Horoscope Today- ದಿನ ಭವಿಷ್ಯ; ಈ ರಾಶಿಯ ಹಿರಿಯರಿಗೆ ಅನಾರೋಗ್ಯ ಸಂಭವ
Horoscope ಸೆಪ್ಟೆಂಬರ್ 02, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.
ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಶ್ರಾವಣ ಮಾಸ, ವರ್ಷ ಋತು, ಕೃಷ್ಣಪಕ್ಷ, ದಶಮಿ ತಿಥಿ, ಗುರುವಾರ, ಸೆಪ್ಟೆಂಬರ್ 02, 2021. ಆರ್ದ್ರೆ ನಕ್ಷತ್ರ, ರಾಹುಕಾಲ: ಇಂದು ಮಧ್ಯಾಹ್ನ 1.48 ರಿಂದ ಇಂದು ಸಂಜೆ 3.21ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.02. ಸೂರ್ಯಾಸ್ತ: ಸಂಜೆ 6.29
ತಾ.02-09-2021ರ ಗುರುವಾರದ ರಾಶಿಭವಿಷ್ಯ ಮೇಷ: ಹಿರಿಯರಿಗೆ ಅನಾರೋಗ್ಯ ಸಂಭವ. ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಉದ್ಯೋಗ ಬದಲಿ ಮಾಡುವುದು ಸದ್ಯಕ್ಕೆ ಬೇಡ. ಹಣಕಾಸಿನ ವಿಷಯದಲ್ಲಿ ಬಂಧುಗಳು ಸಹಕಾರ ತೋರುವರು. ಶುಭ ಸಂಖ್ಯೆ: 6
ವೃಷಭ: ಧನಮದಕ್ಕಿಂತ ವಿದ್ಯಾಮದ ಅಪಾಯಕಾರಿ ಆದ್ದರಿಂದ ತೊಂದರೆ ಆಗುವ ಸಾಧ್ಯತೆ ಇದೆ ವಿನಯದಿಂದ ವರ್ತಿಸಿರಿ. ಅಕಾಲಿಕ ಒತ್ತಡಗಳಿಂದ ಕಾರ್ಯಹಾನಿ. ಪ್ರೇಮಿಗಳಿಗೆ ಅಪೇಕ್ಷೆಯಂತೆ ಕಂಕಣಬಲ ಕೂಡಿಬರುವುದು. ಶುಭ ಸಂಖ್ಯೆ: 9
ಮಿಥುನ: ವಸ್ತು-ವಾಹನ-ಆಸ್ತಿ ಖರೀದಿ ಯೋಗವಿದೆ. ಅನವಶ್ಯಕ ಅಲೆದಾಟದ ಸಾದ್ಯತೆ ಇದೆ. ಮನೆಯ ಹಿರಿಯರ ಆರೋಗ್ಯದ ಚಿಂತೆ ಇರುವುದು. ಬುದ್ಧಿವಂತಿಕೆಯಿಂದ ದೊಡ್ಡ ಕೆಲಸವನ್ನೂ ಸಹಜವಾಗಿ ಮಾಡುವಿರಿ. ಶುಭ ಸಂಖ್ಯೆ: 1
ಕಟಕ: ಕೈಹಾಕಿದ ಕೆಲಸಗಳು ನಿರಾತಂಕವಾಗಿ ಮುಂದುವರೆಯುವವು. ಉತ್ತಮವಾದ ಸಮಯ ಇರುವುದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುವುದು. ಹೊಸ ಯೋಜನೆಗಳಿಗೆ ಚಾಲನೆ ದೊರೆಯುವುದು. ಶುಭ ಸಂಖ್ಯೆ: 7
ಸಿಂಹ: ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವುದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ. ಶುಭ ಸಂಖ್ಯೆ: 3
ಕನ್ಯಾ: ಕ್ಷಮಾಗುಣ ಇರಲಿ, ಪರಸ್ಪರ ದೋಷಾರೋಪ ಮಾಡುವುದರಿಂದ ಕಾರ್ಯಹಾನಿಯ ಸಂಭವವಿದೆ. ವ್ಯವಹಾರದಲ್ಲಿ ಸಮತೋಲನ ಕಾಯ್ದುಕೊಳ್ಳುವಿರಿ. ದೊಡ್ಡಮೊತ್ತದ ಹಣಹೂಡಿಕೆ ಈಗ ಬೇಡ. ಶುಭ ಸಂಖ್ಯೆ: 8
ತುಲಾ: ಆರೋಗ್ಯಕ್ಕೆ ಸಂಬಂಧಿಸಿದ ವಿಪತ್ತಿನಿಂದ ಪಾರಾಗುವಿರಿ. ಕಷ್ಟದ ಸಮಯದಲ್ಲಿಯೂ ಸಂಯಮ ಕಳೆದುಕೊಳ್ಳದೇ ಮುಂದುವರೆಯುವಿರಿ. ಉದ್ಯೋಗದಲ್ಲಿ ವರ್ಗಾವಣೆಯ ಯೋಗವಿದೆ. ಆರ್ಥಿಕಬಲ ಕುಗ್ಗುವ ಸಂಭವವಿದೆ. ಶುಭ ಸಂಖ್ಯೆ: 4
ವೃಶ್ಚಿಕ: ಅಭದ್ರತೆ ಕಾಡುವ ಸಂಭವವಿದೆ. ಸ್ಥಾನಚ್ಯುತಿಯಾಗುವ ಸಾಧ್ಯತೆ ಇದೆ. ಸಹೋದರರಲ್ಲಿ ಕಲಹ. ಸ್ಥಿರಾಸ್ತಿಯು ಹಾನಿಯಾಗುವ ಯೋಗವಿದೆ. ಕೃಷಿಕರಿಗೆ ಹಾಗೂ ವ್ಯಾಪಾರಿಗಳಿಗೆ ಆರ್ಥಿಕ ಸಂಕಷ್ಟ ಇರುವುದು. ಶುಭ ಸಂಖ್ಯೆ: 8
ಧನು: ಬದಲಾವಣೆಯನ್ನು ಸಹಜವಾಗಿ ಸ್ವೀಕರಿಸಿ. ಕರ್ತವ್ಯವನ್ನು ಸಮರ್ಥವಾಗಿ ನಿಭಾಯಿಸುವಿರಿ. ಸಾಮಾಜಿಕ ಗೌರವಗಳು ಅರಸಿಕೊಂಡು ಬರಲಿವೆ. ಮಾಲೀಕತ್ವದ ಆಸ್ತಿ ಕೈತಪ್ಪದಂತೆ ಎಚ್ಚರಿಕೆ ವಹಿಸಿರಿ. ಧನದ ಅಪವ್ಯಯ ಆಗದಂತೆ ನೋಡಿರಿ. ಶುಭ ಸಂಖ್ಯೆ: 5
ಮಕರ: ಒಂದೇ ಮನಸ್ಸಿನ ಕ್ರಿಯಾಶೀಲವಾದ ಬದುಕು ಸಾಧನೆಗೆ ಕಾರಣವಾಗುವುದು. ಅಡೆತಡೆಗಳ ನಿವಾರಣೆಯಾಗುವುದು. ನಿಶ್ಚಿತ ಅವಧಿಯ ಪರೀಕ್ಷೆಗಳು ಎದುರಾದರೂ ಬಲಗುಂದುವುದಿಲ್ಲ. ಹಿರಿಯರ ಸಲಹೆ ದೊರೆಯುವುದು. ಶುಭ ಸಂಖ್ಯೆ: 7
ಕುಂಭ: ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಕೆಲಸದಲ್ಲಿ ಸ್ಪಷ್ಟತೆ ಇರಲಿ. ಅಲ್ಪಧನಲಾಭವಾದರೂ ಹಳೆಯ ಸಾಲ ತೀರುವುದು. ವ್ಯಾಪಾರದಲ್ಲಿ ಅಭಿವೃದ್ಧಿಯಾಗುವುದು. ವಿವಾಹ ಅಪೇಕ್ಷಿತರಿಗೆ ಕಂಕಣಬಲ ಕೂಡಿಬರುವುದು. ಶುಭ ಸಂಖ್ಯೆ: 2
ಮೀನ: ಸಹೋದ್ಯೋಗಿಗಳೊಂದಿಗೆ ಮನಸ್ತಾಪವಾಗುವ ಯೋಗವಿದೆ. ಅಪೂರ್ಣ ನಿರ್ಣಯಗಳು ಅಪಾಯ ತರಬಹುದು. ಅತೀ ವಿಶ್ವಾಸಿಕರೇ ಮೋಸಮಾಡುವ ಸಂಭವವಿದೆ. ದೂರ ಪ್ರಯಾಣ ಅಥವಾ ಪರಸ್ಥಳವಾಸ ಸಂಭವ. ಶುಭ ಸಂಖ್ಯೆ: 5