Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಸಂಭವ

| Updated By: ಆಯೇಷಾ ಬಾನು

Updated on: Sep 15, 2021 | 6:42 AM

Horoscope ಸೆಪ್ಟೆಂಬರ್ 15, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಸಂಭವ
ದಿನ ಭವಿಷ್ಯ
Follow us on

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಭಾದ್ರಪದ ಮಾಸ, ವರ್ಷ ಋತು, ಶುಕ್ಲಪಕ್ಷ, ನವಮಿ ತಿಥಿ, ಬುಧವಾರ, ಸೆಪ್ಟೆಂಬರ್ 15, 2021. ಮೂಲ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 12.10 ರಿಂದ ಇಂದು ಮಧ್ಯಾಹ್ನ 1.41ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.04. ಸೂರ್ಯಾಸ್ತ: ಸಂಜೆ 6.18

ತಾ.15-09-2021 ರ ಬುಧವಾರದ ರಾಶಿಭವಿಷ್ಯ.

ಮೇಷ: ಶುಭಫಲಗಳು ಕಂಡುಬರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೌಟುಂಬಿಕ ಸಮಸ್ಯೆಗಳು ದೂರಾಗುವವು. ಕೊಟ್ಟಸಾಲ ಪಾವತಿಯಾಗುವುದು. ಶುಭ ಸಂಖ್ಯೆ: 5

ವೃಷಭ: ಶಾಂತಚಿತ್ತರಾಗಿ ಕೆಲಸ ನಿರ್ವಹಿಸಿರಿ. ಹೊಸ ವ್ಯಾಪಾರ, ಉದ್ಯೋಗದ ಅವಕಾಶಗಳು ಕೂಡಿ ಬರುವವು. ಹಳೆಯ ಸಮಸ್ಯೆಗಳು ಪರಿಹಾರವಾಗುವವು. ಶುಭಕಾರ್ಯದಲ್ಲಿ ಪಾಲ್ಗೊಳ್ಳುವಿರಿ. ಶುಭ ಸಂಖ್ಯೆ: 2

ಮಿಥುನ: ವ್ಯಾಪಾರದಲ್ಲಿ ಅದೃಷ್ಟಲಾಭವಿದೆ. ವಿದ್ಯಾರ್ಥಿಗಳ ಮನೋಭಿಲಾಷೆ ಈಡೇರುವುದು. ಮನೆಯ ಜವಾಬ್ದಾರಿಗಳು ಹೆಚ್ಚುವವು. ಹಿರಿಯರ ಆರೋಗ್ಯದಲ್ಲಿ ಏರುಪೇರಾಗುವ ಸಂಭವವಿದೆ. ಶುಭ ಸಂಖ್ಯೆ: 9

ಕಟಕ: ಹಿರಿಯರಿಗೆ ಅನಾರೋಗ್ಯ ಸಂಭವ. ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಉದ್ಯೋಗ ಬದಲಿ ಮಾಡುವುದು ಸದ್ಯಕ್ಕೆ ಬೇಡ. ಹಣಕಾಸಿನ ವಿಷಯದಲ್ಲಿ ಬಂಧುಗಳು ಸಹಕಾರ ತೋರುವರು. ಶುಭ ಸಂಖ್ಯೆ: 1

ಸಿಂಹ: ಗಂಭೀರ ಆರೋಪದಿಂದ ಮುಕ್ತರಾಗುವಿರಿ. ಅನುಕೂಲಕರ ವಾತಾವರಣ ಇರುವುದರಿಂದ ಇನ್ನೂ ಹೆಚ್ಚಿನ ವ್ಯವಹಾರಿಕ ಸುಧಾರಣೆ ಮಾಡಲು ಪ್ರಯತ್ನಿಸಿರಿ. ಆರೋಗ್ಯದ ಸೂಕ್ತ ಕಾಳಜಿ ವಹಿಸಿರಿ. ಶುಭ ಸಂಖ್ಯೆ: 8

ಕನ್ಯಾ: ವ್ಯವಹಾರದಲ್ಲಿ ಹಾನಿ ಕಂಡುಬರುವುದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವುದು. ಶುಭ ಸಂಖ್ಯೆ: 3

ತುಲಾ: ಆಸ್ತಿ ವಿಷಯಕ್ಕೆ ಸಂಬಂಧಿಸಿದಂತೆ ತೊಂದರೆಯಾಗುವ ಸಂಭವವಿದೆ. ಆದಾಯ ಉತ್ತಮವಾಗಿರುವುದು. ನೌಕರಿಯಲ್ಲಿ ಅಸಹಕಾರ ಎದುರಿಸಬೇಕಾಗುವುದು. ಗ್ರಹಸೌಖ್ಯವಿದ್ದರೂ ಮಾನಸಿಕ ನೆಮ್ಮದಿ ಇರಲಾರದು. ಶುಭ ಸಂಖ್ಯೆ: 6

ವೃಶ್ಚಿಕ: ಅನೇಕ ರೀತಿಯ ಲಾಭ ದೊರೆಯುವ ಸಾಧ್ಯತೆ ಇದೆ. ಆದರ್ಶ ವ್ಯಕ್ತಿತ್ವದಿಂದ ಜನ ಮನ್ನಣೆಗೆ ಪಾತ್ರರಾಗುವಿರಿ. ಎಲ್ಲ ಕೆಲಸಗಳೂ ಸಕಾಲದಲ್ಲಿ ಪೂರ್ಣವಾಗುವವು. ಕೌಟುಂಬಿಕ ವಿವಾದ ಕೊನೆಗೊಳ್ಳುವುದು. ಶುಭ ಸಂಖ್ಯೆ: 4

ಧನು: ಭಾವುಕತೆಯಿಂದ ಕಾರ್ಯಸಾಧಿಸಲು ಪ್ರಯತ್ನಿಸುವಿರಿ. ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಸಂಶಯಿತ ನಡೆಯಿಂದ ಮನಸ್ತಾಪ. ಸಣ್ಣಪುಟ್ಟ ಕೆಲಸಗಳೂ ವಿಳಂಬವಾಗುವ ಸಾಧ್ಯತೆ ಇದೆ. ಅಭದ್ರತೆ ಕಾಡುವುದು. ಶುಭ ಸಂಖ್ಯೆ: 7

ಮಕರ: ವ್ಯವಹಾರದಲ್ಲಿ ಹಾನಿ ಕಂಡುಬರುವುದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವುದು. ಶುಭ ಸಂಖ್ಯೆ: 9

ಕುಂಭ: ತಾಪತ್ರಯಗಳೆಲ್ಲ ದೂರವಾಗಿದ್ದು ಆರ್ಥಿಕ ಸ್ಥಿತಿ ಸುಧಾರಣೆಯಾಗುತ್ತದೆ. ವ್ಯಾಪಾರಾದಿ ಉದ್ಯಮಗಳು ಇಷ್ಟದಂತೆ ನಡೆಯುತ್ತದೆ. ಕೆಲವೊಮ್ಮೆ ಸಣ್ಣ ವಿಷಯಗಳಿಗೂ ಭಯ ತೋರಿದರೂ ಹಾನಿಯಿಲ್ಲ. ಶುಭ ಸಂಖ್ಯೆ: 3

ಮೀನ: ಧನಾರ್ಜನೆಯ ಮಾರ್ಗವು ಶ್ರೇಷ್ಠ ಮಟ್ಟದಲ್ಲಿದ್ದು, ಐಶ್ವರ್ಯ ಸಮೃದ್ಧಿಯಾಗುತ್ತದೆ. ಸಂಸಾರಿಕ ದೃಷ್ಟಿಯಲ್ಲೂ ಸುಖ, ಸಂಭ್ರಮಗಳಿದ್ದು ತೃಪ್ತಿ ಲಭಿಸಿದರೂ ಶತ್ರುಜನರ ಪೀಡೆ ಅಧಿಕವಾಗುತ್ತದೆ. ಅನಿವಾರ್ಯ ಪ್ರವಾಸ ಸಾಧ್ಯತೆ ಇದೆ. ಶುಭ ಸಂಖ್ಯೆ: 3

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Published On - 6:38 am, Wed, 15 September 21