AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today- ದಿನ ಭವಿಷ್ಯ; ಮಿಥುನ ರಾಶಿಯವರಿಗೆ ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ

Horoscope ಸೆಪ್ಟೆಂಬರ್ 17, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಮಿಥುನ ರಾಶಿಯವರಿಗೆ ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ
ದಿನ ಭವಿಷ್ಯ
TV9 Web
| Edited By: |

Updated on: Sep 17, 2021 | 6:25 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಭಾದ್ರಪದ ಮಾಸ, ವರ್ಷ ಋತು, ಶುಕ್ಲಪಕ್ಷ, ಏಕಾದಶಿ ತಿಥಿ, ಶುಕ್ರವಾರ, ಸೆಪ್ಟೆಂಬರ್ 17, 2021. ಶ್ರವಣ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 10.38 ರಿಂದ ಇಂದು ಬೆಳಿಗ್ಗೆ 12.09ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.04. ಸೂರ್ಯಾಸ್ತ: ಸಂಜೆ 6.17

ತಾ.17-09-2021 ರ ಶುಕ್ರವಾರದ ರಾಶಿಭವಿಷ್ಯ

ಮೇಷ: ಮಾತಿನಂತೆಯೇ ಎಲ್ಲವೂ ನಡೆಯುವುದಿಲ್ಲ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಉದಯೋನ್ಮುಖ ಪ್ರತಿಭೆಗಳಿಗೆ ಅವಕಾಶ ದೊರೆಯುವುದು. ಲಾಭದಾಯಕ ಹುದ್ದೆ ದೊರೆಯುವುದು. ಶುಭ ಸಂಖ್ಯೆ: 7

ವೃಷಭ: ವ್ಯವಹಾರದಲ್ಲಿ ಹಾನಿ ಕಂಡುಬರುವುದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವುದು. ಶುಭ ಸಂಖ್ಯೆ: 3

ಮಿಥುನ: ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ವ್ಯವಹಾರದಲ್ಲಿ ಅಡೆತಡೆಗಳು ಕಂಡುಬರುವವು. ಅನಿವಾರ್ಯ ಕೆಲಸಗಳಗೆ ಅಲೆದಾಟ ಕಂಡುಬರುವುದು. ಆರ್ಥಿಕ ಸ್ಥಿತಿ ಉತ್ತಮವಾಗಿ ಇರುವುದು. ಶುಭ ಸಂಖ್ಯೆ: 9

ಕಟಕ: ಎಲ್ಲವನ್ನು ಹಗುರವಾಗಿ ಕಾಣುವುದರಿಂದ ಸಣ್ಣ ವಿಷಯವೂ ದೊಡ್ಡ ಸಮಸ್ಯೆಯಾಗುವುದು. ಹಣಕಾಸಿನ ತೊಂದರೆಗಳು ಕಂಡುಬರುವವು. ಮಹತ್ವದ ಕೆಲಸಗಳು ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ. ಎಚ್ಚರಿಕೆ ವಹಿಸಿರಿ. ಶುಭ ಸಂಖ್ಯೆ: 4

ಸಿಂಹ: ಆಸ್ತಿ ಖರೀದಿ ಅಥವಾ ಹೊಸ ವ್ಯವಹಾರ ಆರಂಭಕ್ಕೂ ಮೊದಲು ಆತ್ಮೀಯರೊಂದಿಗೆ ಸಮಾಲೋಚನೆ ಮಾಡಿ ಮುಂದುವರಿಯಿರಿ. ಅಡೆತಡೆಗಳ ಮಧ್ಯದಲ್ಲಿಯೂ ನಿರೀಕ್ಷಿತ ಕಾರ್ಯಗಳು ಪೂರ್ಣವಾಗುವವು. ಶುಭ ಸಂಖ್ಯೆ: 1

ಕನ್ಯಾ: ಭಾವುಕತೆಯಿಂದ ಕಾರ್ಯಸಾಧಿಸಲು ಪ್ರಯತ್ನಿಸುವಿರಿ. ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಸಂಶಯಿತ ನಡೆಯಿಂದ ಮನಸ್ತಾಪ. ಸಣ್ಣಪುಟ್ಟ ಕೆಲಸಗಳೂ ವಿಳಂಬವಾಗುವ ಸಾಧ್ಯತೆ ಇದೆ. ಅಭದ್ರತೆ ಕಾಡುವುದು. ಶುಭ ಸಂಖ್ಯೆ: 6

ತುಲಾ: ವೃತ್ತಿಪರೆತೆಯಿಂದ ಕಾರ್ಯ ಕೈಗೂಡುವದು. ಪರಿವಾರದೊಂದಿಗೆ ದೂರ ಪ್ರವಾಸದ ಯೋಗವಿದೆ. ಉತ್ತಮವಾದ ಸಮಯ ಇರುವದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುವುದು. ಶುಭ ಸಂಖ್ಯೆ: 7

ವೃಶ್ಚಿಕ: ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಕೊರತೆ ಇಲ್ಲ. ವ್ಯವಹಾರ ಚತುರತೆಯಿಂದ ದೊಡ್ಡ ಕೆಲಸವನ್ನೂ ಸಹಜವಾಗಿ ಮಾಡುವಿರಿ. ಶುಭ ಸಂಖ್ಯೆ: 3

ಧನು: ಹಿರಿಯರ ಮಾರ್ಗದರ್ಶನ ದೊರೆಲಿದೆ. ಆತ್ಮೀಯರೊಂದಿಗೆ ವಾದವಿವಾದ ಮಾಡಬೇಡಿ. ಮದುವೆಯ ಮಾತುಕತೆ ಕೈಗೂಡುವ ಸಾಧ್ಯತೆ ಇದೆ. ವ್ಯವಹಾರಿಕ ಜಾಣತನದಿಂದ ಲಾಭವಾಗಲಿದೆ. ಮನೆಯಲ್ಲಿ ಸಂತಸ ಕಂಡುಬರುವುದು. ಶುಭ ಸಂಖ್ಯೆ: 2

ಮಕರ: ಅತಿಯಾದ ಆತ್ಮವಿಶ್ವಾಸ, ಆಲಸ್ಯದಿಂದ ಬಹುವಿಧವಾದ ಕಷ್ಟನಷ್ಟಗಳ ಅನುಭವವಾಗುವದು. ಸಹನೆಯಿಂದ ವ್ಯವಹರಿಸಿರಿ.ಗುರುಬಲ ವೃದ್ಧಿಸುವದು. ಮದುವೆಯ ಸಂಭ್ರಮದ ವಾತಾವರಣ ಕಂಡುಬರುವದು. ಹಿರಿಯರ ಮಾತಿನಂತೆ ನಡಯುವದು ಉತ್ತಮ. ಶುಭ ಸಂಖ್ಯೆ: 8

ಕುಂಭ: ಮನೆ, ನಿವೇಶನ, ಆಸ್ತಿ ಖರೀದಿ ಯೋಗವಿದೆ. ವ್ಯವಹಾರದಲ್ಲಿ ಜಾಗ್ರತೆ ಇರಲಿ. ವ್ಯಾಪಾರ ಉತ್ತಮವಾಗಿರುವದು. ಉತ್ಸಾಹ ಮೂಡುವದು. ದೋಷ ಪರಿಹಾರಕ್ಕೆ ಜಲದಾನ ಮಾಡಿರಿ. ಶುಭ ಸಂಖ್ಯೆ: 4

ಮೀನ: ಅಲ್ಪ ತೃಪ್ತಿ, ವ್ಯಾಪಾರದಲ್ಲಿ ನಿರಾಸಕ್ತಿ, ಅಪೇಕ್ಷಿತ ಕೆಲಸಗಳು ನೆರವೇರುವವು, ಧನಲಾಭ, ವಿದ್ಯಾರ್ಥಗಳು, ಶಿಕ್ಷಕರು ಹಾಗೂ ಹಿರಿಯರಿಗೆ ಕೀರ್ತಿದಾಯಕ. ಆಲಸ್ಯದಿಂದ ತೊಂದರೆ ಇರುವದು ಗುರುಸ್ತೋತ್ರ ಪಾರಾಯಣ ಮಾಡಿರಿ. ಶುಭ ಸಂಖ್ಯೆ: 7

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ