Horoscope Today- ದಿನ ಭವಿಷ್ಯ; ಮೇಷ ರಾಶಿಯವರಿಗೆ ಅವಕಾಶಗಳು ಬಾಗಿಲು ತೆರೆಯಲಿವೆ

| Updated By: Vinay Bhat

Updated on: Oct 26, 2021 | 6:36 AM

Horoscope ಅಕ್ಟೋಬರ್ 26, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಮೇಷ ರಾಶಿಯವರಿಗೆ ಅವಕಾಶಗಳು ಬಾಗಿಲು ತೆರೆಯಲಿವೆ
ದಿನ ಭವಿಷ್ಯ
Follow us on

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಆಶ್ವಯುಜ ಮಾಸ, ಶರದೃತು, ಕೃಷ್ಣಪಕ್ಷ, ಪಂಚಮಿ ತಿಥಿ, ಮಂಗಳವಾರ, ಅಕ್ಟೋಬರ್ 26, 2021. ಆರ್ದ್ರೆ ನಕ್ಷತ್ರ, ರಾಹುಕಾಲ: ಇಂದು ಮಧ್ಯಾಹ್ನ 2.53 ರಿಂದ ಇಂದು ಸಂಜೆ 4.19 ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.12. ಸೂರ್ಯಾಸ್ತ: ಸಂಜೆ 5.47

ತಾ.26-10-2021 ರ ಮಂಗಳವಾರದ, ರಾಶಿಭವಿಷ್ಯ.

ಮೇಷ: ಅವಕಾಶಗಳು ಬಾಗಿಲು ತೆರೆಯಲಿವೆ. ಯೋಜನೆಗಳಿಗೆ ಪೂರ್ವ ತಯಾರಿ ಮಾಡುವ ಅಗತ್ಯತೆ ಕಂಡುಬರುವುದು. ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವುದು ಒಳಿತು. ಶುಭ ಸಂಖ್ಯೆ: 5

ವೃಷಭ: ಹಿತವಾದ ಮಾತುಗಳು ಗೌರವವನ್ನು ವೃದ್ಧಿಸುವವು. ಆರ್ಥಿಕ ಸಂಕಷ್ಟಗಳು ಎದುರಾಗುವವು. ಸಮಾಧಾನ ಚಿತ್ತದಿಂದ ಕಾರ್ಯ ನಿರ್ವಹಿಸಿರಿ. ಹಿತೈಷಿಗಳಂತೆ ವರ್ತಿಸುವವರಿಂದ ದೂರವಿರಿ. ಶುಭ ಸಂಖ್ಯೆ: 9

ಮಿಥುನ: ಹೊಸ ಆಸ್ತಿ ಖರೀದಿ ಅಥವಾ ಹೊಸ ಹೂಡಿಕೆ ಈಗ ಬೇಡ. ಕಂಟಕದಿಂದ ಪಾರಾಗುವ ಯೋಗವಿದೆ. ಒಳ್ಳೆಯ ಸ್ವಭಾವ ಇರುವುದರಿಂದ ಉದ್ಯೋಗದಲ್ಲಿ ಹೆಚ್ಚಿನ ಬಡ್ತಿಯಾಗುವ ಕಾಲ. ಆಸಕ್ತಿಗೆ ತಕ್ಕಂತೆ ಅವಕಾಶಗಳು ದೊರಕುವವು. ಶುಭ ಸಂಖ್ಯೆ: 4

ಕಟಕ: ಒಳ್ಳೆಯ ಮಾತುಗಳಿಂದ ಸಂಬಂಧ ಸುಧಾರಿಸುವುದು. ಸ್ನೇಹಿತರಲ್ಲಿಯ ಮನಸ್ತಾಪ ದೂರಾಗುವುದು. ಶಕ್ಯತಾ ಮೀರಿ ದುಡಿಯುವ ಕಾರ್ಯಭಾರವಿರುವುದು. ಉದ್ಯೋಗದ ಹೊರತಾಗಿ ಬೇರೆ ಕೆಲಸಕ್ಕೂ ಗಮನಹರಿಸಿ. ಶುಭ ಸಂಖ್ಯೆ: 8

ಸಿಂಹ: ಆಸ್ತಿ ವಿಷಯಕ್ಕೆ ಸಂಬಂಧಿಸಿಂತೆ ತೊಂದರೆಯಾಗುವ ಸಂಭವವಿದೆ. ಆದಾಯ ಉತ್ತಮವಾಗಿರುವುದು. ನೌಕರಿಯಲ್ಲಿ ಅಸಹಕಾರ ಎದುರಿಬೇಕಾಗುವುದು. ಗ್ರಹಸೌಖ್ಯವಿದ್ದರೂ ಮಾನಸಿಕ ನೆಮ್ಮದಿ ಇರಲಾರದು. ಶುಭ ಸಂಖ್ಯೆ: 3

ಕನ್ಯಾ: ಅಗೌರವ ಆಗುವ ಸಂಭವ ಇರುವುದರಿಂದ ಸೂಕ್ಷ್ಮವಾಗಿರುವುದು ಉತ್ತಮ. ಅನಪೇಕ್ಷಿತರಿಗೆ ಉಪಕಾರ ಮಾಡುವುದು ಸರಿಯಲ್ಲ. ಮಕ್ಕಳ ಚಿಂತೆ ಇರುವುದು. ವಧುವರರಿಗೆ ಮದುವೆಯ ಯೋಗ ಕೂಡಿಬರುವುದು. ಶುಭ ಸಂಖ್ಯೆ: 7

ತುಲಾ: ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ವ್ಯವಹಾರದಲ್ಲಿ ಅಡೆತಡೆಗಳು ಕಂಡುಬರುವವು. ಅನಿವಾರ್ಯ ಕೆಲಸಗಳಗೆ ಅಲೆದಾಟ ಕಂಡುಬರುವುದು. ಆರ್ಥಿಕ ಸ್ಥಿತಿ ಉತ್ತಮವಾಗಿ ಇರುವುದು. ಶುಭ ಸಂಖ್ಯೆ: 2

ವೃಶ್ಚಿಕ: ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವವು. ಅಪೇಕ್ಷಿತ ಧನಸಹಾಯ ದೊರೆಯುವುದು. ಶುಭ ಸಂಖ್ಯೆ: 6

ಧನು: ದಿನನಿತ್ಯದ ಕೆಲಸಕ್ಕೂ ವಿನಾಕಾರಣ ಅಡೆತಡೆ ಕಂಡುಬರುವ ಲಕ್ಷಣವಿದೆ. ಬಂಧುವರ್ಗದಲ್ಲಿ ನಕಾರಾತ್ಮಕ ಚಿಂತನೆ ಇರುವುದು. ಸಂಕಷ್ಟಗಳ ಪರಿಹಾರಕ್ಕಾಗಿ ಅಲೆದಾಡಬೇಕಾದ ಸಂಭವವಿದೆ. ಶುಭ ಸಂಖ್ಯೆ: 1

ಮಕರ: ಆರಂಭದಲ್ಲಿ ಹರ್ಷ, ಉತ್ಸಾಹ ಇರುವುದು ಕೊನೆಗೆ ಮನೋವ್ಯಥೆ. ಮನೆಯಲ್ಲಿ ಸಂತೋಷದ ವಾತಾವರಣ ಇರುವುದು. ಗ್ರಹೋಪಯೋಗಿ ವಸ್ತುಗಳ ಖರೀದಿ, ಮನೆ ರಿಪೇರಿ ಮೊದಲಾದ ಕೆಲಸಗಳಾಗುವವು. ಶ್ರೀಲಕ್ಷ್ಮೀಸ್ತೋತ್ರ ಪಠಿಸಿರಿ. ಶುಭ ಸಂಖ್ಯೆ: 5

ಕುಂಭ: ಹಣಕಾಸಿನ ವ್ಯವಹಾರದಲ್ಲಿ ಧ್ಯರ್ಯದಿಂದ ಕಾರ್ಯ ಸಾಧನೆ. ಅಪೇಕ್ಷಸದ ಲಾಭ ಸಂಭವ. ಗಡಿಬಿಡಿಯ ವಾತಾವತರಣ, ಬಿಡುವಿಲ್ಲದ ಕಾರ್ಯ, ಮಿತ್ರರೊಂದಿಗೆ ಜಟಾಪಟಿ ಸಂಭವ, ದೀಪದಾನ ಮಾಡಿರಿ. ಶುಭ ಸಂಖ್ಯೆ: 9

ಮೀನ: ನಿಮ್ಮ ಮನೆಬಾಗಿಲಲ್ಲಿ ಅದೃಷ್ಟ ಲಕ್ಷ್ಮೀ ಒಲಿದು ಬರುತ್ತಾಳೆ. ಆರೋಗ್ಯ ಸುಧಾರಣೆಯಾಗುವುದು. ಸ್ಥಿತಿಗಳು ಅನುಕೂಲಕರವಾಗಿ ಮುಂದವರೆಯುವುದು. ಗ್ರಹಸುಖ ಯೋಗವು ಇದೆ. ಮನೋಚಿಂತಿತ ಕನಸು ನನಸಾಗಲಿದೆ. ಶುಭ ಸಂಖ್ಯೆ: 3

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಸಂಪರ್ಕ ಸಂಖ್ಯೆ: 9972848937