AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today – ದಿನ ಭವಿಷ್ಯ; ಭಾನುವಾರದ ಭವಿಷ್ಯದಲ್ಲಿ ಯಾರಿಗೆ ಒಳಿತು?

ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಶ್ರಾವಣ ಮಾಸ, ವರ್ಷ ಋತು, ಶುಕ್ಲಪಕ್ಷ, ಷಷ್ಠಿ ತಿಥಿ, ಭಾನುವಾರ, ಸೆಪ್ಟೆಂಬರ್​ 12, 2021ರ ಭವಿಷ್ಯ.

Horoscope Today - ದಿನ ಭವಿಷ್ಯ; ಭಾನುವಾರದ ಭವಿಷ್ಯದಲ್ಲಿ ಯಾರಿಗೆ ಒಳಿತು?
TV9 Web
| Edited By: |

Updated on:Sep 12, 2021 | 6:48 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಶ್ರಾವಣ ಮಾಸ, ವರ್ಷ ಋತು, ಶುಕ್ಲಪಕ್ಷ, ಷಷ್ಠಿ ತಿಥಿ, ಭಾನುವಾರ, ಸೆಪ್ಟೆಂಬರ್​ 12, 2021. ವಿಶಾಖ ನಕ್ಷತ್ರ, ರಾಹುಕಾಲ: ಇಂದು ಸಂಜೆ: ಇಂದು ಸಂಜೆ 4:48ರಿಂದ ಇಂದು ರಾತ್ರಿ 6:20 ತನಕ. . ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.03. ಸೂರ್ಯಾಸ್ತ: ಸಂಜೆ 6.21.

ತಾ.12-09-2021 ರ ಭಾನುವಾರದ ರಾಶಿಭವಿಷ್ಯ.

ಮೇಷ: ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವದು. ಸಂಗಡಿಗರು ಸಹಕಾರ ತೋರುವದರಿಂದ ನಿರಾತಂಕ ಜೀವನ ಇರುವದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವದು. ಆರ್ಥಿಕ ಸಂಕಷ್ಟ ದೂರಾಗುವದು. ಶುಭ ಸಂಖ್ಯೆ: 6

ವೃಷಭ: ನೆನೆಗುದಿಗೆ ಬಿದ್ದ ಕೆಲಸಗಳಿಗೆ ಚಾಲನೆ ದೊರೆಯುವದು. ಮಾನಸಿಕ ಉತ್ಸಾಹ ಕಂಡುಬರುವದು. ಆತ್ಮೀಯರಿಗೆ ಉನ್ನತ ಅಧಿಕಾರ ದೊರೆಯುವದು. ಕಾರಣಾಂತರ ಅಧಿಕ ಖರ್ಚುಬರಬಹುದು. ಶುಭ ಸಂಖ್ಯೆ: 1

ಮಿಥುನ: ಅಭದ್ರತೆ ಕಾಡುವ ಸಂಭವವಿದೆ.ಸ್ಥಾನಚ್ಯುತಿಯಾಗುವ ಸಾಧ್ಯತೆ ಇದೆ.ಸಹೋದರರಲ್ಲಿ ಕಲಹ. ಸ್ಥಿರಾಸ್ತಿಯು ಹಾನಿಯಾಗುವ ಯೋಗವಿದೆ. ಕೃಷಿಕರಿಗೆ ಹಾಗೂ ವ್ಯಾಪಾರಿಗಳಿಗೆ ಆರ್ಥಿಕ ಸಂಕಷ್ಟ ಇರುವದು. ಶುಭ ಸಂಖ್ಯೆ: 7

ಕರ್ಕ: ಬರುವ ಕಷ್ಟಗಳನ್ನು ಎದುರಿಸಿ ಸಫಲತೆಯನ್ನು ಹೊಂದುವಿರಿ. ಭಾಗ್ಯವೃದ್ಧಿಯಾಗುವ ಯೋಗವಿದೆ.ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಶುಭ ಸಂಖ್ಯೆ: 5

ಸಿಂಹ: ಆಸ್ತಿ ಖರೀದಿ ಅಥವಾ ಹೊಸ ವ್ಯವಹಾರ ಆರಂಭಕ್ಕೂ ಮೊದಲು ಆತ್ಮೀಯರೊಂದಿಗೆ ಸಮಾಲೋಚನೆ ಮಾಡಿ ಮುಂದುವರಿಯಿರಿ. ಅಡೆತಡೆಗಳ ಮಧ್ಯದಲ್ಲಿಯೂ ನಿರೀಕ್ಷಿತ ಕಾರ್ಯಗಳು ಪೂರ್ಣವಾಗುವವು ಶುಭ ಸಂಖ್ಯೆ: 8

ಕನ್ಯಾ: ಕುಟುಂಬದಲ್ಲಿ ಮನಸ್ತಾಪ ಕಂಡುಬರುವದು. ಗೌಪ್ಯ ವ್ಯವಹಾರಗಳನ್ನು ಸರಿದೂಗಿಸಲು ಸಾಧ್ಯವಾಗದೇ ಪರಿತಪಿಸುವಿರಿ. ಆಸಕ್ತಿ ಆಪತ್ತು ತರುವ ಸಂಭವವಿದೆ. ಮಹತ್ವದ ನಿರ್ಧಾರಗಳಿಗೆ ಇದು ಸೂಕ್ತಕಾಲವಲ್ಲ. ಹಣಹೂಡಿಕೆ ಈಗ ಬೇಡ. ಶುಭ ಸಂಖ್ಯೆ: 2

ತುಲಾ: ಶುಭ ಕರ್ಮ ಸಂಪ್ರಾಪ್ತಿಯಿದ್ದು, ಗುರುವರ್ಗ ಸಂತೋಷ, ಸಂಸಾರ ಸುಖ. ನೂತನ ಮಿತ್ರಭೇಟಿ, ಅರ್ಥಾರ್ಜನೆಯು ಉತ್ತಮವಿದೆ. ಆದರೂ ಗೃಹಕಲಹ, ಬಂಧು ಜನರಲ್ಲಿ ಅಸಮಾಧಾನ ಕಂಡುಬರುವದು. ಶುಭ ಸಂಖ್ಯೆ: 4

ವೃಶ್ಚಿಕ: ವ್ಯಾಪಾರಾದಿ ಉದ್ಯಮಗಳಲ್ಲಿ ಪ್ರಗತಿಯಿದ್ದು ಧನಲಾಭ, ಐಶ್ವರ್ಯವೃದ್ಧಿಯಿದೆ. ಆದರೆ ವ್ಯವಹಾರಿಕ ಕಿರಿಕಿರಿ ಇರುವದು. ಅನಿರೀಕ್ಷಿತ ಧನಲಾಭವೂ ಇದೆ. ಕೈಗೊಂಡ ಕಾರ್ಯಗಳಿಗೆ ವಿಘ್ನ ತೋರಿದರೂ ನೆರವೇರುತ್ತದೆ. ಶುಭ ಸಂಖ್ಯೆ: 8

ಧನು: ಕೆಲಸ ಹೆಚ್ಚಿನ ಬದ್ಧತೆ ತೋರಿಸುವ ಅವಶ್ಯಕತೆ ಕಂಡುಬರುವದು. ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವದು. ವಾದ-ವಿವಾದ, ಹಠಸಾಧನೆ ಬೇಡ. ಶುಭ ಸಂಖ್ಯೆ: 3

ಮಕರ: ಆರೋಗ್ಯಪೂರ್ಣತೆ, ಪ್ರಸನ್ನತೆ ಇರುವದು. ಎಲ್ಲ ಕಾರ್ಯಗಳೂ ತಮ್ಮ ಮನಸ್ಸಿನಂತೆ ನಡೆಯುವವು. ಧನಲಾಭ, ಧಾರ್ಮಿಕ ಕಾರ್ಯ, ದೇವತಾ ಕ್ಷೇತ್ರ ದರ್ಶನ ಯೋಗವಿರುವದು. ವ್ಯಾಪಾರ ಸಾಧಾರಣ.

ಕುಂಭ: ಹಣಕಾಸಿನ ವ್ಯವಹಾರದಲ್ಲಿ ಧ್ಯರ್ಯದಿಂದ ಕಾರ್ಯ ಸಾಧನೆ. ಅಪೇಕ್ಷಸದ ಲಾಭ ಸಂಭವ. ಗಡಿಬಿಡಿಯ ವಾತಾವತರಣ, ಬಿಡುವಿಲ್ಲದ ಕಾರ್ಯ, ಮಿತ್ರರೊಂದಿಗೆ ಜಟಾಪಟಿ ಸಂಭವ, ದೀಪದಾನ ಮಾಡಿರಿ. ಶುಭ ಸಂಖ್ಯೆ: 7

ಮೀನ: ದಿಟ್ಟತನ, ಮನೋಸ್ಥೈರ್ಯ, ನೇರ,ನಿಷ್ಟುರ ನಡೆಗಳಿಗೆ ಉತ್ತಮ ಫಲಪಾಪ್ತವಾಗುವುದು. ನಿಮ್ಮ ನಿರ್ಧಾರಗಳು ಪರಿವರ್ತನೆಗೆ ಕಾರಣವಾಗುವವು. ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರುವದು. ಶುಭ ಸಂಖ್ಯೆ: 3

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Published On - 6:36 am, Sun, 12 September 21

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?