AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today- ದಿನ ಭವಿಷ್ಯ; ಈ ರಾಶಿಯ ಹಿರಿಯರಿಗೆ ಅನಾರೋಗ್ಯ ಸಂಭವ

Horoscope ಸೆಪ್ಟೆಂಬರ್ 22, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯ ಹಿರಿಯರಿಗೆ ಅನಾರೋಗ್ಯ ಸಂಭವ
ದಿನ ಭವಿಷ್ಯ
TV9 Web
| Edited By: |

Updated on: Sep 22, 2021 | 7:08 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಭಾದ್ರಪದ ಮಾಸ, ವರ್ಷ ಋತು, ಕೃಷ್ಣಪಕ್ಷ, ಪಾಡ್ಯ ತಿಥಿ, ಬುಧವಾರ, ಸೆಪ್ಟೆಂಬರ್ 22, 2021. ರೇವತಿ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 12.07 ರಿಂದ ಇಂದು ಮಧ್ಯಾಹ್ನ 1.37ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.04. ಸೂರ್ಯಾಸ್ತ: ಸಂಜೆ 6.12

ತಾ.22-09-2021 ರ ಬುಧವಾರದ ರಾಶಿಭವಿಷ್ಯ.

ಮೇಷ: ನೆನೆಗುದಿಗೆ ಬಿದ್ದ ಕೆಲಸಗಳಿಗೆ ಚಾಲನೆ ದೊರೆಯುವುದು. ಮಾನಸಿಕ ಉತ್ಸಾಹ ಕಂಡುಬರುವುದು. ಆತ್ಮೀಯರಿಗೆ ಉನ್ನತ ಅಧಿಕಾರ ದೊರೆಯುವುದು. ಕಾರಣಾಂತರ ಅಧಿಕ ಖರ್ಚುಬರಬಹುದು. ಶುಭ ಸಂಖ್ಯೆ: 6

ವೃಷಭ: ಹಿರಿಯರಿಗೆ ಅನಾರೋಗ್ಯ ಸಂಭವ. ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಉದ್ಯೋಗ ಬದಲಿ ಮಾಡುವುದು ಸದ್ಯಕ್ಕೆ ಬೇಡ. ಹಣಕಾಸಿನ ವಿಷಯದಲ್ಲಿ ಬಂಧುಗಳು ಸಹಕಾರ ತೋರುವರು. ಶುಭ ಸಂಖ್ಯೆ: 9

ಮಿಥುನ: ಶುಭ ಕರ್ಮ ಸಂಪ್ರಾಪ್ತಿಯಿದ್ದು, ಗುರುವರ್ಗ ಸಂತೋಷ, ಸಂಸಾರ ಸುಖ. ನೂತನ ಮಿತ್ರಭೇಟಿ, ಅರ್ಥಾರ್ಜನೆಯು ಉತ್ತಮವಿದೆ. ಆದರೂ ಗೃಹಕಲಹ, ಬಂಧು ಜನರಲ್ಲಿ ಅಸಮಾಧಾನ ಕಂಡುಬರುವುದು. ಶುಭ ಸಂಖ್ಯೆ: 1

ಕಟಕ: ಯೋಜನೆಗಳಿಗೆ ಪೂರ್ವ ತಯಾರಿ ಮಾಡುವ ಅಗತ್ಯತೆ ಕಂಡುಬರುವುದು. ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವುದು ಒಳಿತು. ಶುಭ ಸಂಖ್ಯೆ: 8

ಸಿಂಹ: ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ಶುಭ ಸಂಖ್ಯೆ: 3

ಕನ್ಯಾ: ಒಂದೇ ಮನಸಿನ ಕ್ರೀಯಾಶೀಲವಾದ ಬದುಕು ಸಾಧನೆಗೆ ಕಾರಣವಾಗುವುದು. ಅಡೆತಡೆಗಳ ನಿವಾರಣೆ ಯಾಗುವದು. ನಿಶ್ಚಿತ ಅವಧಿಯ ಪರೀಕ್ಷೆಗಳು ಎದುರಾದರೂ ಬಲಗುಂದುವದಿಲ್ಲ. ಹಿರಿಯರ ಸಲಹೆ ದೊರೆಯುವುದು. ಶುಭ ಸಂಖ್ಯೆ: 4

ತುಲಾ: ಭವಿಷ್ಯತ್ತಿನ ಉಪೇಕ್ಷೆ ಮಾಡದೇ ಉಳಿತಾಯಕ್ಕೆ ಗಮನಹರಿಸಿರಿ. ಆಪತ್ತುಗಳ ಪರಿಹಾರಕ್ಕಾಗಿ ವ್ಯಥಾ ತಿರುಗಾಟದ ಸಂಭವವಿದೆ. ಹಿರಿಯರ ಸಲಹೆಗೆ ತಕ್ಕಂತೆ ಮುಂದುವರೆಯಿರಿ. ಶುಭ ಸಂಖ್ಯೆ: 8

ವೃಶ್ಚಿಕ: ಹಣಕಾಸಿನ ವ್ಯವಹಾರದಲ್ಲಿ ಧ್ಯರ್ಯದಿಂದ ಕಾರ್ಯ ಸಾಧನೆ. ಅಪೇಕ್ಷಸದ ಲಾಭ ಸಂಭವ. ಗಡಿಬಿಡಿಯ ವಾತಾವತರಣ, ಬಿಡುವಿಲ್ಲದ ಕಾರ್ಯ, ಮಿತ್ರರೊಂದಿಗೆ ಜಟಾಪಟಿ ಸಂಭವ, ದೀಪದಾನ ಮಾಡಿರಿ. ಶುಭ ಸಂಖ್ಯೆ: 6

ಧನು: ಆತ್ಮೀಯರೊಂದಿಗೆ ಮನಸ್ತಾಪ ವಾಗುವ ಯೋಗವಿದೆ. ಸ್ವಂತ ಉದ್ಯಮಿಗಳು ಹಾನಿ ತಪ್ಪಿಸುವ ಉಪಾಯ ಮಾಡಿ. ವ್ಯಾಪಾರದ ವಿಷಯದಲ್ಲಿ ಮೋಸವಾಗುವ ಸಾಧ್ಯತೆ ಇದೆ. ಸಾಲಗಾರರು ಸಹಕಾರ ತೋರುವರು. ಶುಭ ಸಂಖ್ಯೆ: 5

ಮಕರ: ಅನವಶ್ಯಕ ಅಲೆದಾಟದ ಸಾದ್ಯತೆ ಇದೆ. ಕರ್ತವ್ಯಕ್ಕೆ ಚ್ಯುತಿಯಾಗದಂತೆ ನಡೆದುಕೊಳ್ಳಲು ಪ್ರಯತ್ನ ಮಾಡುವಿರಿ. ಹಿತಶತ್ರುಗಳಿಂದ ತೊಂದರೆಯಾಗುವ ಸಾಧ್ಯತೆ ಇದೆ. ಆರ್ಥಿಕಬಲ ಕುಗ್ಗುವ ಸಂಭವವಿದೆ. ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಶುಭ ಸಂಖ್ಯೆ: 2

ಕುಂಭ: ಕೆಲಸದಲ್ಲಿ ಅಭಿವೃದ್ಧಿ ಇದೆ. ಹಣಕಾಸಿನ ವ್ಯವಹಾರವನ್ನು ತಾಳ್ಮೆಯಿಂದ ನಿಭಾಯಿಸಿ. ಮನೆಯಲ್ಲಿ ಸಂಭ್ರಮದ ವಾತಾವರಣ ಇರುವುದು. ಮಂಗಲ ಕಾರ್ಯ ಜರುಗುವವು. ಶುಭ ಸಂಖ್ಯೆ: 9

ಮೀನ: ಸಮಾಧಾನಕರ ಜೀವನವಿದೆ. ಅಧಿಕಾರಿಗಳ ಸಹಕಾರ ದೊರೆಯುವದು. ಮನೆ ಕಟ್ಟುವ ಆಸೆ ಕೈಗೂಡುವ ಸಮಯ. ಬಂಧುಮಿತ್ರರ ಹಾರೈಕೆ ತಮ್ಮೊಂದಿಗಿದೆ. ದೂರಪ್ರಯಾಣ ಯೋಗವಿದೆ. ಶುಭ ಸಂಖ್ಯೆ: 7

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ