Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ವ್ಯವಹಾರಿಕ ಅಭಿವೃದ್ಧಿ ಇರುವುದು

| Updated By: Vinay Bhat

Updated on: Oct 29, 2021 | 6:38 AM

Horoscope ಅಕ್ಟೋಬರ್ 29, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ವ್ಯವಹಾರಿಕ ಅಭಿವೃದ್ಧಿ ಇರುವುದು
ದಿನ ಭವಿಷ್ಯ
Follow us on

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಆಶ್ವಯುಜ ಮಾಸ, ಶರದೃತು, ಕೃಷ್ಣಪಕ್ಷ, ಅಷ್ಟಮಿ ತಿಥಿ, ಶುಕ್ರವಾರ, ಅಕ್ಟೋಬರ್ 29, 2021. ಪುಷ್ಯ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 10.32 ರಿಂದ ಇಂದು ಬೆಳಿಗ್ಗೆ 11.58 ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.13. ಸೂರ್ಯಾಸ್ತ: ಸಂಜೆ 5.46

ತಾ.29-10-2021 ರ ಶುಕ್ರವಾರದ ರಾಶಿಭವಿಷ್ಯ.

ಮೇಷ: ಮಾತು ಹಿಡಿತದಲ್ಲಿರಲಿ. ಅನವಶ್ಯಕ ವಾಗ್ವಾದ ಉಂಟಾಗುವ ಸಂಭವವಿದೆ. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವುದು. ಹಿತೈಷಿಗಳ ಸಲಹೆಯಂತೆ ಮುಂದುವರೆಯಿರಿ. ಶುಭ ಸಂಖ್ಯೆ: 5

ವೃಷಭ: ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ ದೊರೆಯುವುದು. ಕೋರ್ಟ್ನಲ್ಲಿ ಇರುವ ನ್ಯಾಯ ಬಗೆಹರಿಯುವುದು. ಆರ್ಥಿಕ ಸುಧಾರಣೆ ಕಂಡುಬರುವುದು. ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವುದು. ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಕಂಡುಬರುವುದು. ಶುಭ ಸಂಖ್ಯೆ: 1

ಮಿಥುನ: ಉದ್ಯೋಗ ಬದಲಿ ಮಾಡುವುದು ಸದ್ಯ ಬೇಡ. ಹಣದ ಕೊರತೆ ಇರಲಾರದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಪಿತ್ರಾರ್ಜಿತ ಆಸ್ತಿ ದೊರೆಯುವ ಯೋಗವಿದೆ. ತಂದೆತಾಯಿಯ ವಿಷಯದಲ್ಲಿ ಚಿಂತೆ ಇರುವುದು. ಶುಭ ಸಂಖ್ಯೆ: 9

ಕಟಕ: ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವುದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ. ಶುಭ ಸಂಖ್ಯೆ: 3

ಸಿಂಹ: ಕೆಲಸದಲ್ಲಿ ತಾಳ್ಮೆ ಇರಲಿ. ಅನಿರ್ದಿಷ್ಟ ಉದ್ಯೋಗ, ಕೆಲಸದ ವಿಷಯದಲ್ಲಿ ಗೊಂದಲ ಮೂಡುವ ಸಾಧ್ಯತೆ ಇದೆ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ವ್ಯಾಪಾರಿಗಳಿಗೆ ಆರ್ಥಿಕ ತೊಂದರೆ ಆಗುವ ಯೋಗವಿದೆ. ಶುಭ ಸಂಖ್ಯೆ: 6

ಕನ್ಯಾ: ಅನಿಸಿಕೆಗಿಂತ ವಾಸ್ತವ ಬೇರೆ ಇರುವುದರಿಂದ ತಕ್ಕ ಬದಲಾವಣೆ ಮಾಡಿಕೊಳ್ಳುವಿರಿ. ನಡತೆಯಲ್ಲ ಸೂಕ್ಷತೆ ಇರಲಿ. ವ್ಯವಹಾರವನ್ನು ಪೂರ್ಣವಾಗಿ ಆಲೋಚಿಸಿ ಮಾಡುವುದು ಒಳ್ಳೆಯದು. ಧನಹಾನಿಯ ಸಂಭವವಿದೆ. ಶುಭ ಸಂಖ್ಯೆ: 8

ತುಲಾ: ವ್ಯವಹಾರಿಕ ಅಭಿವೃದ್ಧಿ ಇರುವುದು. ನಿಂತ ಕೆಲಸಗಳು ಮುಂದುವರೆಯುವವು. ಕಠಿಣ ಪರಿಶ್ರಮದಿಂದ ಕೆಲಸ ಕೈಗೂಡುವುದು. ಹಾನಿಯ ಪ್ರಮಾಣ ಕಡಿಮೆಯಾಗುವುದು. ಶುಭ ಸಂಖ್ಯೆ: 4

ವೃಶ್ಚಿಕ: ವ್ಯವಹಾರದಲ್ಲಿ ಅಡೆತಡೆಗಳು ಕಂಡುಬರುವವು. ಜಿಪುಣತನದಿಂದ ತೊಂದರೆಯಾಗುವ ಸಾಧ್ಯತೆ ಇದೆ. ಅಗೌರವ ಆಗುವ ಸಂಭವ ಇರುವುದರಿಂದ ಸೂಕ್ಷ್ಮವಾಗಿರುವುದು ಉತ್ತಮ. ಹೊಸ ಯೋಜನೆಗಳಿಗೆ ಚಾಲನೆ ದೊರೆಯುವುದು. ಶುಭ ಸಂಖ್ಯೆ: 2

ಧನು: ಶುಭ ಕರ್ಮ ಸಂಪ್ರಾಪ್ತಿಯಿದ್ದು, ಗುರುವರ್ಗ ಸಂತೋಷ, ಸಂಸಾರ ಸುಖ. ನೂತನ ಮಿತ್ರಭೇಟಿ, ಅರ್ಥಾರ್ಜನೆಯು ಉತ್ತಮವಿದೆ. ಆದರೂ ಗೃಹಕಲಹ, ಬಂಧು ಜನರಲ್ಲಿ ಅಸಮಾಧಾನ ಕಂಡುಬರುವುದು. ಶುಭ ಸಂಖ್ಯೆ: 8

ಮಕರ: ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ಮೊದಲು ಕಷ್ಟ ನಂತರದಲ್ಲಿ ಉತ್ತಮವಾದ ಫಲ ದೊರೆಯುವುದು. ಗುರುಬಲ ವೃದ್ಧಿಸುವುದು. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವುದು. ಶುಭ ಸಂಖ್ಯೆ: 1

ಕುಂಭ: ಅಪೇಕ್ಷಿಸಿದ ಕಾರ್ಯಗಳು ನಿರ್ವಿಘ್ನವಾಗಿ ಪೂರ್ಣಗೊಳ್ಳುವವು ಆಸ್ತಿ ವಿವಾದ ಸೃಜನರ ಅತೃಪ್ತಿ ಮುಂತಾದ ಕಲಹಗಳು ಪರಿಹಾರವಾಗಿ ಸುಖ, ಸಂತೃಪ್ತಿಯ ಯೋಗವಿದೆ. ವಿದ್ಯಾರ್ಥಿಗಳು ಉನ್ನತ ಮಟ್ಟದ ಫಲಿತಾಂಶವನ್ನು ಹೊಂದುವರು. ಸಭಾಸಮಾಜ ಕೀರ್ತಿ ಲಭಿಸುವುದು. ಶುಭ ಸಂಖ್ಯೆ: 7

ಮೀನ: ಬಹುಜನರ ಪ್ರಶಂಸೆಗೆ ಪಾತ್ರವಾಗುವ ಆಡಳಿತಾತ್ಮಕ ನಿರ್ಧಾರ. ಇದ್ದಕ್ಕಿದಂತೆ ಶುಭಕರ ಒಲವು. ಸಲ್ಲುವ ವಿಚಾರದಲ್ಲಿ ಕುಟುಂಬದ ಒಗ್ಗಟ್ಟು ವೃದ್ಧಿ. ಆರ್ಥಿಕಾನೂಕೂಲದಿಂದ ಸರಳ ವ್ಯವಹಾರ. ಹೆಂಗಳೆಯರದು ಮೌನವಾದ ಕೆಲಸ. ಆದರೆ ಪರಿಣಾಮ ಜಾಸ್ತಿ. ಶುಭ ಸಂಖ್ಯೆ: 9

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಸಂಪರ್ಕ ಸಂಖ್ಯೆ: 9972848937