ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಭಾದ್ರಪದ ಮಾಸ, ವರ್ಷ ಋತು, ಶುಕ್ಲಪಕ್ಷ, ಸಪ್ತಮಿ ತಿಥಿ, ಸೋಮವಾರ, ಸೆಪ್ಟೆಂಬರ್ 13, 2021. ಅನುರಾಧ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 7.35 ರಿಂದ ಇಂದು ಬೆಳಿಗ್ಗೆ 9.07ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.03. ಸೂರ್ಯಾಸ್ತ: ಸಂಜೆ 6.20
ತಾ.13-09-2021 ರ ಸೋಮವಾರದ ರಾಶಿಭವಿಷ್ಯ.
ಮೇಷ: ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವುದು. ಎಚ್ಚರಿಕೆವಹಿಸಿರಿ. ಶುಭ ಸಂಖ್ಯೆ: 8
ವೃಷಭ: ಅನಿರೀಕ್ಷಿತ ಧನಲಾಭವಾಗುವುದು. ಬುದ್ಧಿಕೌಶಲ್ಯದಿಂದ ಉದ್ಯೋಗದಲ್ಲಿ ಬಡ್ತಿ ಕಂಡುಬರುವುದು. ಸಿಟ್ಟಿನ ಸ್ವಭಾವದಿಂದ ತೊದರೆಯಾಗುವ ಸಾಧ್ಯತೆ ಇದೆ. ಕಾರ್ಯಕ್ಷಮತೆಗೆ ತಕ್ಕ ಫಲ ದೊರೆಯುವುದು. ಶುಭ ಸಂಖ್ಯೆ: 2
ಮಿಥುನ: ಶಾಂತಚಿತ್ತರಾಗಿ ಕೆಲಸ ನಿರ್ವಹಿಸಿರಿ. ಹೊಸ ವ್ಯಾಪಾರ, ಉದ್ಯೋಗದ ಅವಕಾಶಗಳು ಕೂಡಿ ಬರುವವು. ಹಳೆಯ ಸವiಸ್ಯಗಳು ಪರಿಹಾರವಾಗುವವು. ಶುಭಕಾರ್ಯದಲ್ಲಿ ಪಾಲ್ಗೊಳ್ಳುವಿರಿ. ಶುಭ ಸಂಖ್ಯೆ: 7
ಕಟಕ: ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ಉದ್ಯೋಗದ ಸ್ಥಾನ ಬದಲಾವಣೆಯ ವಿಚಾರವಾಗಿ ಚಿಂತೆ ಇರುವುದು. ಶುಭ ಸಂಖ್ಯೆ: 1
ಸಿಂಹ: ಕೃಷಿಮೂಲದ ಲಾಭ ದೊರೆಯುವುದು. ಸಹೋದ್ಯೋಗಿಗಳ ಸಹಾಯ ಅಪೃಕ್ಷಿಸದೇ ಸ್ವಂತಬಲದಿಂದ ಕೆಲಸ ನಿರ್ವಹಿಸಿರಿ.ಕೈಗೊಂಡ ಕಾರ್ಯಗಳು ಯಶಸ್ವಿಯಾಗುವವು. ನೌಕರರಿಗೆ ಕಿರಿಕಿರಿಯಾಗುವ ಸಂಭವವಿದೆ. ಶುಭ ಸಂಖ್ಯೆ: 9
ಕನ್ಯಾ: ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೊಟ್ಟಸಾಲ ಮರುಪಾವತಿಯಾಗುವುದು. ಶುಭ ಸಂಖ್ಯೆ: 3
ತುಲಾ: ಬಂಧುವರ್ಗದಲ್ಲಿ ನಕಾರಾತ್ಮಕ ಚಿಂತನೆ ಇರುವುದು. ಸತತ ಪ್ರಯತ್ನವಿಲ್ಲದೇ ಫಲ ದೊರೆಯಲಾರದು. ದಿನನಿತ್ಯದ ಕೆಲಸಕ್ಕೂ ವಿನಾಕಾರಣ ಅಡೆತಡೆ ಕಂಡುಬರುವ ಲಕ್ಷಣವಿದೆ. ಬುದ್ದಿಯಿಂದ ತಾಳ್ಮೆಕಳೆದುಕೊಳ್ಳದೇ ಮುಂದುವರೆಯಿರಿ. ಶುಭ ಸಂಖ್ಯೆ: 4
ವೃಶ್ಚಿಕ: ಅಪೇಕ್ಷಿತ ಸ್ಥಾನಮಾನಗಳು ದೊರೆಯುವವು. ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಭಂಗವಿಲ್ಲ. ಆದಾಯಕ್ಕಿಂತ ಅಧಿಕ ಖರ್ಚು ಇರುವುದು. ಶುಭ ಸಂಖ್ಯೆ: 6
ಧನು: ಹೊಟ್ಟೆಕಿಚ್ಚಿನ ಜನರಿಂದ ತೊಂದರೆ ಆಗುವ ಸಾಧ್ಯತೆ ಇದೆ. ಅತಿಯಾಗಿ ಹೇಳಿಕೊಳ್ಳುವದು ಅಮಾಮಾನಕ್ಕೆ ಕಾರಣವಾಗದಂತೆ ವರ್ತಿಸಿರಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭ ನಿರೀಕ್ಷೆ ಇರುವುದು. ಕೈಗೊಂಡ ಕಾರ್ಯ ಯಶ ಕಾಣುವುದು. ಶುಭ ಸಂಖ್ಯೆ: 2
ಮಕರ: ಸಹೋದ್ಯೋಗಿಗಳೊಂದಿಗೆ ಮನಸ್ತಾಪವಾಗುವ ಯೋಗವಿದೆ. ಅಪೂರ್ಣ ನಿರ್ಣಯಗಳು ಅಪಾಯ ತರಬಹುದು. ಅತೀ ವಿಶ್ವಾಸಿಕರೇ ಮೋಸಮಾಡುವ ಸಂಭವವಿದೆ. ದೂರ ಪ್ರಯಾಣ ಅಥವಾ ಪರಸ್ಥಳವಾಸ ಸಂಭವ. ಶುಭ ಸಂಖ್ಯೆ: 5
ಕುಂಭ: ಗಣ್ಯರೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿಯಾಗುವದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಶುಭ ಸಂಖ್ಯೆ: 3
ಮೀನ: ಧನಾರ್ಜನೆಯ ಮಾರ್ಗವು ಶ್ರೇಷ್ಠ ಮಟ್ಟದಲ್ಲಿದ್ದು, ಐಶ್ವರ್ಯ ಸಮೃದ್ಧಿಯಾಗುತ್ತದೆ. ದೃಷ್ಟಿಯಲ್ಲೂ ಸುಖ, ಸಂಭ್ರಮಗಳಿದ್ದು ತೃಪ್ತಿ ಲಭಿಸಿದರೂ ಶತ್ರುಜನರ ಪೀಡೆ ಅಧಿಕವಾಗುತ್ತದೆ. ಅನಿವಾರ್ಯ ಪ್ರವಾಸ ಸಾಧ್ಯತೆ ಇದೆ. ಶುಭ ಸಂಖ್ಯೆ: 1