Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ವ್ಯಾಪಾರದಲ್ಲಿ ಪ್ರಗತಿ ಇರುವುದು
Horoscope ಸೆಪ್ಟೆಂಬರ್ 03, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.
ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಶ್ರಾವಣ ಮಾಸ, ವರ್ಷ ಋತು, ಕೃಷ್ಣಪಕ್ಷ, ಏಕಾದಶಿ ತಿಥಿ, ಶುಕ್ರವಾರ, ಸೆಪ್ಟೆಂಬರ್ 03, 2021. ಪುನರ್ವಸು ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 10.41 ರಿಂದ ಇಂದು ಬೆಳಿಗ್ಗೆ 12.14ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.02. ಸೂರ್ಯಾಸ್ತ: ಸಂಜೆ 6.28
ತಾ.03-09-2021 ರ ಶುಕ್ರವಾರದ ರಾಶಿಭವಿಷ್ಯ.
ಮೇಷ: ಒಳ್ಳೆಯ ಮಾತುಗಳಿಂದ ಸಂಬಂಧ ಸುಧಾರಿಸುವುದು. ಸ್ನೇಹಿತರಲ್ಲಿಯ ಮನಸ್ತಾಪ ದೂರಾಗುವುದು. ಶಕ್ಯತಾ ಮೀರಿ ದುಡಿಯುವ ಕಾರ್ಯಭಾರವಿರುವುದು. ಉದ್ಯೋಗದ ಹೊರತಾಗಿ ಬೇರೆ ಕೆಲಸಕ್ಕೂ ಗಮನಹರಿಸಿ. ಶುಭ ಸಂಖ್ಯೆ: 8
ವೃಷಭ: ವ್ಯಾಪಾರದಲ್ಲಿ ಪ್ರಗತಿ ಇರುವುದು. ವೈವಾಹಿಕ ತೊಂದರೆಗಳು ಪರಿಹಾರವಾಗುವವು. ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಮನೆಯಲ್ಲಿ ಸಂತಸದ ವಾತಾವರಣ ಇರುವುದು. ಶುಭ ಸಂಖ್ಯೆ: 2
ಮಿಥುನ: ಕೆಲಸದಲ್ಲಿ ತಾಳ್ಮೆ ಇರಲಿ. ಅನಿರ್ದಿಷ್ಟ ಉದ್ಯೋಗ, ಕೆಲಸದ ವಿಷಯದಲ್ಲಿ ಗೊಂದಲ ಮೂಡುವ ಸಾಧ್ಯತೆ ಇದೆ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ವ್ಯಾಪಾರಿಗಳಿಗೆ ಆರ್ಥಿಕ ತೊಂದರೆ ಆಗುವ ಯೋಗವಿದೆ. ಶುಭ ಸಂಖ್ಯೆ: 7
ಕಟಕ: ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವುದು. ಮನೋಚಿಂತಿತ ಕಾರ್ಯ ಕೈಗೂಡುವುದು. ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವುದು. ಪರರ ಸಹಾಯದ ಅನಿವಾರ್ಯತೆ ಇರಲಾರದು. ಆರೋಗ್ಯದ ಕಾಳಜಿ ಇರಲಿ. ಶುಭ ಸಂಖ್ಯೆ: 3
ಸಿಂಹ: ಪೂರ್ಣವಿಶ್ವಾಸ ಇಲ್ಲದ ಅಥವಾ ತಿಳಿಯದ ಕೆಲಸದಲ್ಲಿ ಹಣವ್ಯಯ ಮಾಡಬೇಡಿ. ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪ ಎಚ್ಚರಿಕೆ ಇರಲಿ. ದಿನದ ಕೆಲಸ ಬೇಸರ ಉಂಟುಮಾಡುವ ಸಾಧ್ಯತೆ ಇದೆ. ಶುಭ ಸಂಖ್ಯೆ: 6
ಕನ್ಯಾ: ಆಶೆ ಆಕಾಂಕ್ಷಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವದು. ಸಹೋದರ ಸಹಕಾರ ತೋರುವದರಿಂದ ನಿರಾತಂಕವಾಗಿ ಕಾರ್ಯ ಪೂರ್ಣವಾಗುವದು. ಮನೆಯಲ್ಲಿ ಸಂತಸದ ವಾತಾವರಣ ಇರುವುದು. ಶುಭ ಸಂಖ್ಯೆ: 4
ತುಲಾ: ಹಳೆಯ ಸಾಲ ಮರುಪಾವತಿಯಾಗುವುದು. ಬೇಡವಾದ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಂಭವವಿದೆ. ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಅತೀ ವಿಶ್ವಾಸಿಕರೇ ಎದುರಾಡುವ ಸಂಭವವಿದೆ. ಶುಭ ಸಂಖ್ಯೆ: 9
ವೃಶ್ಚಿಕ: ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯಪ್ರವೃತ್ತಿಯು ಉತ್ತಮ ಫಲಕೊಡುವುದು. ಹಳೆಯ ಬಾಕಿ ವಸೂಲಾಗುವುದು. ವ್ಯಾಜ್ಯಗಳು ಅಂತ್ಯಕಾಣುವವು. ಗ್ರಹ ಸೌಖ್ಯವಿರುವುದು. ಶುಭ ಸಂಖ್ಯೆ: 1
ಧನು: ವಿಶೇಷ ರೀತಿಯ ಕಾರ್ಯ ಒದಗಿ ಬಂದು ಸಂತಸ ಉಂಟಾಗುತ್ತದೆ. ಸ್ಥಾನಮಾನಗಳಿಗೂ ಕೊರತೆ ಇಲ್ಲ. ವಿಶೇಷ ವಸ್ತು ಸಂಗ್ರಹ. ಅನಾರೋಗ್ಯ್ಗ ತೋರಿಬಂದು ಕಿರಿಕಿರಿ ಎನಿಸಬಹುದು. ಶುಭ ಸಂಖ್ಯೆ: 8
ಮಕರ: ವ್ಯವಹಾರಿಕ ಸಂಪರ್ಕಗಳು ಹೆಚ್ಚುವವು ಅದರಂತೆ ಧನದ ಮೂಲಗಳೂ ಹೆಚ್ಚುವವು. ಸಾಲ ಮರುಪಾವತಿಯಾಗುವುದು. ಮನೆಯಲ್ಲಿ ನೆಮ್ಮದಿ ಇರುವುದು. ಅವಿವಾಹಿತರಿಗೆ ಕಂಕಣಬಲ ಕೂಡಿಬರುವುದು. ಶುಭ ಸಂಖ್ಯೆ: 3
ಕುಂಭ: ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಆತ್ಮೀಯರೊಂದಿಗೆ ಮನಸ್ತಾಪವಾಗುವ ಯೋಗವಿದೆ. ಅರ್ಧಕ್ಕೆನಿಂತ ಕೆಲಸಗಳು ಮುಂದುವರೆಯುವುದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಶುಭ ಸಂಖ್ಯೆ: 5
ಮೀನ: ಹೊಸ ಆಸ್ತಿ ಖರೀದಿ ಅಥವಾ ಹೊಸ ಹೂಡಿಕೆ ಈಗ ಬೇಡ. ಕಂಟಕದಿಂದ ಪಾರಾಗುವ ಯೋಗವಿದೆ. ಒಳ್ಳೆಯ ಸ್ವಭಾವ ಇರುವದರಿಂದ ಉದ್ಯೋಗದಲ್ಲಿ ಹೆಚ್ಚಿನ ಬಡ್ತಿಯಾಗುವ ಕಾಲ. ಆಸಕ್ತಿಗೆ ತಕ್ಕಂತೆ ಅವಕಾಶಗಳು ದೊರಕುವವು. ಶುಭ ಸಂಖ್ಯೆ: 2
Published On - 6:34 am, Fri, 3 September 21