Horoscope Today – ದಿನ ಭವಿಷ್ಯ; ಈ ರಾಶಿಯವರಿಗೆ ನಿರೀಕ್ಷೆಗೆ ತಕ್ಕಂತೆ ಕೆಲಸ ಆಗದೇ ಮಾನಸಿಕ ಅಶಾಂತಿ ಕಂಡುಬರುವುದು

| Updated By: Skanda

Updated on: Sep 09, 2021 | 6:35 AM

Horoscope ಸೆಪ್ಟೆಂಬರ್ 09, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today - ದಿನ ಭವಿಷ್ಯ; ಈ ರಾಶಿಯವರಿಗೆ ನಿರೀಕ್ಷೆಗೆ ತಕ್ಕಂತೆ ಕೆಲಸ ಆಗದೇ ಮಾನಸಿಕ ಅಶಾಂತಿ ಕಂಡುಬರುವುದು
ದಿನ ಭವಿಷ್ಯ
Follow us on

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಭಾದ್ರಪದ ಮಾಸ, ವರ್ಷ ಋತು, ಶುಕ್ಲಪಕ್ಷ, ತದಿಗೆ ತಿಥಿ, ಗುರುವಾರ, ಸೆಪ್ಟೆಂಬರ್ 09, 2021. ಹಸ್ತ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 1.45 ರಿಂದ ಇಂದು ಸಂಜೆ 3.17ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.03. ಸೂರ್ಯಾಸ್ತ: ಸಂಜೆ 6.23

ತಾ.09-09-2021 ರ ಗುರುವಾರದ ರಾಶಿಭವಿಷ್ಯ.

ಮೇಷ: ಕೌಟುಂಬಿಕ ಕಲಹ ಹೆಚ್ಚಾಗುವ ಸಾಧ್ಯತೆ ಇದೆ ಸಮಾಧಾನ ಚಿತ್ತದಿಂದ ವರ್ತಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವುದು. ಹಾನಿ ಇಲ್ಲ ಆದರೆ ಲಾಭವೂ ಇಲ್ಲದ ಸ್ಥಿತಿ ಇರುವುದು. ಶುಭ ಸಂಖ್ಯೆ: 9

ವೃಷಭ: ಕುಟುಂಬದಲ್ಲಿ ಭಿನ್ನಾಭಿಪ್ರಾಯ ಇರುವುದು. ವೈವಾಹಿಕ ಚಿಂತೆ ಇರುವುದು. ಧಾರ್ಮಿಕ ಸಮಾರಂಭಗಳಲ್ಲಿ ಭಾಗಿಯಾಗುವ ಯೋಗವಿದೆ. ಹಿರಿಯರ ಸಲಹೆಗೆ ತಕ್ಕಂತೆ ಮುಂದುವರೆಯಿರಿ. ಶುಭ ಸಂಖ್ಯೆ: 2

ಮಿಥುನ: ಹಿರಿಯರಿಗೆ ಅನಾರೋಗ್ಯ ಸಂಭವ. ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಉದ್ಯೋಗ ಬದಲಿ ಮಾಡುವದು ಸದ್ಯಕ್ಕೆ ಬೇಡ. ಹಣಕಾಸಿನ ವಿಷಯದಲ್ಲಿ ಬಂಧುಗಳು ಸಹಕಾರ ತೋರುವರು. ಶುಭ ಸಂಖ್ಯೆ: 8

ಕಟಕ: ಮನೆಯಲ್ಲಿ ಅಸಮಾಧಾನ ಇರುವುದು. ಕೂಡಿಟ್ಟ ಹಣ ಹಾನಿಯಾಗುವ ಸಂಭವವಿದೆ. ಅಣ್ಣತಮ್ಮಂದಿರಲ್ಲಿ ಸಹಕಾರ ಅತ್ಯಂತ ಅವಶ್ಯಕ. ತೋಟಗಾರಿಕೆ ಫಲಪ್ರದವಾಗಲಿದೆ. ವ್ಯಾಪಾರ ವೃದ್ಧಿಯಾಗುವುದು. ಶುಭ ಸಂಖ್ಯೆ: 2

ಸಿಂಹ: ಸಮಾಧಾನಕರ ಜೀವನವಿದೆ. ಅಧಿಕಾರಿಗಳ ಸಹಕಾರ ದೊರೆಯುವುದು. ಮನೆ ಕಟ್ಟುವ ಆಸೆ ಕೈಗೂಡುವ ಸಮಯ. ಬಂಧುಮಿತ್ರರ ಹಾರೈಕೆ ತಮ್ಮೊಂದಿಗಿದೆ. ದೂರಪ್ರಯಾಣ ಯೋಗವಿದೆ. ಶುಭ ಸಂಖ್ಯೆ: 7

ಕನ್ಯಾ: ನಿರೀಕ್ಷೆಗೆ ತಕ್ಕಂತೆ ಕೆಲಸ ಆಗದೇ ಮಾನಸಿಕ ಅಶಾಂತಿ ಕಂಡುಬರುವುದು. ವ್ಯವಹಾರಗಳಲ್ಲಿ ಹಾನಿಯಾಗುವ ಭಯ ಇರುವುದು. ಪರಿಣಿತರ ಅಥವಾ ಹಿರಿಯರ ಸಲಹೆಯಂತೆ ಮುಂದುವರೆಯಿರಿ. ವಿದ್ಯಾರ್ಥಿಗಳಿಗೆ ಒಳ್ಳೆಯ ಫಲವಿದೆ. ಶುಭ ಸಂಖ್ಯೆ: 5

ತುಲಾ: ಹಳೆಯ ಸಾಲ ಮರುಪಾವತಿಯಾಗುವುದು. ಬೇಡವಾದ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಂಭವವಿದೆ. ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಅತೀ ವಿಶ್ವಾಸಿಕರೇ ಎದುರಾಡುವ ಸಂಭವವಿದೆ. ಶುಭ ಸಂಖ್ಯೆ: 3

ವೃಶ್ಚಿಕ: ಅಂತಃಶತ್ರುಗಳ ಕಾಟ ಹೆಚ್ಚಾಗುವ ಲಕ್ಷಣವಿದೆ. ಹಳೆಯ ಸಮಸ್ಯೆಗಳು ಮತ್ತೆ ಎದುರಾಗುವ ಸಂಭವವಿದೆ. ಚಂಚಲತೆ ಬೇಡ, ಹಿಡಿದ ಕಾರ್ಯವನ್ನು ಪೂರ್ಣಗೊಳಿಸಿ. ಆರ್ಥಿಕ ಲಾಭವಿದೆ ಆದರೆ ವಿದ್ಯೆಯಲ್ಲಿ ಹಿನ್ನಡೆ ಕಂಡುಬರುವುದು. ಶುಭ ಸಂಖ್ಯೆ: 6

ಧನು: ಪ್ರೀತಿವಿಶ್ವಾಸದ ಬಲದಿಂದ ಅಧಿಕಾರಿಗಳ ಗಮನ ಸೆಳೆಯುವಿರಿ. ಅತಿಯಾದ ಮೃದು ಧೋರಣೆ ದುರುಪಯೋಗವಾಗದಂತೆ ನೋಡಿಕೊಳ್ಳಿರಿ. ಮಂಗಲಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಇರುವುದು. ಶುಭ ಸಂಖ್ಯೆ: 4

ಮಕರ: ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದದಲ್ಲಿ ಅಪೇಕ್ಷಿತ ಲಾಭ ದೊರೆಯುವದು. ವಿದೇಶ ಪ್ರಯಾಣದ ಯೋಗವಿದೆ. ಶುಭ ಸಂಖ್ಯೆ: 1

ಕುಂಭ: ಕುಟುಂಬದಲ್ಲಿ ಮನಸ್ತಾಪ ಕಂಡುಬರುವುದು. ಗೌಪ್ಯ ವ್ಯವಹಾರಗಳನ್ನು ಸರಿದೂಗಿಸಲು ಸಾಧ್ಯವಾಗದೇ ಪರಿತಪಿಸುವಿರಿ. ಆಸಕ್ತಿ ಆಪತ್ತು ತರುವ ಸಂಭವವಿದೆ. ಮಹತ್ವದ ನಿರ್ಧಾರಗಳಿಗೆ ಇದು ಸೂಕ್ತಕಾಲವಲ್ಲ. ಹಣಹೂಡಿಕೆ ಈಗ ಬೇಡ. ಶುಭ ಸಂಖ್ಯೆ: 7

ಮೀನ: ಯಶಸ್ಸು. ಶ್ರಮಕ್ಕೆ ತಕ್ಕ ಲಾಭ, ಕೀರ್ತಿ, ಕೃಷಿಯಲ್ಲಿ ಉತ್ತಮ ಸಾಧನೆ, ಮನೆಯಲ್ಲಿ ಮಂಗಲಕಾರ್ಯ, ಬುಧ, ಮಂಗಳ ಯೋಗ ಶುಭದಾಯಕ ಆದರೂ ಕಿರಿಕಿರಿ ಸಂಭವ. ಪರಿಹಾರಕ್ಕಾಗಿ ಅನ್ನದಾನ ಮಾಡಿರಿ. ಶುಭ ಸಂಖ್ಯೆ: 9

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937