ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಆಶ್ವಯುಜ ಮಾಸ, ಶರದೃತು, ಕೃಷ್ಣಪಕ್ಷ, ಚೌತಿ ತಿಥಿ, ಸೋಮವಾರ, ಅಕ್ಟೋಬರ್ 25, 2021. ಮೃಗಶಿರ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 7.38 ರಿಂದ ಇಂದು ಬೆಳಿಗ್ಗೆ 9.05 ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.11. ಸೂರ್ಯಾಸ್ತ: ಸಂಜೆ 5.48
ತಾ.25-10-2021 ರ ಸೋಮವಾರದ ರಾಶಿಭವಿಷ್ಯ.
ಮೇಷ: ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವುದು. ಸಂಗಡಿಗರು ಸಹಕಾರ ತೋರುವುದರಿಂದ ನಿರಾತಂಕ ಜೀವನ ಇರುವುದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಆರ್ಥಿಕ ಸಂಕಷ್ಟ ದೂರಾಗುವುದು. ಶುಭ ಸಂಖ್ಯೆ: 5
ವೃಷಭ: ಅನಿರೀಕ್ಷಿತ ಧನಲಾಭವಾಗುವುದು. ಬುದ್ಧಿಕೌಶಲ್ಯದಿಂದ ಉದ್ಯೋಗದಲ್ಲಿ ಬಡ್ತಿ ಕಂಡುಬರುವುದು. ಸಿಟ್ಟಿನ ಸ್ವಭಾವದಿಂದ ತೊದರೆಯಾಗುವ ಸಾಧ್ಯತೆ ಇದೆ. ಕಾರ್ಯಕ್ಷಮತೆಗೆ ತಕ್ಕ ಫಲ ದೊರೆಯುವುದು. ಶುಭ ಸಂಖ್ಯೆ: 9
ಮಿಥುನ: ದೂರಾಲೋಚನೆಯಿಂದ ಕಾರ್ಯದಲ್ಲಿ ಯಶಸ್ಸು. ಆಸ್ತಿ ಖರೀದಿ ಸಾಧ್ಯ. ವೈವಾಹಿಕ ಚಿಂತೆ ಇರುವುದು. ಧಾರ್ಮಿಕ ಸಮಾರಂಭಗಳಲ್ಲಿ ಭಾಗಿಯಾಗುವ ಯೋಗವಿದೆ. ಧಾರ್ಮಿಕ ಕ್ಷೇತ್ರಗಳ ದರ್ಶನ ಯೋಗವಿದೆ. ಶುಭ ಸಂಖ್ಯೆ: 1
ಕಟಕ: ಕೈಹಾಕಿದ ಕೆಲಸಗಳು ನಿರಾತಂಕವಾಗಿ ಮುಂದುವರೆಯುವವು. ಉತ್ತಮವಾದ ಸಮಯ ಇರುವುದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುವುದು. ಹೊಸ ಯೋಜನೆಗಳಿಗೆ ಚಾಲನೆ ದೊರೆಯುವುದು. ಶುಭ ಸಂಖ್ಯೆ: 3
ಸಿಂಹ: ಸ್ವಪ್ರತಿಷ್ಟೆ ಬಿಟ್ಟು ಬಲ್ಲವರ ಸಹಾಯ ಪಡೆಯಿರಿ. ಮರೆತು ಹೋದ ವಸ್ತು ಲಾಭದಾಯಕವಾಗಿ ಪರಿಣಮಿಸುವುದು. ಹಳೆಯ ಮಿತ್ರರ ಒಡನಾಟ ಸಂತಸ ತರುವುದು. ಆರ್ಥಿಕ ಸ್ಥಿತಿಯಲ್ಲಿ ಬೆಳವಣಿಗೆ ಇರುವುದು. ಶುಭ ಸಂಖ್ಯೆ: 8
ಕನ್ಯಾ: ಪ್ರಮುಖ ಯೋಜನೆಗಳ ಜವಾಬ್ದಾರಿ ಹೆಚ್ಚುವುದು. ಆರ್ಥಿಕ ಅಭಿವೃದ್ಧಿ ಕಂಡುಬರುವದು. ಸ್ನೇಹಿತರ ಭಿನ್ನಾಭಿಪ್ರಾಯ ಬಗೆಹರಿಯುವದು. ಶತೃಗಳೂ ಸೌಮ್ಯರಾಗುವ ಕಾಲ ಇರುವದರಿಂದ ಅಪೇಕ್ಷಿತ ಕಾರ್ಯವನ್ನು ಸಾಧಿಸುವಿರಿ. ಶುಭ ಸಂಖ್ಯೆ: 2
ತುಲಾ: ನಿಶ್ಚಿತ ಕೆಲಸಕ್ಕೆ ಬೆಂಬಲ ಸಿಗುವುದರಿಂದ ಉತ್ತಮ ಫಲ ದೊರೆಯುವುದು. ಸುಮ್ಮನೇ ಕೂಡದ ಜಾಯಮಾನ ಇರುವುದರಿಂದ ಹೊಸ ಯೋಜನೆಯನ್ನು ರೂಪಿಸುವಿರಿ. ಹಿಂದಿನ ಬಾಕಿ ವಸೂಲಾತಿಗೆ ಶ್ರಮಿಸಬೇಕಾಗುವದು. ಶುಭ ಸಂಖ್ಯೆ: 4
ವೃಶ್ಚಿಕ: ಸಹನೆ ಇಲ್ಲದ ಆತುರದ ನಡೆಯಿಂದ ಹಾನಿ ಸಂಭವ ಎಚ್ಚರಿಕೆ ವಹಿಸಿರಿ. ಅನೀರೀಕ್ಷಿತವಾಗಿ ಬರುವ ವಿಘ್ನಗಳು ತಾವಾಗಿಯೇ ಪರಿಹಾರ ಕಾಣುವವು. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವವು. ಶುಭ ಸಂಖ್ಯೆ: 7
ಧನು: ಶತ್ರುಗಳ ಉಪಟಳವು ಆಗಾಗ ಕಂಡುಬಂದರೂ ಧೈರ್ಯದಿಂದ ಕಾರ್ಯ ಸಾಧಿಸುವಿರಿ. ಇಷ್ಟಸಿದ್ಧಿಯ ಕಾಲ ಇರುವುದರಿಂದ ಅನೇಕ ರೀತಿಯ ಭೋಗಭಾಗ್ಯಗಳು ಕೂಡಿಬರಲಿವೆ. ಸಾಂಸಾರಿಕ ಸಮಸ್ಯೆಗಳು ಪರಿಹಾರವಾಗುವವು. ಶುಭ ಸಂಖ್ಯೆ: 1
ಮಕರ: ಅಪೇಕ್ಷಿತ ಸ್ಥಾನಮಾನಗಳು ದೊರೆಯುವವು. ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಭಂಗವಿಲ್ಲ. ಆದಾಯಕ್ಕಿಂತ ಅಧಿಕ ಖರ್ಚು ಇರುವುದು. ಶುಭ ಸಂಖ್ಯೆ: 6
ಕುಂಭ: ಹೊಟ್ಟೆಕಿಚ್ಚಿನ ಜನರಿಂದ ತೊಂದರೆ ಆಗುವ ಸಾಧ್ಯತೆ ಇದೆ. ಅತಿಯಾಗಿ ಹೇಳಿಕೊಳ್ಳುವುದು ಅವಮಾನಕ್ಕೆ ಕಾರಣವಾಗದಂತೆ ವರ್ತಿಸಿರಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭ ನಿರೀಕ್ಷೆ ಇರುವದು. ಕೈಗೊಂಡ ಕಾರ್ಯ ಯಶ ಕಾಣುವದು. ಶುಭ ಸಂಖ್ಯೆ: 6
ಮೀನ: ಶುಭ ಕರ್ಮ ಸಂಪ್ರಾಪ್ತಿಯಿದ್ದು, ಗುರುವರ್ಗ ಸಂತೋಷ, ಸಂಸಾರ ಸುಖ. ನೂತನ ಮಿತ್ರಭೇಟಿ, ಅರ್ಥಾರ್ಜನೆಯು ಉತ್ತಮವಿದೆ. ಆದರೂ ಗೃಹಕಲಹ, ಬಂಧು ಜನರಲ್ಲಿ ಅಸಮಾಧಾನ ಕಂಡುಬರುವುದು. ಶುಭ ಸಂಖ್ಯೆ: 6
Published On - 6:44 am, Mon, 25 October 21