ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಶ್ರಾವಣ ಮಾಸ, ವರ್ಷ ಋತು, ಕೃಷ್ಣಪಕ್ಷ, ಅಮಾವಾಸ್ಯೆ ತಿಥಿ, ಮಂಗಳವಾರ, ಸೆಪ್ಟೆಂಬರ್ 07, 2021. ಪುಬ್ಬೆ ನಕ್ಷತ್ರ, ರಾಹುಕಾಲ: ಇಂದು ಸಂಜೆ 3.19 ರಿಂದ ಇಂದು ಸಂಜೆ 4.51ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.03. ಸೂರ್ಯಾಸ್ತ: ಸಂಜೆ 6.25
ತಾ.07-09-2021 ರ ಮಂಗಳವಾರದ ರಾಶಿಭವಿಷ್ಯ.
ಮೇಷ: ಕ್ಷಮಾಗುಣ ಇರಲಿ, ಪರಸ್ಪರ ದೋಷಾರೋಪ ಮಾಡುವುದರಿಂದ ಕಾರ್ಯಹಾನಿಯ ಸಂಭವವಿದೆ. ವ್ಯವಹಾರದಲ್ಲಿ ಸಮತೋಲನ ಕಾಯ್ದುಕೊಳ್ಳುವಿರಿ. ದೊಡ್ಡಮೊತ್ತದ ಹಣಹೂಡಿಕೆ ಈಗ ಬೇಡ. ಶುಭ ಸಂಖ್ಯೆ: 3
ವೃಷಭ: ಯುವಕರಿಗೆ ನವಿರಾದ ಮಾತುಗಳಿಂದ ಸಂಗಾತಿಗಳನ್ನು ಗೆಲ್ಲುವ ಛಾತಿ. ಆಕರ್ಷಕ ನಿರ್ಧಾರಗಳಿಂದ ಮನ್ನಣೆ. ಯಜಮಾನನಿಗೆ ಬಲವಂತದಲ್ಲಿ ಜವಾಬ್ದಾರಿ ನಿರ್ವಹಣೆ. ವೈಯಕ್ತಿಕ ಬದುಕಿನತ್ತ ಗಮನಹರಿಸಲು ವ್ಯವಧಾನ. ಶುಭ ಸಂಖ್ಯೆ: 9
ಮಿಥುನ: ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವುದು ಒಳಿತು. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವುದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ. ಶುಭ ಸಂಖ್ಯೆ: 1
ಕಟಕ: ಸರಳತೆ ದುರುಪಯೋಗವಾಗದಂತೆ ನೋಡಿಕೊಳ್ಳಿ. ಉದ್ಯೋಗದಲ್ಲಿಯ ಕುಂದು ಕೊರತೆಗಳನ್ನು ನಿಭಾಯಿಸುವಿರಿ. ಮಹತ್ವದ ಅಧಿಕಾರ ದೊರೆಯುವ ಯೋಗವಿದೆ. ವ್ಯಾಪಾರದಲ್ಲಿ ಹೆಚ್ಚಿನ ಹಣ ಹೂಡಿಕೆ ಈಗ ಬೇಡ. ಶುಭ ಸಂಖ್ಯೆ: 8
ಸಿಂಹ: ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಅನವಶ್ಯಕ ಭಯ ಅಗತ್ಯವಿಲ್ಲ, ನಿಮ್ಮ ಸೇವೆ ಫಲ ನೀಡುವುದು. ಸಂಕಷ್ಟದ ಮಧ್ಯೆಯೂ ಸಂತೋಷದ ದಿನಗಳಿವೆ. ಆಗಂತುಕರೊಂದಿಗೆ ಜಾಗೃತೆ ಅಗತ್ಯ. ಶುಭ ಸಂಖ್ಯೆ: 4
ಕನ್ಯಾ: ವ್ಯಕ್ತಿತ್ವಕ್ಕೆ ತಕ್ಕ ಗೌರವಗಳು ದೊರೆಯುವವು. ಚಾಣಾಕ್ಷತನದಿಂದ ಕಷ್ಟ ಪರಿಹರಿಸಿಕೊಳ್ಳುವಿರಿ. ಅಪೇಕ್ಷಿತ ಕಾರ್ಯಗಳು ಕೈಗೂಡುವವು. ಸಂಬಂಧಿಗಳಿಂದ ಸಹಕಾರ ದೊರೆಯುವುದು. ದೂರ ಪ್ರಯಾಣ, ಪರಸ್ಥಳವಾಸ ಸಂಭವ. ಶುಭ ಸಂಖ್ಯೆ: 7
ತುಲಾ: ಅತಿಯಾದ ಆತ್ಮವಿಶ್ವಾಸ, ಆಲಸ್ಯದಿಂದ ಬಹುವಿಧವಾದ ಕಷ್ಟನಷ್ಟಗಳ ಅನುಭವವಾಗುವುದು. ಸಹನೆಯಿಂದ ವ್ಯವಹರಿಸಿರಿ. ಗುರುಬಲ ವೃದ್ಧಿಸುವುದು. ಮದುವೆಯ ಸಂಭ್ರಮದ ವಾತಾವರಣ ಕಂಡುಬರುವುದು. ಹಿರಿಯರ ಮಾತಿನಂತೆ ನಡಯುವುದು ಉತ್ತಮ. ಶುಭ ಸಂಖ್ಯೆ: 5
ವೃಶ್ಚಿಕ: ಹಿರಿಯರಿಗೆ ಅನಾರೋಗ್ಯ ಸಂಭವ. ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಉದ್ಯೋಗ ಬದಲಿ ಮಾಡುವುದು ಸದ್ಯಕ್ಕೆ ಬೇಡ. ಹಣಕಾಸಿನ ವಿಷಯದಲ್ಲಿ ಬಂಧುಗಳು ಸಹಕಾರ ತೋರುವರು. ಶುಭ ಸಂಖ್ಯೆ: 2
ಧನು: ಮನೆಯಲ್ಲಿ ಅಸಮಾಧಾನ ಇರುವುದು. ಕೂಡಿಟ್ಟ ಹಣ ಹಾನಿಯಾಗುವ ಸಂಭವವಿದೆ. ಅಣ್ಣತಮ್ಮಂದಿರಲ್ಲಿ ಸಹಕಾರ ಅತ್ಯಂತ ಅವಶ್ಯಕ. ತೋಟಗಾರಿಕೆ ಫಲಪ್ರದವಾಗಲಿದೆ. ವ್ಯಾಪಾರ ವೃದ್ಧಿಯಾಗುವುದು. ಶುಭ ಸಂಖ್ಯೆ: 6
ಮಕರ: ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ವಿವಿಧ ಮೂಲಗಳಿಂದ ಸಹಾಯ ದೊರೆಯುವುದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ. ಶುಭ ಸಂಖ್ಯೆ: 9
ಕುಂಭ: ಧನ ಅಪವ್ಯಯವಾಗುವ ಲಕ್ಷಣಗಳಿವೆ ಆದರೆ ಸಣ್ಣ ವ್ಯಾಪಾರಿಗಳಿಗೆ ಉತ್ತಮ ಲಾಭವಾಗುವುದು. ಶ್ರಮಿಕವರ್ಗಕ್ಕೆ ಉನ್ನತಿ ಇರುವುದು. ಕೌಟುಂಬಿಕ ಸಂಬಂಧಗಳು ಫಲಿಸುವವು. ಋಣಪರಿಹಾರವಾಗುವುದು. ಶುಭ ಸಂಖ್ಯೆ: 2
ಮೀನ: ಯಶಸ್ಸು. ಶ್ರಮಕ್ಕೆ ತಕ್ಕ ಲಾಭ, ಕೀರ್ತಿ, ಕೃಷಿಯಲ್ಲಿ ಉತ್ತಮ ಸಾಧನೆ, ಮನೆಯಲ್ಲಿ ಮಂಗಲಕಾರ್ಯ, ಬುಧ, ಮಂಗಳ ಯೋಗ ಶುಭದಾಯಕ ಆದರೂ ಕಿರಿಕಿರಿ ಸಂಭವ. ಪರಿಹಾರಕ್ಕಾಗಿ ಅನ್ನದಾನ ಮಾಡಿರಿ. ಶುಭ ಸಂಖ್ಯೆ: 1