AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ

Horoscope ಸೆಪ್ಟೆಂಬರ್ 24, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ
ದಿನ ಭವಿಷ್ಯ
TV9 Web
| Edited By: |

Updated on: Sep 24, 2021 | 6:42 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಭಾದ್ರಪದ ಮಾಸ, ವರ್ಷ ಋತು, ಕೃಷ್ಣಪಕ್ಷ, ತದಿಗೆ ತಿಥಿ, ಶುಕ್ರವಾರ, ಸೆಪ್ಟೆಂಬರ್ 24, 2021. ಅಶ್ವಿನಿ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 10.37 ರಿಂದ ಇಂದು ಬೆಳಿಗ್ಗೆ 12.07ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.05. ಸೂರ್ಯಾಸ್ತ: ಸಂಜೆ 6.11

ತಾ.24-09-2021 ರ ಶುಕ್ರವಾರದ ರಾಶಿಭವಿಷ್ಯ ಮೇಷ: ದೂರಾಲೋಚನೆಯಿಂದ ಕಾರ್ಯದಲ್ಲಿ ಯಶಸ್ಸು. ಆಸ್ತಿ ಖರೀದಿ ಸಾಧ್ಯ. ವೈವಾಹಿಕ ಚಿಂತೆ ಇರುವುದು. ಧಾರ್ಮಿಕ ಸಮಾರಂಭಗಳಲ್ಲಿ ಭಾಗಿಯಾಗುವ ಯೋಗವಿದೆ. ಧಾರ್ಮಿಕ ಕ್ಷೇತ್ರಗಳ ದರ್ಶನ ಯೋಗವಿದೆ. ಶುಭ ಸಂಖ್ಯೆ: 5

ವೃಷಭ: ವ್ಯಕ್ತಿತ್ವಕ್ಕೆ ತಕ್ಕ ಗೌರವಗಳು ದೊರೆಯುವವು. ಚಾಣಾಕ್ಷತನದಿಂದ ಕಷ್ಟ ಪರಿಹರಿಸಿಕೊಳ್ಳುವಿರಿ. ಅಪೇಕ್ಷಿತ ಕಾರ್ಯಗಳು ಕೈಗೂಡುವವು. ಸಂಭಂಧಿಗಳಿಂದ ಸಹಕಾರ ದೊರೆಯುವುದು. ದೂರ ಪ್ರಯಾಣ, ಪರಸ್ಥಳವಾಸ ಸಂಭವ. ಶುಭ ಸಂಖ್ಯೆ: 9

ಮಿಥುನ: ವಿವಿಧ ಮೂಲಗಳಿಂದ ಸಹಾಯ ದೊರೆಯುವುದು. ಉದ್ಯೋಗದಲ್ಲಿ ಅಭಿವೃದ್ಧಿ ಇರುವುದು. ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸುವಿರಿ. ಲೆಕ್ಕಾಚಾರ ತಪ್ಪದಂತೆ ಎಚ್ಚರವಹಿಸಿರಿ. ಮನೆಯಲ್ಲಿ ಮಂಗಲಕಾರ್ಯ ಜರುಗುವುದು. ಶುಭ ಸಂಖ್ಯೆ: 1

ಕಟಕ: ಹೊಸ ಕೆಲಸವನ್ನು ಒಪ್ಪಿಕೊಳ್ಳುವ ಮೊದಲು ವಿಚಾರಮಾಡಿ ಮುಂದುವರೆಯಿರಿ. ಉದ್ಯೋಗದ ಸ್ಥಾನ ಬದಲಾವಣೆಯ ಯೋಗವಿದೆ. ಆಮಿಷಕ್ಕೆ ಒಳಗಾಗಿ ಮೋಸಹೋಗುವ ಸಂಭವವಿದೆ. ಎಚ್ಚರಿಕೆ ವಹಿಸಿರಿ. ಶುಭ ಸಂಖ್ಯೆ: 2

ಸಿಂಹ: ವಿನಯಪೂರ್ವಕ ಕಾರ್ಯ ಸಾಧಿಸುವಿರಿ. ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗುವಿರಿ. ವಿವಿಧ ಮೂಲದಿಂದ ಧನಪ್ರಾಪ್ತಿ ಯೋಗವಿದೆ. ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಯೋಗವಿದೆ. ವಾಹನ ಖರೀದಿ ಯೋಗವಿರುವುದು. ಶುಭ ಸಂಖ್ಯೆ: 8

ಕನ್ಯಾ: ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ವಿವಿಧ ಮೂಲಗಳಿಂದ ಸಹಾಯ ದೊರೆಯುವುದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ. ಶುಭ ಸಂಖ್ಯೆ: 3

ತುಲಾ: ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವವು. ಅಪೇಕ್ಷಿತ ಧನಸಹಾಯ ದೊರೆಯುವುದು. ಶುಭ ಸಂಖ್ಯೆ: 4

ವೃಶ್ಚಿಕ: ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವುದು. ಮನೋಚಿಂತಿತ ಕಾರ್ಯ ಕೈಗೂಡುವುದು. ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವುದು. ಪರರ ಸಹಾಯದ ಅನಿವಾರ್ಯತೆ ಇರಲಾರದು. ಆರೋಗ್ಯದ ಕಾಳಜಿ ಇರಲಿ. ಶುಭ ಸಂಖ್ಯೆ: 7

ಧನು: ಹಿರಿಯರಿಗೆ ಅನಾರೋಗ್ಯ ಸಂಭವ. ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಉದ್ಯೋಗ ಬದಲಿ ಮಾಡುವುದು ಸದ್ಯಕ್ಕೆ ಬೇಡ. ಹಣಕಾಸಿನ ವಿಷಯದಲ್ಲಿ ಬಂಧುಗಳು ಸಹಕಾರ ತೋರುವರು. ಶುಭ ಸಂಖ್ಯೆ: 5

ಮಕರ: ಕೆಲಸ ಹೆಚ್ಚಿನ ಬದ್ಧತೆ ತೋರಿಸುವ ಅವಶ್ಯಕತೆ ಕಂಡುಬರುವುದು. ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವದು. ವಾದ-ವಿವಾದ, ಹಠಸಾಧನೆ ಬೇಡ. ಶುಭ ಸಂಖ್ಯೆ: 2

ಕುಂಭ: ಆರಂಭದಲ್ಲಿ ಹರ್ಷ, ಉತ್ಸಾಹ ಇರುವುದು ಕೊನೆಗೆ ಮನೋವ್ಯಥೆ. ಮನೆಯಲ್ಲಿ ಸಂತೋಷದ ವಾತಾವರಣ ಇರುವದು. ಗ್ರಹೋಪಯೋಗಿ ವಸ್ತುಗಳ ಖರೀದಿ, ಮನೆ ರಿಪೇರಿ ಮೊದಲಾದ ಕೆಲಸಗಳಾಗುವವು. ಶ್ರೀಲಕ್ಷ್ಮೀಸ್ತೋತ್ರ ಪಠಿಸಿರಿ. ಶುಭ ಸಂಖ್ಯೆ: 6

ಮೀನ: ಹೊಸ ಯೋಜನೆಗಳು ಬೇಡ. ಸ್ಥಳಾಂತರ, ವರ್ಗಾವಣೆ, ಮನೆ ಬದಲಿ, ಅಧಿಕಾರಿ ವರ್ಗದವರಿಂದ ಕಿರಿಕಿರಿ ಇರುವುದು. ಕೊಟ್ಟ ಸಾಲ ಮರುಪಾವತಿ ಆಗಲಾರದು, ವ್ಯಾಪರಿಗಳಿಗೆ ವ್ಯವಹಾರಿಕ ತೊಂದರೆ ಆಗುವ ಸಧ್ಯತೆ ಇದೆ. ಶುಭ ಸಂಖ್ಯೆ: 5

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು