Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ವ್ಯವಹಾರದಲ್ಲಿ ಹಾನಿ ಕಂಡುಬರುವುದು
Horoscope ಸೆಪ್ಟೆಂಬರ್ 20, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.
ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಭಾದ್ರಪದ ಮಾಸ, ವರ್ಷ ಋತು, ಶುಕ್ಲಪಕ್ಷ, ಹುಣ್ಣಿಮೆ ತಿಥಿ, ಸೋಮವಾರ, ಸೆಪ್ಟೆಂಬರ್ 20, 2021. ಪೂರ್ವಾಭಾದ್ರೆ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 7.35 ರಿಂದ ಇಂದು ಬೆಳಿಗ್ಗೆ 9.06ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.04. ಸೂರ್ಯಾಸ್ತ: ಸಂಜೆ 6.14
ತಾ.20-09-2021 ರ ಸೋಮವಾರದ ರಾಶಿಭವಿಷ್ಯ. ಪಿತೃ ಪಕ್ಷ ಪ್ರಾರಂಭ, ಶುಭಂಭವತು
ಮೇಷ: ಪೂರ್ಣವಿಶ್ವಾಸ ಇಲ್ಲದ ಅಥವಾ ತಿಳಿಯದ ಕೆಲಸದಲ್ಲಿ ಹಣವ್ಯಯ ಮಾಡಬೇಡಿ. ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪ ಎಚ್ಚರಿಕೆ ಇರಲಿ. ದಿನದ ಕೆಲಸ ಬೇಸರ ಉಂಟುಮಾಡುವ ಸಾಧ್ಯತೆ ಇದೆ. ಶುಭ ಸಂಖ್ಯೆ: 5
ವೃಷಭ: ಪರಿವಾರದಲ್ಲಿ ಹೊಸಕಳೆ ಬರುವುದು. ಕುಟುಂಬದಲ್ಲಿ ಸೌಖ್ಯ ಇರುವುದು. ಮಹತ್ವದ ಕೆಲಸಕ್ಕೆ ವಿಘ್ನ ಬರುವ ಸಾಧ್ಯತೆ ಇದೆ ಎಚ್ಚರಿಕೆವಹಿಸಿರಿ. ವ್ಯವಹಾರಗಳು ಲಾಭದಾಯಕವಾಗಿ ಇರುವವು. ಶುಭ ಸಂಖ್ಯೆ: 9
ಮಿಥುನ: ಧನಮದಕ್ಕಿಂತ ವಿದ್ಯಾಮದ ಅಪಾಯಕಾರಿ ಆದ್ದರಿಂದ ತೊಂದರೆ ಆಗುವ ಸಾಧ್ಯತೆ ಇದೆ ವಿನಯದಿಂದ ವರ್ತಿಸಿರಿ. ಅಕಾಲಿಕ ಒತ್ತಡಗಳಿಂದ ಕಾರ್ಯಹಾನಿ. ಪ್ರೇಮಿಗಳಿಗೆ ಅಪೇಕ್ಷೆಯಂತೆ ಕಂಕಣಬಲ ಕೂಡಿಬರುವುದು. ಶುಭ ಸಂಖ್ಯೆ: 7
ಕಟಕ: ವ್ಯವಹಾರದಲ್ಲಿ ಹಾನಿ ಕಂಡುಬರುವುದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವುದು. ಶುಭ ಸಂಖ್ಯೆ: 1
ಸಿಂಹ: ಕೆಲಸಗಳು ನಿಧಾನಗತಿಯಲ್ಲಿ ಸಾಗುವವು ಸೂಕ್ಷ್ಮತೆಯಿಂದ ವ್ಯವಹರಿಸಿರಿ. ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ಮನೋಚಿಂತಿತ ಕಾರ್ಯ ಕೈಗೂಡುವದು. ಹಳೆಯ ಸಾಲ ತೀರುವುದು. ಶುಭ ಸಂಖ್ಯೆ: 8
ಕನ್ಯಾ: ಅನೇಕ ರೀತಿಯ ಲಾಭ ದೊರೆಯುವ ಸಾಧ್ಯತೆ ಇದೆ. ಆದರ್ಶ ವ್ಯಕ್ತಿತ್ವದಿಂದ ಜನ ಮನ್ನಣೆಗೆ ಪಾತ್ರರಾಗುವಿರಿ. ಎಲ್ಲ ಕೆಲಸಗಳೂ ಸಕಾಲದಲ್ಲಿ ಪೂರ್ಣವಾಗುವವು. ಕೌಟುಂಬಿಕ ವಿವಾದ ಕೊನೆಗೊಳ್ಳುವುದು. ಶುಭ ಸಂಖ್ಯೆ: 3
ತುಲಾ: ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವುದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ. ಶುಭ ಸಂಖ್ಯೆ: 6
ವೃಶ್ಚಿಕ: ಕ್ಷಮಾಗುಣ ಇರಲಿ, ಪರಸ್ಪರ ದೋಷಾರೋಪ ಮಾಡುವುದರಿಂದ ಕಾರ್ಯಹಾನಿಯ ಸಂಭವವಿದೆ. ವ್ಯವಹಾರದಲ್ಲಿ ಸಮತೋಲನ ಕಾಯ್ದುಕೊಳ್ಳುವಿರಿ. ದೊಡ್ಡಮೊತ್ತದ ಹಣಹೂಡಿಕೆ ಈಗ ಬೇಡ. ಶುಭ ಸಂಖ್ಯೆ: 8
ಧನು: ಭಾವುಕತೆಯಿಂದ ಕಾರ್ಯಸಾಧಿಸಲು ಪ್ರಯತ್ನಿಸುವಿರಿ. ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಸಂಶಯಿತ ನಡೆಯಿಂದ ಮನಸ್ತಾಪ. ಸಣ್ಣಪುಟ್ಟ ಕೆಲಸಗಳೂ ವಿಳಂಬವಾಗುವ ಸಾಧ್ಯತೆ ಇದೆ. ಅಭದ್ರತೆ ಕಾಡುವುದು. ಶುಭ ಸಂಖ್ಯೆ: 4
ಮಕರ: ಆತ್ಮೀಯರೇ ವಿರೋಧಿಗಳಂತೆ ವರ್ತಿಸುವರು. ಮಾಡದ ತಪ್ಪಿಗೆ ಕ್ಷಮೆಕೇಳುವ ಪ್ರಸಂಗ ಇರುವುದರಿಂದ ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಮನಸ್ಸಿನಲ್ಲಿ ಸಂಕಲ್ಪಿಸಿದ ಕಾರ್ಯವು ನಿಧಾನವಾಗಿ ನೆರವೇರಿ ಲಾಭದಾಯಕವಾಗುವುದು. ಶುಭ ಸಂಖ್ಯೆ: 9
ಕುಂಭ: ದಿನೇ ದಿನೇ ಅಭಿವೃದ್ಧಿ ತೋರಿ ವ್ಯವಹಾರಗಳೆಲ್ಲಾ ಇಷ್ಟದಂತೆ ನಡೆಯುತ್ತದೆ. ಹಲವು ರೀತಿಯಿಂದ ಧನಾಗಮನ ತೋರಿಬರುತ್ತದೆ. ಐಶ್ವರ್ಯ, ಮುಟ್ಟಿದ್ದು ಚಿನ್ನವಾಗುವ ಕಾಲ. ಸ್ಥಿರಾಸ್ತಿ ಪ್ರಾಪ್ತಿ. ಅಲ್ಪ ಅನಾರೋಗ್ಯ ತೋರಿದರೂ ಕ್ಷಣಿಕವೆನ್ನಬಹುದು. ಶುಭ ಸಂಖ್ಯೆ: 2
ಮೀನ: ಮಿತ್ರರ ಧೋರಣೆಯಿಂದ ವ್ಯವಹಾರಿಕ ಅಭಿವೃದ್ಧಿ ಕಂಡು ಬರುವುದು. ಕುಟುಂಬದ ಜವಾಬ್ದಾರಿ ಹೆಚ್ಚುವುದು. ಮಕ್ಕಳ ವಿದ್ಯಾಬ್ಯಾಸ ಹಾಗೂ ಆರೋಗ್ಯದ ಚಿಂತೆ ಕಂಡುಬರುವುದು. ನಿರ್ಲಕ್ಷತೆ, ಕೆಲಸ ಮುಂದೂಡುವ ಸ್ವಭಾವದಿಂದ ಹಾನಿ ಸಂಭವ. ಶುಭ ಸಂಖ್ಯೆ: 1
Published On - 6:32 am, Mon, 20 September 21