Horoscope Today- ದಿನ ಭವಿಷ್ಯ; ಮೇಷ ರಾಶಿಯವರಿಗೆ ಅವಕಾಶಗಳು ಕಾದಿವೆ, ಗುರಿಸಾಧನೆಗೆ ಇದು ಸೂಕ್ತ ಸಮಯ
Horoscope ಅಕ್ಟೋಬರ್ 21, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.
ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಆಶ್ವಯುಜ ಮಾಸ, ಶರದೃತು, ಶುಕ್ಲಪಕ್ಷ, ಪಾಡ್ಯ ತಿಥಿ, ಗುರುವಾರ, ಅಕ್ಟೋಬರ್ 21, 2021. ಅಶ್ವಿನಿ ನಕ್ಷತ್ರ, ರಾಹುಕಾಲ: ಇಂದು ಮಧ್ಯಾಹ್ನ 1.27 ರಿಂದ ಇಂದು ಮಧ್ಯಾಹ್ನ 2.54 ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.10. ಸೂರ್ಯಾಸ್ತ: ಸಂಜೆ 5.50
ತಾ.21-10-2021 ರ ಗುರುವಾರದ ರಾಶಿ ಭವಿಷ್ಯ.
ಮೇಷ: ಅವಕಾಶಗಳು ಕಾದಿವೆ. ಗುರಿಸಾಧನೆಗೆ ಇದು ಸೂಕ್ತ ಸಮಯ. ಪ್ರಯತ್ನಿಸಿದ ಕಾರ್ಯಗಳು ಕೈಗೂಡುವವು. ವಿದ್ಯಾರ್ಥಿಗಳಿಗೆ ಉನ್ನತ ಪ್ರಶಸ್ತಿ ದೊರಕುವ ಸಾಧ್ಯತೆ ಇರುವುದು. ಶುಭ ಸಂಖ್ಯೆ: 7
ವೃಷಭ: ಕೆಲಸದಲ್ಲಿ ಅಭಿವೃದ್ಧಿ ಇದೆ. ಹಣಕಾಸಿನ ವ್ಯವಹಾರವನ್ನು ತಾಳ್ಮೆಯಿಂದ ನಿಭಾಯಿಸಿ. ಮನೆಯಲ್ಲಿ ಸಂಭ್ರಮದ ವಾತಾವರಣ ಇರುವುದು. ಮಂಗಲ ಕಾರ್ಯ ಜರುಗುವವು. ಶುಭ ಸಂಖ್ಯೆ: 1
ಮಿಥುನ: ಮನೆಯಲ್ಲಿ ಅಸಮಾಧಾನ ಇರುವುದು. ಕೂಡಿಟ್ಟ ಹಣ ಹಾನಿಯಾಗುವ ಸಂಭವವಿದೆ. ಅಣ್ಣತಮ್ಮಂದಿರಲ್ಲಿ ಸಹಕಾರ ಅತ್ಯಂತ ಅವಶ್ಯಕ. ತೋಟಗಾರಿಕೆ ಫಲಪ್ರದವಾಗಲಿದೆ. ವ್ಯಾಪಾರ ವೃದ್ಧಿಯಾಗುವುದು. ಶುಭ ಸಂಖ್ಯೆ: 9
ಕಟಕ: ಅಗೌರವ ಆಗುವ ಸಂಭವ ಇರುವುದರಿಂದ ಸೂಕ್ಷ್ಮವಾಗಿರುವುದು ಉತ್ತಮ. ಅನಪೇಕ್ಷಿತರಿಗೆ ಉಪಕಾರ ಮಾಡುವುದು ಸರಿಯಲ್ಲ. ಮಕ್ಕಳ ಚಿಂತೆ ಇರುವದು. ವಧುವರರಿಗೆ ಮದುವೆಯ ಯೋಗ ಕೂಡಿಬರುವುದು. ಶುಭ ಸಂಖ್ಯೆ: 9
ಸಿಂಹ: ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ. ಶುಭ ಸಂಖ್ಯೆ: 4
ಕನ್ಯಾ: ಜವಾಬ್ದಾರಿಯ ನಿಮಿತ್ತ ದೂರ ಪ್ರಯಾಣದ ಸಾಧ್ಯತೆ ಇದೆ. ಉದ್ಯೋಗದಲ್ಲಿ ಪ್ರಗತಿ ಇರುವದು. ಅಹಂಭಾವದಿಂದ ಕಠಿಣ ಪರಿಸ್ಥಿತಿಯನ್ನು ಎದುರಿಸುವ ಪ್ರಸಂಗವಿದೆ ಎಚ್ಚರಿಕೆ ವಹಿಸಿರಿ. ನಮೃತೆಗೆ ಯೋಗ್ಯ ಸಮ್ಮಾನ ದೊರೆಯುವುದು. ಶುಭ ಸಂಖ್ಯೆ: 6
ತುಲಾ: ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸುವಿರಿ. ಕಠಿಣ ಪರಿಸ್ಥಿತಿಯಲ್ಲಿಯೂ ದುರ್ಲಭ ಸಾಧನೆ ಮಾಡುವಿರಿ. ಪರಿವಾರದಲ್ಲಿ ಸಂತಸವಿರುವದು. ಕೇಡುಬಯಸುವ ಜನರಿಗೆ ಅಂಜದೇ ಮುಂದುವರಿಯಿರಿ. ಶುಭ ಸಂಖ್ಯೆ: 3
ವೃಶ್ಚಿಕ: ಪ್ರಮುಖ ಯೋಜನೆಗಳ ಜವಾಬ್ದಾರಿ ಹೆಚ್ಚುವದು. ಆರ್ಥಿಕ ಅಭಿವೃದ್ಧಿ ಕಂಡುಬರುವದು. ಸ್ನೇಹಿತರ ಭಿನ್ನಾಭಿಪ್ರಾಯ ಬಗೆಹರಿಯುವದು. ಶತೃಗಳೂ ಸೌಮ್ಯರಾಗುವ ಕಾಲ ಇರುವದರಿಂದ ಅಪೇಕ್ಷಿತ ಕಾರ್ಯವನ್ನು ಸಾಧಿಸುವಿರಿ. ಶುಭ ಸಂಖ್ಯೆ: 8
ಧನು: ಹೊಸ ಆಲೋಚನೆಯೊಂದು ಕಾರ್ಯರೂಪಕ್ಕೆ ಬರುವದು. ಸಹವರ್ತಿಗಳ ಅಸಹಕಾರ ಇದ್ದರೂ ತೊಂದರೆ ಆಗಲಾರದು. ಅನಪೇಕ್ಷಿತ ಸ್ಥಾನ ಬದಲಾವಣೆ ಆಗುವ ಸಾಧ್ಯತೆ ಇದೆ. ಸರಿಯಾದ ಧ್ಯೇಯದಿಂದ ಸಮಾಧಾನ ಇರುವುದು. ಶುಭ ಸಂಖ್ಯೆ: 2
ಮಕರ: ಧನಾರ್ಜನೆಯ ಮಾರ್ಗವು ಶ್ರೇಷ್ಠ ಮಟ್ಟದಲ್ಲಿದ್ದು, ಐಶ್ವರ್ಯ ಸಮೃದ್ಧಿಯಾಗುತ್ತದೆ. ಸಂಸಾರಿಕ ದೃಷ್ಟಿಯಲ್ಲೂ ಸುಖ, ಸಂಭ್ರಮಗಳಿದ್ದು ತೃಪ್ತಿ ಲಭಿಸಿದರೂ ಶತ್ರುಜನರ ಪೀಡೆ ಅಧಿಕವಾಗುತ್ತದೆ. ಅನಿವಾರ್ಯ ಪ್ರವಾಸ ಸಾಧ್ಯತೆ ಇದೆ. ಶುಭ ಸಂಖ್ಯೆ: 5
ಕುಂಭ: ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ಮೊದಲು ಕಷ್ಟ ನಂತರದಲ್ಲಿ ಉತ್ತಮವಾದ ಫಲ ದೊರೆಯುವುದು. ಗುರುಬಲ ವೃದ್ಧಿಸುವದು. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವುದು. ಶುಭ ಸಂಖ್ಯೆ: 7
ಮೀನ: ಮಹತ್ತರ ಯೋಜನೆಗಳು ಕಾರ್ಯಗತವಾಗಲು ಪ್ರಾಜ್ಞರ ಮಾರ್ಗದರ್ಶನ. ಜೀವನದ ಏಳಿಗೆಗೆ ಚಿಂತನೆ. ಕೆಲಸದ ನಡುವೆ ಮತ್ತೊಂದು ಕಾರ್ಯ ವಹಿಸಿಕೊಳ್ಳಲು ಚೈತನ್ಯ. ಮಹಿಳೆಯರು ಪಶ್ಚಾತಾಪಕ್ಕೆ ಅವಕಾವಿಲ್ಲದಂತೆ ನಡೆದುಕೊಳ್ಳುವುದು ಒಳಿತು. ಶುಭ ಸಂಖ್ಯೆ: 3