Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಅನಿರೀಕ್ಷಿತ ಧನಲಾಭವಾಗುವುದು

Horoscope ಸೆಪ್ಟೆಂಬರ್ 18, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಅನಿರೀಕ್ಷಿತ ಧನಲಾಭವಾಗುವುದು
ದಿನ ಭವಿಷ್ಯ
Follow us
TV9 Web
| Updated By: Vinay Bhat

Updated on: Sep 18, 2021 | 6:42 AM

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಭಾದ್ರಪದ ಮಾಸ, ವರ್ಷ ಋತು, ಶುಕ್ಲಪಕ್ಷ, ದ್ವಾದಶಿ ತಿಥಿ, ಶನಿವಾರ, ಸೆಪ್ಟೆಂಬರ್ 18, 2021. ಧನಿಷ್ಥೆ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 9.06 ರಿಂದ ಇಂದು ಬೆಳಿಗ್ಗೆ 10.37ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.04. ಸೂರ್ಯಾಸ್ತ: ಸಂಜೆ 6.16

ತಾ.18-09-2021 ರ ಶನಿವಾರದ ರಾಶಿಭವಿಷ್ಯ.

ಮೇಷ: ಅನಿರೀಕ್ಷಿತ ಧನಲಾಭವಾಗುವುದು. ಬುದ್ಧಿಕೌಶಲ್ಯದಿಂದ ಉದ್ಯೋಗದಲ್ಲಿ ಬಡ್ತಿ ಕಂಡುಬರುವುದು. ಸಿಟ್ಟಿನ ಸ್ವಭಾವದಿಂದ ತೊದರೆಯಾಗುವ ಸಾಧ್ಯತೆ ಇದೆ. ಕಾರ್ಯಕ್ಷಮತೆಗೆ ತಕ್ಕ ಫಲ ದೊರೆಯುವುದು. ಶುಭ ಸಂಖ್ಯೆ: 1

ವೃಷಭ: ಯೋಜನೆಗಳಿಗೆ ಪೂರ್ವ ತಯಾರಿ ಮಾಡುವ ಅಗತ್ಯತೆ ಕಂಡುಬರುವುದು. ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವದು ಒಳಿತು. ಶುಭ ಸಂಖ್ಯೆ: 9

ಮಿಥುನ: ಅಗೌರವ ಆಗುವ ಸಂಭವ ಇರುವುದರಿಂದ ಸೂಕ್ಷ್ಮವಾಗಿರುವುದು ಉತ್ತಮ. ಅನಪೇಕ್ಷಿತರಿಗೆ ಉಪಕಾರ ಮಾಡುವುದು ಸರಿಯಲ್ಲ. ಮಕ್ಕಳ ಚಿಂತೆ ಇರುವುದು. ವಧುವರರಿಗೆ ಮದುವೆಯ ಯೋಗ ಕೂಡಿಬರುವುದು. ಶುಭ ಸಂಖ್ಯೆ: 2

ಕಟಕ: ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವುದು. ಉನ್ನತ ವ್ಯಾಸಂಗದ ಯೋಗವಿದೆ. ವಿದೇಶಗಮನ, ವ್ಯವಹಾರಿಕ ತಿರುಗಾಟದ ಸಾಧ್ಯತೆ ಇದೆ. ಶತ್ರುಬಾಧೆ ಕಂಡುಬರುವುದು. ಆರೋಗ್ಯದ ಮೇಲೆ ನಿಗಾ ಇರಲಿ. ಶುಭ ಸಂಖ್ಯೆ: 8

ಸಿಂಹ: ಮಹತ್ವಾಕಾಂಕ್ಷೆಗೆ ಪೂರಕವಾದ ವಾತಾವರಣ ಇರುವುದು. ಬಂಧುಮಿತ್ರರ ಸಹಕಾರ ದೊರೆಯುವುದು. ಉದ್ಯೋಗದಲ್ಲಿ ಪ್ರಗತಿ ಕಂಡುಬರುವುದು. ಮನೆಯಲ್ಲಿ ಸಂತಸ ಮೂಡುವುದು. ಶುಭಕಾರ್ಯಗಳು ಜರುಗುವವು. ಶುಭ ಸಂಖ್ಯೆ: 3

ಕನ್ಯಾ: ಆತ್ಮೀಯರೇ ವಿರೋಧಿಗಳಂತೆ ವರ್ತಿಸುವರು. ಮಾಡದ ತಪ್ಪಿಗೆ ಕ್ಷಮೆಕೇಳುವ ಪ್ರಸಂಗ ಇರುವುದರಿಂದ ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಮನಸ್ಸಿನಲ್ಲಿ ಸಂಕಲ್ಪಿಸಿದ ಕಾರ್ಯವು ನಿಧಾನವಾಗಿ ನೆರವೇರಿ ಲಾಭದಾಯಕವಾಗುವುದು. ಶುಭ ಸಂಖ್ಯೆ: 6

ತುಲಾ: ವೃತ್ತಿಪರೆತೆಯಿಂದ ಕಾರ್ಯ ಕೈಗೂಡುವುದು. ಪರಿವಾರದೊಂದಿಗೆ ದೂರ ಪ್ರವಾಸದ ಯೋಗವಿದೆ. ಉತ್ತಮವಾದ ಸಮಯ ಇರುವುದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುವುದು. ಶುಭ ಸಂಖ್ಯೆ: 4

ವೃಶ್ಚಿಕ: ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಕೆಲಸದಲ್ಲಿ ಸ್ಪಷ್ಟತೆ ಇರಲಿ. ಅಲ್ಪಧನಲಾಭವಾದರೂ ಹಳೆಯ ಸಾಲ ತೀರುವುದು. ವ್ಯಾಪಾರದಲ್ಲಿ ಅಭಿವೃದ್ಧಿಯಾಗುವದು. ವಿವಾಹ ಅಪೇಕ್ಷಿತರಿಗೆ ಕಂಕಣಬಲ ಕೂಡಿಬರುವುದು. ಶುಭ ಸಂಖ್ಯೆ: 5

ಧನು: ಹೊಸ ಯೋಜನೆಗೆ ಸಂಬಂಧಿಸಿದಂತೆ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಶುಭ ಸಂಖ್ಯೆ: 9

ಮಕರ: ಸಜ್ಜನರಲ್ಲಿ ಮನಸ್ತಾಪ. ದೇಹಾರೋಗ್ಯವೂ ಸರಿಯಿರದೆ ತಾಪದಾಯಕವಾಗುತ್ತದೆ. ಆದರೆ ಶ್ರೇಷ್ಠ ಜನರಿಂದ ಪುರಸ್ಕಾರ. ಸಾಂಸಾರಿಕ ದೃಷ್ಟಿಯಲ್ಲೂ ತೃಪ್ತಿದಾಯಕವಿದ್ದು ನೆಮ್ಮದಿ ಉಂಟಾಗುತ್ತದೆ. ಶುಭ ಸಂಖ್ಯೆ: 1

ಕುಂಭ: ಯಶಸ್ಸು. ಶ್ರಮಕ್ಕೆ ತಕ್ಕ ಲಾಭ, ಕೀರ್ತಿ, ಕೃಷಿಯಲ್ಲಿ ಉತ್ತಮ ಸಾಧನೆ, ಮನೆಯಲ್ಲಿ ಮಂಗಲಕಾರ್ಯ, ಬುಧ, ಮಂಗಳ ಯೋಗ ಶುಭದಾಯಕ ಆದರೂ ಕಿರಿಕಿರಿ ಸಂಭವ. ಪರಿಹಾರಕ್ಕಾಗಿ ಅನ್ನದಾನ ಮಾಡಿರಿ. ಶುಭ ಸಂಖ್ಯೆ: 3

ಮೀನ: ಆದಾಯ ಹೆಚ್ಚುವುದು. ವ್ಯವಹಾರಿಕ ಏಳ್ಗೆ ಇರುವದು. ಅತಿಯಾದ ಆತ್ಮವಿಶ್ವಾಸ, ಆಲಸ್ಯದಿಂದ ಬಹುವಿಧವಾದ ಕಷ್ಟನಷ್ಟಗಳ ಅನುಭವವಾಗುವುದು. ಶಾಂತಚಿತ್ತರಾಗಿ ವ್ಯವಹರಿಸಿರಿ. ಕೆಲಸದಲ್ಲಿ ಹೆಚ್ಚಿನ ಬದ್ಧತೆ ತೋರಿಸುವ ಅವಶ್ಯಕತೆ ಕಂಡುಬರುವುದು. ಶುಭ ಸಂಖ್ಯೆ: 6

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

ಜನವರಿ 13 ರಿಂದ 19ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 13 ರಿಂದ 19ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ದೃಷ್ಟಿ ಗಣಪತಿ ಕುರಿತಾಗಿ ಶಾಸ್ತ್ರಗಳಲ್ಲಿ ಉಲ್ಲೇಖವಿದೆಯೇ? ಇಲ್ಲಿದೆ ಉತ್ತರ
ದೃಷ್ಟಿ ಗಣಪತಿ ಕುರಿತಾಗಿ ಶಾಸ್ತ್ರಗಳಲ್ಲಿ ಉಲ್ಲೇಖವಿದೆಯೇ? ಇಲ್ಲಿದೆ ಉತ್ತರ
Daily Horoscope: ರವಿವಾರದಂದು ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
Daily Horoscope: ರವಿವಾರದಂದು ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?