Horoscope Today- ಇಂದು ಈ ರಾಶಿಯವರು ಹೆಚ್ಚು ಅನಗತ್ಯ ಖರ್ಚು ಮಾಡುತ್ತಾರೆ

Horoscope ಜನವರಿ 13, 2022ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ಇಂದು ಈ ರಾಶಿಯವರು ಹೆಚ್ಚು ಅನಗತ್ಯ ಖರ್ಚು ಮಾಡುತ್ತಾರೆ
ದಿನ ಭವಿಷ್ಯ
Follow us
TV9 Web
| Updated By: sandhya thejappa

Updated on: Jan 13, 2022 | 6:30 AM

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಪುಷ್ಯಮಾಸ, ಹೇಮಂತ ಋತು, ಶುಕ್ಲಪಕ್ಷ, ಏಕಾದಶಿ ತಿಥಿ, ಗುರುವಾರ, ಜನವರಿ 13, 2022. ಕೃತ್ತಿಕೆ ನಕ್ಷತ್ರ, ರಾಹುಕಾಲ: ಇಂದು ಮಧ್ಯಾಹ್ನ 01.47 ರಿಂದ ಇಂದು ಸಂಜೆ 03.10ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.49. ಸೂರ್ಯಾಸ್ತ: ಸಂಜೆ 5.59

ತಾ.13-01-2022 ರ ಗುರುವಾರದ ರಾಶಿ ಭವಿಷ್ಯ.

ಮೇಷ: ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ ದೊರೆಯುವುದು. ಕೋರ್ಟ್​ನಲ್ಲಿ ಇರುವ ನ್ಯಾಯ ಬಗೆ ಹರಿಯುವುದು. ಆರ್ಥಿಕ ಸುಧಾರಣೆ ಕಂಡುಬರುವುದು. ಉದ್ಯೋಗದ ಬಗ್ಗೆ ಆತ್ಮ ಸಂತೃಪ್ತಿ ಇರುವುದು. ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಕಂಡು ಬರುವುದು. ಶುಭ ಸಂಖ್ಯೆ: 1

ವೃಷಭ ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವುದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ. ಶುಭ ಸಂಖ್ಯೆ: 5

ಮಿಥುನ ನೆನೆಗುದಿಗೆ ಬಿದ್ದ ಕೆಲಸಗಳಿಗೆ ಚಾಲನೆ ದೊರೆಯುವುದು. ಮಾನಸಿಕ ಉತ್ಸಾಹ ಕಂಡು ಬರುವುದು. ಆತ್ಮೀಯರಿಗೆ ಉನ್ನತ ಅಧಿಕಾರ ದೊರೆಯುವುದು. ಕಾರಣಾಂತರ ಅಧಿಕ ಖರ್ಚಾಗಬಹುದು. ಶುಭ ಸಂಖ್ಯೆ: 9

ಕರ್ಕ ಅಭದ್ರತೆ ಕಾಡುವ ಸಂಭವವಿದೆ. ಸ್ಥಾನಚ್ಯುತಿಯಾಗುವ ಸಾಧ್ಯತೆ ಇದೆ. ಸಹೋದರರಲ್ಲಿ ಕಲಹ. ಸ್ಥಿರಾಸ್ತಿಯು ಹಾನಿಯಾಗುವ ಯೋಗವಿದೆ. ಕೃಷಿಕರಿಗೆ ಹಾಗೂ ವ್ಯಾಪಾರಿಗಳಿಗೆ ಆರ್ಥಿಕ ಸಂಕಷ್ಟ ಇರುವುದು. ಶುಭ ಸಂಖ್ಯೆ:5

ಸಿಂಹ ಪ್ರಮುಖ ಯೋಜನೆಗಳ ಜವಾಬ್ದಾರಿ ಹೆಚ್ಚುವುದು. ಆರ್ಥಿಕ ಅಭಿವೃದ್ಧಿ ಕಂಡುಬರುವುದು. ಸ್ನೇಹಿತರ ಭಿನ್ನಾಭಿಪ್ರಾಯ ಬಗೆಹರಿಯುವುದು. ಶತೃಗಳೂ ಸೌಮ್ಯರಾಗುವ ಕಾಲ ಇರುವದರಿಂದ ಅಪೇಕ್ಷಿತ ಕಾರ್ಯವನ್ನು ಸಾಧಿಸುವಿರಿ. ಶುಭ ಸಂಖ್ಯೆ:8

ಕನ್ಯಾ ಆತ್ಮೀಯರೇ ವಿರೋಧಿಗಳಂತೆ ವರ್ತಿಸುವರು. ಮಾಡದ ತಪ್ಪಿಗೆ ಕ್ಷಮೆ ಕೇಳುವ ಪ್ರಸಂಗ ಇರುವುದರಿಂದ ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಮನಸ್ಸಿನಲ್ಲಿ ಸಂಕಲ್ಪಿಸಿದ ಕಾರ್ಯವು ನಿಧಾನವಾಗಿ ನೆರವೇರಿ ಲಾಭದಾಯಕವಾಗುವುದು. ಶುಭ ಸಂಖ್ಯೆ: 3

ತುಲಾ ಸಹನೆಗೆ ತಕ್ಕ ಫಲ ದೊರೆಯುವುದು. ಬಹು ದಿನದ ಕನಸು ನನಸಾಗುವ ಕಾಲವಿದೆ. ಕೊರ್ಟಿನಲ್ಲಿದ್ದ ವ್ಯಾಜ್ಯಗಳಲ್ಲಿ ಜಯ ದೊರೆಯುವುದು. ಸಂತಾನಫಲದ ಅಪೇಕ್ಷೆ ಈಡೇರುವದು. ಆರ್ಥಿಕ ವ್ಯವಹಾರಗಳ ಅದೃಷ್ಟ ಲಾಭತರುವವು. ಶುಭ ಸಂಖ್ಯೆ:6

ವೃಶ್ಚಿಕ ನಿಶ್ಚಿತ ಆರ್ಥಿಕ ಸ್ಥಿತಿ ಇರುವದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ಶುಭ ಸಂಖ್ಯೆ: 7

ಧನು ಅನಿರೀಕ್ಷಿತ ಧನ ನಷ್ಟ. ತಿರುಗಾಟ ಒದಗಿ ಬಂದು, ದೇಹಾಲಸ್ಯವು ಆಗುತ್ತದೆ. ಅರ್ಥಾರ್ಜನೆಯ ಮಾರ್ಗವು ಸುಗಮವಿದ್ದು, ಸಾಂಸಾರಿಕ ದೃಷ್ಟಿಯಲ್ಲೂ ಉತ್ತಮವಿರುವುದರಿಂದ ಚಿಂತೆಯ ಅವಶ್ಯಕತೆ ಇಲ್ಲ. ಶುಭ ಸಂಖ್ಯೆ: 4

ಮಕರ ಮನೆ, ನಿವೇಶನ, ಆಸ್ತಿ ಖರೀದಿ ಯೋಗವಿದೆ. ವ್ಯವಹಾರದಲ್ಲಿ ಜಾಗ್ರತೆ ಇರಲಿ. ವ್ಯಾಪಾರ ಉತ್ತಮವಾಗಿರುವದು. ಉತ್ಸಾಹ ಮೂಡುವುದು. ದೋಷ ಪರಿಹಾರಕ್ಕೆ ಜಲದಾನ ಮಾಡಿರಿ. ಶುಭ ಸಂಖ್ಯೆ: 2

ಕುಂಭ ಹೊಸ ಯೋಜನೆಗಳು ಬೇಡ. ಸ್ಥಳಾಂತರ, ವರ್ಗಾವಣೆ, ಮನೆ ಬದಲಿ, ಅಧಿಕಾರಿ ವರ್ಗದವರಿಂದ ಕಿರಿಕಿರಿ ಇರುವುದು. ಕೊಟ್ಟ ಸಾಲ ಮರುಪಾವತಿ ಆಗಲಾರದು. ವ್ಯಾಪರಿಗಳಿಗೆ ವ್ಯವಹಾರಿಕ ತೊಂದರೆ ಆಗುವ ಸಾಧ್ಯತೆ ಇದೆ. ಶುಭ ಸಂಖ್ಯೆ: 1

ಮೀನ ಏಕಾಂಗಿತನದ ಬೇಸರ ಪರಿಸರದಿಂದ ಹೊರ ಬಂದು ಹೊಸಬರೊಂದಿಗೆ ಬಾಳುವ ಸಂಕಲ್ಪ. ನಿರಾಕರಿಸಿದ್ದ ಜವಾಬ್ದಾರಿ ಪುನ: ಸುಪರ್ದಿಗೆ ಬಂದು ಮೆಚ್ಚುಗೆಯಾಗಿ ನಿಭಾವಣೆ. ಬಾಳ ಸಂಗಾತಿ ಜತೆಗಿನ ಚಿಕ್ಕ ಪುಟ್ಟ ಚರ್ಚೆಗಳೇ ಮುಂದೆ ವಿರಸಕ್ಕೆ ದಾರಿಯಾದೀತು. ಶುಭ ಸಂಖ್ಯೆ: 9

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಸಂಪರ್ಕ ಸಂಖ್ಯೆ: 9972848937

ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?