ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಆಶ್ವಯುಜ ಮಾಸ, ಶರದೃತು, ಕೃಷ್ಣಪಕ್ಷ, ತದಿಗೆ ತಿಥಿ, ಶನಿವಾರ, ಅಕ್ಟೋಬರ್ 23, 2021. ಕೃತ್ತಿಕೆ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 9.05 ರಿಂದ ಇಂದು ಬೆಳಿಗ್ಗೆ 10.32 ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.11. ಸೂರ್ಯಾಸ್ತ: ಸಂಜೆ 5.49
ತಾ.23-10-2021 ರ ಶನಿವಾರದ ರಾಶಿಭವಿಷ್ಯ.
ಮೇಷ: ಅನಿರೀಕ್ಷಿತ ಧನಲಾಭವಾಗುವುದು. ಬುದ್ಧಿಕೌಶಲ್ಯದಿಂದ ಉದ್ಯೋಗದಲ್ಲಿ ಬಡ್ತಿ ಕಂಡುಬರುವುದು. ಸಿಟ್ಟಿನ ಸ್ವಭಾವದಿಂದ ತೊದರೆಯಾಗುವ ಸಾಧ್ಯತೆ ಇದೆ. ಕಾರ್ಯಕ್ಷಮತೆಗೆ ತಕ್ಕ ಫಲ ದೊರೆಯುವುದು. ಶುಭ ಸಂಖ್ಯೆ: 5
ವೃಷಭ: ಮಹಿಳೆಯರ ಇಷ್ಟಾರ್ಥ ಸಿದ್ಧಿಸುವುದು. ಕೂಡಿಟ್ಟ ಹಣ ಉಪಯೋಗವಾಗುವ ಸಂಭವವಿದೆ. ಸರಕಾರಿ ಕೆಲಸಗಳು ನಿರ್ವಿಘ್ನವಾಗಿ ಆಗುವವು. ನ್ಯಾಯಾಲಯದಲ್ಲಿ ಜಯ ದೊರೆಯುವುದು. ವಿದ್ಯೆಯಲ್ಲಿ ಸಾಧನೆ ಇರುವುದು. ಶುಭ ಸಂಖ್ಯೆ: 1
ಮಿಥುನ: ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ ದೊರೆಯುವುದು. ಕೋರ್ಟ್ನಲ್ಲಿ ಇರುವ ನ್ಯಾಯ ಬಗೆಹರಿಯುವುದು. ಆರ್ಥಿಕ ಸುಧಾರಣೆ ಕಂಡುಬರುವುದು. ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವುದು. ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಕಂಡುಬರುವುದು. ಶುಭ ಸಂಖ್ಯೆ: 9
ಕಟಕ: ಕುಟುಂಬದಲ್ಲಿ ವಾದ ಬೇಡ. ಉತ್ತಮ ಸಾಧನೆಯಿಂದ ಬಂಧುವರ್ಗದ ಪ್ರಶಂಸೆಗೆ ಪಾತ್ರರಾಗುವಿರಿ. ವ್ಯವಹಾರದಲ್ಲಿಯ ಚತುರತೆ ಒಳ್ಳೆಯ ಆದಾಯವನ್ನು ತಂದು ಕೊಡುವುದು. ಸಮತೋಲಿತ ಜೀವನವಿರುವುದು. ಶುಭ ಸಂಖ್ಯೆ: 2
ಸಿಂಹ: ಧನ ಅಪವ್ಯಯವಾಗುವ ಲಕ್ಷಣಗಳಿವೆ ಆದರೆ ಸಣ್ಣ ವ್ಯಾಪಾರಿಗಳಿಗೆ ಉತ್ತಮ ಲಾಭವಾಗುವುದು. ಶ್ರಮಿಕವರ್ಗಕ್ಕೆ ಉನ್ನತಿ ಇರುವುದು. ಕೌಟುಂಬಿಕ ಸಂಬಂಧಗಳು ಫಲಿಸುವವು. ಋಣಪರಿಹಾರವಾಗುವುದು. ಶುಭ ಸಂಖ್ಯೆ: 6
ಕನ್ಯಾ: ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವುದು. ಎಚ್ಚರಿಕೆವಹಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವುದು. ಗೊಂದಲಕ್ಕೆ ಒಳಗಾಗದೇ ಮುನ್ನುಗ್ಗಿರಿ. ಕೊಟ್ಟಸಾಲ ಪಾವತಿಯಾಗುವುದು. ಶುಭ ಸಂಖ್ಯೆ: 8
ತುಲಾ: ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವವು. ಅಪೇಕ್ಷಿತ ಧನಸಹಾಯ ದೊರೆಯುವುದು. ಶುಭ ಸಂಖ್ಯೆ: 4
ವೃಶ್ಚಿಕ: ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಕೆಲಸದಲ್ಲಿ ಸ್ಪಷ್ಟತೆ ಇರಲಿ. ಅಲ್ಪಧನಲಾಭವಾದರೂ ಹಳೆಯ ಸಾಲ ತೀರುವುದು. ವ್ಯಾಪಾರದಲ್ಲಿ ಅಭಿವೃದ್ಧಿಯಾಗುವುದು. ವಿವಾಹ ಅಪೇಕ್ಷಿತರಿಗೆ ಕಂಕಣಬಲ ಕೂಡಿಬರುವುದು. ಶುಭ ಸಂಖ್ಯೆ: 4
ಧನು: ಹಿರಿಯರಿಗೆ ಅನಾರೋಗ್ಯ ಸಂಭವ. ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಉದ್ಯೋಗ ಬದಲಿ ಮಾಡುವದು ಸದ್ಯಕ್ಕೆ ಬೇಡ. ಹಣಕಾಸಿನ ವಿಷಯದಲ್ಲಿ ಬಂಧುಗಳು ಸಹಕಾರ ತೋರುವರು. ಶುಭ ಸಂಖ್ಯೆ: 9
ಮಕರ: ವಾದ-ವಿವಾದ, ಹಠಸಾಧನೆ, ತಪ್ಪುಗಳ ಸಮರ್ಥನೆ, ಮತ್ತೊಬ್ಬರ ಮೇಲೆ ದೋಷಾರೋಪಣೆ ಬೇಡ. ಆಯಾಸದಿಂದ ಕೂಡಿದ ಕೆಲಸ ಇರುವದು. ಅಧಿಕಾರ ಪ್ರಾಪ್ತಿಗಾಗಿ ಅಲೆದಾಟ ಸಂಭವ. ನಿರೀಕ್ಷಿತ ಆದಾಯಕ್ಕೆ ತೊಂದರೆ ಇಲ್ಲ. ಶುಭ ಸಂಖ್ಯೆ: 2
ಕುಂಭ: ಯುವಕರಿಗೆ ನವಿರಾದ ಮಾತುಗಳಿಂದ ಸಂಗಾತಿಗಳನ್ನು ಗೆಲ್ಲುವ ಛಾತಿ. ಆಕರ್ಷಕ ನಿರ್ಧಾರಗಳಿಂದ ಮನ್ನಣೆ. ಯಜಮಾನನಿಗೆ ಬಲವಂತದಲ್ಲಿ ಜವಾಬ್ದಾರಿ ನಿರ್ವಹಣೆ. ವೈಯಕ್ತಿಕ ಬದುಕಿನತ್ತ ಗಮನಹರಿಸಲು ವ್ಯವಧಾನ. ಶುಭ ಸಂಖ್ಯೆ: 8
ಮೀನ: ಆಗುವುದೆಲ್ಲ ಒಳಿತೆಂಬ ಭಾವನೆ. ಕೌಟುಂಬಿಕ ಸಮಸ್ಯೆಗಳಿಗೆ ಪರಿಹಾರದ ನೆಲೆ ದೊರಕಿ ಹರ್ಷ. ಮಹಿಳೆಯರಿಗೆ ಮನೆಯಲ್ಲಿನ ಆಂತರಿಕ ವಿರಸ ನೀಗಿ ಸೌಹಾರ್ದತೆ. ನೂತನ ವಿವಾದ ಹುಟ್ಟುಹಾಕದ ಹಾಗೆ ತಾಳ್ಮೆಯಡಿ ವರ್ತನೆ. ಶುಭ ಸಂಖ್ಯೆ: 3