Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ

Horoscope ಅಕ್ಟೋಬರ್ 31, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ
ದಿನ ಭವಿಷ್ಯ
Follow us
TV9 Web
| Updated By: Vinay Bhat

Updated on: Oct 31, 2021 | 6:42 AM

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಆಶ್ವಯುಜ ಮಾಸ, ಶರದೃತು, ಕೃಷ್ಣಪಕ್ಷ, ದಶಮಿ ತಿಥಿ, ಭಾನುವಾರ, ಅಕ್ಟೋಬರ್ 31, 2021. ಮಖೆ ನಕ್ಷತ್ರ, ರಾಹುಕಾಲ: ಇಂದು ಸಂಜೆ 4.18 ರಿಂದ ಇಂದು ಸಂಜೆ 5.44 ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.13. ಸೂರ್ಯಾಸ್ತ: ಸಂಜೆ 5.45

ತಾ.31-10-2021 ರ ಭಾನುವಾರದ ರಾಶಿಭವಿಷ್ಯ.

ಮೇಷ: ಮಾತಿನಿಂದ ಅನರ್ಥವಾಗುವ ಸಂಭವ. ಮನಸ್ಸು ಹಿಡಿತದಲ್ಲಿರಲಿ. ಎಷ್ಟು ಪ್ರಯತ್ನಿಸಿದರೂ ಸಮಸ್ಯೆಗಳಿಗೆ ಪರಿಹಾರ ದೊರೆಯದೇ ಕ್ಲೇಷ ಉಂಟಾಗುವದು. ತೋರಿಕೆಯ ಸ್ವಭಾವದಿಂದ ದೃಷ್ಟಿದೋಷ ಆಗುವ ಸಾಧ್ಯತೆ ಇದೆ. ಶುಭ ಸಂಖ್ಯೆ: 4

ವೃಷಭ: ಶುಭಫಲಗಳು ಕಂಡುಬರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೌಟುಂಬಿಕ ಸಮಸ್ಯೆಗಳು ದೂರಾಗುವವು. ಕೊಟ್ಟಸಾಲ ಪಾವತಿಯಾಗುವುದು. ಶುಭ ಸಂಖ್ಯೆ: 1

ಮಿಥುನ: ಯೋಜನೆಗಳಿಗೆ ಪೂರ್ವ ತಯಾರಿ ಮಾಡುವ ಅಗತ್ಯತೆ ಕಂಡುಬರುವುದು. ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವದು ಒಳಿತು. ಶುಭ ಸಂಖ್ಯೆ: 9

ಕಟಕ: ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವುದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ. ಶುಭ ಸಂಖ್ಯೆ: 2

ಸಿಂಹ: ಅಂತಃಶತ್ರುಗಳ ಕಾಟ ಹೆಚ್ಚಾಗುವ ಲಕ್ಷಣವಿದೆ. ಹಳೆಯ ಸಮಸ್ಯೆಗಳು ಮತ್ತೆ ಎದುರಾಗುವ ಸಂಭವವಿದೆ. ಚಂಚಲತೆ ಬೇಡ, ಹಿಡಿದ ಕಾರ್ಯವನ್ನು ಪೂರ್ಣಗೊಳಿಸಿ. ಆರ್ಥಿಕ ಲಾಭವಿದೆ ಆದರೆ ವಿದ್ಯೆಯಲ್ಲಿ ಹಿನ್ನಡೆ ಕಂಡುಬರುವುದು. ಶುಭ ಸಂಖ್ಯೆ: 5

ಕನ್ಯಾ: ಪ್ರಮುಖ ಯೋಜನೆಗಳ ಜವಾಬ್ದಾರಿ ಹೆಚ್ಚುವುದು. ಆರ್ಥಿಕ ಅಭಿವೃದ್ಧಿ ಕಂಡುಬರುವುದು. ಸ್ನೇಹಿತರ ಭಿನ್ನಾಭಿಪ್ರಾಯ ಬಗೆಹರಿಯುವುದು. ಶತೃಗಳೂ ಸೌಮ್ಯರಾಗುವ ಕಾಲ ಇರುವುದರಿಂದ ಅಪೇಕ್ಷಿತ ಕಾರ್ಯವನ್ನು ಸಾಧಿಸುವಿರಿ. ಶುಭ ಸಂಖ್ಯೆ: 2

ತುಲಾ: ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವುದು ಒಳಿತು. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವುದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ. ಶುಭ ಸಂಖ್ಯೆ: 8

ವೃಶ್ಚಿಕ: ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವುದು. ಎಚ್ಚರಿಕೆವಹಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವುದು. ಗೊಂದಲಕ್ಕೆ ಒಳಗಾಗದೇ ಮುನ್ನುಗ್ಗಿರಿ. ಕೊಟ್ಟಸಾಲ ಪಾವತಿಯಾಗುವುದು. ಶುಭ ಸಂಖ್ಯೆ: 3

ಧನು: ಹಿರಿಯರಿಗೆ ಅನಾರೋಗ್ಯ ಸಂಭವ. ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಉದ್ಯೋಗ ಬದಲಿ ಮಾಡುವುದು ಸದ್ಯಕ್ಕೆ ಬೇಡ. ಹಣಕಾಸಿನ ವಿಷಯದಲ್ಲಿ ಬಂಧುಗಳು ಸಹಕಾರ ತೋರುವರು. ಶುಭ ಸಂಖ್ಯೆ: 7

ಮಕರ: ಹಿರಿಯರ ಮಾರ್ಗದರ್ಶನ ದೊರೆಯಲಿದೆ. ಆತ್ಮೀಯರೊಂದಿಗೆ ವಾದವಿವಾದ ಮಾಡಬೇಡಿ. ಮದುವೆಯ ಮಾತುಕತೆ ಕೈಗೂಡುವ ಸಾಧ್ಯತೆ ಇದೆ. ವ್ಯವಹಾರಿಕ ಜಾಣತನದಿಂದ ಲಾಭವಾಗಲಿದೆ. ಮನೆಯಲ್ಲಿ ಸಂತಸ ಕಂಡುಬರುವುದು. ಶುಭ ಸಂಖ್ಯೆ: 4

ಕುಂಭ: ಯಶಸ್ಸು. ಶ್ರಮಕ್ಕೆ ತಕ್ಕ ಲಾಭ, ಕೀರ್ತಿ, ಕೃಷಿಯಲ್ಲಿ ಉತ್ತಮ ಸಾಧನೆ, ಮನೆಯಲ್ಲಿ ಮಂಗಲಕಾರ್ಯ, ಬುಧ, ಮಂಗಳ ಯೋಗ ಶುಭದಾಯಕ ಆದರೂ ಕಿರಿಕಿರಿ ಸಂಭವ. ಪರಿಹಾರಕ್ಕಾಗಿ ಅನ್ನದಾನ ಮಾಡಿರಿ. ಶುಭ ಸಂಖ್ಯೆ: 3

ಮೀನ: ಆರೋಗ್ಯಪೂರ್ಣತೆ, ಪ್ರಸನ್ನತೆ ಇರುವುದು. ಎಲ್ಲ ಕಾರ್ಯಗಳೂ ತಮ್ಮ ಮನಸ್ಸಿನಂತೆ ನಡೆಯುವವು. ಧನಲಾಭ, ಧಾರ್ಮಿಕ ಕಾರ್ಯ, ದೇವತಾ ಕ್ಷೇತ್ರ ದರ್ಶನ ಯೋಗವಿರುವುದು. ವ್ಯಾಪಾರ ಸಾಧಾರಣ. ಶುಭ ಸಂಖ್ಯೆ: 1

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಸಂಪರ್ಕ ಸಂಖ್ಯೆ: 9972848937

ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ