕನ್ಯಾ ವಸ್ತು-ವಾಹನ-ಆಸ್ತಿ ಖರೀದಿ ಯೋಗವಿದೆ.ಅನವಶ್ಯಕ ಅಲೆದಾಟದ ಸಾಧ್ಯತೆ ಇದೆ. ಮನೆಯ ಹಿರಿಯರ ಆರೋಗ್ಯದ ಚಿಂತೆ ಇರುವದು. ಬುದ್ಧಿವಂತಿಕೆಯಿಂದ ದೊಡ್ಡ ಕೆಲಸವನ್ನೂ ಸಹಜವಾಗಿ ಮಾಡುವಿರಿ. ಶುಭ ಸಮಖ್ಯೆ: 7

ತುಲಾ ಹಳೆಯ ಸಾಲ ಮರುಪಾವತಿಯಾಗುವದು. ಬೇಡವಾದ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಂಭವವಿದೆ. ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಅತೀ ವಿಶ್ವಾಸಿಕರೇ ಎದುರಾಡುವ ಸಂಭವವಿದೆ. ಶುಭ ಸಂಖ್ಯೆ: 3

ವೃಶ್ಚಿಕ ಸ್ವಪ್ರತಿಷ್ಟೆ ಬಿಟ್ಟು ಬಲ್ಲವರ ಸಹಾಯ ಪಡೆಯಿರಿ. ಮರೆತು ಹೋದ ವಸ್ತು ಲಾಭದಾಯಕವಾಗಿ ಪರಿಣಮಿಸುವದು. ಹಳೆಯ ಮಿತ್ರರ ಒಡನಾಟ ಸಂತಸ ತರುವದು. ಆರ್ಥಿಕ ಸ್ಥಿತಿಯಲ್ಲಿ ಬೆಳವಣಿಗೆ ಇರುವದು. ಶುಭ ಸಂಖ್ಯೆ: 2

ಧನು ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವದು. ಎಚ್ಚರಿಕೆವಹಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವದು. ಗೊಂದಲಕ್ಕೆ ಒಳಗಾಗದೇ ಮುನ್ನುಗ್ಗಿರಿ. ಕೊಟ್ಟಸಾಲ ಪಾವತಿಯಾಗುವದು. ಶುಭ ಸಂಖ್ಯೆ: 5

ಮಕರ ವೃತ್ತಿಪರೆತೆಯಿಂದ ಕಾರ್ಯ ಕೈಗೂಡುವದು. ಪರಿವಾರದೊಂದಿಗೆ ದೂರ ಪ್ರವಾಸದ ಯೋಗವಿದೆ. ಉತ್ತಮವಾದ ಸಮಯ ಇರುವದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುವದು. ಶುಭ ಸಂಖ್ಯೆ: 3

ಕುಂಭ ಹಲವು ರೀತಿಯಿಂದ ಧನಾಗಮನವಿದ್ದು ಐಶ್ವರ್ಯವೃದ್ಧಿ, ಸಂಸಾರ ಸುಖ. ಅಪೇಕ್ಷಿತ ವಸ್ತು, ಪ್ರಾಪ್ತಿ, ಮಿತ್ರಾಗಮನ, ವಿಶೇಷ ಸಂತೋಷ ಪ್ರಸಂಗಗಳು ಒದಗಿ ಬಂದು ಸಂಭ್ರಮವೆನಿಸುತ್ತದೆ. ಶುಭ ಸಂಖ್ಯೆ: 6

ಮೀನ ಅಪರಿಮಿತ ಖರ್ಚು ತೋರಿದರೂ ಅಡಚಣೆಯಾಗುವ ಸಂಭವವಿಲ್ಲದೆ. ಸ್ಥಾನಮಾನಗಳೂ ಭದ್ರವಾಗಿ ಸಾಂಸಾರಿಕ ದೃಷ್ಟಿಯಲ್ಲೂ ಸುಖದಾಯಕ, ವಿಶೆಷ ಪ್ರಯತ್ನದಿಂದ ವ್ಯವಹಾರ ಸಿದ್ಧಿ ಇರುವದು. ಶುಭ ಸಂಖ್ಯೆ: 1

Basavaraj Guruji

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಸಂಪರ್ಕ ಸಂಖ್ಯೆ: 9972848937