Nitya Bhavishya: ಈ ರಾಶಿಯವರಿಗೆ ಆರ್ಥಿಕ ಸ್ಥಿತಿಯು ಸುಧಾರಣೆಯತ್ತ ಹೊರಳುತ್ತದೆ
2023 ಫೆಬ್ರವರಿ 08 ಬುಧವಾರ ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.
ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದ್ರೆ 2023 ಫೆಬ್ರವರಿ 08 ಬುಧವಾರ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.
ನಿತ್ಯ ಪಂಚಾಂಗ: ಶಾಲಿವಾಹನ ಶಕೆ 1945, ಶುಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಕರಮಾಸ, ಮಹಾನಕ್ಷತ್ರ :ಧನಿಷ್ಠಾ, ಮಾಸ : ಮಾಘ, ಪಕ್ಷ : ಕೃಷ್ಣ, ವಾರ :ಬುಧ, ತಿಥಿ : ತೃತೀಯಾ, ನಿತ್ಯನಕ್ಷತ್ರ : ಪೂರ್ವಾಫಲ್ಗುಣೀ, ಯೋಗ :ಅತಿಗಂಡ, ಕರಣ : ವಣಿಜ, ಸೂರ್ಯೋದಯ ಬೆಳಗ್ಗೆ 07 ಗಂಟೆ, ಸೂರ್ಯಾಸ್ತ ಸಂಜೆ 06 ಗಂಟೆ 33 ನಿಮಿಷಕ್ಕೆ. ರಾಹು ಕಾಲ 12:47 – 14:14, ಯಮಘಂಡ ಕಾಲ 08:27 ರಿಂದ 09 : 54, ಗುಳಿಕ ಕಾಲ 11:20 ರಿಂದ 12: 47.
ಮೇಷ: ಮನೆಯಲ್ಲಿ ಕೆಲಸ ಮಾಡುವಾಗ ವಿಶೇಷ ಎಚ್ಚರ ವಹಿಸಿ. ಮನೆ ಬಳಕೆಯ ವಸ್ತುಗಳ ಯಾವುದೇ ಅಸಡ್ಡೆಯ ಬಳಕೆ ನಿಮಗೆ ಸಮಸ್ಯೆ ಉಂಟುಮಾಡಬಹುದು. ಹೊಸ ಗ್ರಾಹಕರೊಂದಿಗೆ ಮಾತುಕತೆಗೆ ಇದೊಂದು ಅದ್ಭುತ ದಿನ. ಘಟನೆಗಳು ಉತ್ತಮ ಮತ್ತು ಗೊಂದಲಮಯವಾಗಿರುವ ಒಂದು ದಿನ – ಇದು ನಿಮ್ಮನ್ನು ದಣಿವು ಹಾಗೂ ಗೊಂದಲದಲ್ಲಿರಿಸುತ್ತದೆ. ಇಂದು, ನೀವು ನಿಮ್ಮ ಸಂಗಾತಿಯ ಜೊತೆಗೆ ನಿಮ್ಮ ಜೀವನದ ಅತ್ಯುತ್ತಮ ಸಮಯವನ್ನು ಕಳೆಯುತ್ತೀರಿ.
ವೃಷಭ: ನಿರಾಶಾದಾಯಕ ಮನೋಭಾವವು ಕೇವಲ ನಿಮ್ಮ ಅವಕಾಶಗಳನ್ನು ಸೀಮಿತಗೊಳಿಸುವುದಷ್ಟೇ ಅಲ್ಲದೇ ದೇಹದ ಸಾಮರಸ್ಯವನ್ನೂ ಭಂಗಪಡಿಸುವುದರಿಂದ ಅವುಗಳನ್ನು ತಡೆಯಬೇಕು .ಕಾರ್ಯನಿರತ ದಿನಚರಿಯ ಹೊರೆತಾಗಿಯೂ ನೀವು ನಿಮಗಾಗಿ ಸಮಯವನ್ನು ತೆಗೆಯಲು ಸಾಧ್ಯವಾಗುತ್ತದೆ. ಬಿಡುವಿನ ವೇಳೆಯಲ್ಲಿ ನೀವು ಇಂದು ಸೃಜನಾತ್ಮಕವಾಗಿ ಏನಾದರೂ ಮಾಡಬಹುದು. ನಿಮ್ಮ ಸಂಗಾತಿ ನಿಮ್ಮ ನೆರವಿಗೆ ಬರುತ್ತಾರೆ.
ಮಿಥುನ: ವೃತ್ತಿಯಲ್ಲಿ ನಿಮ್ಮ ಕೆಲಸವನ್ನು ನಿಯಮ ಬದ್ಧವಾಗಿ ಮಾಡಿ ಮುಗಿಸುವುದು ಉತ್ತಮ. ಎಲ್ಲಾ ವಿಚಾರಗಳಲ್ಲೂ ನಿಮ್ಮದೇ ಅಭಿಪ್ರಾಯ ಹೇಳುವುದಕ್ಕಿಂತ ಇತರರ ಅಭಿಪ್ರಾಯಗಳಿಗೂ ಬೆಲೆ ಕೊಡುವುದು ಉತ್ತಮ. ಸ್ತ್ರೀರೋಗ ತಜ್ಞರಿಗೆ ಬೇಡಿಕೆ ಹೆಚ್ಚಾಗಿ ಧನ ಸಂಪಾದನೆ ಹೆಚ್ಚುವುದು. ಹಿರಿಯರ ಆರೋಗ್ಯದಲ್ಲಿ ಸ್ವಲ್ಪಮಟ್ಟಿನ ವ್ಯತ್ಯಾಸಗಳಾಗಬಹುದು. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಕಡಿಮೆಯಾಗುತ್ತದೆ.
ಕರ್ಕ: ಶುಭಸಮಾಚಾರ ನಿಮಗೆ ಗೊತ್ತಾಗಲಿದೆ.ಆರ್ಥಿಕ ಸ್ಥಿತಿಯು ಸ್ವಲ್ಪ ಸುಧಾರಣೆಯತ್ತ ಹೊರಳುತ್ತದೆ. ಮಾರ್ಗದರ್ಶಕರ ಸಲಹೆಯಂತೆ ನಿಮ್ಮ ಗುರಿಮುಟ್ಟುವ ಹಾದಿಯನ್ನು ಬದಲಿಸಿಕೊಂಡಲ್ಲಿ ಯಶಸ್ಸು ನಿಮ್ಮದಾಗುತ್ತದೆ. ಕೆಲವು ರಾಜಕೀಯ ವ್ಯಕ್ತಿಗಳಿಗೆ ಸಂಘ ಸಂಸ್ಥೆಗಳಲ್ಲಿ ಉತ್ತಮ ಹುದ್ದೆ ದೊರೆಯುತ್ತದೆ. ಪ್ರೀತಿ ಪ್ರೇಮದಲ್ಲಿ ಬಿದ್ದರೂ ಹಿರಿಯರು ನಿಮ್ಮ ಪ್ರೀತಿಗೆ ಒಪ್ಪಿಗೆ ನೀಡುವರು. ಸರ್ಕಾರಿ ಕಾನೂನು ತೊಡಕುಗಳು ಈಗ ನಿವಾರಣೆಯಾಗುತ್ತವೆ.
ಸಿಂಹ: ನಿಮ್ಮ ಉದಾಸೀನ ಮನೋಭಾವದಿಂದ ವ್ಯಾಪಾರದಲ್ಲಿ ನಷ್ಟ ಆದರೂ ಪಾಲುದಾರರಲ್ಲಿ ವಿನಂತಿಸಿದರೆ ಸುಮ್ಮನಿರುವರು. ಲಲಿತ ಕಲಾವಿದರಿಗೆ ಹೆಚ್ಚಿನ ಸಂಭಾವನೆ ಸಿಗುತ್ತದೆ. ದಿನಗೂಲಿ ನೌಕರರಿಗೆ ಹೆಚ್ಚು ಕೆಲಸ ದೊರೆತು ಆದಾಯ ಹೆಚ್ಚುವ ಸಾಧ್ಯತೆ ಇದೆ. ಸರ್ಕಾರಿ ಕಚೇರಿಯ ಕೆಲಸ ಕಾರ್ಯಗಳು ಸರಾಗವಾಗಿ ಆಗುತ್ತದೆ. ಮೂತ್ರ ಸಂಬಂಧಿ ಕಾಯಿಲೆಗಳಿದ್ದಲ್ಲಿ ಚಿಕಿತ್ಸೆಗೆ ಹೋಗುವುದು ಒಳ್ಳೆಯದು. ಹಣದ ಒಳಹರಿವು ಮಂದಗತಿಯಲ್ಲಿರುತ್ತದೆ. ಕೃಷಿಯನ್ನು ಓದುತ್ತಿರುವವರಿಗೆ ಸೂಕ್ತ ಸೌಲಭ್ಯ ದೊರೆಯುತ್ತದೆ.
ಕನ್ಯಾ: ಧನ ಆದಾಯವು ನಿಮ್ಮ ನಿರೀಕ್ಷೆಯನ್ನು ತಲುಪುತ್ತದೆ. ಆಪ್ತ ಬಂಧುಗಳು ಯಾರೋ ಮಾಡಿದ ತಪ್ಪನ್ನು ನಿಮ್ಮ ಮೇಲೆ ಹಾಕಲು ಯತ್ನಿಸುವರು ಎಚ್ಚರದಿಂದಿರಿ. ವೃತ್ತಿಯಲ್ಲಿ ಬರುವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಬಹುದು ಹಾಗೂ ಅದರಲ್ಲಿ ಉತ್ತಮ ಫಲಿತಾಂಶ ಬರುವ ಯೋಗವಿದೆ. ಹಂಗಾಮಿ ಕೆಲಸಗಾರರಲ್ಲಿ ಕೆಲವರಿಗೆ ಕಾಯಂ ಆಗುವ ಯೋಗವಿದೆ. ವಿದೇಶದಲ್ಲಿ ವೃತ್ತಿಯಲ್ಲಿರುವವರಿಗೆ ಮುಂಬಡ್ತಿ ದೊರೆಯಬಹುದು.
ತುಲಾ: ನಿಮ್ಮ ಜೀವನದಲ್ಲಿ ಪ್ರಮುಖರು ಯಾರೆಂಬ ಸರಿಯಾದ ಚಿತ್ರಣವು ನಿಮಗೆ ಸಿಗಲಿದೆ. ವಾತರೋಗದಿಂದ ಬಳಲುವ ಸಾಧ್ಯತಯಿದೆ. ದಂಪತಿಗಳ ನಡುವೆ ನಡೆದ ಕಲಹವು ಕೋರ್ಟ್ ಮೆಟ್ಟಲನ್ನೂ ಏರಬಹುದು. ಅಪರಿಚಿತರಿಂದ ಅನವಶ್ಯಕ ಸಹಕಾರ ದೊರೆಯುತ್ತದೆ ಮತ್ತು ನಿಮ್ಮ ಸ್ಥಗಿತಗೊಂಡ ಕೆಲಸಗಳೂ ಪೂರ್ಣಗೊಳ್ಳುತ್ತವೆ. ನಿಮ್ಮ ಮೇಲಧಿಕಾರಿಗಳಿಂದ ಮೆಚ್ಚುಗೆಯನ್ನು ಪಡೆದ ನಂತರ, ನಿಮ್ಮ ದಕ್ಷತೆಯು ಅದರ ಉತ್ತುಂಗದಲ್ಲಿದೆ. ಮಗುವಿನ ಕಡೆಯಿಂದ ಕೆಲವು ಸಮಸ್ಯೆಗಳು ಉಂಟಾಗಬಹುದು.
ವೃಶ್ಚಿಕ: ವಿವಾಹಕ್ಕೆ ಸಂಬಂಧಿಸಿದ ಮಾತುಕತೆಗಳು ನಡೆದರೂ ಪ್ರಯೋಜನವಾಗದು. ಇಂದು ದಿನವಿಡೀ ದೇಹದ ಆಲಸ್ಯ, ಮನಸ್ಸಿನಲ್ಲಿ ಇರುವ ಜಾಡ್ಯದಿಂದ ಯಾವ ಕಾರ್ಯಗಳೂ ಆಗದು. ದಿವಸ ಚಟುವಟಿಕೆಗಳಿಗಿಂತ ಭಿನ್ನವಾದ ಯಾವುದಾದರೂ ಆಸಕ್ತಿಯಿರುವ ಕೆಲಸಗಳ ಬಗ್ಗೆ ಗಮನಹರಿಸಿ. ಸಾಲವನ್ನು ಕೊಟ್ಟರೆ ವಾಪಸು ಬರುತ್ತದೆ ಎಂಬ ನಿರೀಕ್ಷೆ ಬೇಡ. ಬಂದರೂ ಬರಬಹುದು. ಇಂದು ನಿಮ್ಮ ಸರ್ವಬಲವನ್ನೂ ಹಾಕಿ ಕೆಲಸ ಮಾಡಿದರೆ ಸಫಲತೆಯಾಗುವ ಸಾಧ್ಯತೆ ಇದೆ.
ಧನುಸ್ಸು: ಮಕ್ಕಳ ವಿಚಾರವಾಗಿ ದಂಪತಿಗಳ ಮಧ್ಯದಲ್ಲಿ ವೈಮನಸ್ಯವು ಉಂಟಾಗಬಹುದು. ನಿಮ್ಮಿಬ್ಬರ ಮಾತಿನಚಕಮಕಿಯಲ್ಲಿ ಕೂಸು ಬಡವಾದೀತು. ಅನಾರೋಗ್ಯದಲ್ಲಿ ವ್ಯತ್ಯಾಸವು ಕಂಡುಬರಲಿದೆ. ಯೌವನದ ಸಮಯವನ್ನು ವಿನೋದದಲ್ಲಿ ಕಳೆಯಲಾಗುವುದು. ಮಗುವಿನ ಯಾವುದೇ ಸಾಧನೆಯಿಂದ ಮನಸ್ಸು ಸಂತೋಷವಾಗುತ್ತದೆ. ಆದಾಗ್ಯೂ, ಹಣದ ವ್ಯವಹಾರದಲ್ಲಿ ಎಚ್ಚರಿಕೆಯ ಅಗತ್ಯವಿದೆ. ಅನಗತ್ಯ ವಿಷಯಗಳಿಗೆ ಹಣವನ್ನು ಖರ್ಚು ಮಾಡುವುದನ್ನು ತಪ್ಪಿಸಿ, ಇಲ್ಲದಿದ್ದರೆ ನೀವು ನಂತರ ಆರ್ಥಿಕ ಬಿಕ್ಕಟ್ಟನ್ನು ಎದುರಿಸಬಹುದು.
ಮಕರ: ವ್ಯಾಪಾರದಲ್ಲಿ ನಿರೀಕ್ಷೆಗಿಂತ ಹೆಚ್ಚಿನ ಲಾಭ ದೊರೆಯಲಿದೆ. ನೀವು ಮೊದಲು ಮಾಡಿದ ಹೂಡಿಕೆಯ ಲಾಭವನ್ನು ಪಡೆಯುತ್ತೀರಿ. ಕೆಲಸಕ್ಕೆ ಸಂಬಂಧಿಸಿದಂತೆ ಸಣ್ಣ ಪ್ರಯಾಣದ ಅವಕಾಶವಿರುತ್ತದೆ. ಯಾವುದೇ ಪ್ರಯಾಣಗಳು ನಿಮಗೆ ಆಹ್ಲಾದಕರವಾಗಿರುತ್ತದೆ. ಮೂಳೆ ಮತ್ತು ಹೊಟ್ಟೆಗೆ ಸಂಬಂಧಿಸಿದ ಕಾಯಿಲೆಗಳು ಕಾಣಿಸಿಕೊಳ್ಳಬಹುದು. ಸಾಕಷ್ಟು ಹಣವನ್ನು ಆರಾಮದಾಯಕ ವಿಷಯಗಳಿಗೆ ಖರ್ಚು ಮಾಡಬಹುದು. ಕೆಲಸದ ಸ್ಥಳದಲ್ಲಿ ನಿಮ್ಮ ಸಹೋದ್ಯೋಗಿಗಳೊಂದಿಗೆ ವೇಗದಲ್ಲಿರಿ. ಸಂಗಾತಿಯ ಬೆಂಬಲ ಸಿಗಲಿದೆ. ಬಹಳ ದಿನಗಳ ನಂತರ ಪ್ರೀತಿಪಾತ್ರರನ್ನು ಭೇಟಿಯಾಗುವಿರಿ.
ಕುಂಭ: ನಿಮ್ಮ ಸ್ಥಾನಮಾನಕ್ಕಿಂತ ಹೆಚ್ಚಿನ ಭರವಸೆಗಳನ್ನು ಯಾರಿಗೂ ನೀಡಬೇಡಿ, ಇಲ್ಲದಿದ್ದರೆ, ಪೂರೈಸದಿದ್ದರೆ, ನೀವು ಅಪಹಾಸ್ಯಕ್ಕೆ ಗುರಿಯಾಗಬಹುದು. ವಾರದ ಕೊನೆಯಲ್ಲಿ, ನ್ಯಾಯಾಲಯದ ಪ್ರಕರಣದಲ್ಲಿ ನಿರ್ಧಾರವು ನಿಮ್ಮ ಪರವಾಗಿ ಬರಬಹುದು, ನಂತರ ನೀವು ನೆಮ್ಮದಿಯ ನಿಟ್ಟುಸಿರು ಬಿಡುತ್ತೀರಿ. ಇಂದು ನಿಮ್ಮ ಸಂಗಾತಿಯ ಭಾವನೆಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಲು ಸಲಹೆ ನೀಡಲಾಗುತ್ತದೆ.
ಮೀನ: ಕೆಲಸ ಕಾರ್ಯಗಳಲ್ಲಿ ಆತುರ ಬೇಡ. ಹಿಂದೆ ಸಿಕ್ಕಿಬಿದ್ದ ಹಣ ಸಿಗಲಿದೆ. ಹೊಸ ಆಸ್ತಿ, ವಾಹನಗಳು ಮತ್ತು ವ್ಯವಹಾರಗಳಲ್ಲಿ ಹೊಸ ಲಾಭದಾಯಕ ವ್ಯವಹಾರಗಳ ಸಾಧ್ಯತೆಗಳಿವೆ. ಈ ಸಮಯದಲ್ಲಿ, ಚಿಲ್ಲರೆ ವ್ಯಾಪಾರ ಮಾಡುವವರಿಗೆ ಲಾಭವಾಗುತ್ತದೆ. ಅತ್ತೆಯ ಕಡೆಯಿಂದ ಸಂಪೂರ್ಣ ಸಹಕಾರ ದೊರೆಯಲಿದೆ. ದಾಂಪತ್ಯ ಜೀವನದಲ್ಲಿ ಮಧುರತೆ ಇರುತ್ತದೆ. ಪ್ರೇಮ ಸಂಗಾತಿಯೊಂದಿಗೆ ಒಳ್ಳೆಯ ಸಮಯ ಕಳೆಯಲಿದೆ.
ಲೋಹಿತಶರ್ಮಾ, ಇಡುವಾಣಿ