Horoscope Today- ದಿನ ಭವಿಷ್ಯ; ಮೀನ ರಾಶಿಯವರಿಗೆ ಮದುವೆಯ ಮಾತುಕತೆ ಕೈಗೂಡುವ ಸಾಧ್ಯತೆ ಇದೆ

| Updated By: ಆಯೇಷಾ ಬಾನು

Updated on: Sep 28, 2021 | 6:56 AM

Horoscope ಸೆಪ್ಟೆಂಬರ್ 28, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಮೀನ ರಾಶಿಯವರಿಗೆ ಮದುವೆಯ ಮಾತುಕತೆ ಕೈಗೂಡುವ ಸಾಧ್ಯತೆ ಇದೆ
ದಿನ ಭವಿಷ್ಯ
Follow us on

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಭಾದ್ರಪದ ಮಾಸ, ವರ್ಷ ಋತು, ಕೃಷ್ಣಪಕ್ಷ, ಸಪ್ತಮಿ ತಿಥಿ, ಮಂಗಳವಾರ, ಸೆಪ್ಟೆಂಬರ್ 28, 2021. ಮೃಗಶಿರ ನಕ್ಷತ್ರ, ರಾಹುಕಾಲ: ಇಂದು ಸಂಜೆ 3.06 ರಿಂದ ಇಂದು ಸಂಜೆ 4.36ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.05. ಸೂರ್ಯಾಸ್ತ: ಸಂಜೆ 6.07

ತಾ.28-09-2021 ರ ಮಂಗಳವಾರದ ರಾಶಿಭವಿಷ್ಯ.

ಮೇಷ: ಭಾವುಕತೆಯಿಂದ ಕಾರ್ಯಸಾಧಿಸಲು ಪ್ರಯತ್ನಿಸುವಿರಿ. ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಸಂಶಯಿತ ನಡೆಯಿಂದ ಮನಸ್ತಾಪ. ಸಣ್ಣಪುಟ್ಟ ಕೆಲಸಗಳೂ ವಿಳಂಬವಾಗುವ ಸಾಧ್ಯತೆ ಇದೆ. ಅಭದ್ರತೆ ಕಾಡುವುದು. ಶುಭ ಸಂಖ್ಯೆ: 8

ವೃಷಭ: ಕೆಲಸಕ್ಕೆ ತಕ್ಕ ಪ್ರೋತ್ಸಾಹ ದೊರೆಯುವುದು. ಶಾಂತಿ,ನೆಮ್ಮದಿಯುಕ್ತ ಜೀವನ ಇರುವುದು. ನಡೆಯುತ್ತಿರುವ ದಾರಿ ಸರಿಯಾಗಿ ಇರುವುದರಿಂದ ಗುರಿ ಮುಟ್ಟುವದು ನಿಶ್ಚಿತ. ಆರ್ಥಿಕ ಸ್ಥಿತಿ ಉತ್ತಮವಾಗಿ ಇರುವುದು. ಶುಭ ಸಂಖ್ಯೆ: 2

ಮಿಥುನ: ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ವ್ಯವಹಾರದಲ್ಲಿ ಅಡೆತಡೆಗಳು ಕಂಡುಬರುವವು. ಅನಿವಾರ್ಯ ಕೆಲಸಗಳಗೆ ಅಲೆದಾಟ ಕಂಡುಬರುವುದು. ಆರ್ಥಿಕ ಸ್ಥಿತಿ ಉತ್ತಮವಾಗಿ ಇರುವುದು. ಶುಭ ಸಂಖ್ಯೆ: 7

ಕಟಕ: ಅಪೇಕ್ಷಿಸಿದ ಕಾರ್ಯಗಳು ನಿರ್ವಿಘ್ನವಾಗಿ ಪೂರ್ಣಗೊಳ್ಳುವವು ಆಸ್ತಿ ವಿವಾದ ಸೃಜನರ ಅತೃಪ್ತಿ ಮುಂತಾದ ಕಲಹಗಳು ಪರಿಹಾರವಾಗಿ ಸುಖ, ಸಂತೃಪ್ತಿಯ ಯೋಗವಿದೆ. ವಿದ್ಯಾರ್ಥಿಗಳು ಉನ್ನತ ಮಟ್ಟದ ಫಲಿತಾಂಶವನ್ನು ಹೊಂದುವರು.ಸಭಾಸಮಾಜ ಕೀರ್ತಿ ಲಭಿಸುವುದು. ಶುಭ ಸಂಖ್ಯೆ: 3

ಸಿಂಹ: ಎಲ್ಲವನ್ನು ಹಗುರವಾಗಿ ಕಾಣುವುದರಿಂದ ಸಣ್ಣ ವಿಷಯವೂ ದೊಡ್ಡ ಸಮಸ್ಯೆಯಾಗುವುದು. ಹಣಕಾಸಿನ ತೊಂದರೆಗಳು ಕಂಡುಬರುವವು. ಮಹತ್ವದ ಕೆಲಸಗಳು ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ. ಎಚ್ಚರಿಕೆ ವಹಿಸಿರಿ. ಶುಭ ಸಂಖ್ಯೆ: 6

ಕನ್ಯಾ: ಯೋಜನಾಬದ್ಧ ಕೆಲಸಗಳೂ ಕೂಡ ಮುಂದೂಡುವ ಪ್ರಸಂಗವಿದೆ. ಆಪ್ತವಲಯದಲ್ಲಿ ಸಮಾಲೋಚಿಸಿರಿ. ಅನಿವಾರ್ಯ ಕರ್ತವ್ಯಗಳಿಗೆ ಸಮಯ ಹೊಂದಾಣಿಕೆ ಮಾಡುವ ಸಾಧ್ಯತೆ ಇದೆ. ಆರ್ಥಕ ಸಂಕಷ್ಟಗಳು ಎದುರಾಗುವವು. ಶುಭ ಸಂಖ್ಯೆ: 5

ತುಲಾ: ಶತ್ರುಗಳ ಉಪಟಳವು ಆಗಾಗ ಕಂಡುಬಂದರೂ ಧೈರ್ಯದಿಂದ ಕಾರ್ಯ ಸಾಧಿಸುವಿರಿ. ಇಷ್ಟಸಿದ್ಧಿಯ ಕಾಲ ಇರುವುದರಿಂದ ಅನೇಕ ರೀತಿಯ ಭೋಗಭಾಗ್ಯಗಳು ಕೂಡಿಬರಲಿವೆ. ಸಾಂಸಾರಿಕ ಸಮಸ್ಯೆಗಳು ಪರಿಹಾರವಾಗುವವು. ಶುಭ ಸಂಖ್ಯೆ: 9

ವೃಶ್ಚಿಕ: ವ್ಯವಹಾರಿಕ ಸಂಪರ್ಕಗಳು ಹೆಚ್ಚುವವು ಅದರಂತೆ ಧನದ ಮೂಲಗಳೂ ಹೆಚ್ಚುವವು. ಸಾಲ ಮರುಪಾವತಿಯಾಗುವುದು. ಮನೆಯಲ್ಲಿ ನೆಮ್ಮದಿ ಇರುವುದು. ಅವಿವಾಹಿತರಿಗೆ ಕಂಕಣಬಲ ಕೂಡಿಬರುವುದು. ಶುಭ ಸಂಖ್ಯೆ: 4

ಧನು: ಮನೆ, ನಿವೇಶನ, ಆಸ್ತಿ ಖರೀದಿ ಯೋಗವಿದೆ. ವ್ಯವಹಾರದಲ್ಲಿ ಜಾಗ್ರತೆ ಇರಲಿ. ವ್ಯಾಪಾರ ಉತ್ತಮವಾಗಿರುವುದು. ಉತ್ಸಾಹ ಮೂಡುವುದು. ದೋಷ ಪರಿಹಾರಕ್ಕೆ ಜಲದಾನ ಮಾಡಿರಿ. ಶುಭ ಸಂಖ್ಯೆ: 2

ಮಕರ: ಅತಿಯಾದ ಆತ್ಮವಿಶ್ವಾಸ, ಆಲಸ್ಯದಿಂದ ಬಹುವಿಧವಾದ ಕಷ್ಟನಷ್ಟಗಳ ಅನುಭವವಾಗುವುದು. ಸಹನೆಯಿಂದ ವ್ಯವಹರಿಸಿರಿ. ಗುರುಬಲ ವೃದ್ಧಿಸುವುದು. ಮದುವೆಯ ಸಂಭ್ರಮದ ವಾತಾವರಣ ಕಂಡುಬರುವುದು. ಹಿರಿಯರ ಮಾತಿನಂತೆ ನಡಯುವುದು ಉತ್ತಮ. ಶುಭ ಸಂಖ್ಯೆ: 1

ಕುಂಭ: ವ್ಯಾಪಾರದಲ್ಲಿ ಅಭಿವೃದ್ಧಿಯಾಗುವುದು. ಆರ್ಥಿಕ ಸಂಕಷ್ಟಗಳು ಪರಿಹಾರವಾಗುವವು. ಮಹಿಳೆಯರಿಗೆ ಹೆಚ್ಚಿನ ಉನ್ನತಿ ಕಂಡುಬರುವುದು. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ. ಶುಭ ಸಂಖ್ಯೆ: 8

ಮೀನ: ಹಿರಿಯರ ಮಾರ್ಗದರ್ಶನ ದೊರೆಯಲಿದೆ. ಆತ್ಮೀಯರೊಂದಿಗೆ ವಾದವಿವಾದ ಮಾಡಬೇಡಿ. ಮದುವೆಯ ಮಾತುಕತೆ ಕೈಗೂಡುವ ಸಾಧ್ಯತೆ ಇದೆ. ವ್ಯವಹಾರಿಕ ಜಾಣತನದಿಂದ ಲಾಭವಾಗಲಿದೆ. ಮನೆಯಲ್ಲಿ ಸಂತಸ ಕಂಡುಬರುವುದು. ಶುಭ ಸಂಖ್ಯೆ: 3

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಸಂಪರ್ಕ ಸಂಖ್ಯೆ: 9972848937