Horoscope Today – ದಿನ ಭವಿಷ್ಯ; ಭಾನುವಾರದ ಭವಿಷ್ಯದಲ್ಲಿ ಯಾರಿಗೆ ಒಳಿತು?

| Updated By: ಆಯೇಷಾ ಬಾನು

Updated on: Oct 24, 2021 | 7:02 AM

ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಆಶ್ವಯುಜ ಮಾಸ, ಶರದೃತು, ಕೃಷ್ಣಪಕ್ಷ, ಚೌತಿ ತಿಥಿ, ಭಾನುವಾರ, ಅಕ್ಟೋಬರ್ 24, 2021.

Horoscope Today - ದಿನ ಭವಿಷ್ಯ; ಭಾನುವಾರದ ಭವಿಷ್ಯದಲ್ಲಿ ಯಾರಿಗೆ ಒಳಿತು?
ರಾಶಿ ಭವಿಷ್ಯ
Follow us on

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಆಶ್ವಯುಜ ಮಾಸ, ಶರದೃತು, ಕೃಷ್ಣಪಕ್ಷ, ಚೌತಿ ತಿಥಿ, ಭಾನುವಾರ, ಅಕ್ಟೋಬರ್ 24, 2021. ರೋಹಿಣಿ ನಕ್ಷತ್ರ, ರಾಹುಕಾಲ: ಇಂದು ಸಂಜೆ 4:21 ರಿಂದ ಇಂದು ಸಂಜೆ 5:48 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.11. ಸೂರ್ಯಾಸ್ತ: ಸಂಜೆ 5.49

ತಾ.24-10-2021 ರ ಭಾನುವಾರದ ರಾಶಿಭವಿಷ್ಯ.

ಮೇಷ: ಮಾನಸಿಕವಾಗಿ ಕಿರಿಕಿರಿ. ಉದರಬೇನೆ ಬರುವ ಸಾಧ್ಯತೆ ಇದೆ ಆರೋಗ್ಯದ ಕಾಳಜಿವಹಿಸಿ. ಬಂಧುಮಿತ್ರರ ಭೇಟಿ, ಮನೆಯಲ್ಲಿ ಮಂಗಲಕಾರ್ಯ ಜರುಗುವ ಯೋಗವಿದೆ. ಕೋರ್ಟನಲ್ಲಿರುವ ವ್ಯಾಜ್ಯಗಳು ಕೊನೆಗೊಳ್ಳುವವು.
ಶುಭ ಸಂಖ್ಯೆ: 5

ವೃಷಭ: ಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅರ್ದಕ್ಕೆ ನಿಲ್ಲುವ ಸಂಭವವಿದೆ. ಅಕಾಲಿಕ ಒತ್ತಡಗಳಿಂದ ಕಾರ್ಯಹಾನಿ. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ.
ಶುಭ ಸಂಖ್ಯೆ: 9

ಮಿಥುನ: ಕೆಲಸಕ್ಕೆ ತಕ್ಕ ಪ್ರೋತ್ಸಾಹ ದೊರೆಯುವದು. ಶಾಂತಿ,ನೆಮ್ಮದಿಯುಕ್ತ ಜೀವನ ಇರುವದು. ನಡೆಯುತ್ತಿರುವ ದಾರಿ ಸರಿಯಾಗಿ ಇರುವದರಿಂದ ಗುರಿ ಮುಟ್ಟುವದು ನಿಶ್ಚಿತ. ಆರ್ಥಿಕ ಸ್ಥಿತಿ ಉತ್ತಮವಾಗಿ ಇರುವದು.
ಶುಭ ಸಂಖ್ಯೆ: 1

ಕರ್ಕ: ಚಂಚಲಚಿತ್ತದಿಂದ ಕಾರ್ಯಹಾನಿಯಾಗುವ ಲಕ್ಷಣಗಳಿವೆ. ಆಸ್ತಿ ಸಂಬಂದಿತ ಕ್ರಯವಿಕ್ರಯ ವ್ಯವಹಾರಗಳು ಕುದುರುವವು. ಅನವಶ್ಯಕ ಮಾತಿನಿಂದ ಇಕ್ಕಟ್ಟಿಗೆ ಸಿಕ್ಕಿಕೊಳ್ಳುವ ಸಾಧ್ಯತೆ ಇದೆ. ತಜ್ಞರ ಸಹಾಯ ಪಡೆಯಿರಿ.
ಶುಭ ಸಂಖ್ಯೆ: 4

ಸಿಂಹ: ಗಣ್ಯರೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿಯಾಗುವದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ.
ಶುಭ ಸಂಖ್ಯೆ: 8

ಕನ್ಯಾ: ಸರಳತೆ ದುರುಪಯೋಗವಾಗದಂತೆ ನೋಡಿಕೊಳ್ಳಿ. ಉದ್ಯೋಗದಲ್ಲಿಯ ಕುಂದು ಕೊರತೆಗಳನ್ನು ನಿಭಾಯಿಸುವಿರಿ. ಮಹತ್ವದ ಅಧಿಕಾರ ದೊರೆಯುವ ಯೋಗವಿದೆ. ವ್ಯಾಪಾರದಲ್ಲಿ ಹೆಚ್ಚಿನ ಹಣ ಹೂಡಿಕೆ ಈಗ ಬೇಡ.
ಶುಭ ಸಂಖ್ಯೆ: 6

ತುಲಾ: ಅನಿಸಿಕೆಗಿಂತ ವಾಸ್ತವ ಬೇರೆ ಇರುವದರಿಂದ ತಕ್ಕ ಬದಲಾವಣೆ ಮಾಡಿಕೊಳ್ಳುವಿರಿ. ನಡತೆಯಲ್ಲ ಸೂಕ್ಷತೆ ಇರಲಿ. ವ್ಯವಹಾರವನ್ನು ಪೂರ್ಣವಾಗಿ ಆಲೋಚಿಸಿ ಮಾಡುವದು ಒಳ್ಳೆಯದು. ಧನಹಾನಿಯ ಸಂಭವವಿದೆ.
ಶುಭ ಸಂಖ್ಯೆ: 7

ವೃಶ್ಚಿಕ: ತಪ್ಪುಗಳನ್ನು ಸಮರ್ಥಿಸುವದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಅಧಿಕಾರಿಗಳ ಕಿರಿಕಿರಿಗೆ ಮಣಿಯದೇ ಧೈರ್ಯದಿಂದ ಕೆಲಸ ನಿರ್ವಹಿಸಿರಿ. ಮತ್ತೊಬ್ಬರ ಮೇಲೆ ಅತಿಯಾದ ವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ.
ಶುಭ ಸಂಖ್ಯೆ: 3

ಧನು: ಮಹತ್ವಾಕಾಂಕ್ಷೆಗೆ ಪೂರಕವಾದ ವಾತಾವರಣ ಇರುವದು. ಬಂಧುಮಿತ್ರರ ಸಹಕಾರ ದೊರೆಯುವದು. ಉದ್ಯೋಗದಲ್ಲಿ ಪ್ರಗತಿ ಕಂಡುಬರುವದು. ಮನೆಯಲ್ಲಿ ಸಂತಸ ಮೂಡುವದು. ಶುಭಕಾರ್ಯಗಳು ಜರುಗುವವು.
ಶುಭ ಸಂಖ್ಯೆ: 2

ಮಕರ: ಉದಾಸೀನತೆಯಿಂದ ಕಾರ್ಯಹಾನಿ ಸಂಭವ. ಅನುಮಾನಗಳು ಮೂಡಿ ಕೈಗೊಂಡ ಕಾರ್ಯಕ್ಕೆ ವಿಘ್ನ ಉಂಟಾಗುವ ಸಂಭವವಿದೆ. ಸಾಮಾಜಿಕ ಗೌರವನ್ನು ಉಳಿಸಿಕೊಳ್ಳುವಲ್ಲಿ ಸಫಲರಾಗುವಿರಿ.
ಶುಭ ಸಂಖ್ಯೆ: 1

ಕುಂಭ: ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವದು. ಎಚ್ಚರಿಕೆವಹಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವದು. ಗೊಂದಲಕ್ಕೆ ಒಳಗಾಗದೇ ಮುನ್ನುಗ್ಗಿರಿ. ಕೊಟ್ಟಸಾಲ ಪಾವತಿಯಾಗುವದು.
ಶುಭ ಸಂಖ್ಯೆ: 8

ಮೀನ: ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ.
ಶುಭ ಸಂಖ್ಯೆ: 3

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Published On - 7:01 am, Sun, 24 October 21