Nitya Bhavishya: ಆತುರದ ನಿರ್ಧಾರ ಬೇಡ, ಧಾರ್ಮಿಕ ಕಾರ್ಯಗಳಿಗೆ ಹಣ ವ್ಯಯ ಸಾಧ್ಯತೆ

2023 ಜನವರಿ 17 ಮಂಗಳವಾರ ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

Nitya Bhavishya: ಆತುರದ ನಿರ್ಧಾರ ಬೇಡ, ಧಾರ್ಮಿಕ ಕಾರ್ಯಗಳಿಗೆ ಹಣ ವ್ಯಯ ಸಾಧ್ಯತೆ
ಪ್ರಾತಿನಿಧಿಕ ಚಿತ್ರImage Credit source: google.com
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Jan 17, 2023 | 5:37 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದ್ರೆ 2023 ಜನವರಿ 17 ಮಂಗಳವಾರ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯ ಪಂಚಾಂಗ: ಶಾಲಿವಾಹನ ಶಕೆ 1945, ಶುಭಕೃತ್ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಧನುರ್ಮಾಸ, ಉತ್ತರಾಷಾಢ ಮಹಾನಕ್ಷತ್ರ, ಮಾಸ: ಪೌಷ, ಪಕ್ಷ: ಕೃಷ್ಣ, ಸೋಮವಾರ, ತಿಥಿ: ದಶಮೀ, ನಿತ್ಯನಕ್ಷತ್ರ: ವಿಶಾಖಾ, ಯೋಗ: ಶೂಲ, ಕರಣ: ಭದ್ರ, ರಾಹು ಕಾಲ 3ಗಂಟೆ 33 ನಿಮಿಷದಿಂದ 4 ಗಂಟೆ 58 ನಿಮಿಷದವರೆಗೆ, ಸೂರ್ಯೋದಯ: ಬೆಳಗ್ಗೆ 07 ಗಂಟೆ 02 ನಿಮಿಷಕ್ಕೆ, ಸೂರ್ಯಾಸ್ತ: ಸಂಜೆ 06 ಗಂಟೆ 22 ನಿಮಿಷಕ್ಕೆ.

ತಾ. 17-01-2023 ರ ಮಂಗಳವಾರ ರಾಶಿ ಭವಿಷ್ಯ ಹೀಗಿದೆ:

ಮೇಷ: ಧಾರ್ಮಿಕ ಕಾರ್ಯಗಳಿಂದ ನಿಮ್ಮ ಹಣವು ವ್ಯಯವಾಗುವ ಸಾಧ್ಯತೆ ಇದೆ. ಇದು ನಿಮ್ಮ ಮನಸ್ಸಿಗೆ ಶಾಂತಿಯನ್ನೂ ನೆಮ್ಮದಿಯನ್ನೂ ನೀಡುತ್ತದೆ. ಹಾಸ್ಯದಿಂದ ಇನ್ನೊಬ್ಬರಿಗೆ ನೋವಾಂಟಾಗಬಹುದು. ಹಿರಿಯ ಹಾಗೂ ಪ್ರಮುಖ ವ್ಯಕ್ತಿಗಳನ್ನು ಇಂದು ಭೇಟಿಯಾಗುತ್ತೀರಿ. ನೀವು‌ ಮಾಡುವ ಕಾರ್ಯಕ್ಕೆ ಇತರರ ಸಹಾಯವೂ ಲಭ್ಯವಾಗಲಿದೆ. ನಿಮ್ಮ ಹತ್ತಿರದರನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿ.

ವೃಷಭ: ಆತುರದ ನಿರ್ಧಾರವನ್ನು ತೆಗದುಕೊಳ್ಳಬೇಡಿ. ಪ್ರತ್ಯಕ್ಷವಾಗಿ ಕಂಡಿದ್ದು ಮಾತ್ರ ಸತ್ಯವಲ್ಲವೆಂಬುದನ್ನು ನೀವು ಅರಿತುಕೊಳ್ಳಬೇಕು. ಉತ್ತಮ ಆಹಾರವನ್ನು ಸೇವಿಸುವಿರಿ. ಕುಟುಂಬದವರೇ ಆದ ಅಪರೂಪದ ವ್ಯಕ್ತಿಗಳನ್ನು ಭೇಟಿಯಾಗುವಿರಿ. ಎಷ್ಟೋ ದಿನದ ಸಾಲಗಳು ಇಂದು ಮುಕ್ತಾಯಗೊಳ್ಳುವುವು‌. ಆಫೀಸ್​ನಲ್ಲಿ ಒತ್ತಡದ ವಾತಾವರಣವಿರುವುದು. ಸಮಾಧಾನದಿಂದ ನಿಭಾಯಿಸಿ. ಕಾಲು ಕೆರೆದುಕೊಂಡು ಯಾರೊಂದಿಗೂ ಜಗಳವಾಡಬೇಡಿ.

ಮಿಥುನ: ನಿಃಸ್ವಾರ್ಥ ಸೇವೆಯಲ್ಲಿ ಸಮಯವನ್ನು ಕಳೆಯಿರಿ. ಅನೇಕ ಶುಭಸೂಚನೆಗಳು ನಿಮ್ಮ ಕಾರ್ಯಕ್ಕೆ ಒಳ್ಳೆಯದನ್ನೇ ಮಾಡಲಿದೆ. ನಿಮ್ಮನ್ನು ಗಮನಿಸುವವರು ಹತ್ತಾರು ಮಂದಿಯಿರುತ್ತಾರೆ. ನೀವು ನಿಮ್ಮ ಸನ್ಮಾರ್ಗವನ್ನು ಬಿಡಬೇಡಿ. ಹಣದಕ್ಕೆ ಸಂಬಂಧಿಸಿದ ತೊಂದರೆಗೆ ಮನೆಯಿಂದ ಸಹಾಯ ದೊರೆಯಬಹುದು. ನಿಮ್ಮವರನ್ನು ಮಾತನಾಡಿಸಿ, ಅವರೊಂದಿಗೆ ಕೆಲವು ಮಾತನಾಡಿ. ಸಂಬಂಧಗಳು ಸುಂದರವಾಗಿರಲಿ. ಸಂಬಂಧಿಕರ ಜೊತೆ ವ್ಯವಹಾರವನ್ನು ಮಾಡಬೇಡಿ.

ಕಟಕ: ಅನಾರೋಗ್ಯವು ನಿಮ್ಮ ಉತ್ಸಾಹವನ್ನು ಕುಗ್ಗಿಸಬಹುದು. ನೆರೆಮನೆಯವರ ಜೊತೆ ವೈಮನಸ್ಯ ಬೆಳೆಯಬಹುದು. ಮನೆಯಲ್ಲಾಗಲಿ ಕಛೇರಿಯಲ್ಲಾಗಲಿ ನಿಮ್ಮ ಮಾತನ್ನು ಬೆಂಬಲಿಸುತ್ತಾರೆ. ಅನಿರೀಕ್ಷಿತ ಸಂಪತ್ತು ಸಿಗುವ ಸಾಧ್ಯತೆ ಇದೆ. ಇಂದು ಬಂದ ಅತಿಥಿಯ ಜೊತೆ ಹರಟೆಯನ್ನು ಹೊಡೆಯುತ್ತೀರಿ. ಕಲಾತ್ಮಕ ಮತ್ತು ಸೃಜನಶೀಲವ್ಯಕ್ತಿತ್ವಕ್ಕೆ ಬಹಳಷ್ಟು ಮೆಚ್ಚುಗೆ ಬರಲಿದೆ. ನಿರೀಕ್ಷೆಗಿಂತಲೂ ಹೆಚ್ಚಿನ ಫಲವು ಸಿಗಲಿದೆ. ತಂದೆ-ತಾಯಿಯರ ಅನುಗ್ರಹವನ್ನು ಪಡೆಯಲಿದ್ದೀರಿ.

ಸಿಂಹ: ಕಲ್ಪನೆಯಂತೆ ಏನೂ ನಡೆಯದು ಎನ್ನುವ ಸತ್ಯದರ್ಶನವಾಗಬಹುದು. ಕ್ರೀಡೆಯಲ್ಲಿ ಮನಸ್ಸುಳ್ಳವರಾಗುವಿರಿ. ದೂರಪ್ರಯಾಣ ಸುಖಕರವಾಗಿದೆ. ಸರ್ಕಾರಿ ಕೆಲಸಗಳು ನಿಧಾನಗತಿಯಲ್ಲಿರುವುದು. ಸಿಟ್ಟನ್ನು ಕಡಿಮೆಮಾಡಿಕೊಳ್ಳಿ. ನಿಮ್ಮ ಹಾದಿಯನ್ನು ನೋಡಿಕೊಳ್ಳುವ ಸಮಯವಿದಾಗಿರುತ್ತದೆ. ನಿಮ್ಮ ಆಲೋಚನೆಗಳನ್ನು ಇತರೊಂದಿಗೆ ಹಂಚಿಕೊಂಡರೆ ನಿಮ್ಮ ಸ್ಥಾನಕ್ಕೆ ಚ್ಯುತಿ ಬಂದೀತು. ಅಪರಿಚಿತರ ನಂಬುಗೆಯಿಂದ ಅನರ್ಥವಾದೀತು.

ಕನ್ಯಾ: ನಿಮ್ಮ ನಡೆ ಹಾಗೂ ನುಡಿಗಳು ವಿರೋಧದಂತೆ ಭಾಸವಾಗಬಹುದು. ಸ್ವಲ್ಪ ಕಾಲದ ಏನನ್ನೂ ಯೋಚಿಸದೇ ಇರಲು ಯತ್ನಿಸಿ. ಮನಸ್ಸು ಶಕ್ತಿಯನ್ನು ಉಲ್ಬಣಗೊಳಿಸಿಕೊಳ್ಳುವುದು. ನಕಾರಾತ್ಮಕತೆ ದೂರವಾಗುವುದು. ಹಣದ ಸಮಸ್ಯೆಗಳು ಎದುರಾಗಬಹುದು. ಪರಿಹಾರದ ದಾರಿಗಳು ಆ ಕ್ಷಣದಲ್ಲಿ ಸ್ಫುರಿಸುವುದು. ವಿಶ್ವಸಘಾತಕ ಕಾರ್ಯಗಳಿಗೆ ಮುನ್ನುಗ್ಗದಿರಿ. ಪೆಟ್ಟು ತಿಂದರೆ ಮತ್ತೇಳುವುದು ಕಷ್ಟ. ಸುಳ್ಳಾಡಿ ಸಿಕ್ಕಿಕೊಳ್ಳಬಹುದು. ಮಾತು ಮಿತವಾಗಿರಲಿ.

ತುಲಾ: ವ್ಯಾಪಾರದಲ್ಲಿ ಕೆಲವು ಬದಲಾವಣೆಗಳನ್ನು ಮಾಡಬೇಕೆಂದು ಅನ್ನಿಸಬಹುದು. ಮನೆಯಲ್ಲಿ ಸಣ್ಣ ಸಣ್ಣ ಖರ್ಚುಗಳಿಗೆ ಧನವನ್ನು ಖರ್ಚು ಮಾಡಬೇಕಾಗಬಹುದು. ನಿಮ್ಮ ಜೀವನವನ್ನು ಲಘುವಾಗಿ ಕಾಣುವುದು ಬೇಡ. ಕಾಲವೇ ಅದಕ್ಕೆ ಉತ್ತರಿಸಬೇಕು. ಅಲ್ಲಿಯ ತನಕ ತಾಳ್ಮೆಯಿಂದ ಇರಬೇಕಾದ ಕರ್ತವ್ಯವಿದೆ. ಒಳ್ಳೆಯವರ ಸಂಗ ಸಿಗಬಹುದು ಅಥವಾ ಒಳ್ಳೆಯ ಪುಸ್ತಕವನ್ನು ತಂದು ಓದಿ. ಸ್ನೇಹಿತನ‌ ಕೆಲಸವನ್ನು ಅದು ಮಾಡುವುದು. ಹಳೆಯ ಗೆಳತಿ ನೆನಪಿಗೆ ಬರಬಹುದು.

ವೃಶ್ಚಿಕ: ಸಿಕ್ಕ ವಸ್ತುವನ್ನು ಸಂತೃಪ್ತಿಯಿಂದ ಅನುಭವಿಸುವ ಜಾಯಮಾನವನ್ನು ರೂಢಿಸಿಕೊಳ್ಳುವಿರಿ. ಇನ್ನೊಬ್ಬರನ್ನು ಗೌರವಿಸುವ ಅಭ್ಯಾಸದಿಂದ ನಿಮಗೆ ಶ್ರೇಷ್ಠವಾದ ಮಾರ್ಗವು ತೆರೆದುಕೊಳ್ಳಬಹುದು. ಸ್ಥಾನವನ್ನೂ, ಬುದ್ಧಿಯನ್ನೂ ಸ್ಥಳವನ್ನೂ ಸಂದರ್ಭವನ್ನೂ ವ್ಯಕ್ತಿಯನ್ನೂ ನಗಣ್ಯಗೊಳಿಸಬೇಡಿ. ನಿಮ್ಮ ಕುಟುಂಬದ ಬಗ್ಗೆ ಹೆಮ್ಮೆಯ ಭಾವ ಮೂಡುತ್ತದೆ. ನೀವು ಆರಾಮಾಗಿದ್ದೀರಿ ಎಂದು ತೋರಿಸಲು ಹೋಗಬೇಡಿ‌. ನಿಮ್ಮ ಮೇಲೆ ಕೆಟ್ಟ ದೃಷ್ಟಗಳು ಬೀಳಬಹುದು.

ಧನು: ಯಾರಿಂದ ಸಹಾಯವನ್ನು ಬಯಸದ ನೀವು ಇಂದು ಅನಿವಾರ್ಯವಾಗಿ ಅವರನ್ನೇ ಹೋಗಿ ಕೇಳುವ ಸ್ಥಿತಿ ಎದುರಾದೀತು. ಸಂಗಾತಿಯ ಜೊತೆ ದೂರದ ಊರಿಗೆ‌ ಪ್ರಯಾಣ ಮಾಡುವಿರಿ. ನಿಮ್ಮೊಳಗಿದ್ದ ಮೋಡಗಟ್ಟಿದ ವಾತಾವರಣ, ಕರಗಿ, ನೀರಾಗಿ ಹನಿ ನೀರ ಸುರಿಸುವುದು. ಮಕ್ಕಳಿಂದ ಮಾನಸಿಕ ಹಿಂಸೆ ಎದುರಾದೀತು. ಖರ್ಚು ಹೆಚ್ಚಾಯಿತು ಎನ್ನುವ ಭಯವಿರುವುದು. ಉದ್ಯಮಿಗಳಿಗೆ ವ್ಯಾಪಾರಕ್ಕೆ ಸಂಬಂಧಿಸಿದ ಅನಿರೀಕ್ಷಿತ ಪ್ರಯಾಣವು ಬರಲಿದೆ‌. ಯಾರಿಗೋ ಕಾದು ಸಮಯವನ್ನು ಹಾಳು ಮಾಡುವಿರಿ. ಒಂಟಿಯಾಗಿ ಇರುವುದನ್ನು ಕಡಿಮೆ ಮಾಡಿ. ಏನಾದರೂ ಕಾರ್ಯವನ್ನು ಮಾಡುತ್ತಿರಿ.

ಮಕರ: ವಿದ್ಯಾರ್ಥಿಗಳಿಗೆ ಅಪವಾದ ಬರುವ ಸಾಧ್ಯತೆ ಇದೆ. ಶ್ರದ್ಧೆಯಿಂದ ಅಭ್ಯಾಸದ ಕಡೆ ಗಮನವಿಡಿ. ಅದೇ ಉತ್ತರವಾಗಲಿದೆ. ನಿಮ್ಮ ಎಂದಿನ‌ ನಿಚ್ಚಲ ಮನಸ್ಸಿನಿಂದ ವಿಚಲಿತರಾಗಬೇಡಿ. ಶೈಕ್ಷಣಿಕ ಪ್ರಗತಿಯನ್ನು ಸಾಧಿಸಬಹುದಾಗಿದೆ‌. ನಿಮ್ಮ ಕಿವಿ ಮಾತು ಅನೇಕರಿಗೆ ಸ್ಫೂರ್ತಿಯಾಗಬಹುದು. ಒಂದಿಲ್ಲೊಂದು ವಿಷಯಗಳಿಂದ ಸುಖವನ್ನು ಪಡೆಯುವ ನಿಮಗೆ ಮುಂಬರುವ ವಿಷಯಗಳನ್ನು ಹೇಗೆ ನಿಭಾಯಿಸಬೇಕು ಎನ್ನುವ ಸ್ಪಷ್ಟತೆಯನ್ನು ಇಟ್ಟುಕೊಂಡಿರುತ್ತೀರಿ. ಶತ್ರುಗಳಿಂದ ಎಚ್ಚರವಾಗಿರಿ. ದಿನವನ್ನು ಅನಾಯಾಸವಾಗಿ ಕಳೆಯುವಿರಿ.

ಕುಂಭ: ಶಾಂತಮತಿಯಾಗಿ ಇರುವುದೇ ನಿಮ್ಮ ಗುಟ್ಟಾಗಿದ್ದು, ಎಲ್ಲರೊಂದಿಗೆ ಸೌಹಾರ್ದವಾಗಿ ಇರಲಿದ್ದೀರಿ. ಅತಿಯಾದ ಪ್ರಯಾಣದಿಂದ ಆಯಾಸ ಮತ್ತು ಒತ್ತಡಗಳು ನಿರ್ಮಾಣವಾಗುವುವು. ಕಛೇರಿಯಲ್ಲಿ ನಿಮ್ಮ ಕೆಲಸಗಳನ್ನು ಕಂಡು ನಿಮ್ಮನ್ನು ಪ್ರಶಂಸಿಸುವರು‌. ಹೊಸ ಕೆಲಸವನ್ನು ಆರಂಭಿಸುವ ಹುನ್ನಾರ ನಡೆಸುವಿರಿ. ನಂಬುಗೆಯನ್ನು ಉಳಿಸಿಕೊಳ್ಳುವ ಕಾರ್ಯವನ್ನು ಮಾಡಬೇಕು. ನಿಮ್ಮನ್ನು ಇಷ್ಟಪಟ್ಟವರೊಡನೆ ಸಮಯವನ್ನು ಕಳೆಯಿರಿ. ಸಂಗಾತಿಯನ್ನು ಹುಡುಕುವ ಪ್ರಯತ್ನದಲ್ಲಿ ಇರುತ್ತೀರಿ.

ಮೀನ: ನಿಮಗೆ ಗೊತ್ತಿಲ್ಲದೇ ದೈವವೊಂದು ನಿಮ್ಮನ್ನು ಅನುಕೂಲವಾದ ವಾತಾವರಣಕ್ಕೆ ಕರೆದೊಯ್ಯುತ್ತಿರುತ್ತದೆ. ಅದನ್ನು ಸ್ವೀಕರಿಸುವ ಮನಸ್ಸನ್ನು ಬೆಳೆಸಿಕೊಳ್ಳುವುದು ಉತ್ತಮ. ಕಳೆದುಹೋದ ಬಗ್ಗೆ ನೆನೆ ನೆನೆದು ಕೊರಗಿ ಕಣ್ಣೀರಾಗುವುದಕ್ಕಿಂತ ಉತ್ತಮ ಆಲೋಚನೆಗಳಿಂದ ಮುಂದಿನದನ್ನು ಚಿಂತಿಸಿ. ದಾರಿ ಸುಗಮ. ಗೌರವ, ಸಮ್ಮಾನಗಳು ನಿಮ್ಮ ಸೇವೆಗೆ, ಕಾರ್ಯಗಳಿಗೆ ಬರಲಿವೆ. ವರ್ತಮಾನ ಘಟನೆಗಳಿಂದ ವಿಚಲಿತರಾಗದಿರಿ.

ಲೋಹಿತಶರ್ಮಾ, ಇಡುವಾಣಿ