Horoscope Today- ದಿನ ಭವಿಷ್ಯ; ಈ ರಾಶಿಯವರು ಗಂಭೀರ ಆರೋಪದಿಂದ ಮುಕ್ತರಾಗುವಿರಿ

| Updated By: Vinay Bhat

Updated on: Sep 21, 2021 | 6:33 AM

Horoscope ಸೆಪ್ಟೆಂಬರ್ 21, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರು ಗಂಭೀರ ಆರೋಪದಿಂದ ಮುಕ್ತರಾಗುವಿರಿ
ದಿನ ಭವಿಷ್ಯ
Follow us on

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಭಾದ್ರಪದ ಮಾಸ, ವರ್ಷ ಋತು, ಕೃಷ್ಣಪಕ್ಷ, ಪಾಡ್ಯ ತಿಥಿ, ಮಂಗಳವಾರ, ಸೆಪ್ಟೆಂಬರ್ 21, 2021. ಉತ್ತರಾಭಾದ್ರೆ ನಕ್ಷತ್ರ, ರಾಹುಕಾಲ: ಇಂದು ಸಂಜೆ 3.10 ರಿಂದ ಇಂದು ಸಂಜೆ 4.41ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.04. ಸೂರ್ಯಾಸ್ತ: ಸಂಜೆ 6.13

ತಾ.21-09-2021 ರ ಮಂಗಳವಾರದ ರಾಶಿಭವಿಷ್ಯ.

ಮೇಷ: ವಿನಾಕಾರಣ ನಿಂದನೆಯ ಸಂಭವವಿದೆ. ಖರ್ಚುಹೆಚ್ಚಾಗುವ ಯೋಗ ಇರುವುದರಿಂದ ಉಳಿತಾಯದ ಯೋಜನೆ ಮಾಡಿರಿ. ಮನೆಯಲ್ಲಿ ಶಾಂತಿಯುತ ನೆಮ್ಮದಿಯ ವಾತಾವರಣ ಇರುವುದು. ಶುಭ ಸಂಖ್ಯೆ: 9

ವೃಷಭ: ವ್ಯಾಪಾರದಲ್ಲಿ ಪ್ರಗತಿ ಇರುವುದು. ವೈವಾಹಿಕ ತೊಂದರೆಗಳು ಪರಿಹಾರವಾಗುವವು. ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಮನೆಯಲ್ಲಿ ಸಂತಸದ ವಾತಾವರಣ ಇರುವುದು. ಶುಭ ಸಂಖ್ಯೆ: 1

ಮಿಥುನ: ಹೊಟ್ಟೆಕಿಚ್ಚು ಮಾಡುವವರಿಗೆ ತಕ್ಕ ಶಾಸ್ತಿಯಾಗಲಿದೆ. ಶತ್ರುಗಳು ತಾವಾಗಿಯೇ ದೂರಸರಿಯುವರು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವುದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ಶುಭ ಸಂಖ್ಯೆ: 8

ಕಟಕ: ಧನಮದಕ್ಕಿಂತ ವಿದ್ಯಾಮದ ಅಪಾಯಕಾರಿ ಆದರಿಂದ ತೊಂದರೆ ಆಗುವ ಸಾಧ್ಯತೆ ಇದೆ ವಿನಯದಿಂದ ವರ್ತಿಸಿರಿ. ಅಕಾಲಿಕ ಒತ್ತಡಗಳಿಂದ ಕಾರ್ಯಹಾನಿ. ಪ್ರೇಮಿಗಳಿಗೆ ಅಪೇಕ್ಷೆಯಂತೆ ಕಂಕಣಬಲ ಕೂಡಿಬರುವುದು. ಶುಭ ಸಂಖ್ಯೆ: 3

ಸಿಂಹ: ಗಂಭೀರ ಆರೋಪದಿಂದ ಮುಕ್ತರಾಗುವಿರಿ. ಅನುಕೂಲಕರ ವಾತಾವರಣ ಇರುವದರಿಂದ ಇನ್ನೂ ಹೆಚ್ಚಿನ ವ್ಯವಹಾರಿಕ ಸುಧಾರಣೆ ಮಾಡಲು ಪ್ರಯತ್ನಿಸಿರಿ.ಆರೋಗ್ಯದ ಸೂಕ್ತ ಕಾಳಜಿ ವಹಿಸಿರಿ. ಶುಭ ಸಂಖ್ಯೆ: 7

ಕನ್ಯಾ: ಹೊಸ ಆಸ್ತಿ ಖರೀದಿ ಅಥವಾ ಹೊಸ ಹೂಡಿಕೆ ಈಗ ಬೇಡ. ಕಂಟಕದಿಂದ ಪಾರಾಗುವ ಯೋಗವಿದೆ. ಒಳ್ಳೆಯ ಸ್ವಭಾವ ಇರುವುದರಿಂದ ಉದ್ಯೋಗದಲ್ಲಿ ಹೆಚ್ಚಿನ ಬಡ್ತಿಯಾಗುವ ಕಾಲ. ಆಸಕ್ತಿಗೆ ತಕ್ಕಂತೆ ಅವಕಾಶಗಳು ದೊರಕುವವು. ಶುಭ ಸಂಖ್ಯೆ: 4

ತುಲಾ: ದೀರ್ಘಕಾಲದ ಸಮಸ್ಯಗಳಿಗೆ ಪರಿಹಾರ ದೊರೆಯುವುದು. ಕೋರ್ಟನಲ್ಲಿ ಇರುವ ನ್ಯಾಯ ಬಗೆಹರಿಯುವದು. ಆರ್ಥಿಕ ಸುಧಾರಣೆ ಕಂಡುಬರುವುದು. ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವುದು. ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಕಂಡುಬರುವುದು. ಶುಭ ಸಂಖ್ಯೆ: 6

ವೃಶ್ಚಿಕ: ಆಶೆ ಆಕಾಂಕ್ಷಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವುದು. ಸಹೋದರ ಸಹಕಾರ ತೋರುವುದರಿಂದ ನಿರಾತಂಕವಾಗಿ ಕಾರ್ಯ ಪೂರ್ಣವಾಗುವುದು. ಮನೆಯಲ್ಲಿ ಸಂತಸದ ವಾತಾವರಣ ಇರುವುದು. ಶುಭ ಸಂಖ್ಯೆ: 2

ಧನು: ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದದಲ್ಲಿ ಅಪೇಕ್ಷಿತ ಲಾಭ ದೊರೆಯುವುದು. ವಿದೇಶ ಪ್ರಯಾಣದ ಯೋಗವಿದೆ. ಶುಭ ಸಂಖ್ಯೆ: 8

ಮಕರ: ಆರೋಗ್ಯಪೂರ್ಣತೆ, ಪ್ರಸನ್ನತೆ ಇರುವುದು. ಎಲ್ಲ ಕಾರ್ಯಗಳೂ ತಮ್ಮ ಮನಸ್ಸಿನಂತೆ ನಡೆಯುವವು. ಧನಲಾಭ, ಧಾರ್ಮಿಕ ಕಾರ್ಯ, ದೇವತಾ ಕ್ಷೇತ್ರ ದರ್ಶನ ಯೋಗವಿರುವದು. ವ್ಯಾಪಾರ ಸಾಧಾರಣ. ಶುಭ ಸಂಖ್ಯೆ: 3

ಕುಂಭ: ಮಹತ್ತರ ಯೋಜನೆಗಳು ಕಾರ್ಯಗತವಾಗಲು ಪ್ರಾಜ್ಞರ ಮಾರ್ಗದರ್ಶನ. ಜೀವನದ ಏಳಿಗೆಗೆ ಚಿಂತನೆ. ಕೆಲಸದ ನಡುವೆ ಮತ್ತೊಂದು ಕಾರ್ಯ ವಹಿಸಿಕೊಳ್ಳಲು ಚೈತನ್ಯ. ಮಹಿಳೆಯರು ಪಶ್ಚಾತಾಪಕ್ಕೆ ಅವಕಾವಿಲ್ಲದಂತೆ ನಡೆದುಕೊಳ್ಳುವುದು ಒಳಿತು. ಶುಭ ಸಂಖ್ಯೆ: 7

ಮೀನ: ಯುವಕರಿಗೆ ನವಿರಾದ ಮಾತುಗಳಿಂದ ಸಂಗಾತಿಗಳನ್ನು ಗೆಲ್ಲುವ ಛಾತಿ. ನಿರ್ಧಾರಗಳಿಂದ ಮನ್ನಣೆ. ಯಜಮಾನನಿಗೆ ಬಲವಂತದಲ್ಲಿ ಜವಾಬ್ದಾರಿ ನಿರ್ವಹಣೆ. ವೈಯಕ್ತಿಕ ಬದುಕಿನತ್ತ ಗಮನಹರಿಸಲು ವ್ಯವಧಾನ. ಶುಭ ಸಂಖ್ಯೆ: 5

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937