AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಸಹನೆ ಇಲ್ಲದ ಆತುರದ ನಡೆಯಿಂದ ಹಾನಿ ಸಂಭವ ಎಚ್ಚರಿಕೆ ವಹಿಸಿರಿ

Horoscope ಮಾರ್ಚ್ 09, 2022ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ. ರಾಹುಕಾಲ: ಬೆಳಿಗ್ಗೆ 12.26ರಿಂದ ಇಂದು ಮಧ್ಯಾಹ್ನ 01.55ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.29. ಸೂರ್ಯಾಸ್ತ: ಸಂಜೆ 6.24

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಸಹನೆ ಇಲ್ಲದ ಆತುರದ ನಡೆಯಿಂದ ಹಾನಿ ಸಂಭವ ಎಚ್ಚರಿಕೆ ವಹಿಸಿರಿ
ದಿನ ಭವಿಷ್ಯ
TV9 Web
| Edited By: ಆಯೇಷಾ ಬಾನು|

Updated on: Mar 09, 2022 | 6:00 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಶುಕ್ಲಪಕ್ಷ, ಸಪ್ತಮಿ ತಿಥಿ, ಬುಧವಾರ, ಮಾರ್ಚ್ 09, 2022. ಕೃತ್ತಿಕೆ ನಕ್ಷತ್ರ, ರಾಹುಕಾಲ: ಬೆಳಿಗ್ಗೆ 12.26ರಿಂದ ಇಂದು ಮಧ್ಯಾಹ್ನ 01.55ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.29. ಸೂರ್ಯಾಸ್ತ: ಸಂಜೆ 6.24

ತಾ.9-3-2022 ರ ಬುಧವಾರದ ರಾಶಿಭವಿಷ್ಯ.

  1. ಮೇಷ: ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವುದು. ಸಂಗಡಿಗರು ಸಹಕಾರ ತೋರುವುದರಿಂದ ನಿರಾತಂಕ ಜೀವನ ಇರುವುದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಆರ್ಥಿಕ ಸಂಕಷ್ಟ ದೂರಾಗುವುದು. ಶುಭ ಸಂಖ್ಯೆ: 8
  2. ವೃಷಭ: ಆತ್ಮೀಯರೊಂದಿಗೆ ಮನಸ್ತಾಪವಾಗುವ ಯೋಗವಿದೆ. ಸ್ವಂತ ಉದ್ಯಮಿಗಳು ಹಾನಿ ತಪ್ಪಿಸುವ ಉಪಾಯ ಮಾಡಿ. ವ್ಯಾಪಾರದ ವಿಷಯದಲ್ಲಿ ಮೋಸವಾಗುವ ಸಾಧ್ಯತೆ ಇದೆ. ಸಾಲಗಾರರು ಸಹಕಾರ ತೋರುವರು. ಶುಭ ಸಂಖ್ಯೆ: 5
  3. ಮಿಥುನ: ದೀರ್ಘಕಾಲದ ಸಮಸ್ಯಗಳಿಗೆ ಪರಿಹಾರ ದೊರೆಯುವುದು. ಕೋರ್ಟನಲ್ಲಿ ಇರುವ ನ್ಯಾಯ ಬಗೆಹರಿಯುವುದು. ಆರ್ಥಿಕ ಸುಧಾರಣೆ ಕಂಡುಬರುವುದು. ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವುದು. ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಕಂಡುಬರುವುದು. ಶುಭ ಸಂಖ್ಯೆ: 1
  4. ಕಟಕ: ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವುದು. ಉನ್ನತ ವ್ಯಾಸಂಗದ ಯೋಗವಿದೆ. ವಿದೇಶಗಮನ, ವ್ಯವಹಾರಿಕ ತಿರುಗಾಟದ ಸಾಧ್ಯತೆ ಇದೆ. ಶತ್ರುಬಾಧೆ ಕಂಡುಬರುವುದು. ಆರೋಗ್ಯದ ಮೇಲೆ ನಿಗಾ ಇರಲಿ. ಶುಭ ಸಂಖ್ಯೆ: 9
  5. ಸಿಂಹ: ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವುದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ. ಶುಭ ಸಂಖ್ಯೆ: 5
  6. ಕನ್ಯಾ: ಕ್ಷಮಾಗುಣ ಇರಲಿ, ಪರಸ್ಪರ ದೋಷಾರೋಪ ಮಾಡುವದರಿಂದ ಕಾರ್ಯಹಾನಿಯ ಸಂಭವವಿದೆ. ವ್ಯವಹಾರದಲ್ಲಿ ಸಮತೋಲನ ಕಾಯ್ದುಕೊಳ್ಳುವಿರಿ. ದೊಡ್ಡಮೊತ್ತದ ಹಣಹೂಡಿಕೆ ಈಗ ಬೇಡ. ಶುಭ ಸಂಖ್ಯೆ: 3
  7. ತುಲಾ: ಎಲ್ಲವನ್ನು ಹಗುರವಾಗಿ ಕಾಣುವುದರಿಂದ ಸಣ್ಣ ವಿಷಯವೂ ದೊಡ್ಡ ಸಮಸ್ಯೆಯಾಗುವದು. ಹಣಕಾಸಿನ ತೊಂದರೆಗಳು ಕಂಡುಬರುವವು. ಮಹತ್ವದ ಕೆಲಸಗಳು ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ. ಎಚ್ಚರಿಕೆ ವಹಿಸಿರಿ. ಶುಭ ಸಂಖ್ಯೆ: 8
  8. ವೃಶ್ಚಿಕ: ಸಹನೆ ಇಲ್ಲದ ಆತುರದ ನಡೆಯಿಂದ ಹಾನಿ ಸಂಭವ ಎಚ್ಚರಿಕೆ ವಹಿಸಿರಿ. ಅನಿರೀಕ್ಷಿತವಾಗಿ ಬರುವ ವಿಘ್ನಗಳು ತಾವಾಗಿಯೇ ಪರಿಹಾರ ಕಾಣುವವು. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವವು. ಶುಭ ಸಂಖ್ಯೆ: 6
  9. ಧನು: ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದದಲ್ಲಿ ಅಪೇಕ್ಷಿತ ಲಾಭ ದೊರೆಯುವುದು. ವಿದೇಶ ಪ್ರಯಾಣದ ಯೋಗವಿದೆ. ಶುಭ ಸಂಖ್ಯೆ: 2
  10. ಮಕರ: ಗಣ್ಯರೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿಯಾಗುವುದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಶುಭ ಸಂಖ್ಯೆ: 7
  11. ಕುಂಭ: ನಿರೀಕ್ಷಿತ ಸರ್ವಕಾರ್ಯಗಳು ನೆರವೇರುತ್ತದೆ. ಆರ್ಥಿಕ ಮಟ್ಟವೂ ಏರಿ, ಸ್ಥಿರಪ್ರಾಪ್ತಿ, ಸಂಸಾರಸುಖ ಸಂಬ್ರಮಗಳಿರುತ್ತದೆ. ಶುಭ ಕಾರ್ಯ ಪ್ರಯತ್ನ ಫಲಕೊಡುತ್ತದೆ. ಶುಭ ಸಂಖ್ಯೆ: 9
  12. ಮೀನ: ಮಹತ್ತರ ಯೋಜನೆಗಳು ಕಾರ್ಯಗತವಾಗಲು ಪ್ರಾಜ್ಞರ ಮಾರ್ಗದರ್ಶನ. ಜೀವನದ ಏಳಿಗೆಗೆ ಚಿಂತನೆ. ಕೆಲಸದ ನಡುವೆ ಮತ್ತೊಂದು ಕಾರ್ಯ ವಹಿಸಿಕೊಳ್ಳಲು ಚೈತನ್ಯ. ಮಹಿಳೆಯರು ಪಶ್ಚಾತಾಪಕ್ಕೆ ಅವಕಾವಿಲ್ಲದಂತೆ ನಡೆದುಕೊಳ್ಳುವುದು ಒಳಿತು. ಶುಭ ಸಂಖ್ಯೆ: 5. ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಸಂಪರ್ಕ ಸಂಖ್ಯೆ: 9972848937

Follow Us
TV9 Web
TV9 Web

TV9 Kannada

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್