Horoscope Today- ದಿನ ಭವಿಷ್ಯ; ಕನ್ಯಾ ರಾಶಿಯವರಿಗೆ ಅನಾವಶ್ಯಕ ತಿರುಗಾಟದಿಂದ ಆಲಸ್ಯ ಉಂಟಾಗಲಿದೆ

| Updated By: Vinay Bhat

Updated on: Sep 25, 2021 | 6:35 AM

Horoscope ಸೆಪ್ಟೆಂಬರ್ 25, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಕನ್ಯಾ ರಾಶಿಯವರಿಗೆ ಅನಾವಶ್ಯಕ ತಿರುಗಾಟದಿಂದ ಆಲಸ್ಯ ಉಂಟಾಗಲಿದೆ
ದಿನ ಭವಿಷ್ಯ
Follow us on

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಭಾದ್ರಪದ ಮಾಸ, ವರ್ಷ ಋತು, ಕೃಷ್ಣಪಕ್ಷ, ಚೌತಿ ತಿಥಿ, ಶನಿವಾರ, ಸೆಪ್ಟೆಂಬರ್ 25, 2021. ಭರಣಿ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 9.06 ರಿಂದ ಇಂದು ಬೆಳಿಗ್ಗೆ 10.36ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.05. ಸೂರ್ಯಾಸ್ತ: ಸಂಜೆ 6.10

ತಾ.25-09-2021 ರ ಶನಿವಾರದ ರಾಶಿಭವಿಷ್ಯ.

ಮೇಷ: ಹಳೆಯ ಸಾಲ ಮರುಪಾವತಿಯಾಗುವುದು. ಬೇಡವಾದ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಂಭವವಿದೆ. ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಅತೀ ವಿಶ್ವಾಸಿಕರೇ ಎದುರಾಡುವ ಸಂಭವವಿದೆ. ಶುಭ ಸಂಖ್ಯೆ: 4

ವೃಷಭ: ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸುವಿರಿ. ಕಠಿಣ ಪರಿಸ್ಥಿತಿಯಲ್ಲಿಯೂ ದುರ್ಲಬ ಸಾಧನೆ ಮಾಡುವಿರಿ. ಪರಿವಾರದಲ್ಲಿ ಸಂತಸವಿರುವುದು. ಕೇಡುಬಯಸುವ ಜನರಿಗೆ ಅಂಜದೇ ಮುಂದುವರಿಯಿರಿ. ಶುಭ ಸಂಖ್ಯೆ: 9

ಮಿಥುನ: ವ್ಯವಹಾರಿಕ ಅಭಿವೃದ್ಧಿ ಇರುವುದು. ನಿಂತ ಕೆಲಸಗಳು ಮುಂದುವರೆಯುವವು. ಕಠಿಣ ಪರಿಶ್ರಮದಿಂದ ಕೆಲಸ ಕೈಗೂಡುವುದು. ಹಾನಿಯ ಪ್ರಮಾಣ ಕಡಿಮೆಯಾಗುವುದು. ಶುಭ ಸಂಖ್ಯೆ: 3

ಕಟಕ: ಮಹತ್ವಾಕಾಂಕ್ಷೆಗೆ ಪೂರಕವಾದ ವಾತಾವರಣ ಇರುವುದು. ಬಂಧುಮಿತ್ರರ ಸಹಕಾರ ದೊರೆಯುವದು. ಉದ್ಯೋಗದಲ್ಲಿ ಪ್ರಗತಿ ಕಂಡುಬರುವದು. ಮನೆಯಲ್ಲಿ ಸಂತಸ ಮೂಡುವುದು. ಶುಭಕಾರ್ಯಗಳು ಜರುಗುವವು. ಶುಭ ಸಂಖ್ಯೆ: 7

ಸಿಂಹ: ಶತ್ರುಗಳ ಉಪಟಳವು ಆಗಾಗ ಕಂಡುಬಂದರೂ ಧೈರ್ಯದಿಂದ ಕಾರ್ಯ ಸಾಧಿಸುವಿರಿ. ಇಷ್ಟಸಿದ್ಧಿಯ ಕಾಲ ಇರುವದರಿಂದ ಅನೇಕ ರೀತಿಯ ಭೋಗಭಾಗ್ಯಗಳು ಕೂಡಿಬರಲಿವೆ. ಸಾಂಸಾರಿಕ ಸಮಸ್ಸಯೆಗಳು ಪರಿಹಾರವಾಗುವವು. ಶುಭ ಸಂಖ್ಯೆ: 2

ಕನ್ಯಾ: ಅನಾವಶ್ಯಕ ತಿರುಗಾಟದಿಂದ ಆಲಸ್ಯ. ದುರ್ಜನರ ಸಹವಾಸ ದೋಷ ಕಂಡುಬರುವದು. ಐಷಾರಾಮಿ ವಸ್ತುಗಳ ಖರೀದಿ ಸಂಭವ. ವ್ಯಾಪಾರ-ಉದ್ಯಮಗಳಲ್ಲಿ ತೃಪ್ತಿದಾಯಕ ಲಾಭವಿರುವದು. ವಿದ್ಯಾರ್ಥಿಗಳಿಗೆ ಹಿನ್ನಡೆ ಇರುವುದು. ಶುಭ ಸಂಖ್ಯೆ: 8

ತುಲಾ: ಆಶೆ ಆಕಾಂಕ್ಷಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವದು. ಸಹೋದರ ಸಹಕಾರ ತೋರುವದರಿಂದ ನಿರಾತಂಕವಾಗಿ ಕಾರ್ಯ ಪೂರ್ಣವಾಗುವದು. ಮನೆಯಲ್ಲಿ ಸಂತಸದ ವಾತಾವರಣ ಇರುವುದು. ಶುಭ ಸಂಖ್ಯೆ: 6

ವೃಶ್ಚಿಕ: ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವವು. ಅಪೇಕ್ಷಿತ ಧನಸಹಾಯ ದೊರೆಯುವುದು. ಶುಭ ಸಂಖ್ಯೆ: 6

ಧನು: ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವದು. ಸಂಗಡಿಗರು ಸಹಕಾರ ತೋರುವದರಿಂದ ನಿರಾತಂಕ ಜೀವನ ಇರುವದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವದು. ಆರ್ಥಿಕ ಸಂಕಷ್ಟ ದೂರಾಗುವುದು. ಶುಭ ಸಂಖ್ಯೆ: 8

ಮಕರ: ವ್ಯಾಪಾರದಲ್ಲಿ ಪ್ರಗತಿ ಇರುವದು. ವೈವಾಹಿಕ ತೊಂದರೆಗಳು ಪರಿಹಾರವಾಗುವವು. ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಮನೆಯಲ್ಲಿ ಸಂತಸದ ವಾತಾವರಣ ಇರುವುದು. ಶುಭ ಸಂಖ್ಯೆ: 1

ಕುಂಭ: ಅಲ್ಪ ತೃಪ್ತಿ, ವ್ಯಾಪಾರದಲ್ಲಿ ನಿರಾಸಕ್ತಿ, ಅಪೇಕ್ಷಿತ ಕೆಲಸಗಳು ನೆರವೇರುವವು, ಧನಲಾಭ, ವಿದ್ಯಾರ್ಥಗಳು, ಶಿಕ್ಷಕರು ಹಾಗೂ ಹಿರಿಯರಿಗೆ ಕೀರ್ತಿದಾಯಕ. ಆಲಸ್ಯದಿಂದ ತೊಂದರೆ ಇರುವದು ಗುರುಸ್ತೋತ್ರ ಪಾರಾಯಣ ಮಾಡಿರಿ. ಶುಭ ಸಂಖ್ಯೆ: 5

ಮೀನ: ಯುವಕರಿಗೆ ನವಿರಾದ ಮಾತುಗಳಿಂದ ಸಂಗಾತಿಗಳನ್ನು ಗೆಲ್ಲುವ ಛಾತಿ.
ನಿರ್ಧಾರಗಳಿಂದ ಮನ್ನಣೆ. ಯಜಮಾನನಿಗೆ ಬಲವಂತದಲ್ಲಿ ಜವಾಬ್ದಾರಿ ನಿರ್ವಹಣೆ. ವೈಯಕ್ತಿಕ ಬದುಕಿನತ್ತ ಗಮನಹರಿಸಲು ವ್ಯವಧಾನ. ಶುಭ ಸಂಖ್ಯೆ: 3

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ . ಸಂಪರ್ಕ ಸಂಖ್ಯೆ: 9972848937