AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಮನೆಯಲ್ಲಿ ಅಸಮಾಧಾನ ಇರುವುದು

Horoscope ಸೆಪ್ಟೆಂಬರ್ 08, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಮನೆಯಲ್ಲಿ ಅಸಮಾಧಾನ ಇರುವುದು
ದಿನ ಭವಿಷ್ಯ
TV9 Web
| Edited By: |

Updated on: Sep 08, 2021 | 6:40 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಭಾದ್ರಪದ ಮಾಸ, ವರ್ಷ ಋತು, ಶುಕ್ಲಪಕ್ಷ, ಬಿದಿಗೆ ತಿಥಿ, ಬುಧವಾರ, ಸೆಪ್ಟೆಂಬರ್ 08, 2021. ಉತ್ತರೆ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 12.13 ರಿಂದ ಇಂದು ಮಧ್ಯಾಹ್ನ 1.45ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.03. ಸೂರ್ಯಾಸ್ತ: ಸಂಜೆ 6.24

ತಾ.08-09-2021 ರ ಬುಧವಾರದ ರಾಶಿಭವಿಷ್ಯ.

ಮೇಷ: ಮನೆಯಲ್ಲಿ ಅಸಮಾಧಾನ ಇರುವುದು. ಕೂಡಿಟ್ಟ ಹಣ ಹಾನಿಯಾಗುವ ಸಂಭವವಿದೆ. ಅಣ್ಣತಮ್ಮಂದಿರಲ್ಲಿ ಸಹಕಾರ ಅತ್ಯಂತ ಅವಶ್ಯಕ. ತೋಟಗಾರಿಕೆ ಫಲಪ್ರದವಾಗಲಿದೆ. ವ್ಯಾಪಾರ ವೃದ್ಧಿಯಾಗುವುದು. ಶುಭ ಸಂಖ್ಯೆ: 3

ವೃಷಭ: ವ್ಯಕ್ತಿತ್ವಕ್ಕೆ ತಕ್ಕ ಗೌರವಗಳು ದೊರೆಯುವವು. ಚಾಣಾಕ್ಷತನದಿಂದ ಕಷ್ಟ ಪರಿಹರಿಸಿಕೊಳ್ಳುವಿರಿ. ಅಪೇಕ್ಷಿತ ಕಾರ್ಯಗಳು ಕೈಗೂಡುವವು. ಸಂಭಂಧಿಗಳಿಂದ ಸಹಕಾರ ದೊರೆಯುವುದು. ದೂರ ಪ್ರಯಾಣ, ಪರಸ್ಥಳವಾಸ ಸಂಭವ. ಶುಭ ಸಂಖ್ಯೆ: 7

ಮಿಥುನ: ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಅನವಶ್ಯಕ ಭಯ ಅಗತ್ಯವಿಲ್ಲ, ನಿಮ್ಮ ಸೇವೆ ಫಲ ನೀಡುವುದು. ಸಂಕಷ್ಟದ ಮಧ್ಯೆಯೂ ಸಂತೋಷದ ದಿನಗಳಿವೆ. ಆಗಂತುಕರೊಂದಿಗೆ ಜಾಗೃತೆ ಅಗತ್ಯ. ಶುಭ ಸಂಖ್ಯೆ: 1

ಕಟಕ: ಕ್ಷಮಾಗುಣ ಇರಲಿ, ಪರಸ್ಪರ ದೋಷಾರೋಪ ಮಾಡುವುದರಿಂದ ಕಾರ್ಯಹಾನಿಯ ಸಂಭವವಿದೆ. ವ್ಯವಹಾರದಲ್ಲಿ ಸಮತೋಲನ ಕಾಯ್ದುಕೊಳ್ಳುವಿರಿ. ದೊಡ್ಡಮೊತ್ತದ ಹಣಹೂಡಿಕೆ ಈಗ ಬೇಡ. ಶುಭ ಸಂಖ್ಯೆ: 8

ಸಿಂಹ: ಧನ ಅಪವ್ಯಯವಾಗುವ ಲಕ್ಷಣಗಳಿವೆ ಆದರೆ ಸಣ್ಣ ವ್ಯಾಪಾರಿಗಳಿಗೆ ಉತ್ತಮ ಲಾಭವಾಗುವುದು. ಶ್ರಮಿಕವರ್ಗಕ್ಕೆ ಉನ್ನತಿ ಇರುವುದು. ಕೌಟುಂಬಿಕ ಸಂಬಂಧಗಳು ಫಲಿಸುವವು. ಋಣಪರಿಹಾರವಾಗುವುದು. ಶುಭ ಸಂಖ್ಯೆ: 2

ಕನ್ಯಾ: ಸರಳತೆ ದುರುಪಯೋಗವಾಗದಂತೆ ನೋಡಿಕೊಳ್ಳಿ. ಉದ್ಯೋಗದಲ್ಲಿಯ ಕುಂದು ಕೊರತೆಗಳನ್ನು ನಿಭಾಯಿಸುವಿರಿ. ಮಹತ್ವದ ಅಧಿಕಾರ ದೊರೆಯುವ ಯೋಗವಿದೆ. ವ್ಯಾಪಾರದಲ್ಲಿ ಹೆಚ್ಚಿನ ಹಣ ಹೂಡಿಕೆ ಈಗ ಬೇಡ. ಶುಭ ಸಂಖ್ಯೆ: 9

ತುಲಾ: ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವುದು ಒಳಿತು. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವುದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ. ಶುಭ ಸಂಖ್ಯೆ: 7

ವೃಶ್ಚಿಕ: ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ವಿವಿಧ ಮೂಲಗಳಿಂದ ಸಹಾಯ ದೊರೆಯುವದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ. ಶುಭ ಸಂಖ್ಯೆ: 4

ಧನು: ಹಿರಿಯರಿಗೆ ಅನಾರೋಗ್ಯ ಸಂಭವ. ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಉದ್ಯೋಗ ಬದಲಿ ಮಾಡುವದು ಸದ್ಯಕ್ಕೆ ಬೇಡ. ಹಣಕಾಸಿನ ವಿಷಯದಲ್ಲಿ ಬಂಧುಗಳು ಸಹಕಾರ ತೋರುವರು. ಶುಭ ಸಂಖ್ಯೆ: 6

ಮಕರ: ಅತಿಯಾದ ಆತ್ಮವಿಶ್ವಾಸ, ಆಲಸ್ಯದಿಂದ ಬಹುವಿಧವಾದ ಕಷ್ಟನಷ್ಟಗಳ ಅನುಭವವಾಗುವದು. ಸಹನೆಯಿಂದ ವ್ಯವಹರಿಸಿರಿ.ಗುರುಬಲ ವೃದ್ಧಿಸುವದು. ಮದುವೆಯ ಸಂಭ್ರಮದ ವಾತಾವರಣ ಕಂಡುಬರುವದು. ಹಿರಿಯರ ಮಾತಿನಂತೆ ನಡಯುವದು ಉತ್ತಮ. ಶುಭ ಸಂಖ್ಯೆ: 1

ಕುಂಭ: ಯಶಸ್ಸು. ಶ್ರಮಕ್ಕೆ ತಕ್ಕ ಲಾಭ, ಕೀರ್ತಿ, ಕೃಷಿಯಲ್ಲಿ ಉತ್ತಮ ಸಾಧನೆ, ಮನೆಯಲ್ಲಿ ಮಂಗಲಕಾರ್ಯ, ಬುಧ, ಮಂಗಳ ಯೋಗ ಶುಭದಾಯಕ ಆದರೂ ಕಿರಿಕಿರಿ ಸಂಭವ. ಪರಿಹಾರಕ್ಕಾಗಿ ಅನ್ನದಾನ ಮಾಡಿರಿ. ಶುಭ ಸಂಖ್ಯೆ: 3

ಮೀನ: ಯುವಕರಿಗೆ ನವಿರಾದ ಮಾತುಗಳಿಂದ ಸಂಗಾತಿಗಳನ್ನು ಗೆಲ್ಲುವ ಛಾತಿ. ಆಕರ್ಷಕ ನಿರ್ಧಾರಗಳಿಂದ ಮನ್ನಣೆ. ಯಜಮಾನನಿಗೆ ಬಲವಂತದಲ್ಲಿ ಜವಾಬ್ದಾರಿ ನಿರ್ವಹಣೆ. ವೈಯಕ್ತಿಕ ಬದುಕಿನತ್ತ ಗಮನಹರಿಸಲು ವ್ಯವಧಾನ. ಶುಭ ಸಂಖ್ಯೆ: 8

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ