Horoscope Today- ದಿನ ಭವಿಷ್ಯ; ಈ ರಾಶಿಯವರು ಗಂಭೀರ ಆರೋಪದಿಂದ ಮುಕ್ತರಾಗಲಿದ್ದಾರೆ

Horoscope ಸೆಪ್ಟೆಂಬರ್ 16, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರು ಗಂಭೀರ ಆರೋಪದಿಂದ ಮುಕ್ತರಾಗಲಿದ್ದಾರೆ
ದಿನ ಭವಿಷ್ಯ
Follow us
TV9 Web
| Updated By: ಆಯೇಷಾ ಬಾನು

Updated on: Sep 16, 2021 | 6:23 AM

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಭಾದ್ರಪದ ಮಾಸ, ವರ್ಷ ಋತು, ಶುಕ್ಲಪಕ್ಷ, ದಶಮಿ ತಿಥಿ, ಗುರುವಾರ, ಸೆಪ್ಟೆಂಬರ್ 16, 2021. ಉತ್ತರಾಷಾಢ ನಕ್ಷತ್ರ, ರಾಹುಕಾಲ: ಇಂದು ಮಧ್ಯಾಹ್ನ 1.42 ರಿಂದ ಇಂದು ಸಂಜೆ 3.13ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.04. ಸೂರ್ಯಾಸ್ತ: ಸಂಜೆ 6.18

ತಾ.16-09-2021 ರ ಗುರುವಾರದ ರಾಶಿಭವಿಷ್ಯ, ಮೇಷ: ಕಾರ್ಯಸಿದ್ದಿ, ಮನಃಶಾಂತಿ ಇದೆ. ಗಂಭೀರ ಆರೋಪದಿಂದ ಮುಕ್ತರಾಗುವಿರಿ. ಅನುಕೂಲಕರ ವಾತಾವರಣ ಇರುವುದರಿಂದ ಇನ್ನೂ ಹೆಚ್ಚಿನ ವ್ಯವಹಾರಿಕ ಸುಧಾರಣೆ ಮಾಡಲು ಪ್ರಯತ್ನಿಸಿರಿ. ಆರೋಗ್ಯದ ಸೂಕ್ತ ಕಾಳಜಿ ವಹಿಸಿರಿ. ಶುಭ ಸಂಖ್ಯೆ: 9

ವೃಷಭ: ಜಿಪುಣತನದಿಂದ ತೊಂದರೆಯಾಗುವ ಸಾಧ್ಯತೆ ಇದೆ. ಸಹೋದರ ಸಂಬಂಧದಲ್ಲಿ ಭಿನ್ನಾಭಿಪ್ರಾಯ ಬರುವ ಸಾಧ್ಯತೆ ಇದೆ. ಪರಸ್ಪರ ದೋಷಾರೋಪ ಬೇಡ. ಮಿತ್ರರ ಸಹಾಯ ದೊರೆಯುವುದು. ಶುಭ ಸಂಖ್ಯೆ: 1

ಮಿಥುನ: ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವುದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ. ಶುಭ ಸಂಖ್ಯೆ: 8

ಕಟಕ: ಚಂಚಲಚಿತ್ತದಿಂದ ಕಾರ್ಯಹಾನಿಯಾಗುವ ಲಕ್ಷಣಗಳಿವೆ. ಆಸ್ತಿ ಸಂಬಂದಿತ ಕ್ರಯವಿಕ್ರಯ ವ್ಯವಹಾರಗಳು ಕುದುರುವವು. ಅನವಶ್ಯಕ ಮಾತಿನಿಂದ ಇಕ್ಕಟ್ಟಿಗೆ ಸಿಕ್ಕಿಕೊಳ್ಳುವ ಸಾಧ್ಯತೆ ಇದೆ. ತಜ್ಞರ ಸಹಾಯ ಪಡೆಯಿರಿ. ಶುಭ ಸಂಖ್ಯೆ: 2

ಸಿಂಹ: ಜವಾಬ್ದಾರಿಯ ನಿಮಿತ್ತ ದೂರ ಪ್ರಯಾಣದ ಸಾಧ್ಯತೆ ಇದೆ. ಉದ್ಯೋಗದಲ್ಲಿ ಪ್ರಗತಿ ಇರುವುದು. ಅಹಂಭಾವದಿಂದ ಕಠಿಣ ಪರಿಸ್ಥಿತಿಯನ್ನು ಎದುರಿಸುವ ಪ್ರಸಂಗವಿದೆ ಎಚ್ಚರಿಕೆ ವಹಿಸಿರಿ. ನಮೃತೆಗೆ ಯೋಗ್ಯ ಸಮ್ಮಾನ ದೊರೆಯುವುದು. ಶುಭ ಸಂಖ್ಯೆ: 7

ಕನ್ಯಾ: ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸುವಿರಿ. ಕಠಿಣ ಪರಿಸ್ಥಿತಿಯಲ್ಲಿಯೂ ದುರ್ಲಭ ಸಾಧನೆ ಮಾಡುವಿರಿ. ಪರಿವಾರದಲ್ಲಿ ಸಂತಸವಿರುವದು. ಕೇಡುಬಯಸುವ ಜನರಿಗೆ ಅಂಜದೇ ಮುಂದುವರಿಯಿರಿ. ಶುಭ ಸಂಖ್ಯೆ: 3

ತುಲಾ: ಭಾವುಕತೆಯಿಂದ ಕಾರ್ಯಸಾಧಿಸಲು ಪ್ರಯತ್ನಿಸುವಿರಿ. ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಸಂಶಯಿತ ನಡೆಯಿಂದ ಮನಸ್ತಾಪ. ಸಣ್ಣಪುಟ್ಟ ಕೆಲಸಗಳೂ ವಿಳಂಬವಾಗುವ ಸಾಧ್ಯತೆ ಇದೆ. ಅಭದ್ರತೆ ಕಾಡುವುದು. ಶುಭ ಸಂಖ್ಯೆ: 5

ವೃಶ್ಚಿಕ: ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವವು. ಅಪೇಕ್ಷಿತ ಧನಸಹಾಯ ದೊರೆಯುವುದು. ಶುಭ ಸಂಖ್ಯೆ: 4

ಧನು: ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವುದು. ಸಂಗಡಿಗರು ಸಹಕಾರ ತೋರುವದರಿಂದ ನಿರಾತಂಕ ಜೀವನ ಇರುವದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವದು. ಆರ್ಥಿಕ ಸಂಕಷ್ಟ ದೂರಾಗುವುದು. ಶುಭ ಸಂಖ್ಯೆ: 9

ಮಕರ: ಗಣ್ಯರೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿಯಾಗುವುದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಶುಭ ಸಂಖ್ಯೆ: 2

ಕುಂಭ: ಆಶೆ ಆಕಾಂಕ್ಷಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವುದು. ಸಹೋದರ ಸಹಕಾರ ತೋರುವದರಿಂದ ನಿರಾತಂಕವಾಗಿ ಕಾರ್ಯ ಪೂರ್ಣವಾಗುವುದು. ಮನೆಯಲ್ಲಿ ಸಂತಸದ ವಾತಾವರಣ ಇರುವುದು. ಶುಭ ಸಂಖ್ಯೆ: 1

ಮೀನ: ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ಮೊದಲು ಕಷ್ಟ ನಂತರದಲ್ಲಿ ಉತ್ತಮವಾದ ಫಲ ದೊರೆಯುವದು. ಗುರುಬಲ ವೃದ್ಧಿಸುವುದು. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವುದು. ಶುಭ ಸಂಖ್ಯೆ: 3

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ