Horoscope Today – ದಿನ ಭವಿಷ್ಯ; ಈ ರಾಶಿಯವರಿಗೆ ವಿವಿಧ ಮೂಲಗಳಿಂದ ಸಹಾಯ ದೊರೆಯುವುದು

| Updated By: Skanda

Updated on: Sep 04, 2021 | 6:35 AM

Horoscope ಸೆಪ್ಟೆಂಬರ್ 04, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today - ದಿನ ಭವಿಷ್ಯ; ಈ ರಾಶಿಯವರಿಗೆ ವಿವಿಧ ಮೂಲಗಳಿಂದ ಸಹಾಯ ದೊರೆಯುವುದು
ದಿನ ಭವಿಷ್ಯ
Follow us on

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಶ್ರಾವಣ ಮಾಸ, ವರ್ಷ ಋತು, ಕೃಷ್ಣಪಕ್ಷ, ದ್ವಾದಶಿ ತಿಥಿ, ಶನಿವಾರ, ಸೆಪ್ಟೆಂಬರ್ 04, 2021. ಪುಷ್ಯ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 9.08 ರಿಂದ ಇಂದು ಬೆಳಿಗ್ಗೆ 10.41ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.02. ಸೂರ್ಯಾಸ್ತ: ಸಂಜೆ 6.27

ತಾ.04-09-2021ಶನಿವಾರದ ರಾಶಿಭವಿಷ್ಯ:-
ಮೇಷ: ದೂರಾಲೋಚನೆಯಿಂದ ಕಾರ್ಯದಲ್ಲಿ ಯಶಸ್ಸು. ಆಸ್ತಿ ಖರೀದಿ ಸಾಧ್ಯ. ವೈವಾಹಿಕ ಚಿಂತೆ ಇರುವುದು. ಧಾರ್ಮಿಕ ಸಮಾರಂಭಗಳಲ್ಲಿ ಭಾಗಿಯಾಗುವ ಯೋಗವಿದೆ. ಧಾರ್ಮಿಕ ಕ್ಷೇತ್ರಗಳ ದರ್ಶನ ಯೋಗವಿದೆ. ಶುಭ ಸಂಖ್ಯೆ: 1

ವೃಷಭ: ವ್ಯಕ್ತಿತ್ವಕ್ಕೆ ತಕ್ಕ ಗೌರವಗಳು ದೊರೆಯುವವು. ಚಾಣಾಕ್ಷತನದಿಂದ ಕಷ್ಟ ಪರಿಹರಿಸಿಕೊಳ್ಳುವಿರಿ. ಅಪೇಕ್ಷಿತ ಕಾರ್ಯಗಳು ಕೈಗೂಡುವವು. ಸಂಬಂಧಿಗಳಿಂದ ಸಹಕಾರ ದೊರೆಯುವುದು. ದೂರ ಪ್ರಯಾಣ, ಪರಸ್ಥಳವಾಸ ಸಂಭವ. ಶುಭ ಸಂಖ್ಯೆ: 9

ಮಿಥುನ: ವಿವಿಧ ಮೂಲಗಳಿಂದ ಸಹಾಯ ದೊರೆಯುವುದು. ಉದ್ಯೋಗದಲ್ಲಿ ಅಭಿವೃದ್ಧಿ ಇರುವುದು. ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸುವಿರಿ. ಲೆಕ್ಕಾಚಾರ ತಪ್ಪದಂತೆ ಎಚ್ಚರವಹಿಸಿರಿ. ಮನೆಯಲ್ಲಿ ಮಂಗಲಕಾರ್ಯ ಜರುಗುವುದು. ಶುಭ ಸಂಖ್ಯೆ: 2

ಕಟಕ: ಹೊಸ ಕೆಲಸವನ್ನು ಒಪ್ಪಿಕೊಳ್ಳುವ ಮೊದಲು ವಿಚಾರಮಾಡಿ ಮುಂದುವರೆಯಿರಿ. ಉದ್ಯೋಗದ ಸ್ಥಾನ ಬದಲಾವಣೆಯ ಯೋಗವಿದೆ. ಆಮಿಷಕ್ಕೆ ಒಳಗಾಗಿ ಮೋಸಹೋಗುವ ಸಂಭವವಿದೆ. ಎಚ್ಚರಿಕೆ ವಹಿಸಿರಿ. ಶುಭ ಸಂಖ್ಯೆ: 8

ಸಿಂಹ: ವಿನಯಪೂರ್ವಕ ಕಾರ್ಯ ಸಾಧಿಸುವಿರಿ. ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗುವಿರಿ. ವಿವಿಧ ಮೂಲದಿಂದ ಧನಪ್ರಾಪ್ತಿ ಯೋಗವಿದೆ. ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಯೋಗವಿದೆ. ವಾಹನ ಖರೀದಿ ಯೋಗವಿರುವುದು. ಶುಭ ಸಂಖ್ಯೆ: 3

ಕನ್ಯಾ: ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ವಿವಿಧ ಮೂಲಗಳಿಂದ ಸಹಾಯ ದೊರೆಯುವದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ. ಶುಭ ಸಂಖ್ಯೆ: 7

ತುಲಾ: ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವವು. ಅಪೇಕ್ಷಿತ ಧನಸಹಾಯ ದೊರೆಯುವುದು. ಶುಭ ಸಂಖ್ಯೆ: 4

ವೃಶ್ಚಿಕ: ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವುದು. ಮನೋಚಿಂತಿತ ಕಾರ್ಯ ಕೈಗೂಡುವದು. ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವದು. ಪರರ ಸಹಾಯದ ಅನಿವಾರ್ಯತೆ ಇರಲಾರದು. ಆರೋಗ್ಯದ ಕಾಳಜಿ ಇರಲಿ. ಶುಭ ಸಂಖ್ಯೆ: 7

ಧನು: ಹಿರಿಯರಿಗೆ ಅನಾರೋಗ್ಯ ಸಂಭವ. ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಉದ್ಯೋಗ ಬದಲಿ ಮಾಡುವದು ಸದ್ಯಕ್ಕೆ ಬೇಡ. ಹಣಕಾಸಿನ ವಿಷಯದಲ್ಲಿ ಬಂಧುಗಳು ಸಹಕಾರ ತೋರುವರು. ಶುಭ ಸಂಖ್ಯೆ: 5

ಮಕರ: ಕೆಲಸ ಹೆಚ್ಚಿನ ಬದ್ಧತೆ ತೋರಿಸುವ ಅವಶ್ಯಕತೆ ಕಂಡುಬರುವದು. ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವದು. ವಾದ-ವಿವಾದ, ಹಠಸಾಧನೆ ಬೇಡ. ಶುಭ ಸಂಖ್ಯೆ: 6

ಕುಂಭ: ಆರಂಭದಲ್ಲಿ ಹರ್ಷ, ಉತ್ಸಾಹ ಇರುವದು ಕೊನೆಗೆ ಮನೋವ್ಯಥೆ. ಮನೆಯಲ್ಲಿ ಸಂತೋಷದ ವಾತಾವರಣ ಇರುವದು. ಗ್ರಹೋಪಯೋಗಿ ವಸ್ತುಗಳ ಖರೀದಿ, ಮನೆ ರಿಪೇರಿ ಮೊದಲಾದ ಕೆಲಸಗಳಾಗುವವು. ಶ್ರೀಲಕ್ಷ್ಮೀಸ್ತೋತ್ರ ಪಠಿಸಿರಿ. ಶುಭ ಸಂಖ್ಯೆ: 9

ಮೀನ: ಹೊಸ ಯೋಜನೆಗಳು ಬೇಡ.ಸ್ಥಳಾಂತರ, ವರ್ಗಾವಣೆ, ಮನೆ ಬದಲಿ, ಅಧಿಕಾರಿ ವರ್ಗದವರಿಂದ ಕಿರಿಕಿರಿ ಇರುವದು. ಕೊಟ್ಟ ಸಾಲ ಮರುಪಾವತಿ ಆಗಲಾರದು,ವ್ಯಾಪರಿಗಳಿಗೆ ವ್ಯವಹಾರಿಕ ತೊಂದರೆ ಆಗುವ ಸಧ್ಯತೆ ಇದೆ. ಶುಭ ಸಂಖ್ಯೆ: 1

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937