Horoscope Today – ದಿನ ಭವಿಷ್ಯ; ಭಾನುವಾರದ ಭವಿಷ್ಯದಲ್ಲಿ ಯಾರಿಗೆ ಒಳಿತು?

ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಭಾದ್ರಪದ ಮಾಸ, ವರ್ಷ ಋತು, ಕೃಷ್ಣಪಕ್ಷ, ದ್ವಾದಶಿ ತಿಥಿ, ಭಾನುವಾರ, ಅಕ್ಟೋಬರ್​ 3, 2021 ನಕ್ಷತ್ರ.

Horoscope Today - ದಿನ ಭವಿಷ್ಯ; ಭಾನುವಾರದ ಭವಿಷ್ಯದಲ್ಲಿ ಯಾರಿಗೆ ಒಳಿತು?
ದಿನ ಭವಿಷ್ಯ
Follow us
TV9 Web
| Updated By: Vinay Bhat

Updated on: Oct 03, 2021 | 6:34 AM

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಭಾದ್ರಪದ ಮಾಸ, ವರ್ಷ ಋತು, ಕೃಷ್ಣಪಕ್ಷ, ದ್ವಾದಶಿ ತಿಥಿ, ಭಾನುವಾರ, ಅಕ್ಟೋಬರ್​ 3, 2021. ಮಖೆ ನಕ್ಷತ್ರ, ರಾಹುಕಾಲ: ಇಂದು ಸಂಜೆ 4:33ರಿಂದ ಇಂದು ರಾತ್ರಿ 6:02 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.06. ಸೂರ್ಯಾಸ್ತ: ಸಂಜೆ 6.09.

ತಾ.03-10-2021 ರ ಭಾನುವಾರದ ರಾಶಿ ಭವಿಷ್ಯ.

ಮೇಷ: ಶುಭಫಲಗಳು ಕಂಡುಬರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೌಟುಂಬಿಕ ಸಮಸ್ಯಗಳು ದೂರಾಗುವವು. ಕೊಟ್ಟಸಾಲ ಪಾವತಿಯಾಗುವದು. ಶುಭ ಸಂಖ್ಯೆ: 8

ವೃಷಭ: ಸತತ ಪ್ರಯತ್ನಕ್ಕೆ ಫಲ ಇದ್ದೇ ಇರುತ್ತದೆ. ವೃತ್ತಿಕೌಶಲ್ಯದಿಂದ ಅಸಾಧ್ಯವಾದ ಕಾರ್ಯವನ್ನೂ ಸಾಧಿಸುವಿರಿ. ಧನಮೂಲಗಳು ಹೆಚ್ಚಾಗುವವು.ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವದು. ಶುಭ ಸಂಖ್ಯೆ: 1

ಮಿಥುನ: ವ್ಯಕ್ತಿತ್ವಕ್ಕೆ ತಕ್ಕ ಗೌರವಗಳು ದೊರೆಯುವವು. ಚಾಣಾಕ್ಷತನದಿಂದ ಕಷ್ಟ ಪರಿಹರಿಸಿಕೊಳ್ಳುವಿರಿ. ಅಪೇಕ್ಷಿತ ಕಾರ್ಯಗಳು ಕೈಗೂಡುವವು. ಸಂಭಂಧಿಗಳಿಂದ ಸಹಕಾರ ದೊರೆಯುವದು. ದೂರ ಪ್ರಯಾಣ, ಪರಸ್ಥಳವಾಸ ಸಂಭವ. ಶುಭ ಸಂಖ್ಯೆ: 4

ಕರ್ಕ: ವ್ಯವಹಾರದಲ್ಲಿ ಹಾನಿ ಕಂಡುಬರುವದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವದು. ಶುಭ ಸಂಖ್ಯೆ: 9

ಸಿಂಹ: ದೀರ್ಘಕಾಲದ ಸಮಸ್ಯಗಳಿಗೆ ಪರಿಹಾರ ದೊರೆಯುವದು. ಕೋರ್ಟನಲ್ಲಿ ಇರುವ ನ್ಯಾಯ ಬಗೆಹರಿಯುವದು. ಆರ್ಥಿಕ ಸುಧಾರಣೆ ಕಂಡುಬರುವದು. ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವದು. ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಕಂಡುಬರುವದು. ಶುಭ ಸಂಖ್ಯೆ: 2

ಕನ್ಯಾ: ಕುಟುಂಬದಲ್ಲಿ ವಾದ ಬೇಡ. ಉತ್ತಮ ಸಾಧನೆಯಿಂದ ಬಂಧುವರ್ಗದ ಪ್ರಶಂಸೆಗೆ ಪಾತ್ರರಾಗುವಿರಿ. ವ್ಯವಹಾರದಲ್ಲಿಯ ಚತುರತೆ ಒಳ್ಳೆಯ ಆದಾಯವನ್ನು ತಂದು ಕೊಡುವದು. ಸಮತೋಲಿತ ಜೀವನವಿರುವದು. ಶುಭ ಸಂಖ್ಯೆ: 7

ತುಲಾ: ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ. ಶುಭ ಸಂಖ್ಯೆ: 3

ವೃಶ್ಚಿಕ: ಕ್ಷಮಾಗುಣ ಇರಲಿ, ಪರಸ್ಪರ ದೋಷಾರೋಪ ಮಾಡುವದರಿಂದ ಕಾರ್ಯಹಾನಿಯ ಸಂಭವವಿದೆ. ವ್ಯವಹಾರದಲ್ಲಿ ಸಮತೋಲನ ಕಾಯ್ದುಕೊಳ್ಳುವಿರಿ. ದೊಡ್ಡಮೊತ್ತದ ಹಣಹೂಡಿಕೆ ಈಗ ಬೇಡ. ಶುಭ ಸಂಖ್ಯೆ: 8

ಧನು: ಕೆಲಸದಲ್ಲಿ ತಾಳ್ಮೆ ಇರಲಿ. ಅನಿರ್ದಿಷ್ಟ ಉದ್ಯೋಗ, ಕೆಲಸದ ವಿಷಯದಲ್ಲಿ ಗೊಂದಲ ಮೂಡುವ ಸಾಧ್ಯತೆ ಇದೆ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ವ್ಯಾಪಾರಿಗಳಿಗೆ ಆರ್ಥಿಕ ತೊಂದರೆ ಆಗುವ ಯೋಗವಿದೆ. ಶುಭ ಸಂಖ್ಯೆ: 4

ಮಕರ: ಎಲ್ಲವನ್ನು ಹಗುರವಾಗಿ ಕಾಣುವದರಿಂದ ಸಣ್ಣ ವಿಷಯವೂ ದೊಡ್ಡ ಸಮಸ್ಯೆಯಾಗುವದು. ಹಣಕಾಸಿನ ತೊಂದರೆಗಳು ಕಂಡುಬರುವವು. ಮಹತ್ವದ ಕೆಲಸಗಳು ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ. ಎಚ್ಚರಿಕೆ ವಹಿಸಿರಿ. ಶುಭ ಸಂಖ್ಯೆ: 1

ಕುಂಭ: ಸಾಲಗಾರರ ತೊಂದರೆ ಇರುವದು. ಅನಾರೋಗ್ಯ, ವ್ಯವಹಾರದಲ್ಲಿ ಹಾನಿ ಕಂಡುಬರುವದು. ನಿಧಾನಗತಿಯ ಕೆಲಸದಿಂದ ಮನೋಕ್ಷೋಭೆ ಉಂಟಾಗುವ ಸಂಭವವಿದೆ. ಶುಭ ಸಂಖ್ಯೆ: 9

ಮೀನ: ಆಶೆ ಆಕಾಂಕ್ಷಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವದು. ಸಹೋದರ ಸಹಕಾರ ತೋರುವದರಿಂದ ನಿರಾತಂಕವಾಗಿ ಕಾರ್ಯ ಪೂರ್ಣವಾಗುವದು. ಮನೆಯಲ್ಲಿ ಸಂತಸದ ವಾತಾವರಣ. ಶುಭ ಸಂಖ್ಯೆ: 5

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ, ಅವರಿಗೆ ವಿಶ್ರಾಂತಿಯ ಅಗತ್ಯವಿದೆ:ಶಶಿಕಲಾ
ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ, ಅವರಿಗೆ ವಿಶ್ರಾಂತಿಯ ಅಗತ್ಯವಿದೆ:ಶಶಿಕಲಾ
ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳದ ಸಚಿವೆಯ ಪತಿ ರವೀಂದ್ರ ಹೆಬ್ಬಾಳ್ಕರ್
ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳದ ಸಚಿವೆಯ ಪತಿ ರವೀಂದ್ರ ಹೆಬ್ಬಾಳ್ಕರ್
ಘಟನೆ ಸಿದ್ದರಾಮಯ್ಯ ಮತ್ತು ಅವರ ಸರ್ಕಾರಕ್ಕೆ ಒಳ್ಳೇದು ಮಾಡಲ್ಲ: ವಿಜಯೇಂದ್ರ
ಘಟನೆ ಸಿದ್ದರಾಮಯ್ಯ ಮತ್ತು ಅವರ ಸರ್ಕಾರಕ್ಕೆ ಒಳ್ಳೇದು ಮಾಡಲ್ಲ: ವಿಜಯೇಂದ್ರ
ಅಪಘಾತದ ಸ್ವರೂಪ ನೋಡಿದರೆ ಕಾರು ಚಾಲಕ ಬದುಕುಳಿದಿದ್ದೇ ಪವಾಡ
ಅಪಘಾತದ ಸ್ವರೂಪ ನೋಡಿದರೆ ಕಾರು ಚಾಲಕ ಬದುಕುಳಿದಿದ್ದೇ ಪವಾಡ
ಬೆಂಗಳೂರಿನ ಬಯೋ ಇನ್ನೋವೇಶನ್ ಸೆಂಟರ್​ನಲ್ಲಿ ಅಗ್ನಿ ಅವಘಡ
ಬೆಂಗಳೂರಿನ ಬಯೋ ಇನ್ನೋವೇಶನ್ ಸೆಂಟರ್​ನಲ್ಲಿ ಅಗ್ನಿ ಅವಘಡ
ಬಿಗ್ ಬಾಸ್ ಮುಗಿದ ಬಳಿಕ ಎಲ್​ಎಲ್​ಬಿ ಓದಲು ರೆಡಿ ಆದ ಚೈತ್ರಾ ಕುಂದಾಪುರ
ಬಿಗ್ ಬಾಸ್ ಮುಗಿದ ಬಳಿಕ ಎಲ್​ಎಲ್​ಬಿ ಓದಲು ರೆಡಿ ಆದ ಚೈತ್ರಾ ಕುಂದಾಪುರ
ಬೆಳಗಾವಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್​​ಗೆ ಚಿಕಿತ್ಸೆ
ಬೆಳಗಾವಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್​​ಗೆ ಚಿಕಿತ್ಸೆ
ಕಾರು ಅಪಘಾತದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್​ ಬೆನ್ನು ಮೂಳೆ ಮುರಿತ!
ಕಾರು ಅಪಘಾತದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್​ ಬೆನ್ನು ಮೂಳೆ ಮುರಿತ!
ಮಂಡ್ಯ: ಶಿವಲಿಂಗಕ್ಕೆ ಸ್ಪರ್ಶಿಸದ ಸೂರ್ಯ ರಶ್ಮಿ, ಕಾದಿದೆಯಾ ಗಂಡಾಂತರ?
ಮಂಡ್ಯ: ಶಿವಲಿಂಗಕ್ಕೆ ಸ್ಪರ್ಶಿಸದ ಸೂರ್ಯ ರಶ್ಮಿ, ಕಾದಿದೆಯಾ ಗಂಡಾಂತರ?
ರನೌಟ್​ನೊಂದಿಗೆ ವಿದೇಶಿ ಲೀಗ್ ಆರಂಭಿಸಿದ ದಿನೇಶ್ ಕಾರ್ತಿಕ್
ರನೌಟ್​ನೊಂದಿಗೆ ವಿದೇಶಿ ಲೀಗ್ ಆರಂಭಿಸಿದ ದಿನೇಶ್ ಕಾರ್ತಿಕ್