Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಅಭದ್ರತೆ ಕಾಡುವ ಸಂಭವವಿದೆ

Horoscope ಫೆಬ್ರವರಿ 26, 2022ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ. ರಾಹುಕಾಲ: ಇಂದು ಬೆಳಿಗ್ಗೆ 09.32ರಿಂದ ಇಂದು ಬೆಳಿಗ್ಗೆ 11.00ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.36. ಸೂರ್ಯಾಸ್ತ: ಸಂಜೆ 6.21

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಅಭದ್ರತೆ ಕಾಡುವ ಸಂಭವವಿದೆ
ದಿನ ಭವಿಷ್ಯ
Follow us
TV9 Web
| Updated By: ಆಯೇಷಾ ಬಾನು

Updated on: Feb 26, 2022 | 6:00 AM

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಕೃಷ್ಣಪಕ್ಷ, ದಶಮಿ ತಿಥಿ, ಶನಿವಾರ, ಫೆಬ್ರವರಿ 26, 2022. ಮೂಲ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 09.32ರಿಂದ ಇಂದು ಬೆಳಿಗ್ಗೆ 11.00ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.36. ಸೂರ್ಯಾಸ್ತ: ಸಂಜೆ 6.21

ತಾ.26-02-2022 ರ ಶನಿವಾರದ ರಾಶಿಭವಿಷ್ಯ.

  1. ಮೇಷ: ಹೊಟ್ಟೆಕಿಚ್ಚು ಮಾಡುವವರಿಗೆ ತಕ್ಕ ಶಾಸ್ತಿಯಾಗಲಿದೆ. ಶತ್ರುಗಳು ತಾವಾಗಿಯೇ ದೂರಸರಿಯುವರು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವುದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ಉತ್ತಮ ಆರೋಗ್ಯ ಹಾಗೂ ಆಕಸ್ಮಿಕ ಧನಲಾಭವಾಗಲಿದೆ. ಶುಭ ಸಂಖ್ಯೆ: 9
  2. ವೃಷಭ: ಧನಮದಕ್ಕಿಂತ ವಿದ್ಯಾಮದ ಅಪಾಯಕಾರಿ ಆದರಿಂದ ತೊಂದರೆ ಆಗುವ ಸಾಧ್ಯತೆ ಇದೆ. ವಿನಯದಿಂದ ವರ್ತಿಸಿರಿ. ಅಕಾಲಿಕ ಒತ್ತಡಗಳಿಂದ ಕಾರ್ಯಹಾನಿ. ಪ್ರೇಮಿಗಳಿಗೆ ಅಪೇಕ್ಷೆಯಂತೆ ಕಂಕಣಬಲ ಕೂಡಿಬರುವುದು. ಶುಭ ಸಂಖ್ಯೆ: 8
  3. ಮಿಥುನ: ಅಂತಃಶತ್ರುಗಳ ಕಾಟ ಹೆಚ್ಚಾಗುವ ಲಕ್ಷಣವಿದೆ. ಹಳೆಯ ಸಮಸ್ಯೆಗಳು ಮತ್ತೆ ಎದುರಾಗುವ ಸಂಭವವಿದೆ.ಚಂಚಲತೆ ಬೇಡ, ಹಿಡಿದ ಕಾರ್ಯವನ್ನು ಪೂರ್ಣಗೊಳಿಸಿ.ಆರ್ಥಿಕ ಲಾಭವಿದೆ ಆದರೆ ವಿದ್ಯೆಯಲ್ಲಿ ಹಿನ್ನಡೆ ಕಂಡುಬರುವುದು. ಶುಭ ಸಂಖ್ಯೆ: 4
  4.  

    ಕಟಕ: ಅಭದ್ರತೆ ಕಾಡುವ ಸಂಭವವಿದೆ. ಸ್ಥಾನಚ್ಯುತಿಯಾಗುವ ಸಾಧ್ಯತೆ ಇದೆ. ಸಹೋದರರಲ್ಲಿ ಕಲಹ. ಸ್ಥಿರಾಸ್ತಿಯು ಹಾನಿಯಾಗುವ ಯೋಗವಿದೆ. ಕೃಷಿಕರಿಗೆ ಹಾಗೂ ವ್ಯಾಪಾರಿಗಳಿಗೆ ಆರ್ಥಿಕ ಸಂಕಷ್ಟ ಇರುವುದು. ಶುಭ ಸಂಖ್ಯೆ: 7

  5.  

    ಸಿಂಹ: ಸಂಗಡಿಗರು ಸಹಕಾರ ತೋರುವುದರಿಂದ ನಿರಾತಂಕ ಜೀವನ ಇರುವುದು. ಆಶೆ ಆಕಾಂಕ್ಷಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವುದು. ಉನ್ನತ ಶಿಕ್ಷಣದ ಕನಸು ಈಡೇರುವುದು. ಶುಭ ಸಂಖ್ಯೆ: 2

  6.  

    ಕನ್ಯಾ: ಬದಲಾವಣೆಯನ್ನು ಸಹಜವಾಗಿ ಸ್ವೀಕರಿಸಿ. ಕರ್ತವ್ಯವನ್ನು ಸಮರ್ಥವಾಗಿ ನಿಭಾಯಿಸುವಿರಿ. ಸಾಮಾಜಿಕ ಗೌರವಗಳು ಅರಸಿಕೊಂಡು ಬರಲಿವೆ. ಮಾಲೀಕತ್ವದ ಆಸ್ತಿ ಕೈತಪ್ಪದಂತೆ ಎಚ್ಚರಿಕೆ ವಹಿಸಿರಿ. ಧನದ ಅಪವ್ಯಯ ಆಗದಂತೆ ನೋಡಿರಿ. ಶುಭ ಸಂಖ್ಯೆ: 5

  7.  

    ತುಲಾ: ಹಿರಿಯರಿಗೆ ಅನಾರೋಗ್ಯ ಸಂಭವ. ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಉದ್ಯೋಗ ಬದಲಿ ಮಾಡುವುದು ಸದ್ಯಕ್ಕೆ ಬೇಡ. ಹಣಕಾಸಿನ ವಿಷಯದಲ್ಲಿ ಬಂಧುಗಳು ಸಹಕಾರ ತೋರುವರು. ಶುಭ ಸಂಖ್ಯೆ: 2

  8.  

    ವೃಶ್ಚಿಕ: ಅನಿರೀಕ್ಷಿತ ಸಂಚಾರ ಒದಗಿಬಂದರೂ ತೃಪ್ತಿದಾಯಕವೆನ್ನಬಹುದು. ವ್ಯಾಪಾರಾದಿ ಉದ್ಯಮಗಳಲ್ಲಿ ಅಪೇಕಿಸಿದಂತೆ ಪ್ರಗತಿ. ಲಾಭ ತೋರಿಬರುತ್ತದೆ. ಹೊಸದಾದ ಆಲೋಚನಾ ಸಿದ್ಧಿ. ವಿಪರೀತ ಖರ್ಚು. ಶುಭ ಸಂಖ್ಯೆ: 8

  9.  

    ಧನು: ಶುಭ ಕರ್ಮ ಸಂಪ್ರಾಪ್ತಿಯಿದ್ದು, ಗುರುವರ್ಗ ಸಂತೋಷ, ಸಂಸಾರ ಸುಖ. ನೂತನ ಮಿತ್ರಭೇಟಿ, ಅರ್ಥಾರ್ಜನೆಯು ಉತ್ತಮವಿದೆ. ಆದರೂ ಗೃಹಕಲಹ, ಬಂಧು ಜನರಲ್ಲಿ ಅಸಮಾಧಾನ ಕಂಡುಬರುವುದು. ಶುಭ ಸಂಖ್ಯೆ: 6

  10.  

    ಮಕರ: ಅಪರಿಮಿತ ಖರ್ಚು ತೋರಿದರೂ ಅಡಚಣೆಯಾಗುವ ಸಂಭವವಿಲ್ಲದೆ. ಸ್ಥಾನಮಾನಗಳೂ ಭದ್ರವಾಗಿ ಸಾಂಸಾರಿಕ ದೃಷ್ಟಿಯಲ್ಲೂ ಸುಖದಾಯಕ, ವಿಶೆಷ ಪ್ರಯತ್ನದಿಂದ ವ್ಯವಹಾರ ಸಿದ್ಧಿ ಇರುವುದು. ಶುಭ ಸಂಖ್ಯೆ: 3

  11.  

    ಕುಂಭ: ಯಶಸ್ಸು. ಶ್ರಮಕ್ಕೆ ತಕ್ಕ ಲಾಭ, ಕೀರ್ತಿ, ಕೃಷಿಯಲ್ಲಿ ಉತ್ತಮ ಸಾಧನೆ, ಮನೆಯಲ್ಲಿ ಮಂಗಲಕಾರ್ಯ, ಬುಧ, ಮಂಗಳ ಯೋಗ ಶುಭದಾಯಕ ಆದರೂ ಕಿರಿಕಿರಿ ಸಂಭವ. ಪರಿಹಾರಕ್ಕಾಗಿ ಅನ್ನದಾನ ಮಾಡಿರಿ. ಶುಭ ಸಂಖ್ಯೆ: 6

  12.  

    ಮೀನ: ಆರೋಗ್ಯಪೂರ್ಣತೆ, ಪ್ರಸನ್ನತೆ ಇರುವದು. ಎಲ್ಲ ಕಾರ್ಯಗಳೂ ತಮ್ಮ ಮನಸ್ಸಿನಂತೆ ನಡೆಯುವವು. ಧನಲಾಭ, ಧಾರ್ಮಿಕ ಕಾರ್ಯ, ದೇವತಾ ಕ್ಷೇತ್ರ ದರ್ಶನ ಯೋಗವಿರುವದು. ವ್ಯಾಪಾರ ಸಾಧಾರಣ. ಶುಭ ಸಂಖ್ಯೆ: 1. ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಸಂಪರ್ಕ ಸಂಖ್ಯೆ: 9972848937

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ