Horoscope Today – ದಿನ ಭವಿಷ್ಯ; ಭಾನುವಾರದ ಭವಿಷ್ಯದಲ್ಲಿ ಯಾರಿಗೆ ಒಳಿತು?

ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಆಶ್ವಯುಜ ಮಾಸ, ಶರದೃತು, ಕೃಷ್ಣಪಕ್ಷ, ಚೌತಿ ತಿಥಿ, ಭಾನುವಾರ, ಅಕ್ಟೋಬರ್ 24, 2021.

Horoscope Today - ದಿನ ಭವಿಷ್ಯ; ಭಾನುವಾರದ ಭವಿಷ್ಯದಲ್ಲಿ ಯಾರಿಗೆ ಒಳಿತು?
ರಾಶಿ ಭವಿಷ್ಯ
Follow us
TV9 Web
| Updated By: ಆಯೇಷಾ ಬಾನು

Updated on:Oct 24, 2021 | 7:02 AM

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಆಶ್ವಯುಜ ಮಾಸ, ಶರದೃತು, ಕೃಷ್ಣಪಕ್ಷ, ಚೌತಿ ತಿಥಿ, ಭಾನುವಾರ, ಅಕ್ಟೋಬರ್ 24, 2021. ರೋಹಿಣಿ ನಕ್ಷತ್ರ, ರಾಹುಕಾಲ: ಇಂದು ಸಂಜೆ 4:21 ರಿಂದ ಇಂದು ಸಂಜೆ 5:48 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.11. ಸೂರ್ಯಾಸ್ತ: ಸಂಜೆ 5.49

ತಾ.24-10-2021 ರ ಭಾನುವಾರದ ರಾಶಿಭವಿಷ್ಯ.

ಮೇಷ: ಮಾನಸಿಕವಾಗಿ ಕಿರಿಕಿರಿ. ಉದರಬೇನೆ ಬರುವ ಸಾಧ್ಯತೆ ಇದೆ ಆರೋಗ್ಯದ ಕಾಳಜಿವಹಿಸಿ. ಬಂಧುಮಿತ್ರರ ಭೇಟಿ, ಮನೆಯಲ್ಲಿ ಮಂಗಲಕಾರ್ಯ ಜರುಗುವ ಯೋಗವಿದೆ. ಕೋರ್ಟನಲ್ಲಿರುವ ವ್ಯಾಜ್ಯಗಳು ಕೊನೆಗೊಳ್ಳುವವು. ಶುಭ ಸಂಖ್ಯೆ: 5

ವೃಷಭ: ಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅರ್ದಕ್ಕೆ ನಿಲ್ಲುವ ಸಂಭವವಿದೆ. ಅಕಾಲಿಕ ಒತ್ತಡಗಳಿಂದ ಕಾರ್ಯಹಾನಿ. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ. ಶುಭ ಸಂಖ್ಯೆ: 9

ಮಿಥುನ: ಕೆಲಸಕ್ಕೆ ತಕ್ಕ ಪ್ರೋತ್ಸಾಹ ದೊರೆಯುವದು. ಶಾಂತಿ,ನೆಮ್ಮದಿಯುಕ್ತ ಜೀವನ ಇರುವದು. ನಡೆಯುತ್ತಿರುವ ದಾರಿ ಸರಿಯಾಗಿ ಇರುವದರಿಂದ ಗುರಿ ಮುಟ್ಟುವದು ನಿಶ್ಚಿತ. ಆರ್ಥಿಕ ಸ್ಥಿತಿ ಉತ್ತಮವಾಗಿ ಇರುವದು. ಶುಭ ಸಂಖ್ಯೆ: 1

ಕರ್ಕ: ಚಂಚಲಚಿತ್ತದಿಂದ ಕಾರ್ಯಹಾನಿಯಾಗುವ ಲಕ್ಷಣಗಳಿವೆ. ಆಸ್ತಿ ಸಂಬಂದಿತ ಕ್ರಯವಿಕ್ರಯ ವ್ಯವಹಾರಗಳು ಕುದುರುವವು. ಅನವಶ್ಯಕ ಮಾತಿನಿಂದ ಇಕ್ಕಟ್ಟಿಗೆ ಸಿಕ್ಕಿಕೊಳ್ಳುವ ಸಾಧ್ಯತೆ ಇದೆ. ತಜ್ಞರ ಸಹಾಯ ಪಡೆಯಿರಿ. ಶುಭ ಸಂಖ್ಯೆ: 4

ಸಿಂಹ: ಗಣ್ಯರೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿಯಾಗುವದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಶುಭ ಸಂಖ್ಯೆ: 8

ಕನ್ಯಾ: ಸರಳತೆ ದುರುಪಯೋಗವಾಗದಂತೆ ನೋಡಿಕೊಳ್ಳಿ. ಉದ್ಯೋಗದಲ್ಲಿಯ ಕುಂದು ಕೊರತೆಗಳನ್ನು ನಿಭಾಯಿಸುವಿರಿ. ಮಹತ್ವದ ಅಧಿಕಾರ ದೊರೆಯುವ ಯೋಗವಿದೆ. ವ್ಯಾಪಾರದಲ್ಲಿ ಹೆಚ್ಚಿನ ಹಣ ಹೂಡಿಕೆ ಈಗ ಬೇಡ. ಶುಭ ಸಂಖ್ಯೆ: 6

ತುಲಾ: ಅನಿಸಿಕೆಗಿಂತ ವಾಸ್ತವ ಬೇರೆ ಇರುವದರಿಂದ ತಕ್ಕ ಬದಲಾವಣೆ ಮಾಡಿಕೊಳ್ಳುವಿರಿ. ನಡತೆಯಲ್ಲ ಸೂಕ್ಷತೆ ಇರಲಿ. ವ್ಯವಹಾರವನ್ನು ಪೂರ್ಣವಾಗಿ ಆಲೋಚಿಸಿ ಮಾಡುವದು ಒಳ್ಳೆಯದು. ಧನಹಾನಿಯ ಸಂಭವವಿದೆ. ಶುಭ ಸಂಖ್ಯೆ: 7

ವೃಶ್ಚಿಕ: ತಪ್ಪುಗಳನ್ನು ಸಮರ್ಥಿಸುವದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಅಧಿಕಾರಿಗಳ ಕಿರಿಕಿರಿಗೆ ಮಣಿಯದೇ ಧೈರ್ಯದಿಂದ ಕೆಲಸ ನಿರ್ವಹಿಸಿರಿ. ಮತ್ತೊಬ್ಬರ ಮೇಲೆ ಅತಿಯಾದ ವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಶುಭ ಸಂಖ್ಯೆ: 3

ಧನು: ಮಹತ್ವಾಕಾಂಕ್ಷೆಗೆ ಪೂರಕವಾದ ವಾತಾವರಣ ಇರುವದು. ಬಂಧುಮಿತ್ರರ ಸಹಕಾರ ದೊರೆಯುವದು. ಉದ್ಯೋಗದಲ್ಲಿ ಪ್ರಗತಿ ಕಂಡುಬರುವದು. ಮನೆಯಲ್ಲಿ ಸಂತಸ ಮೂಡುವದು. ಶುಭಕಾರ್ಯಗಳು ಜರುಗುವವು. ಶುಭ ಸಂಖ್ಯೆ: 2

ಮಕರ: ಉದಾಸೀನತೆಯಿಂದ ಕಾರ್ಯಹಾನಿ ಸಂಭವ. ಅನುಮಾನಗಳು ಮೂಡಿ ಕೈಗೊಂಡ ಕಾರ್ಯಕ್ಕೆ ವಿಘ್ನ ಉಂಟಾಗುವ ಸಂಭವವಿದೆ. ಸಾಮಾಜಿಕ ಗೌರವನ್ನು ಉಳಿಸಿಕೊಳ್ಳುವಲ್ಲಿ ಸಫಲರಾಗುವಿರಿ. ಶುಭ ಸಂಖ್ಯೆ: 1

ಕುಂಭ: ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವದು. ಎಚ್ಚರಿಕೆವಹಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವದು. ಗೊಂದಲಕ್ಕೆ ಒಳಗಾಗದೇ ಮುನ್ನುಗ್ಗಿರಿ. ಕೊಟ್ಟಸಾಲ ಪಾವತಿಯಾಗುವದು. ಶುಭ ಸಂಖ್ಯೆ: 8

ಮೀನ: ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ. ಶುಭ ಸಂಖ್ಯೆ: 3

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Published On - 7:01 am, Sun, 24 October 21

Daily Horoscope: ರವಿವಾರದಂದು ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
Daily Horoscope: ರವಿವಾರದಂದು ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ