AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಆತುರತೆಯ ನಿರ್ಣಯಗಳು ಅಪಾಯ ತರಬಹುದು

Horoscope ಸೆಪ್ಟೆಂಬರ್ 06, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಆತುರತೆಯ ನಿರ್ಣಯಗಳು ಅಪಾಯ ತರಬಹುದು
ದಿನ ಭವಿಷ್ಯ
TV9 Web
| Edited By: |

Updated on: Sep 06, 2021 | 7:15 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಶ್ರಾವಣ ಮಾಸ, ವರ್ಷ ಋತು, ಕೃಷ್ಣಪಕ್ಷ, ಚತುರ್ದಶಿ ತಿಥಿ, ಸೋಮವಾರ, ಸೆಪ್ಟೆಂಬರ್ 06, 2021. ಮಖೆ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 7.35 ರಿಂದ ಇಂದು ಬೆಳಿಗ್ಗೆ 9.08ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.02. ಸೂರ್ಯಾಸ್ತ: ಸಂಜೆ 6.26

ತಾ.06-09-2021 ರ ಸೋಮವಾರದ ರಾಶಿಭವಿಷ್ಯ.

ಮೇಷ: ಗೊಂದಲಕ್ಕೆ ಒಳಗಾಗದೇ ಮುನ್ನುಗ್ಗಿರಿ. ಕೆಲಸದಲ್ಲಿ ಸ್ಪಷ್ಟತೆ ಇರಲಿ. ಅಲ್ಪ ಧನ ಲಾಭವಾದರೂ ಹಳೆಯ ಸಾಲ ತೀರುವುದು. ಹಿರಿಯರ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಇದೆ. ಶುಭ ಸಂಖ್ಯೆ: 9

ವೃಷಭ: ಕಾಯಕನಿಷ್ಠೆ ನಿಮಗೇ ಹೊರೆಯಾಗದಂತೆ ನೋಡಿಕೊಳ್ಳಿರಿ. ನಿರಂತರ ದುಡಿಮೆಯಿಂದ ಅನಾರೋಗ್ಯ ಅಥವಾ ಮಾನಸಿಕ ಕಿರಿಕಿರಿ ಆಗುವ ಸಂಭವವಿದೆ. ಹಣಕಾಸಿನಿನ ವ್ಯವಹಾರದಲ್ಲಿ ಎಚ್ಚರಿಕೆವಹಿಸಿರಿ. ಶುಭ ಸಂಖ್ಯೆ: 1

ಮಿಥುನ: ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಆತ್ಮೀಯರೊಂದಿಗೆ ಮನಸ್ತಾಪವಾಗುವ ಯೋಗವಿದೆ. ಅರ್ಧಕ್ಕೆನಿಂತ ಕೆಲಸಗಳು ಮುಂದುವರೆಯುವುದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಶುಭ ಸಂಖ್ಯೆ: 8

ಕಟಕ: ಕೆಲಸದಲ್ಲಿ ತಾಳ್ಮೆ ಇರಲಿ. ಅನಿರ್ದಿಷ್ಟ ಉದ್ಯೋಗ, ಕೆಲಸದ ವಿಷಯದಲ್ಲಿ ಗೊಂದಲ ಮೂಡುವ ಸಾಧ್ಯತೆ ಇದೆ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ವ್ಯಾಪಾರಿಗಳಿಗೆ ಆರ್ಥಿಕ ತೊಂದರೆ ಆಗುವ ಯೋಗವಿದೆ. ಶುಭ ಸಂಖ್ಯೆ: 3

ಸಿಂಹ: ಸರಳತೆ ದುರುಪಯೋಗವಾಗದಂತೆ ನೋಡಿಕೊಳ್ಳಿ. ಉದ್ಯೋಗದಲ್ಲಿಯ ಕುಂದು ಕೊರತೆಗಳನ್ನು ನಿಭಾಯಿಸುವಿರಿ. ಮಹತ್ವದ ಅಧಿಕಾರ ದೊರೆಯುವ ಯೋಗವಿದೆ. ವ್ಯಾಪಾರದಲ್ಲಿ ಹೆಚ್ಚಿನ ಹಣ ಹೂಡಿಕೆ ಈಗ ಬೇಡ. ಶುಭ ಸಂಖ್ಯೆ: 7

ಕನ್ಯಾ: ಸಂಗಡಿಗರು ಸಹಕಾರ ತೋರುವುದರಿಂದ ನಿರಾತಂಕ ಜೀವನ ಇರುವುದು. ಆಸೆ ಆಕಾಂಕ್ಷಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವುದು. ಉನ್ನತ ಶಿಕ್ಷಣದ ಕನಸು ಈಡೇರುವುದು. ಶುಭ ಸಂಖ್ಯೆ: 4

ತುಲಾ: ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವುದು ಒಳಿತು. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ. ಶುಭ ಸಂಖ್ಯೆ: 5

ವೃಶ್ಚಿಕ: ಸಹೋದ್ಯೋಗಿಗಳೊಂದಿಗೆ ಮನಸ್ತಾಪವಾಗುವ ಯೋಗವಿದೆ. ಅಪೂರ್ಣ ನಿರ್ಣಯಗಳು ಅಪಾಯ ತರಬಹುದು. ಅತೀ ವಿಶ್ವಾಸಿಕರೇ ಮೋಸಮಾಡುವ ಸಂಭವವಿದೆ. ದೂರ ಪ್ರಯಾಣ ಅಥವಾ ಪರಸ್ಥಳವಾಸ ಸಂಭವ. ಶುಭ ಸಂಖ್ಯೆ: 9

ಧನು: ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ. ಶುಭ ಸಂಖ್ಯೆ: 2

ಮಕರ: ವ್ಯವಹಾರಿಕ ಏಳ್ಗೆ ಇರುವುದು. ದೂರ ಪ್ರಯಾಣದ ಸಂಭವ. ಗುಪ್ತ ಧನ, ಲಾಟರಿ, ವ್ಯಾಪಾರದಲ್ಲಿ ಬೆಲೆಗಳ ಹೆಚ್ಚಳದಿಂದ ಲಾಭ. ವಿವಿಧ ಸೌಭಾಗ್ಯ ಪ್ರಾಪ್ತಿ. ಅನಾವಶ್ಯಕ ಮಾತು, ಸಿಟ್ಟು, ಅಹಂಕಾರದಿಂದ ಹಾಗೂ ಅಗ್ನಿ, ವಿದ್ಯುತ್, ವಾಹನ, ಮಶಿನರಿಗಳಿಂದ ತೊಂದರೆ. ಶುಭ ಸಂಖ್ಯೆ: 7

ಕುಂಭ: ಆರಂಭದಲ್ಲಿ ಹರ್ಷ, ಉತ್ಸಾಹ ಇರುವದು ಕೊನೆಗೆ ಮನೋವ್ಯಥೆ. ಮನೆಯಲ್ಲಿ ಸಂತೋಷದ ವಾತಾವರಣ ಇರುವದು. ಗ್ರಹೋಪಯೋಗಿ ವಸ್ತುಗಳ ಖರೀದಿ, ಮನೆ ರಿಪೇರಿ ಮೊದಲಾದ ಕೆಲಸಗಳಾಗುವವು. ಶ್ರೀಲಕ್ಷ್ಮೀಸ್ತೋತ್ರ ಪಠಿಸಿರಿ. ಶುಭ ಸಂಖ್ಯೆ: 3

ಮೀನ: ಏಕಾಂಗಿತನದ ಬೇಸರ ಪರಿಸರದಿಂದ ಹೊರಬಂದು ಹೊಸಬರೊಂದಿಗೆ ಬಾಳುವ ಸಂಕಲ್ಪ. ನಿರಾಕರಿಸಿದ್ದ ಜವಾಬ್ದಾರಿ ಪುನ: ಸುಪರ್ದಿಗೆ ಬಂದು ಮೆಚ್ಚುಗೆಯಾಗಿ ನಿಭಾವಣೆ. ಬಾಳ ಸಂಗಾತಿ ಜತೆಗಿನ ಚಿಕ್ಕ ಪುಟ್ಟ ಚರ್ಚೆಗಳೇ ಮುಂದೆ ವಿರಸಕ್ಕೆ ದಾರಿಯಾದೀತು. ಶುಭ ಸಂಖ್ಯೆ: 1

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ