Horoscope Today- ದಿನ ಭವಿಷ್ಯ; ಮಿಥುನ ರಾಶಿಯ ಮಹಿಳೆಯರ ಇಷ್ಟಾರ್ಥ ಸಿದ್ಧಿಸುವುದು
Horoscope ಅಕ್ಟೋಬರ್ 22, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.
ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಆಶ್ವಯುಜ ಮಾಸ, ಶರದೃತು, ಕೃಷ್ಣಪಕ್ಷ, ಬಿದಿಗೆ ತಿಥಿ, ಶುಕ್ರವಾರ, ಅಕ್ಟೋಬರ್ 22, 2021. ಭರಣಿ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 10.32 ರಿಂದ ಇಂದು ಬೆಳಿಗ್ಗೆ 11.59 ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.10. ಸೂರ್ಯಾಸ್ತ: ಸಂಜೆ 5.50
ತಾ.22-10-2021 ರ ಶುಕ್ರವಾರದ ರಾಶಿಭವಿಷ್ಯ.
ಮೇಷ: ಸತತ ಪ್ರಯತ್ನಕ್ಕೆ ಫಲ ಇದ್ದೇ ಇರುತ್ತದೆ. ವೃತ್ತಿಕೌಶಲ್ಯದಿಂದ ಅಸಾಧ್ಯವಾದ ಕಾರ್ಯವನ್ನೂ ಸಾಧಿಸುವಿರಿ. ಧನಮೂಲಗಳು ಹೆಚ್ಚಾಗುವವು. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವುದು. ಶುಭ ಸಂಖ್ಯೆ: 9
ವೃಷಭ: ಆಸ್ತಿ ಖರೀದಿ ಅಥವಾ ಮಾರಾಟದ ವ್ಯವಹಾರಗಳು ಕುದುರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಯೋಗ್ಯತಾ ಮೀರಿ ದುಡಿಯುವ ಕಾರ್ಯಭಾರವಿರುವುದು. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದ ಯೋಗವಿದೆ. ಶುಭ ಸಂಖ್ಯೆ: 2
ಮಿಥುನ: ಮಹಿಳೆಯರ ಇಷ್ಟಾರ್ಥ ಸಿದ್ಧಿಸುವುದು. ಕೂಡಿಟ್ಟ ಹಣ ಉಪಯೋಗವಾಗುವ ಸಂಭವವಿದೆ. ಸರಕಾರಿ ಕೆಲಸಗಳು ನಿರ್ವಿಘ್ನವಾಗಿ ಆಗುವವು. ನ್ಯಾಯಾಲಯದಲ್ಲಿ ಜಯ ದೊರೆಯುವುದು. ವಿದ್ಯೆಯಲ್ಲಿ ಸಾಧನೆ ಇರುವುದು. ಶುಭ ಸಂಖ್ಯೆ: 4
ಕಟಕ: ಅನೇಕ ರೀತಿಯ ಲಾಭ ದೊರೆಯುವ ಸಾಧ್ಯತೆ ಇದೆ. ಆದರ್ಶ ವ್ಯಕ್ತಿತ್ವದಿಂದ ಜನ ಮನ್ನಣೆಗೆ ಪಾತ್ರರಾಗುವಿರಿ. ಎಲ್ಲ ಕೆಲಸಗಳೂ ಸಕಾಲದಲ್ಲಿ ಪೂರ್ಣವಾಗುವವು. ಕೌಟುಂಬಿಕ ವಿವಾದ ಕೊನೆಗೊಳ್ಳುವುದು. ಶುಭ ಸಂಖ್ಯೆ: 8
ಸಿಂಹ: ಗಣ್ಯರೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿಯಾಗುವುದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಶುಭ ಸಂಖ್ಯೆ: 6
ಕನ್ಯಾ: ಜವಾಬ್ದಾರಿಯ ನಿಮಿತ್ತ ದೂರ ಪ್ರಯಾಣದ ಸಾಧ್ಯತೆ ಇದೆ. ಉದ್ಯೋಗದಲ್ಲಿ ಪ್ರಗತಿ ಇರುವುದು. ಅಹಂಭಾವದಿಂದ ಕಠಿಣ ಪರಿಸ್ಥಿತಿಯನ್ನು ಎದುರಿಸುವ ಪ್ರಸಂಗವಿದೆ ಎಚ್ಚರಿಕೆ ವಹಿಸಿರಿ. ನಮೃತೆಗೆ ಯೋಗ್ಯ ಸಮ್ಮಾನ ದೊರೆಯುವುದು. ಶುಭ ಸಂಖ್ಯೆ: 7
ತುಲಾ: ಧನ ಅಪವ್ಯಯವಾಗುವ ಲಕ್ಷಣಗಳಿವೆ ಆದರೆ ಸಣ್ಣ ವ್ಯಾಪಾರಿಗಳಿಗೆ ಉತ್ತಮ ಲಾಭವಾಗುವುದು. ಶ್ರಮಿಕವರ್ಗಕ್ಕೆ ಉನ್ನತಿ ಇರುವುದು. ಕೌಟುಂಬಿಕ ಸಂಬಂಧಗಳು ಫಲಿಸುವವು. ಋಣಪರಿಹಾರವಾಗುವುದು. ಶುಭ ಸಂಖ್ಯೆ: 3
ವೃಶ್ಚಿಕ: ಸಂಗಡಿಗರು ಸಹಕಾರ ತೋರುವುದರಿಂದ ನಿರಾತಂಕ ಜೀವನ ಇರುವುದು. ಆಶೆ ಆಕಾಂಕ್ಷಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವುದು. ಉನ್ನತ ಶಿಕ್ಷಣದ ಕನಸು ಈಡೇರುವುದು. ಶುಭ ಸಂಖ್ಯೆ: 5
ಧನು: ಬದಲಾವಣೆಯನ್ನು ಸಹಜವಾಗಿ ಸ್ವೀಕರಿಸಿ. ಕರ್ತವ್ಯವನ್ನು ಸಮರ್ಥವಾಗಿ ನಿಭಾಯಿಸುವಿರಿ. ಸಾಮಾಜಿಕ ಗೌರವಗಳು ಅರಸಿಕೊಂಡು ಬರಲಿವೆ. ಮಾಲೀಕತ್ವದ ಆಸ್ತಿ ಕೈತಪ್ಪದಂತೆ ಎಚ್ಚರಿಕೆ ವಹಿಸಿರಿ. ಧನದ ಅಪವ್ಯಯ ಆಗದಂತೆ ನೋಡಿರಿ. ಶುಭ ಸಂಖ್ಯೆ: 1
ಮಕರ: ಹಲವು ರೀತಿಯಿಂದ ಧನಾಗಮನವಿದ್ದು ಐಶ್ವರ್ಯವೃದ್ಧಿ, ಸಂಸಾರ ಸುಖ. ಅಪೇಕ್ಷಿತ ವಸ್ತು, ಪ್ರಾಪ್ತಿ, ಮಿತ್ರಾಗಮನ, ವಿಶೇಷ ಸಂತೋಷ ಪ್ರಸಂಗಗಳು ಒದಗಿ ಬಂದು ಸಂಭ್ರಮವೆನಿಸುತ್ತದೆ. ಶುಭ ಸಂಖ್ಯೆ: 4
ಕುಂಭ: ಆರಂಭದಲ್ಲಿ ಹರ್ಷ, ಉತ್ಸಾಹ ಇರುವುದು ಕೊನೆಗೆ ಮನೋವ್ಯಥೆ. ಮನೆಯಲ್ಲಿ ಸಂತೋಷದ ವಾತಾವರಣ ಇರುವುದು. ಗ್ರಹೋಪಯೋಗಿ ವಸ್ತುಗಳ ಖರೀದಿ, ಮನೆ ರಿಪೇರಿ ಮೊದಲಾದ ಕೆಲಸಗಳಾಗುವವು. ಶ್ರೀಲಕ್ಷ್ಮೀಸ್ತೋತ್ರ ಪಠಿಸಿರಿ. ಶುಭ ಸಂಖ್ಯೆ: 8
ಮೀನ: ವಾದ-ವಿವಾದ, ಹಠ ಸಾಧನೆ, ತಪ್ಪುಗಳ ಸಮರ್ಥನೆ, ಮತ್ತೊಬ್ಬರ ಮೇಲೆ ದೋಷಾರೋಪಣೆ ಬೇಡ. ಆಯಾಸದಿಂದ ಕೂಡಿದ ಕೆಲಸ ಇರುವುದು. ಅಧಿಕಾರ ಪ್ರಾಪ್ತಿಗಾಗಿ ಅಲೆದಾಟ ಸಂಭವ. ನಿರೀಕ್ಷಿತ ಆದಾಯಕ್ಕೆ ತೊಂದರೆ ಇಲ್ಲ. ಶುಭ ಸಂಖ್ಯೆ: 5