Horoscope Today- ದಿನ ಭವಿಷ್ಯ; ಈ ರಾಶಿಯವರ ಮಾತು ಹಿಡಿತದಲ್ಲಿರಲಿ, ಅನವಶ್ಯಕ ವಾಗ್ವಾದ ಉಂಟಾಗುವ ಸಂಭವವಿದೆ

Horoscope ಅಕ್ಟೋಬರ್ 28, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರ ಮಾತು ಹಿಡಿತದಲ್ಲಿರಲಿ, ಅನವಶ್ಯಕ ವಾಗ್ವಾದ ಉಂಟಾಗುವ ಸಂಭವವಿದೆ
ದಿನ ಭವಿಷ್ಯ
Follow us
TV9 Web
| Updated By: Vinay Bhat

Updated on: Oct 28, 2021 | 6:45 AM

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಆಶ್ವಯುಜ ಮಾಸ, ಶರದೃತು, ಕೃಷ್ಣಪಕ್ಷ, ಸಪ್ತಮಿ ತಿಥಿ, ಗುರುವಾರ, ಅಕ್ಟೋಬರ್ 28, 2021. ಪುನರ್ವಸು ನಕ್ಷತ್ರ, ರಾಹುಕಾಲ: ಇಂದು ಮಧ್ಯಾಹ್ನ 1.25 ರಿಂದ ಇಂದು ಮಧ್ಯಾಹ್ನ 2.51 ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.12. ಸೂರ್ಯಾಸ್ತ: ಸಂಜೆ 5.46

ತಾ.28-10-2021 ರ ಗುರುವಾರದ ರಾಶಿಭವಿಷ್ಯ.

ಮೇಷ: ಶುಭ ಕರ್ಮ ಸಂಪ್ರಾಪ್ತಿಯಿದ್ದು, ಗುರುವರ್ಗ ಸಂತೋಷ, ಸಂಸಾರ ಸುಖ. ನೂತನ ಮಿತ್ರಭೇಟಿ, ಅರ್ಥಾರ್ಜನೆಯು ಉತ್ತಮವಿದೆ. ಆದರೂ ಗೃಹಕಲಹ, ಬಂಧು ಜನರಲ್ಲಿ ಅಸಮಾಧಾನ ಕಂಡುಬರುವುದು. ಶುಭ ಸಂಖ್ಯೆ: 9

ವೃಷಭ: ಕೆಲಸದಲ್ಲಿ ತಾಳ್ಮೆ ಇರಲಿ. ಅನಿರ್ದಿಷ್ಟ ಉದ್ಯೋಗ, ಕೆಲಸದ ವಿಷಯದಲ್ಲಿ ಗೊಂದಲ ಮೂಡುವ ಸಾಧ್ಯತೆ ಇದೆ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ವ್ಯಾಪಾರಿಗಳಿಗೆ ಆರ್ಥಿಕ ತೊಂದರೆ ಆಗುವ ಯೋಗವಿದೆ. ಶುಭ ಸಂಖ್ಯೆ: 1

ಮಿಥುನ: ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ ದೊರೆಯುವುದು. ಕೋರ್ಟ್ನಲ್ಲಿ ಇರುವ ನ್ಯಾಯ ಬಗೆಹರಿಯುವುದು. ಆರ್ಥಿಕ ಸುಧಾರಣೆ ಕಂಡುಬರುವುದು. ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವುದು. ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಕಂಡುಬರುವುದು. ಶುಭ ಸಂಖ್ಯೆ: 3

ಕಟಕ: ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ಮೊದಲು ಕಷ್ಟ ನಂತರದಲ್ಲಿ ಉತ್ತಮವಾದ ಫಲ ದೊರೆಯುವುದು. ಗುರುಬಲ ವೃದ್ಧಿಸುವುದು. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವುದು. ಶುಭ ಸಂಖ್ಯೆ: 8

ಸಿಂಹ: ಉದ್ಯೋಗ ಬದಲಿ ಮಾಡುವುದು ಸದ್ಯ ಬೇಡ. ಹಣದ ಕೊರತೆ ಇರಲಾರದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಪಿತ್ರಾರ್ಜಿತ ಆಸ್ತಿ ದೊರೆಯುವ ಯೋಗವಿದೆ. ತಂದೆತಾಯಿಯ ವಿಷಯದಲ್ಲಿ ಚಿಂತೆ ಇರುವುದು. ಶುಭ ಸಂಖ್ಯೆ: 4

ಕನ್ಯಾ: ಅನಿಸಿಕೆಗಿಂತ ವಾಸ್ತವ ಬೇರೆ ಇರುವುದರಿಂದ ತಕ್ಕ ಬದಲಾವಣೆ ಮಾಡಿಕೊಳ್ಳುವಿರಿ. ನಡತೆಯಲ್ಲಿ ಸೂಕ್ಷ್ಮತೆ ಇರಲಿ. ವ್ಯವಹಾರವನ್ನು ಪೂರ್ಣವಾಗಿ ಆಲೋಚಿಸಿ ಮಾಡುವುದು ಒಳ್ಳೆಯದು. ಧನಹಾನಿಯ ಸಂಭವವಿದೆ. ಶುಭ ಸಂಖ್ಯೆ: 5

ತುಲಾ: ಬಹುಜನರ ಪ್ರಶಂಸೆಗೆ ಪಾತ್ರವಾಗುವ ಆಡಳಿತಾತ್ಮಕ ನಿರ್ಧಾರ. ಇದ್ದಕ್ಕಿದಂತೆ ಶುಭಕರ ಒಲವು. ಸಲ್ಲುವ ವಿಚಾರದಲ್ಲಿ ಕುಟುಂಬದ ಒಗ್ಗಟ್ಟು ವೃದ್ಧಿ. ಆರ್ಥಿಕಾನೂಕೂಲದಿಂದ ಸರಳ ವ್ಯವಹಾರ. ಹೆಂಗಳೆಯರದು ಮೌನವಾದ ಕೆಲಸ. ಆದರೆ ಪರಿಣಾಮ ಜಾಸ್ತಿ. ಶುಭ ಸಂಖ್ಯೆ: 6

ವೃಶ್ಚಿಕ: ವ್ಯವಹಾರಿಕ ಅಭಿವೃದ್ಧಿ ಇರುವುದು. ನಿಂತ ಕೆಲಸಗಳು ಮುಂದುವರೆಯುವವು. ಕಠಿಣ ಪರಿಶ್ರಮದಿಂದ ಕೆಲಸ ಕೈಗೂಡುವುದು. ಹಾನಿಯ ಪ್ರಮಾಣ ಕಡಿಮೆಯಾಗುವುದು. ಶುಭ ಸಂಖ್ಯೆ: 3

ಧನು: ಮಾತು ಹಿಡಿತದಲ್ಲಿರಲಿ. ಅನವಶ್ಯಕ ವಾಗ್ವಾದ ಉಂಟಾಗುವ ಸಂಭವವಿದೆ. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವುದು. ಹಿತೈಷಿಗಳ ಸಲಹೆಯಂತೆ ಮುಂದುವರೆಯಿರಿ. ಶುಭ ಸಂಖ್ಯೆ: 7

ಮಕರ: ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವುದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ. ಶುಭ ಸಂಖ್ಯೆ: 5

ಕುಂಭ: ಅಪೇಕ್ಷಿಸಿದ ಕಾರ್ಯಗಳು ನಿರ್ವಿಘ್ನವಾಗಿ ಪೂರ್ಣಗೊಳ್ಳುವವು ಆಸ್ತಿ ವಿವಾದ ಸೃಜನರ ಅತೃಪ್ತಿ ಮುಂತಾದ ಕಲಹಗಳು ಪರಿಹಾರವಾಗಿ ಸುಖ, ಸಂತೃಪ್ತಿಯ ಯೋಗವಿದೆ. ವಿದ್ಯಾರ್ಥಿಗಳು ಉನ್ನತ ಮಟ್ಟದ ಫಲಿತಾಂಶವನ್ನು ಹೊಂದುವರು. ಸಭಾಸಮಾಜ ಕೀರ್ತಿ ಲಭಿಸುವುದು. ಶುಭ ಸಂಖ್ಯೆ: 4

ಮೀನ: ವ್ಯವಹಾರದಲ್ಲಿ ಅಡೆತಡೆಗಳು ಕಂಡುಬರುವವು. ಜಿಪುಣತನದಿಂದ ತೊಂದರೆಯಾಗುವ ಸಾಧ್ಯತೆ ಇದೆ. ಅಗೌರವ ಆಗುವ ಸಂಭವ ಇರುವುದರಿಂದ ಸೂಕ್ಷ್ಮವಾಗಿರುವುದು ಉತ್ತಮ. ಹೊಸ ಯೋಜನೆಗಳಿಗೆ ಚಾಲನೆ ದೊರೆಯುವುದು. ಶುಭ ಸಂಖ್ಯೆ: 3

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಸಂಪರ್ಕ ಸಂಖ್ಯೆ: 9972848937

ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ