Horoscope Today – ದಿನ ಭವಿಷ್ಯ; ಭಾನುವಾರದ ಭವಿಷ್ಯದಲ್ಲಿ ಯಾರಿಗೆ ಒಳಿತು, ಯಾರಿಗೆ ಕೆಡುಕು?

| Updated By: Skanda

Updated on: Sep 05, 2021 | 6:41 AM

ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಶ್ರಾವಣ ಮಾಸ, ವರ್ಷ ಋತು, ಕೃಷ್ಣಪಕ್ಷ, ತ್ರಯೋದಶಿ ತಿಥಿ, ಭಾನುವಾರ, ಸೆಪ್ಟೆಂಬರ್ 05, 2021 ಭವಿಷ್ಯ.

Horoscope Today - ದಿನ ಭವಿಷ್ಯ; ಭಾನುವಾರದ ಭವಿಷ್ಯದಲ್ಲಿ ಯಾರಿಗೆ ಒಳಿತು, ಯಾರಿಗೆ ಕೆಡುಕು?
ದಿನ ಭವಿಷ್ಯ; ಭಾನುವಾರದ ಭವಿಷ್ಯದಲ್ಲಿ ಯಾರಿಗೆ ಒಳಿತು, ಯಾರಿಗೆ ಕೆಡುಕು?
Follow us on

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಶ್ರಾವಣ ಮಾಸ, ವರ್ಷ ಋತು, ಕೃಷ್ಣಪಕ್ಷ, ತ್ರಯೋದಶಿ ತಿಥಿ, ಭಾನುವಾರ, ಸೆಪ್ಟೆಂಬರ್ 05, 2021. ಆಶ್ಲೇಷ ನಕ್ಷತ್ರ, ರಾಹುಕಾಲ: ಇಂದು ಸಂಜೆ 4:53 ರಿಂದ ಇಂದು ರಾತ್ರಿ 6:26 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.02. ಸೂರ್ಯಾಸ್ತ: ಸಂಜೆ 6.27

ತಾ.05-09-2021 ರ ಭಾನುವಾರದ ರಾಶಿಭವಿಷ್ಯ.

ಮೇಷ:
ಸರಳತೆ ದುರುಪಯೋಗವಾಗದಂತೆ ನೋಡಿಕೊಳ್ಳಿ. ಉದ್ಯೋಗದಲ್ಲಿಯ ಕುಂದು ಕೊರತೆಗಳನ್ನು ನಿಭಾಯಿಸುವಿರಿ. ಮಹತ್ವದ ಅಧಿಕಾರ ದೊರೆಯುವ ಯೋಗವಿದೆ. ವ್ಯಾಪಾರದಲ್ಲಿ ಹೆಚ್ಚಿನ ಹಣ ಹೂಡಿಕೆ ಈಗ ಬೇಡ. ಶುಭ ಸಂಖ್ಯೆ: 6

ವೃಷಭ: ವ್ಯವಹಾರಿಕ ಏಳ್ಗೆ ಇರುವದು. ದೂರ ಪ್ರಯಾಣದ ಸಂಭವ. ಗುಪ್ತ ಧನ, ಲಾಟರಿ, ವ್ಯಾಪಾರದಲ್ಲಿ ಬೆಲೆಗಳ ಹೆಚ್ಚಳದಿಂದ ಲಾಭ.ವಿವಿಧ ಸೌಭಾಗ್ಯಪ್ರಾಪ್ತಿ..ಅನಾವಶ್ಯಕ ಮಾತು, ಸಿಟ್ಟು, ಅಹಂಕಾರದಿಂದ ಹಾಗೂ ಅಗ್ನಿ, ವಿದ್ಯುತ್,ವಾಹನ,ಮಶಿನರಿಗಳಿಂದ ತೊಂದರೆ. ಶುಭ ಸಂಖ್ಯೆ: 2

ಮಿಥುನ: ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ. ಶುಭ ಸಂಖ್ಯೆ: 5

ಕರ್ಕ: ಗೊಂದಲಕ್ಕೆ ಒಳಗಾಗದೇ ಮುನ್ನುಗ್ಗಿರಿ. ಕೆಲಸದಲ್ಲಿ ಸ್ಪಷ್ಟತೆ ಇರಲಿ. ಅಲ್ಪಧನಲಾಭವಾದರೂ ಹಳೆಯ ಸಾಲ ತೀರುವದು. ಹಿರಿಯರ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಇದೆ. ಶುಭ ಸಂಖ್ಯೆ: 3

ಸಿಂಹ: ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಆತ್ಮೀಯರೊಂದಿಗೆ ಮನಸ್ತಾಪವಾಗುವ ಯೋಗವಿದೆ. ಅರ್ಧಕ್ಕೆನಿಂತ ಕೆಲಸಗಳು ಮುಂದುವರೆಯುವದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಶುಭ ಸಂಖ್ಯೆ: 8

ಕನ್ಯಾ: ಸಹೋದ್ಯೋಗಿಗಳೊಂದಿಗೆ ಮನಸ್ತಾಪವಾಗುವ ಯೋಗವಿದೆ. ಅಪೂರ್ಣ ನಿರ್ಣಯಗಳು ಅಪಾಯ ತರಬಹುದು. ಅತೀ ವಿಶ್ವಾಸಿಕರೇ ಮೋಸಮಾಡುವ ಸಂಭವವಿದೆ. ದೂರ ಪ್ರಯಾಣ ಅಥವಾ ಪರಸ್ಥಳವಾಸ ಸಂಭವ. ಶುಭ ಸಂಖ್ಯೆ: 4

ತುಲಾ: ಕಾಯಕನಿಷ್ಠೆ ನಿಮಗೇ ಹೊರೆಯಾಗದಂತೆ ನೋಡಿಕೊಳ್ಳಿರಿ. ನಿರಂತರ ದುಡಿಮೆಯಿಂದ ಅನಾರೋಗ್ಯ ಅಥವಾ ಮಾನಸಿಕ ಕಿರಿಕಿರಿ ಆಗುವ ಸಂಭವವಿದೆ. ಹಣಕಾಸಿನಿನ ವ್ಯವಹಾರದಲ್ಲಿ ಎಚ್ಚರಿಕೆವಹಿಸಿರಿ. ಶುಭ ಸಂಖ್ಯೆ: 1

ವೃಶ್ಚಿಕ: ಕೆಲಸದಲ್ಲಿ ತಾಳ್ಮೆ ಇರಲಿ. ಅನಿರ್ದಿಷ್ಟ ಉದ್ಯೋಗ, ಕೆಲಸದ ವಿಷಯದಲ್ಲಿ ಗೊಂದಲ ಮೂಡುವ ಸಾಧ್ಯತೆ ಇದೆ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ವ್ಯಾಪಾರಿಗಳಿಗೆ ಆರ್ಥಿಕ ತೊಂದರೆ ಆಗುವ ಯೋಗವಿದೆ. ಶುಭ ಸಂಖ್ಯೆ: 7

ಧನು: ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವದು ಒಳಿತು. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ. ಶುಭ ಸಂಖ್ಯೆ: 4

ಮಕರ: ಏಕಾಂಗಿತನದ ಬೇಸರ ಪರಿಸರದಿಂದ ಹೊರಬಂದು ಹೊಸಬರೊಂದಿಗೆ ಬಾಳುವ ಸಂಕಲ್ಪ. ನಿರಾಕರಿಸಿದ್ದ ಜವಾಬ್ದಾರಿ ಪುನ: ಸುಪರ್ದಿಗೆ ಬಂದು ಮೆಚ್ಚುಗೆಯಾಗಿ ನಿಭಾವಣೆ. ಬಾಳ ಸಂಗಾತಿ ಜತೆಗಿನ ಚಿಕ್ಕ ಪುಟ್ಟ ಚರ್ಚೆಗಳೇ ಮುಂದೆ ವಿರಸಕ್ಕೆ ದಾರಿಯಾದೀತು. ಶುಭ ಸಂಖ್ಯೆ: 2

ಕುಂಭ: ಸಂಗಡಿಗರು ಸಹಕಾರ ತೋರುವದರಿಂದ ನಿರಾತಂಕ ಜೀವನ ಇರುವದು. ಆಶೆ ಆಕಾಂಕ್ಷಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವದು. ಉನ್ನತ ಶಿಕ್ಷಣದ ಕನಸು ಈಡೇರುವದು. ಶುಭ ಸಂಖ್ಯೆ: 6

ಮೀನ: ಆರಂಭದಲ್ಲಿ ಹರ್ಷ, ಉತ್ಸಾಹ ಇರುವದು ಕೊನೆಗೆ ಮನೋವ್ಯಥೆ. ಮನೆಯಲ್ಲಿ ಸಂತೋಷದ ವಾತಾವರಣ ಇರುವದು. ಗ್ರಹೋಪಯೋಗಿ ವಸ್ತುಗಳ ಖರೀದಿ, ಮನೆ ರಿಪೇರಿ ಮೊದಲಾದ ಕೆಲಸಗಳಾಗುವವು. ಶ್ರೀಲಕ್ಷ್ಮೀಸ್ತೋತ್ರ ಪಠಿಸಿರಿ. ಶುಭ ಸಂಖ್ಯೆ: 3

 

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937