Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ವ್ಯಾಪಾರದಲ್ಲಿ ಅಭಿವೃದ್ಧಿಯಾಗುವುದು

Horoscope ಸೆಪ್ಟೆಂಬರ್ 29, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ವ್ಯಾಪಾರದಲ್ಲಿ ಅಭಿವೃದ್ಧಿಯಾಗುವುದು
ದಿನ ಭವಿಷ್ಯ
Follow us
TV9 Web
| Updated By: ಆಯೇಷಾ ಬಾನು

Updated on: Sep 29, 2021 | 6:52 AM

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಭಾದ್ರಪದ ಮಾಸ, ವರ್ಷ ಋತು, ಕೃಷ್ಣಪಕ್ಷ, ಅಷ್ಟಮಿ ತಿಥಿ, ಬುಧವಾರ, ಸೆಪ್ಟೆಂಬರ್ 29, 2021. ಆರ್ದ್ರೆ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 12.05 ರಿಂದ ಇಂದು ಮಧ್ಯಾಹ್ನ 1.35ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.05. ಸೂರ್ಯಾಸ್ತ: ಸಂಜೆ 6.07

ತಾ.29-09-2021 ರ ಬುಧವಾರದ ರಾಶಿಭವಿಷ್ಯ.

ಮೇಷ: ಕೆಲಸಕ್ಕೆ ತಕ್ಕ ಪ್ರೋತ್ಸಾಹ ದೊರೆಯುವುದು. ಶಾಂತಿ, ನೆಮ್ಮದಿಯುಕ್ತ ಜೀವನ ಇರುವುದು. ನಡೆಯುತ್ತಿರುವ ದಾರಿ ಸರಿಯಾಗಿ ಇರುವುದರಿಂದ ಗುರಿ ಮುಟ್ಟುವುದು ನಿಶ್ಚಿತ. ಆರ್ಥಿಕ ಸ್ಥಿತಿ ಉತ್ತಮವಾಗಿ ಇರುವುದು. ಶುಭ ಸಂಖ್ಯೆ: 9

ವೃಷಭ: ವ್ಯಾಪಾರದಲ್ಲಿ ಅಭಿವೃದ್ಧಿಯಾಗುವುದು. ಆರ್ಥಿಕ ಸಂಕಷ್ಟಗಳು ಪರಿಹಾರವಾಗುವವು. ಮಹಿಳೆಯರಿಗೆ ಹೆಚ್ಚಿನ ಉನ್ನತಿ ಕಂಡುಬರುವುದು. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ. ಶುಭ ಸಂಖ್ಯೆ: 2

ಮಿಥುನ: ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ವ್ಯವಹಾರದಲ್ಲಿ ಅಡೆತಡೆಗಳು ಕಂಡುಬರುವವು. ಅನಿವಾರ್ಯ ಕೆಲಸಗಳಗೆ ಅಲೆದಾಟ ಕಂಡುಬರುವುದು. ಆರ್ಥಿಕ ಸ್ಥಿತಿ ಉತ್ತಮವಾಗಿ ಇರುವುದು. ಶುಭ ಸಂಖ್ಯೆ: 5

ಕಟಕ: ವ್ಯವಹಾರಿಕ ಸಂಪರ್ಕಗಳು ಹೆಚ್ಚುವವು ಅದರಂತೆ ಧನದ ಮೂಲಗಳೂ ಹೆಚ್ಚುವವು. ಸಾಲ ಮರುಪಾವತಿಯಾಗುವುದು. ಮನೆಯಲ್ಲಿ ನೆಮ್ಮದಿ ಇರುವುದು. ಅವಿವಾಹಿತರಿಗೆ ಕಂಕಣಬಲ ಕೂಡಿಬರುವುದು. ಶುಭ ಸಂಖ್ಯೆ: 8

ಸಿಂಹ: ಎಲ್ಲವನ್ನು ಹಗುರವಾಗಿ ಕಾಣುವುದರಿಂದ ಸಣ್ಣ ವಿಷಯವೂ ದೊಡ್ಡ ಸಮಸ್ಯೆಯಾಗುವುದು. ಹಣಕಾಸಿನ ತೊಂದರೆಗಳು ಕಂಡುಬರುವವು. ಮಹತ್ವದ ಕೆಲಸಗಳು ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ. ಎಚ್ಚರಿಕೆ ವಹಿಸಿರಿ. ಶುಭ ಸಂಖ್ಯೆ: 6

ಕನ್ಯಾ: ಭಾವುಕತೆಯಿಂದ ಕಾರ್ಯಸಾಧಿಸಲು ಪ್ರಯತ್ನಿಸುವಿರಿ. ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಸಂಶಯಿತ ನಡೆಯಿಂದ ಮನಸ್ತಾಪ. ಸಣ್ಣಪುಟ್ಟ ಕೆಲಸಗಳೂ ವಿಳಂಬವಾಗುವ ಸಾಧ್ಯತೆ ಇದೆ. ಅಭದ್ರತೆ ಕಾಡುವುದು. ಶುಭ ಸಂಖ್ಯೆ: 3

ತುಲಾ: ಯೋಜನಾಬದ್ಧ ಕೆಲಸಗಳೂ ಕೂಡ ಮುಂದೂಡುವ ಪ್ರಸಂಗವಿದೆ. ಆಪ್ತವಲಯದಲ್ಲಿ ಸಮಾಲೋಚಿಸಿರಿ. ಅನಿವಾರ್ಯ ಕರ್ತವ್ಯಗಳಿಗೆ ಸಮಯ ಹೊಂದಾಣಿಕೆ ಮಾಡುವ ಸಾಧ್ಯತೆ ಇದೆ. ಆರ್ಥಕ ಸಂಕಷ್ಟಗಳು ಎದುರಾಗುವವು. ಶುಭ ಸಂಖ್ಯೆ: 7

ವೃಶ್ಚಿಕ: ಶತ್ರುಗಳ ಉಪಟಳವು ಆಗಾಗ ಕಂಡುಬಂದರೂ ಧೈರ್ಯದಿಂದ ಕಾರ್ಯ ಸಾಧಿಸುವಿರಿ. ಇಷ್ಟಸಿದ್ಧಿಯ ಕಾಲ ಇರುವದರಿಂದ ಅನೇಕ ರೀತಿಯ ಭೋಗಭಾಗ್ಯಗಳು ಕೂಡಿಬರಲಿವೆ. ಸಾಂಸಾರಿಕ ಸಮಸ್ಯೆಗಳು ಪರಿಹಾರವಾಗುವವು. ಶುಭ ಸಂಖ್ಯೆ: 3

ಧನು: ಹಿರಿಯರ ಮಾರ್ಗದರ್ಶನ ದೊರೆಲಿದೆ. ಆತ್ಮೀಯರೊಂದಿಗೆ ವಾದವಿವಾದ ಮಾಡಬೇಡಿ. ಮದುವೆಯ ಮಾತುಕತೆ ಕೈಗೂಡುವ ಸಾಧ್ಯತೆ ಇದೆ. ವ್ಯವಹಾರಿಕ ಜಾಣತನದಿಂದ ಲಾಭವಾಗಲಿದೆ. ಮನೆಯಲ್ಲಿ ಸಂತಸ ಕಂಡುಬರುವುದು. ಶುಭ ಸಂಖ್ಯೆ: 8

ಮಕರ: ಅತಿಯಾದ ಆತ್ಮವಿಶ್ವಾಸ, ಆಲಸ್ಯದಿಂದ ಬಹುವಿಧವಾದ ಕಷ್ಟನಷ್ಟಗಳ ಅನುಭವವಾಗುವದು. ಸಹನೆಯಿಂದ ವ್ಯವಹರಿಸಿರಿ.ಗುರುಬಲ ವೃದ್ಧಿಸುವದು. ಮದುವೆಯ ಸಂಭ್ರಮದ ವಾತಾವರಣ ಕಂಡುಬರುವದು. ಹಿರಿಯರ ಮಾತಿನಂತೆ ನಡಯುವುದು ಉತ್ತಮ. ಶುಭ ಸಂಖ್ಯೆ: 5

ಕುಂಭ: ಮನೆ, ನಿವೇಶನ, ಆಸ್ತಿ ಖರೀದಿ ಯೋಗವಿದೆ. ವ್ಯವಹಾರದಲ್ಲಿ ಜಾಗ್ರತೆ ಇರಲಿ. ವ್ಯಾಪಾರ ಉತ್ತಮವಾಗಿರುವದು. ಉತ್ಸಾಹ ಮೂಡುವದು. ದೋಷ ಪರಿಹಾರಕ್ಕೆ ಜಲದಾನ ಮಾಡಿರಿ. ಶುಭ ಸಂಖ್ಯೆ: 1

ಮೀನ: ಅಪೇಕ್ಷಿಸಿದ ಕಾರ್ಯಗಳು ನಿರ್ವಿಘ್ನವಾಗಿ ಪೂರ್ಣಗೊಳ್ಳುವವು ಆಸ್ತಿ ವಿವಾದ ಸೃಜನರ ಅತೃಪ್ತಿ ಮುಂತಾದ ಕಲಹಗಳು ಪರಿಹಾರವಾಗಿ ಸುಖ,ಸಂತೃಪ್ತಿಯ ಯೋಗವಿದೆ. ವಿದ್ಯಾರ್ಥಿಗಳು ಉನ್ನತ ಮಟ್ಟದ ಫಲಿತಾಂಶವನ್ನು ಹೊಂದುವರು.ಸಭಾಸಮಾಜ ಕೀರ್ತಿ ಲಭಿಸುವುದು. ಶುಭ ಸಂಖ್ಯೆ: 7

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಸಂಪರ್ಕ ಸಂಖ್ಯೆ: 9972848937

ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ
ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ನಾಳೆ ದೆಹಲಿಗೆ ತೆರಳುವ ಮೊದಲು ಎಲ್ಲವನ್ನೂ ಮಾತಾಡುವೆ: ಕುಮಾರಸ್ವಾಮಿ
ನಾಳೆ ದೆಹಲಿಗೆ ತೆರಳುವ ಮೊದಲು ಎಲ್ಲವನ್ನೂ ಮಾತಾಡುವೆ: ಕುಮಾರಸ್ವಾಮಿ