Nitya Bhavishya: ಈ ರಾಶಿಯವರಿಗೆ ವಿವಾಹದ ಸಂಬಂಧಿ ತೊಂದರೆಯಾಗಬಹುದು

TV9kannada Web Team

TV9kannada Web Team | Edited By: Kiran Hanumant Madar

Updated on: Jan 21, 2023 | 6:00 AM

Horoscope Today: ಜನವರಿ 21, 2023ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ. ರಾಹು ಕಾಲ ಮಧ್ಯಾಹ್ನ 9 ಗಂಟೆ 54 ನಿಮಿಷದಿಂದ 11 ಗಂಟೆ 19 ನಿಮಿಷದವರೆಗೆ, ಸೂರ್ಯೋದಯ: ಬೆಳಗ್ಗೆ 07 ಗಂಟೆ 03 ನಿಮಿಷಕ್ಕೆ, ಸೂರ್ಯಾಸ್ತ: ಸಂಜೆ 06 ಗಂಟೆ 24ನಿಮಿಷಕ್ಕೆ.

Nitya Bhavishya: ಈ ರಾಶಿಯವರಿಗೆ ವಿವಾಹದ ಸಂಬಂಧಿ ತೊಂದರೆಯಾಗಬಹುದು
ರಾಶಿ ಭವಿಷ್ಯ

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದ್ರೆ 2023 ಜನವರಿ 21 ಬುಧವಾರ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯ ಪಂಚಾಂಗ: ಶಾಲಿವಾಹನ ಶಕೆ 1945, ಶುಭಕೃತ್ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಮಕರಮಾಸ, ಮಹಾನಕ್ಷತ್ರ: ಉತ್ತರಾಷಾಢ, ಮಾಸ: ಪೌಷ, ಪಕ್ಷ: ಕೃಷ್ಣ, ಬುಧವಾರ, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಅನೂರಾಧಾ, ಯೋಗ: ವೃದ್ಧಿ, ಕರಣ: ಬಾಲವ, ರಾಹು ಕಾಲ ಮಧ್ಯಾಹ್ನ 12 ಗಂಟೆ 43 ನಿಮಿಷದಿಂದ ಮಧ್ಯಾಹ್ನ 2 ಗಂಟೆ 08 ನಿಮಿಷದವರೆಗೆ, ಸೂರ್ಯೋದಯ: ಬೆಳಗ್ಗೆ 07 ಗಂಟೆ 02 ನಿಮಿಷಕ್ಕೆ, ಸೂರ್ಯಾಸ್ತ: ಸಂಜೆ 06 ಗಂಟೆ 23ನಿಮಿಷಕ್ಕೆ.

ತಾ. 20-01-2023 ರ ಶನಿವಾರ ರಾಶಿ ಭವಿಷ್ಯ ಹೀಗಿದೆ:

 1. ಮೇಷ:ಇತರರು ನಿಮ್ಮ ಕುರಿತು ಸಲ್ಲದ ಮಾತುಗಳನ್ನು ಆಡಬಹುದು. ತಪ್ಪುಗಳ ನಡೆಯದಿದ್ದಾಗ ಅದಕ್ಕೆ ಹೆದರಬೇಕಾದ ಅವಶ್ಯಕತೆಯಿರದು. ನಿಮ್ಮ ಕಾರ್ಯಗಳು ಎಂದಿನಂತೆ ಅಬಾಧಿತವಾಗಿ ನಡೆಯಲಿದೆ. ಆಪ್ತರ ಭೇಟಿಯಾಗಬಹುದು. ಹಲವು ದಿನಗಳಿಂದ ಹೇಳದೇ ಉಳಿದುಕೊಂಡ ವಿಷಯಗಳನ್ನು ಚರ್ಚಿಸುವಿರಿ. ಆಪ್ತಸಮಾಲೋಚನೆ ನಡೆಯಲಿದೆ. ಅವರಿಂದ ಸಹಕಾರವೂ ನಿಮಗೆ ಸಿಗುವ ಸಾಧ್ಯತೆ ಇದೆ‌.
 2. ವೃಷಭ:ನಿಮಗೆ ಇಂದು ಕೆಲವು ಜವಾಬ್ದಾರಿಗಳು ಬರಬಹುದು. ಎಲ್ಲವನ್ನೂ ಶಕ್ತಿಮೀರಿ ಪ್ರಯತ್ನಿಸುವಿರಿ. ಆಲಸ್ಯವು ಒಳ್ಳೆಯದಲ್ಲ‌. ನಿಮ್ಮದೇ ಯೋಜನೆಗಳು ನಿಮಗಿದ್ದು ಅದರ ಕುರಿತು ಆಲೋಚನೆಯನ್ನು ಮಾಡುವಿರಿ. ಕಲಾವಿದರು ಉತ್ತಮವಾದ ಅವಕಾಶವನ್ನು ಪಡೆಯಲಿದ್ದಾರೆ. ಹಳೆಯ ಖಾಯಿಲೆಯು ಮತ್ತೆ ಮರುಕಳಿಸಬಹುದು. ಹಣಕಾಸಿನಲ್ಲಿ ಸುಧಾರಣೆಯನ್ನು ಕಾಣಬಹುದಾಗಿದೆ. ಕಾರ್ಯದಲ್ಲಿ ಸಾವಧಾನತೆ ಇರಲಿದೆ.
 3. ಮಿಥುನ:ಅತಿಯಾದ ಹಿಂಸೆಯನ್ನು ಅನುಭವಿಸಬೇಕಾದ ಸ್ಥಿತಿಯು ಬರಬಹುದು. ಆಹಾರದ ಅಭಾವವು ನಿಮಗೆ ಆಗಲಿದೆ. ದೂರದ ಪ್ರಯಾಣವನ್ನು ಆದಷ್ಟು ಕಡಿಮೆ ಮಾಡಿಕೊಳ್ಳಿ. ಭೂಮಿಯ ಕ್ರಯ ಮತ್ತು ವಿಕ್ರಯದಲ್ಲಿ ನಷ್ಟವನ್ನು ಅನುಭವಿಸಬೇಕಾಗಬಹುದು. ಸರ್ಕಾರಿ ಉದ್ಯೋಗದಲ್ಲಿ ವಿಶೇಷ ಭತ್ಯೆಯು ಸಿಗಬಹುದಾಗಿದೆ. ಯಾರಾದರೂ ಚುಚ್ಚಿ ಮಾತನಾಡಬಹುದು. ಅದನ್ನು ಮನಸ್ಸಿ ತೆಗದುಕೊಳ್ಳುವಿರಿ. ಸಲಹೆಯನ್ನು ಪಡೆದುಕೊಂಡು ಸ್ವಂತ ನಿರ್ಧಾರಕ್ಕೆ ಬನ್ನಿ.
 4. ಕಟಕ:ಹೊಸ ಅಭ್ಯಾಸವನ್ನು ಕಲಿಯಲು ಪ್ರಯತ್ನಪಡುವಿರಿ. ಅಲಂಕಾರಿಕ ವಸ್ತುಗಳನ್ನು ಖರೀದಿಸುವ ಆಸಕ್ತಿಯನ್ನು ಹೊಂದಿದ್ದೀರಿ. ಮಕ್ಕಳಿಂದ ನಿಮಗೆ ಸಂತೋಷಕರವಾದ ವಾರ್ತೆಯು ಸಿಗಲಿದೆ. ಯಾವುದಾದರೂ ಸುಂದರ ಪ್ರದೇಶಕ್ಕೆ ಹೋಗಬೇಕಾಗಿಬರಬಹುದು. ನಿರಂತರ ಶ್ರಮದ ಫಲವನ್ನು ನೀವಿಂದು ಪಡೆಯುವಿರಿ. ಆಲಸ್ಯವನ್ನು ಬಿಟ್ಟು ಮುನ್ನಡೆಯುವ ತೀರ್ಮಾನವನ್ನು ಮಾಡಲಿದ್ದೀರಿ. ನಿಮ್ಮ ಕಷ್ಟಕ್ಕೆ ಬಂದವರು ನಿಮ್ಮ ಆಪ್ತರಾಗಲಿದ್ದಾರೆ.
 5. ಸಿಂಹ:ಸಿಂಹವಾದರೂ ಅದು ಕುಳಿತೇ ಇದ್ದರೆ ಅದರ ಬಾಯಿಗೆ ಯಾವ ಪ್ರಾಣಿಯೂ ಬಂದು ಬೀಳದು. ತನಗೆ ಬೇಕಾದುದನ್ನು ಬೇಟೆಯಾಡಲೇ ಬೇಕು. ನೀವು ಏನನ್ನಾದರೂ ಪಡೆಯಲು ಪ್ರಯತ್ನಿಸಲೇ ಬೇಕು. ಸ್ವಾತಂತ್ರ್ಯವನ್ನು ಪಡೆಯಲು ಹವಣಿಸುವಿರಿ. ಮನೆಯಿಂದ ದೂರವಿರುವವರಿಗೆ ಮನೆಯ ನೆನಪಾಗಲಿದೆ. ತನ್ನವರನ್ನು ಕಳೆದುಕೊಳ್ಳುವ ಹೆದರಿಕೆ ಉಂಟಾಗಲಿದೆ. ಅನಾರೋಗ್ಯವು ನಿಮ್ಮ ನಿಷ್ಕಾಳಜಿಯಿಂದ ಹೆಚ್ಚಾಗಲಿದೆ.
 6. ಕನ್ಯಾ:ನಿಮ್ಮೊಳಗೆ ಹತ್ತಾರು ದ್ವಂದ್ವಗಳು ಇರಲಿವೆ. ಆಯ್ಕೆ ಮಾಡಿಕೊಳ್ಳುವುದು ಕಷ್ಟವಾದೀತು. ಹಿರಿಯರ, ಅನುಭವಿಗಳ ಮಾರ್ಗದರ್ನವನ್ನು ಪಡೆಯಿರಿ. ಶ್ರಮದ ಕೆಲಸವು ಆಯಾಸವನ್ನು ತರಲಿದೆ‌. ಅತಿಯಾದ ಆಲಸ್ಯದಿಂದ ನಿದ್ರಿಸುವ ಮನಸ್ಸಿನಲ್ಲಿ ಇರುವಿರಿ. ಯಾರೂ ನನಗೆ ಸಹಾಯಕ್ಕೆ ಬರಲಾರರು ಎಂಬ ಅನಾಥ ಪ್ರಜ್ಞೆಯನ್ನು ನೀವು ಹೊಂದುವಿರಿ. ಇಂದು ಕ್ಲಿಷ್ಟಕರವಾದ ಸನ್ನಿವೇಶದಲ್ಲಿ ಇರುವಿರಿ. ತಪ್ಪಿಸಿಕೊಳ್ಳಲು ಪ್ರಯತ್ನಿಸಿದರೂ ಕಷ್ಟವಾದೀತು.
 7. ತುಲಾ:ಕಳ್ಳತನದ ಅಪವಾದವು ಬರಬಹುದು. ನಿಮ್ಮ ಮೇಲಧಿಕಾರಿಗಳನ್ನು ಚೆನ್ನಾಗಿ ಇರಿಸಿಕೊಳ್ಳಿ.‌ ಅವರ ಕಾರ್ಯಗಳನ್ನು ಅಚ್ಚುಕಟ್ಟಾಗಿ ಮಾಡಿಕೊಡಿ. ವ್ಯಕ್ತಿಗಳನ್ನು ದೂರುವ ಸ್ವಭಾವವನ್ನು ಬಿಟ್ಟುಬಿಡಿ. ಆಂತರಿಕ ಕಲಹವು ಇಂದು ಜಗಜ್ಜಾಹಿರವು ಆಗಬಹುದು. ಇಂದಿನ ನಿಮ್ಮ ವಾಸಸ್ಥಾನವು ಮನೆಯಿಂದ ದೂರವಿರಲಿದೆ. ವಸ್ತ್ರಗಳ ಖರೀದಿಯಲ್ಲಿ ನೀವು ಮಗ್ನರಾಗಿರುತ್ತೀರಿ. ನಿಮ್ಮ ಬೆಳವಣಿಗೆಯನ್ನು ಕಂಡು ಮನೆಯಲ್ಲಿ ಸಂತಸಗೊಳ್ಳಬಹುದು.
 8. ವೃಶ್ಚಿಕ:ವಿವಾಹದ ಪ್ರಸ್ತಾಪಗಳು ಬಂದು ಮತ್ತೆ ಹೋಗುತ್ತವೆ. ವಿವಾಹವು ಯೋಜನೆಗೊಳ್ಳದೇ ಬೇಸರವಾಗಿ ಮನೆಯಲ್ಲಿ ಕಲಹಗಳು ಆಗಬಹುದು. ನಿಮ್ಮ ಮಾತಿನಿಂದ ಮನೆಯವರಲ್ಲಿ ಆತಂಕದ ವಾತಾವರಣವೂ ಸೃಷ್ಟಿಯಾಗಲಿದೆ‌. ಮನೆಯಿಂದ ದೂರವಿರುವ ಆಲೋಚನೆಯನ್ನು ಮಾಡುವಿರಿ. ಭೂಮಿಯ ವ್ಯವಹಾರದಲ್ಲಿ ಅಲ್ಪಲಾಭವು ಆಗಲಿದೆ. ಮನೆಯನ್ನು ಇಂದು ಬದಲಾಯಿಸುವಿರಿ. ಕೆಲಸಗಳು ನಿಧಾನಗತಿಯಲ್ಲಿ ಸಾಗಲಿವೆ.
 9. ಧನು:ಕಥೆಗಾರರೋ ಸಾಹಿತಿಗಳೋ ಕವಿಗಳೋ ಆಗಿದ್ದರೆ ನಿಮಗಿಂದು ಗೌರವ, ಸಮ್ಮಾನಗಳು ಸಿಗಲಿವೆ. ಮೇಲಿನಿಂದ ಬಿದ್ದು ಪೆಟ್ಟು‌‌ಮಾಡಿಕೊಳ್ಳುವಿರಿ. ನೀವಿಂದು ಪ್ರೀತಿಸಲು ಆರಂಭಿಸುವಿರಿ. ಅವಸರದಲ್ಲಿ ಅನಾಹುತವಾದೀತು. ಧಾರ್ಮಿಕ‌ಕ್ಷೇತ್ರಗಳಿಗೆ ಭೇಟಿ ನೀಡಲಿದ್ದೀರಿ. ನಿಮ್ಮ ವ್ಯಕ್ತಿತ್ವವನ್ನು ಕಂಡು ಕೆಲವರು ಸಲಹೆಗಳನ್ನು ಕೊಡಲು ಬರಬಹುದು. ಯಾವುದೇ ಪ್ರತ್ಯುತ್ತರಗಳನ್ನು ಕೊಡಲು ಹೋಗಬೇಡಿ. ಸಮಾಧಾನದಿಂದ ಆಲೋಚಿಸಿ. ನಿಮಗೆ ಅವಶ್ಯಕವಾದವೂ ಇರುತ್ತವೆ.
 10. ಮಕರ:ನೀವಿಂದು ಬದಲಾವಣೆಯನ್ನು ಇಷ್ಟಪಡುತ್ತೀರಿ. ಹೆಸರಾಂತ ವ್ಯಕ್ತಿಗಳ ಸಹವಾಸವು ನಿಮಗೆ ಸಿಗಲಿದೆ. ಒತ್ತಡವನ್ನು ನಿಭಾಯಿಸುವ ಕಲೆ ನಿಮಗೆ ಸಿದ್ಧಿಸಿದ್ದು ಅದನ್ನು ಚೆನ್ನಾಗಿ ನಿರ್ವಹಿಸಬಲ್ಲಿರಿ. ದೊಡ್ಡ ಅಪಾಯದಿಂದ ನೀವು ಹೊರಬರಲಿದ್ದೀರಿ. ಎಂದೋ‌ ಮಾಡಿದ ಇಂದು ನಿಮ್ಮ ಆಪತ್ತಿಗೆ ಬರಲಿದೆ. ಸತ್ಯವನ್ನು ಮುಚ್ಚಿಡಲು ಹೋಗಬೇಡಿ. ಮುಂದೆ ಅದೇ ದೊಡ್ಡ ಕಂಟಕವಾದೀತು. ಎಲ್ಲರ ಜೊತೆ ಬೆರೆತು ಬದುಕುವ ನಿಮ್ಮ ಗುಣವು ಮೆಚ್ವುಗೆಯಾಗಲಿದೆ.
 11. ಕುಂಭ:ಹಾಲು, ಆಹಾರ ಮುಂತಾದ ಉತ್ಪಾದಕರಿಗೆ ಇಂದು ಅನುಕೂಲಕರವಾಗಿ ಇರಲಿದೆ. ಪುತ್ರೋತ್ಸವವು ನಿಮ್ಮ ನೆಮ್ಮದಿಯನ್ನು ಇಮ್ಮಡಿಗೊಳಿಸುವುದು. ಸತ್ಯವನ್ನೇ ನಂಬಿ ಬದುಕುವವರು ಎಂದು ಇದುವರೆಗೆ ತಿಳಿದದ್ದು ಸುಳ್ಳು ಮಾಡುವಿರಿ. ಮಾತಿಗೆ ಬೆಲೆಯು ಕಡಿಮೆಯಾದೀತು. ನಿಮ್ಮನ್ನು ನೀವು ಆದ್ಯಂತವಾಗಿ ನೋಡಿಕೊಳ್ಳಿ. ಬಂಧುಗಳ ಭೇಟಿಯಿಂದ ಸಂತೋಷವಾಗಲಿದೆ. ಪ್ರಯಾಣದ ಸುಖವೂ ಇರಲಿದೆ.
 12. ಮೀನ:ದೈವವು ನಿಮಗೆಂದೇ ಇರಿಸಿಟ್ಟ ಕಾರ್ಯವೊಂದನ್ನು ಕೊಡಲಿದೆ. ಇಂದು ನಿಮ್ಮ ಪರೀಕ್ಷೆಯ ಕಾಲ. ಅದಕ್ಕೆ ಯೋಗ್ಯವಾದ ಉತ್ತರವನ್ನು ಕೊಡುವ ಭರದಲ್ಲಿ ಅವಘಡಗಳು ಆಗಬಹುದು. ಗೊಂದಲವನ್ನು ಪರಿಹರಿಸಲು ನಿಮಗೆ ನೂರಾರು ಮಾರ್ಗಗಳಿವೆ. ನೀವು ಯಾವುದನ್ನು ಆರಿಸಿಕೊಳ್ಳುವಿರಿ ಎನ್ನುವುದು ಮುಖ್ಯವಾಗಲಿದೆ. ಸಂಗಾತಿಯ ಜೊತೆ ಕಾಲವನ್ನು ಕಳೆದರೂ ತಂದೆತಾಯಿಯರ ಜೊತೆಗೂ ಕೆಲವು ಕಾಲ ಕಳೆಯಿರಿ. ಅವರ ನೋವು ಮತ್ತು ನಲಿವಿನಲ್ಲೂ ಭಾಗಿಯಾಗಿ.

-ಲೋಹಿತಶರ್ಮಾ, ಇಡುವಾಣಿ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada