Nitya Bhavishya: ಹೊಸ ವರ್ಷದ ಮೊದಲ ದಿನ ಯಾವ ರಾಶಿಗೆ ಯಾವ ಫಲ? ಇಲ್ಲಿದೆ ದ್ವಾದಶ ರಾಶಿಗಳ ದಿನ ಭವಿಷ್ಯ

Horoscope Today: ರವಿವಾರ, ಜನವರಿ 01, 2023. ರಾಹುಕಾಲ: ಇಂದು ಮಧ್ಯಾಹ್ನ 04 ಗಂ॥ 49 ನಿ।। ರಿಂದ ಇಂದು ಸಾಯಂಕಾಲ 06 ಗಂ॥ 15 ನಿ।। ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 06 ಗಂಟೆ 58 ನಿಮಿಷಕ್ಕೆ, ಸೂರ್ಯಾಸ್ತ: ಸಂಜೆ 06 ಗಂಟೆ 13 ನಿಮಿಷಕ್ಕೆ.

Nitya Bhavishya: ಹೊಸ ವರ್ಷದ ಮೊದಲ ದಿನ ಯಾವ ರಾಶಿಗೆ ಯಾವ ಫಲ? ಇಲ್ಲಿದೆ ದ್ವಾದಶ ರಾಶಿಗಳ ದಿನ ಭವಿಷ್ಯ
ರಾಶಿ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Jan 01, 2023 | 5:50 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದ್ರೆ 2023 ಜನವರಿ 01 ರವಿವಾರ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯ ಪಂಚಾಂಗ: ಶುಭಕೃತ ನಾಮ ಸಂವತ್ಸರ, ದಕ್ಷಿಣಾಯನ, ಧನುರ್ಮಾಸ ಮಾಸ, ಹೇಮಂತ ಋತು, ಪುಷ್ಯ ಮಾಸ, ಶುಕ್ಲ ಪಕ್ಷ, ಸಪ್ತಮೀ ತಿಥಿ, ಪೂರ್ವಾಷಾಢ ಮಹಾನಕ್ಷತ್ರ , ಅಶ್ವಿನಿ ನಿತ್ಯನಕ್ಷತ್ರ , ರವಿವಾರ, ಜನವರಿ 01, 2023. ರಾಹುಕಾಲ: ಇಂದು ಮಧ್ಯಾಹ್ನ 04 ಗಂ॥ 49 ನಿ।। ರಿಂದ ಇಂದು ಸಾಯಂಕಾಲ 06 ಗಂ॥ 15 ನಿ।। ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 06 ಗಂಟೆ 58 ನಿಮಿಷಕ್ಕೆ, ಸೂರ್ಯಾಸ್ತ: ಸಂಜೆ 06 ಗಂಟೆ 13 ನಿಮಿಷಕ್ಕೆ.

ತಾ. 01-01-2023 ರ ರಾವಿವಾರ ರಾಶಿ ಭವಿಷ್ಯ ಹೀಗಿದೆ:

  1. ಮೇಷ ರಾಶಿ: ಒರಟುತನದಿಂದ ಪತಿ ಪತ್ನಿಯರ ನಡುವೆ ಕಲಹ. ನೀವು ನಿಮ್ಮ ಕೆಲಸದ ಮೇಲೆ ಮಾತ್ರ ಗಮನಹರಿಸಿದರೆ ಉತ್ತಮ. ಏನಾದರೂ ಬಾಲಿಶವಾದದ್ದನ್ನು ಮಾಡುವ ಮೊದಲು ನಿಮ್ಮ ವರ್ತನೆಯ ಪರಿಣಾಮದ ಬಗ್ಗೆ ಆಲೋಚಿಸಿ. ಹಿರಿಯರ ಸಲಹೆಯನ್ನು ಒಡೆಯಿರಿ. ಇತರರಿಗೆ ಒಳ್ಳೆಯದನ್ನು ಮಾಡುವ ಕಾರ್ಯಕ್ಕೆ ಪ್ರತಿಫಲವಿದೆ. ನೀವು ಒಳ್ಳೆಯ ಅಭಿವೃದ್ಧಿ ಸಾಧಿಸುತ್ತಿದ್ದ ಹಾಗೆ ಪ್ರೇಮ ಜೀವನ ಒಳ್ಳೆಯ ತಿರುವು ತೆಗೆದುಕೊಳ್ಳುತ್ತದೆ. ನೀವು ನಿರಾಸೆ ಅನುಭವಿಸುತ್ತೀರಿ. ಬಿಡುವಿನ ವೇಳೆಯಲ್ಲಿ ಆಧ್ಯಾತ್ಮಿಕ ಪುಸ್ತಕಗಳ ಅಧ್ಯಯನ ಮಾಡಬೇಕು. ದಾಂಪತ್ಯಜೀವನ ಅಪರೂಪದ ಕ್ಷಣಗಳ ಇಂದಿರಲಿವೆ.
  2. ವೃಷಭ ರಾಶಿ: ಹಳೆಯ ರೋಗ ನಿಮ್ಮನ್ನು ಕಾಡಬಹುದು. ಸಂಗಾತಿಯೊಂದಿಗೆ ಹಂಚಿಕೊಳ್ಳಲು ಬಯಸುವಿರಿ. ಆದರೆ ಅವರ ಸಮಸ್ಯೆಗಳ ಬಗ್ಗೆ ಮಾತನಾಡಿ ನಿಮ್ಮನ್ನು ಇನ್ನಷ್ಟು ತೊಂದರೆಗೊಳಿಸಬಹುದು. ನಿಮ್ಮ ಸಂಗಾತಿಯಿಂದ ಅಚ್ಚರಿಯ ಸುದ್ದಿ ಕಾದಿರುತ್ತದೆ. ನಿಮ್ಮ ಎಲ್ಲ ಕೆಲಸವನ್ನು ಬಿಟ್ಟು ಅವರೊಂದಿಗೆ ಸಮಯವನ್ನು ಕಳೆಯಬಹುದು. ಸಾಮಾಜಿಕ ಕಾರ್ಯಗಳಿಗೆ ಹಾಜರಾಗಲು ಅವಕಾಶಗಳಿರಬಹುದು ಹಾಗೂ ಇದು ನಿಮ್ಮನ್ನು ಪ್ರಭಾವಿ ವ್ಯಕ್ತಿಗಳ ಜೊತೆ ನಿಕಟ ಸಂಪರ್ಕ ಹೊಂದುವಂತೆ ಮಾಡಬಹುದು. ಜೀವನದ ತೊಂದರೆಗಳನ್ನು ಸಂಬಂಧಿಕರೊಂದಿಗೆ ಭಿನ್ನಾಭಿಪ್ರಾಯಗಳು ಹೆಚ್ಚಾಗುತ್ತವೆ. ಒಳ್ಳೆಯದನ್ನು ಪಡೆಯಲು ಲಲಿತಾಸಹಸ್ರನಾಮವನ್ನು ಪಠಿಸಿ.
  3. ಮಿಥುನ ರಾಶಿ: ಪ್ರಯಾಣದ ಸಮಯದಲ್ಲಿ ಖರ್ಚು ಹೆಚ್ಚಾಗುತ್ತದೆ. ಮಾನಸಿಕವಾದ ಉಲ್ಲಾಸವಿರಲಿದೆ. ದೈಹಿಕ ಸೌಕರ್ಯವನ್ನು ಸಾಧಿಸಲಾಗುತ್ತದೆ. ಈ ದಿನವನ್ನು ಜಾಗರೂಕತೆಯಿಂದ ಆಯೋಜಿಸಿ. ಸುತ್ತಲೂ ನಿಮ್ಮ ಪ್ರಿಯತಮೆಯ ಪ್ರೀತಿಯನ್ನು ಅನುಭವಿಸುತ್ತೀರಿ.‌ ಕುಟುಂಬದಲ್ಲಿ ಕೆಲವು ಸಮಸ್ಯೆಗಳಿರುತ್ತವೆ. ನೀವು ಕೆಲವು ವ್ಯವಹಾರ ಅಥವಾ ಒಪ್ಪಂದದೊಂದಿಗೆ ಸಂಪರ್ಕ ಹೊಂದಿದ್ದರೆ, ಅದೃಷ್ಟವು ನಿಮ್ಮೊಂದಿಗೆ ಇರುತ್ತದೆ. ವಿಷ್ಣುಸಹಸ್ರನಾಮವನ್ನು ಒಳ್ಳೆಯದಕ್ಕಾಗಿ ಪಠಿಸಿ.
  4. ಕಟಕ ರಾಶಿ: ವ್ಯಾಪಾರದ ಉದ್ದೇಶದಿಂದ ಕೈಗೊಂಡ ಪ್ರಯಾಣ ದೀರ್ಘಾವಧಿಯಲ್ಲಿ ಪ್ರಯೋಜನಕಾರಿ ಎಂದು ಸಾಬೀತಾಗುತ್ತದೆ. ಅನಿರೀಕ್ಷಿತ ರೂಪದಲ್ಲಿ ವೈವಾಹಿಕ ಸಂಬಂಧಗಳು ಕೂಡಿ ಬರಲಿದೆ. ಹಣಕಾಸಿನ ವಿಚಾರದಲ್ಲಿ ಲೆಕ್ಕಾಚಾರದ ಗಟ್ಟಿತನ ಧೈರ್ಯ ಕೊಡಲಿದೆ. ಆರೋಗ್ಯ ಉತ್ತಮ. ಸಾಲವನ್ನು ಮರುಪಾವತಿ ಮಾಡದೇ ಇರುವ ನಿಮ್ಮ ಸಂಬಂಧಿಕರಿಗೆ ಇಂದು ಸಾಲ ಕೊಡಬಾರದು. ಅತಿಥಿಗಳ ಆಗಮನದಿಂದ ಮನೆಯಲ್ಲಿ ಆಹ್ಲಾದಕರ ವಾತಾವರಣ. ಇಂದು ನಿಮ್ಮ ಕೆಲಸದ ಸ್ಥಳದಲ್ಲಿ ಪ್ರೀತಿ ಮೇಲುಗೈ ಸಾಧಿಸುತ್ತದೆ. ಕೆಲಸ ಕಾರ್ಯಗಳು ಫಲಿಸಲಿವೆ.
  5. ಸಿಂಹ ರಾಶಿ: ಮಾತು ಕಡಿಮೆ ಇದ್ದಷ್ಟೂ ಒಳ್ಳೆಯದು. ಇಲ್ಲದಿದ್ದರೆ ಚಿತ್ರಣದ ಮೇಲೆ ಕೆಟ್ಟ ಪರಿಣಾಮ ಬೀರಬಹುದು. ಅವಿವಾಹಿತರಿಗೆ ಮಾಂಗಲ್ಯ ಭಾಗ್ಯ ಕೂಡಿಬರಲಿದೆ. ಕ್ರೀಡೆಯಲ್ಲಿ ಜಯಗಳಿಸುವ ಸಾಧ್ಯತೆ ಇದೆ. ಸ್ನೇಹಿರಿಗೆ ಸಾಲವನ್ನು ನೀಡಬೇಕಾಗಿಬರಬಹುದು. ಸಂಗಾತಿಯ, ಪ್ರೇಯಸಿ ಜೊತೆಯಲ್ಲಿ ಸುತ್ತಾಟ. ವ್ಯಾಪಾರಿಗಳಿಗೆ ಹಳೆಯ ಹೂಡಿಕೆಯ ಕಾರಣದಿಂದಾಗಿ ಇಂದು ನಷ್ಟವಾಗುವ ಸಾಧ್ಯತೆ ಇದೆ. ಒಬ್ಬ ಆಧ್ಯಾತ್ಮಿಕ ನಾಯಕರು ಅಥವಾ ಹಿರಿಯರು ಮಾರ್ಗದರ್ಶನ ದೊರೆಯಲಿದೆ. ಶಿವನನ್ನು ಪೂಜಿಸಿ.
  6. ಕನ್ಯಾ ರಾಶಿ: ನೀವು ಒಳ್ಳೆಯ ಅಭಿವೃದ್ಧಿ ಸಾಧಿಸುತ್ತಿದ್ದ ಹಾಗೆ ಪ್ರೇಮ ಜೀವನ ಒಳ್ಳೆಯ ತಿರುವು ತೆಗೆದುಕೊಳ್ಳುತ್ತದೆ. ಒರಟುತನದಿಂದ ಪತಿ ಪತ್ನಿಯರ ನಡುವೆ ಕಲಹ. ಹಿರಿಯರ ಸಲಹೆಯನ್ನು ಒಡೆಯಿರಿ. ನೀವು ನಿಮ್ಮ ಕೆಲಸದ ಮೇಲೆ ಮಾತ್ರ ಗಮನಹರಿಸಿದರೆ ಉತ್ತಮ. ಏನಾದರೂ ಬಾಲಿಶವಾದದ್ದನ್ನು ಮಾಡುವ ಮೊದಲು ನಿಮ್ಮ ವರ್ತನೆಯ ಪರಿಣಾಮದ ಬಗ್ಗೆ ಆಲೋಚಿಸಿ. ಇತರರಿಗೆ ಒಳ್ಳೆಯದನ್ನು ಮಾಡುವ ಕಾರ್ಯಕ್ಕೆ ಪ್ರತಿಫಲವಿದೆ. ನೀವು ನಿರಾಸೆ ಅನುಭವಿಸುತ್ತೀರಿ. ಬಿಡುವಿನ ವೇಳೆಯಲ್ಲಿ ಆಧ್ಯಾತ್ಮಿಕ ಪುಸ್ತಕಗಳ ಅಧ್ಯಯನ ಮಾಡಬೇಕು. ದಾಂಪತ್ಯಜೀವನ ಅಪರೂಪದ ಕ್ಷಣಗಳ ಇಂದಿರಲಿವೆ.
  7. ತುಲಾ ರಾಶಿ:ಕೋಪವನ್ನು ಹತೋಟಯಲ್ಲಿ ಇಟ್ಟುಕೊಳ್ಳಿ. ಕುಟುಂಬದ ಅಸಮಾಧಾನಕ್ಕೆ ಕಾರಣವಾಗಬಹುದು. ಮಕ್ಕಳ ಆರೋಗ್ಯದ ವಿಷಯದಲ್ಲಿ ಗಮನವಿರಲಿ. ಪ್ರಣಯದ ಸಂಬಂಧಿಸಿದಂತೆ ಹೆಚ್ಚು ಬೇಡಿಕೆಗಳು ಬರಬಹುದು. ಆಪ್ತರೊಂದಿಗೆ ಹೊಸ ಉದ್ಯೋಗವನ್ನು ಆರಂಭಿಸಬಹುದು. ಆದರೆ ಪಾಲುದಾರರ ಜೊತೆ ಕೈಜೋಡಿಸುವ ಮೊದಲು ಯೋಚಿಸಿ. ಜೀವನದಲ್ಲಿ ಆಸಕ್ತಿದಾಯಕ ವಿಷಯಗಳಿಗೆ ಕಾಯುತ್ತಿದ್ದಲ್ಲಿ ನಿಮಗೆ ಈಗ ಸ್ವಲ್ಪವಾದರೂ ಪರಿಹಾರ ದೊರಕುವುದು ಖಚಿತ. ದೇವಿಯನ್ನು ಆರಾಧಿಸಿ. ಇಷ್ಟಾರ್ಥವನ್ನು ನೀಡುವಳು ಉದ್ಯೋಗ ಬದಲಾವಣೆಯ ಸಾಧ್ಯತೆ ಇದೆ.
  8. ವೃಶ್ಚಿಕ ರಾಶಿ: ನಿಮ್ಮ ಕುಟುಂಬದ ಯಾವುದೇ ಸದಸ್ಯ ಇಂದು ನಿಮ್ಮೊಂದಿಗೆ ಸಮಯವನ್ನು ಕಳೆಯಲು ಒತ್ತಾಯಿಸಬಹುದು. ಮಾತು ಕಡಿಮೆ, ಕಾರ್ಯ ಹೆಚ್ಚು ಮಾಡುವತ್ತ ಗಮನ ಹರಿಸುವುದು ಉತ್ತಮ. ಪ್ರಭಾವೀ ವ್ಯಕ್ತಿಗಳ ಭೇಟಿ ನಿಮ್ಮ ಮನೋಬಲವನ್ನು ಹೆಚ್ಚಿಸುತ್ತದೆ. ಕುಟುಂಬದೊಂದಿಗೆ ಸಮಸ್ಯೆಗಳನ್ನು ಹಂಚಿಕೊಳ್ಳಿ. ನಿಮ್ಮ ಗೆಳತಿಯ ಜೊತೆ ಅಸಭ್ಯವಾಗಿ ನಡೆದುಕೊಳ್ಳಬೇಡಿ. ಅದು ನಿಮಗೆ ಮುಳ್ಳಾಗಬಹುದು. ಕೆಲಸದಲ್ಲಿ ತಡೆಯೊಡ್ಡುವವರು ತೀವ್ರ ಅವನತಿ ಹೊಂದುತ್ತಾರೆ. ಕಾರಣದಿಂದಾಗಿ ನಿಮ್ಮ ಕೆಲವು ಸಮಯ ವ್ಯರ್ಥವಾಗಬಹುದು. ಅನಾರೋಗ್ಯ ಕಾಡಬಹುದು. ಕಾರ್ತಿಕೇಯನನ್ನು ಸ್ಮರಿಸಿ.
  9. ಧನು ರಾಶಿ: ಖರ್ಚುಗಳಿಗೆ ಸ್ವಂತ ಹಣವನ್ನು ಬಳಸಿ. ಯಾವುದೇ ವಾದ ವಿವಾದಗಳಿಗೆ ಕಿವಿಯನ್ನು ಕೊಡಬೇಡಿ. ಬಾಕಿಯಿರುವ ಗೃಹಕೃತ್ಯಗಳನ್ನು ಪೂರೈಸಲು ಒಂದು ಅನುಕೂಲಕರ ದಿನ. ಎಲ್ಲ ಹತಾಶೆ, ನೋವು, ಸಂಕಟ, ತುಮುಲಗಳನ್ನು ನಿವಾರಿಸಿಕೊಳ್ಳಲು ಒಳ್ಳೆಯ ಸಮಯ ಮತ್ತಾವುದೂ ಇಲ್ಲ. ಘಟನೆಗಳು ಉತ್ತಮ ಮತ್ತು ಗೊಂದಲಮಯವಾಗಿರುವ ಒಂದು ದಿನ – ಇದು ನಿಮ್ಮನ್ನು ದಣಿವು ಹಾಗೂ ಗೊಂದಲದಲ್ಲಿರಿಸುತ್ತದೆ. ಆರೋಗ್ಯ ಭಾಗ್ಯಕ್ಕಾಗಿ ಹೆಚ್ಚಿನ ಕಾಳಜಿವಹಿಸಿದ್ದಲ್ಲಿ ಆಸ್ಪತ್ರೆಯ ಅಲೆದಾಟ ತಪ್ಪಲಿದೆ. ಮಕ್ಕಳಿಗೆ ಯೋಗ್ಯವಾದ ಮಾರ್ಗದರ್ಶನವನ್ನು ಮಾಡಿ.
  10. ಮಕರ ರಾಶಿ: ನಿಮ್ಮವರ ಜೊತೆ ಆನಂದದಿಂದ ಕಾಲವನ್ನು ಕಳೆಯುವಿರಿ. ದೀರ್ಘಪ್ರಯಾಣವನ್ನು ಇಂದು ಮಾಡುವುದು ಒಳಿತಲ್ಲ‌. ಅನಿವಾರ್ಯ ಕಾರಣಗಳಿಂದ ಖರ್ಚಿಗೆ ನಾನಾ ಮಾರ್ಗಗಳು ತೆರದುಕೊಳ್ಳಬಹುದು. ಇಂದು ನಿಮ್ಮ ಸಾಮಾರ್ಥ್ಯವನ್ನು ವ್ಯಕ್ತಪಡಿಸಲು ಸಕಾಲ. ಸಹೋದರರಿಂದ ಸಲಹೆ ಪಡೆದು ಮುನ್ನಡೆಯಿರಿ. ಸೃಜನಾತ್ಮಕವಾಗಿ ಬದುಕುವ ಸ್ವಭಾವಕ್ಕೆ ಫಲಸಿಗಬಹುದು. ಉತ್ತಮವಾದ ಯೋಜನೆಗಳನ್ನು ರೂಪಿಸಿ. ಪ್ರೇಮ ಅಂಕುರಿಸುವ ಸಾಧ್ಯತೆ ಇದೆ. ನೀರೆರೆದರೆ ಫಲಿಸಲೂ ಬಹುದು. ನಿಮ್ಮ ಸಂಗಾತಿಯು ನಿಮಗೆ ಅನುಕೂಲವನ್ನು ಕಲ್ಪಿಸುವವಳೇ ಆಗಿದ್ದಾಳೆ.
  11. ಕುಂಭ ರಾಶಿ: ಮೋಸ ಹೋಗುವ ಸಾಧ್ಯತೆ ಇದೆ. ಆತುರದ ತೀರ್ಮಾನ ಹಾಗೂ ಒತ್ತಡಗಳಿಗೆ ಸಿಲಿಕದೇ ಎಚ್ಚರಿಕೆಯಿಂದಿರಿ. ಹಣಕಾಸಿನ ಹರಿವು ಹೆಚ್ಚಾಗಲಿದೆ. ಕೊಟ್ಟ ಸಾಲ ಮರಳಿಬರಹುದು. ನಿಮ್ಮ ಮೇಲೆ ಸಹಾನುಭೂತಿಯು ಉಂಟಾಗುವ ಸಾಧ್ಯತೆ ಇದೆ. ಜಾಗರೂಕರಾಗಿರಿ. ನಿಮ್ಮನ್ನು ನೀವೇ ಕಾಪಾಡಿಕೊಳ್ಳಿ. ನೀವು ಗಣ್ಯರೊಂದಿಗೆ ಇಂದಿನ ಒಡನಾಡವಿರಲಿದೆ. ವಿವಾಹಕ್ಕೆ ಸಂಬಂಧಿಸಿದ ಕಟು ಮಾತುಗಳು ಕೇಳಿಬರಬಹುದು. ಉತ್ತರಿಸಲು ಹೋಗದೇ ಅಲೆಗಳು ಶಾಂತವಾಗುವವರೆಗೆ ಸುಮ್ಮನಿರಿ. ಶಿವನ ಅನುಗ್ರಹಕ್ಕೆ ಪಾತ್ರರಾಗಿ.
  12. ಮೀನ ರಾಶಿ: ಸ್ನೇಹಿತರು ನಿಮ್ಮ ಜೊತೆಗೇ ಇದ್ದು ನಿಮ್ಮ ಎಲ್ಲ ಆಗುಹೋಗುಗಳಿಗೂ ಜೊತೆಯಾಗುವರು. ಉದ್ವಿಗ್ನಗೊಳ್ಳದೇ ಸಮಾಧಾನದಿಂದ ಇರಬೇಕಾದ ಅವಶ್ಯಕತೆಯಿದೆ. ನಿಮ್ಮ ಬಗ್ಗೆ ಇಲ್ಲಸಲ್ಲದ‌ ಗುಮಾನಿಗಳು ಎಲ್ಲೆಡೆ ಹರಡಬಹುದು. ವ್ಯಸನಕ್ಕೆ ತುತ್ತಾಗಿ ಹಣವನ್ನೂ ಆರೋಗ್ಯವನ್ನೂ ಉಳಿಸಿಕೊಳ್ಳಬೇಕಾಗಬಹುದು. ಮಾಡದೇ ಉಳಿದ ಕೆಲಸ ಕಾರ್ಯಗಳತ್ತ ಗಮನಹರಿಸಿ. ವ್ಯಾಪರದಲ್ಲಿ ಲಾಭವಾಗಲಿದೆ. ವಿದ್ಯಾರ್ಥಿಗಳು ಪರಿಶ್ರಮದ ಓದಿಗೆ ಫಲಸಿಗಬಹುದು. ಕಾರ್ಯಸ್ಥಾನದಲ್ಲಿ ಗೊಂದಲದ, ಹತಾಶೆಯ ವಾತಾವರಣ ಇರಬಹುದು. ಪುಣ್ಯಸ್ಥಳಗಳ ದರ್ಶನಭಾಗ್ಯ ಸಿಗಲಿದೆ. ರಾಯರ ಅನುಗ್ರಹವನ್ನು ಪಡೆಯಿರಿ.ಲೋಹಿತಶರ್ಮಾ, ಇಡುವಾಣಿ

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ