ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಶ್ರಾವಣ ಮಾಸ, ವರ್ಷ ಋತು, ಶುಕ್ಲಪಕ್ಷ, ತ್ರಯೋದಶಿ ತಿಥಿ, ಭಾನುವಾರ, ಸೆಪ್ಟೆಂಬರ್ 19, 2021. ಶತಭಿಷೆ ನಕ್ಷತ್ರ, ರಾಹುಕಾಲ: ಇಂದು ಸಂಜೆ: ಇಂದು ಸಂಜೆ 4: 43 ಇಂದ ಸಂಜೆ 6:14 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.04. ಸೂರ್ಯಾಸ್ತ: ಸಂಜೆ 6.15.
ತಾ.19-09-2021 ರ ಭಾನುವಾರದ, ರಾಶಿಭವಿಷ್ಯ.
ಮೇಷ: ಸಮಾಧಾನಕರ ದಿನವಾಗಲಿದೆ. ಹಿತವಾದ ಮಾತುಗಳು ಗೌರವವನ್ನು ವೃದ್ಧಿಸುವವು. ಆರ್ಥಿಕ ಸಂಕಷ್ಟಗಳು ಎದುರಾಗುವವು. ಸಮಾಧಾನ ಚಿತ್ತದಿಂದ ಕಾರ್ಯ ನಿರ್ವಹಿಸಿರಿ.ಹಿತೈಷಿಗಳಂತೆ ವರ್ತಿಸುವವರಿಂದ ದೂರವಿರಿ. ಶುಭ ಸಂಖ್ಯೆ: 5
ವೃಷಭ: ಗಂಭೀರ ಆರೋಪದಿಂದ ಮುಕ್ತರಾಗುವಿರಿ. ಅನುಕೂಲಕರ ವಾತಾವರಣ ಇರುವದರಿಂದ ಇನ್ನೂ ಹೆಚ್ಚಿನ ವ್ಯವಹಾರಿಕ ಸುಧಾರಣೆ ಮಾಡಲು ಪ್ರಯತ್ನಿಸಿರಿ.ಆರೋಗ್ಯದ ಸೂಕ್ತ ಕಾಳಜಿ ವಹಿಸಿರಿ. ಶುಭ ಸಂಖ್ಯೆ: 1
ಮಿಥುನ: ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಅನವಶ್ಯಕ ಭಯ ಅಗತ್ಯವಿಲ್ಲ, ನಿಮ್ಮ ಸೇವೆ ಫಲ ನೀಡುವದು. ಸಂಕಷ್ಟದ ಮಧ್ಯೆಯೂ ಸಂತೋಷದ ದಿನಗಳಿವೆ. ಆಗಂತುಕರೊಂದಿಗೆ ಜಾಗೃತೆ ಅಗತ್ಯ. ಶುಭ ಸಂಖ್ಯೆ: 9
ಕರ್ಕ: ಕೃಷಿಮೂಲದ ಲಾಭ ದೊರೆಯುವದು. ಸಹೋದ್ಯೋಗಿಗಳ ಸಹಾಯ ಅಪೃಕ್ಷಿಸದೇ ಸ್ವಂತಬಲದಿಂದ ಕೆಲಸ ನಿರ್ವಹಿಸಿರಿ.ಕೈಗೊಂಡ ಕಾರ್ಯಗಳು ಯಶಸ್ವಿಯಾಗುವವು. ನೌಕರರಿಗೆ ಕಿರಿಕಿರಿಯಾಗುವ ಸಂಭವವಿದೆ. ಶುಭ ಸಂಖ್ಯೆ: 2
ಸಿಂಹ: ಪ್ರಾಮಾಣಿಕ ಪ್ರಯತ್ನಕ್ಕೆ ತಕ್ಕಂತೆ ಕೆಲಸಗಳು ಕೈಗೂಡುವವು. ಮಾತು ಕೇಳದ ಜನರಿಂದ ದೂರವಿರಿ. ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವದು. ಆಸ್ತಿ ಖರೀದಿ ಯೋಗವಿದೆ ಪ್ರಯತ್ನಿಸಿ. ಶುಭ ಸಂಖ್ಯೆ: 8
ಕನ್ಯಾ: ಉದಾಸೀನತೆಯಿಂದ ಕಾರ್ಯಹಾನಿ ಸಂಭವ. ಅನುಮಾನಗಳು ಮೂಡಿ ಕೈಗೊಂಡ ಕಾರ್ಯಕ್ಕೆ ವಿಘ್ನ ಉಂಟಾಗುವ ಸಂಭವವಿದೆ. ಸಾಮಾಜಿಕ ಗೌರವನ್ನು ಉಳಿಸಿಕೊಳ್ಳುವಲ್ಲಿ ಸಫಲರಾಗುವಿರಿ. ಶುಭ ಸಂಖ್ಯೆ: 7
ತುಲಾ: ವ್ಯವಹಾರದಲ್ಲಿ ಹಾನಿ ಕಂಡುಬರುವದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವದು. ಶುಭ ಸಂಖ್ಯೆ: 6
ವೃಶ್ಚಿಕ: ಹಣಕಾಸಿನ ವ್ಯವಹಾರದಲ್ಲಿ ಧೈರ್ಯದಿಂದ ಕಾರ್ಯ ಸಾಧನೆ. ಅಪೇಕ್ಷಸದ ಲಾಭ ಸಂಭವ. ಗಡಿಬಿಡಿಯ ವಾತಾವತರಣ, ಬಿಡುವಿಲ್ಲದ ಕಾರ್ಯ, ಮಿತ್ರರೊಂದಿಗೆ ಜಟಾಪಟಿ ಸಂಭವ, ದೀಪದಾನ ಮಾಡಿರಿ. ಶುಭ ಸಂಖ್ಯೆ: 5
ಧನು: ದೂರ ಪ್ರಯಾಣದ ಅವಶ್ಯಕತೆ ಕಂಡುಬರುವದು. ಗುಪ್ತ ಧನ, ಲಾಟರಿ, ವ್ಯಾಪಾರದಲ್ಲಿ ಬೆಲೆಗಳ ಹೆಚ್ಚಳದಿಂದ ಲಾಭ. ಅನೇಕ ರೀತಿಯ ಸೌಭಾಗ್ಯಗಳು ದೊರೆಯುವವು.ಅನಾವಶ್ಯಕ ಮಾತು, ಸಿಟ್ಟು, ಅಹಂಕಾರದಿಂದ ಹಾಗೂ ಅಗ್ನಿ, ವಿದ್ಯುತ್, ಮಶಿನರಿಗಳಿಂದ ತೊಂದರೆ ಸಾಧ್ಯತೆ. ಶುಭ ಸಂಖ್ಯೆ: 9
ಮಕರ: ವಾದ-ವಿವಾದ, ಹಠಸಾಧನೆ, ತಪ್ಪುಗಳ ಸಮರ್ಥನೆ, ಮತ್ತೊಬ್ಬರ ಮೇಲೆ ದೋಷಾರೋಪಣೆ ಬೇಡ. ಆಯಾಸದಿಂದ ಕೂಡಿದ ಕೆಲಸ ಇರುವದು. ಅಧಿಕಾರ ಪ್ರಾಪ್ತಿಗಾಗಿ ಅಲೆದಾಟ ಸಂಭವ. ನಿರೀಕ್ಷಿತ ಆದಾಯಕ್ಕೆ ತೊಂದರೆ ಇಲ್ಲ. ಶುಭ ಸಂಖ್ಯೆ: 1
ಕುಂಭ: ದಿಟ್ಟತನ, ಮನೋಸ್ಥೈರ್ಯ, ನೇರ,ನಿಷ್ಟುರ ನಡೆಗಳಿಗೆ ಉತ್ತಮ ಫಲಪಾಪ್ತವಾಗುವುದು. ನಿಮ್ಮ ನಿರ್ಧಾರಗಳು ಪರಿವರ್ತನೆಗೆ ಕಾರಣವಾಗುವವು. ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರುವದು. ಶುಭ ಸಂಖ್ಯೆ: 3
ಮೀನ: ಏಕಾಂಗಿತನದ ಬೇಸರ ಪರಿಸರದಿಂದ ಹೊರಬಂದು ಹೊಸಬರೊಂದಿಗೆ ಬಾಳುವ ಸಂಕಲ್ಪ. ನಿರಾಕರಿಸಿದ್ದ ಜವಾಬ್ದಾರಿ ಪುನ: ಸುಪರ್ದಿಗೆ ಬಂದು ಮೆಚ್ಚುಗೆಯಾಗಿ ನಿಭಾವಣೆ. ಬಾಳ ಸಂಗಾತಿ ಜತೆಗಿನ ಚಿಕ್ಕ ಪುಟ್ಟ ಚರ್ಚೆಗಳೇ. ಮುಂದೆ ವಿರಸಕ್ಕೆ ದಾರಿಯಾದೀತು. ಶುಭ ಸಂಖ್ಯೆ: 2