Nitya Bhavishya: ಈ ರಾಶಿಯವರು ನಿಮ್ಮ ವಿಚಾರಗಳನ್ನು ಯಾರ ಜೊತೆಯೂ ಹಂಚಿಕೊಳ್ಳಬೇಡಿ
Horoscope Today: ಜನವರಿ 25, 2023ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ. ರಾಹು ಕಾಲ12:45 - 14:11, ಯಮಘಂಡ ಕಾಲ 08:29 - 09:54, ಗುಳಿಕ ಕಾಲ 11:20 - 12:45. ಸೂರ್ಯೋದಯ: ಬೆಳಗ್ಗೆ 07 ಗಂಟೆ 03 ನಿಮಿಷಕ್ಕೆ, ಸೂರ್ಯಾಸ್ತ: ಸಂಜೆ 06 ಗಂಟೆ 27 ನಿಮಿಷಕ್ಕೆ.
ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದ್ರೆ 2023 ಜನವರಿ 23 ಸೋಮವಾರ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.
ನಿತ್ಯ ಪಂಚಾಂಗ: ಶಾಲಿವಾಹನ ಶಕೆ 1945, ಶುಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಕರಮಾಸ, ಮಹಾನಕ್ಷತ್ರ:ಶ್ರವಣಾ, ಮಾಸ: ಮಾಘ, ಪಕ್ಷ: ಶುಕ್ಲ, ವಾರ: ಬುಧ, ತಿಥಿ:ಚತುರ್ಥೀ, ನಿತ್ಯನಕ್ಷತ್ರ:ಪೂರ್ವಾಭಾದ್ರ, ಯೋಗ:ಪರಿಘ, ಕರಣ:ಭದ್ರ, ಸೂರ್ಯೋದಯ ಬೆಳಗ್ಗೆ 07-03 ನಿಮಿಷಕ್ಕೆ ಹಾಗೂ ಸೂರ್ಯಾಸ್ತ ಸಂಜೆ 06-27 ನಿಮಿಷಕ್ಕೆ. ರಾಹು ಕಾಲ 12:45 – 14:11, ಯಮಘಂಡ ಕಾಲ 08:29 – 09:54, ಗುಳಿಕ ಕಾಲ 11:20 – 12:45 ನಿಮಿಷದವರೆಗೆ.
- ಮೇಷ: ಧನಾಭಾವದಿಂದ ಸಾಲವನ್ನು ಮಾಡುವ ಸಾಧ್ಯತೆಯಿದೆ. ವಾಹನ ಖರೀದಿಯ ವಿಚಾರದಲ್ಲಿ ಗೊಂದಲಗಳು ಇರಬಹುದು ಬಿಡಸಲಾಗದ ಸಮಸ್ಯೆಗಳು ನಿಮ್ಮೆದುರು ಬರಬಹುದು. ಆಪ್ತರ ಸಲಹೆಯನ್ನು ಪಡೆಯಿರಿ. ಉದ್ಯೋಗದ ನಿಮಿತ್ತ ಪರದೇಶಕ್ಕೆ ಪ್ರಯಾಣವನ್ನು ಮಾಡಲಿದ್ದೀರಿ. ಸಂಗಾತಿಯ ಮಾತುಗಳು ನಿಮಗೆ ಅಸಹ್ಯವಾಗಬಹುದು. ಸಹನೆಯನ್ನು ಇಟ್ಟುಕೊಂಡಿರುವ ನೀವು ನಿಜವಾದ ಶ್ರೀಮಂತರು.
- ವೃಷಭ:ಒತ್ತಡದಿಂದ ನಿಮಗೆ ವಿಶ್ರಾಂತಿಯ ಅವಶ್ಯಕತೆ ಇರುತ್ತದೆ. ಇಲ್ಲವಾದರೆ ಮಾಡುವ ಕೆಲಸವು ಅಶಿಸ್ತಿನಿಂದ ಇರಬಹುದು. ದೂರದ ಬಂಧುಗಳು ನಿಮ್ಮ ಪರಿಚಯವನ್ನು ಮಾಡಿಕೊಂಡಾರು. ಕೆಲವು ಸಂಗತಿಗಳು ಅನಿರೀಕ್ಷಿತವಾಗಿ ಬಂದು ಮನಸ್ಸಿನ ನೆಮ್ಮದಿಯನ್ನು ಹಾಳುಗೆಡವುವುವು. ಅತಿಯಾದ ಆತ್ಮವಿಶ್ವಾಸದ ಜೊತೆ ಪೂರ್ವಾಪರಜ್ಞಾನವೂ ಇರಲಿ. ಯಾರ ಮಾತನ್ನೇ ಕೇಳುವುದಿದ್ದರೂ ನಿಮ್ಮ ಸಾಮರ್ಥ್ಯವನ್ನು ನೋಡಿಕೊಂಡು ತೀರ್ಮಾನಕ್ಕೆ ಬನ್ನಿ. ಅನಾರೋಗ್ಯವು ಬಾಧಿಸಬಹುದು.
- ಮಿಥುನ:ಆಪ್ತರೆಂದು ನಿಮ್ಮ ಎಲ್ಲ ವಿಚಾರಗಳನ್ನು ಯಾರ ಜೊತೆಯೂ ಹಂಚಿಕೊಳ್ಳಬೇಡಿ. ಹಗುರವಾದ ಮಾತುಗಳು ನಿಮಗೆ ಅಪಮಾನವನ್ನು ಮಾಡುವುದು. ನಿದ್ರೆಯಿಲ್ಲದೇ ಮನಸ್ಸು ಕಿರಿಕಿರಿಯನ್ನು ಅನುಭವಿಸುವುದು. ತಂದೆಯಿಂದ ಹಣವನ್ನು ಪಡೆದು ನಿಮಗೆ ಬೇಕಾದ ವಸ್ತುಗಳನ್ನು ಪಡೆಯುವಿರಿ. ಅವಾಕಾಶಗಳು ನೂರಿದ್ದರೂ ಯೋಗ್ಯತೆ ಹಾಗೂ ಸಾಮರ್ಥ್ಯವನ್ನು ಅರಿತುಕೊಂಡು ಮುಂದೆಯಿಡಿ. ಎಲ್ಲವನ್ನೂ ಒಮ್ಮೆಲೇ ಮುಗಿಸಬೇಕು ಎನ್ನುವ ಆತುರ ಬೇಡ.
- ಕಟಕ:ನಿಮ್ಮ ಅಗತ್ಯತೆಗಳ ಯಾದಿಯು ತುಂಬಾ ದೊಡ್ಡದಿದ್ದು ಅದನ್ನು ಪೂರೈಸಲು ಸತತ ಪ್ರಯತ್ನವನ್ನು ಮಾಡುವಿರಿ. ನೀವು ಕೈಗೊಂಡ ಕಾರ್ಯಗಳು ಸಫಲವಾಗಲಿಲ್ಲ ಎಂಬ ಹತಾಶಭಾವವೂ ಸಿಟ್ಟೂ ಏಕಕಾಲಕ್ಕೆ ಬರಲಿದೆ. ಅಪರಿಚಿತರನ್ನು ಆಪ್ತರನ್ನಾಗಿ ಮಾಡಿಕೊಳ್ಳಲು ಹೋಗಿ ಅನಾಹುತವಾದೀತು. ನಿಮಗಿರುವ ಖಾಯಿಲೆಯು ಹೆಚ್ಚು ನೋವನ್ನು ಕೊಟ್ಟೀತು. ಅಲ್ಪ ಧನಲಾಭವಾಗಲಿದೆ. ವಿದ್ಯುತ್ ಉಪಕರಣಗಳ ವ್ಯಾಪಾರಿಗಳಿಗೆ ಲಾಭವಾಗಲಿದೆ.
- ಸಿಂಹ:ಸಾಪ್ಟ್ ವೇರ್ ಕ್ಷೇತ್ರದಲ್ಲಿ ಹೊಸ ಉದ್ಯೋಗವನ್ನು ಅರಸುತ್ತಿರುವವರಿಗೆ ಉದ್ಯೋಗಪ್ರಾಪ್ತಿಯಾಗಲಿದೆ. ಜೋಪಾನವಾಗಿ ಇರಿಸಿಕೊಂಡಿರುವ ನಿಮ್ಮ ಅಮೂಲ್ಯವಾದ ವಸ್ತುಗಳು ಕಣ್ಮರೆಯಾಗಿದ್ದು ಇಂದು ತಿಳಿಯಲಿದೆ. ಏಕಾಂತವನ್ನು ಇಷ್ಟಪಡುವವರಿದ್ದೀರಿ. ನಿಮ್ಮ ಆಲೋಚನೆಗೆ ತಕ್ಕಂತೆ ಎಲ್ಲವೂ ನಡೆಯುತ್ತಿದೆ ಎಂದು ಅನ್ನಿಸಿದರೂ ಅದನ್ನು ಪರಿವರ್ತಿಸಲು ಅಸಾಧ್ಯವಾಗುವುದು. ಗೊತ್ತಿರಬೇಕಾದ ಎಷ್ಟೋ ವಿಚಾರಗಳು ಗೊತ್ತಲ್ಲವೆಂದು ಬೇಸರ ಪಡಬೇಕಾಗಿಬರಬಹುದು.
- ಕನ್ಯಾ:ಮಕ್ಕಳು ನಿಮ್ಮ ಬಗ್ಗೆ ಅಸಡ್ಡೆಯ ಭಾವವನ್ನು ತೋರಿಸಲಿದ್ದು ಅದರಿಂದ ಬೇಸರಗೊಳ್ಳುವಿರಿ. ಭೂಮಿಯ ವ್ಯವಹಾರವನ್ನು ಸದ್ಯಕ್ಕೆ ನಿಲ್ಲಿಸುವುದು ಅಥವಾ ಕೆಲವು ದಿನಗಳ ಅನಂತರ ನಡೆಸುವುದು ಯೋಗ್ಯವಿದೆ. ಹೊಸತನವನ್ನು ಇಷ್ಟಪಟ್ಟು ನಿಮ್ಮ ಜೀವನಶೈಲಿಯನ್ನು ಬದಲಿಸಿಕೊಳ್ಳುವ ಪ್ರಯತ್ನವನ್ನು ಮಾಡುವಿರಿ. ಭವಿಷ್ಯದ ಕುರಿತು ನಿಮಗೆ ನಿಮ್ಮದೇ ಕಲ್ಪನೆಗಳಿದ್ದು ಅದು ಸಾಕಾರಗೊಳ್ಳುವುದೋ ಇಲ್ಲವೋ ಎನ್ನುವ ಭಯವು ಕಾಡಲಿದೆ. ಅಪಮಾನವನ್ನು ಎದುರಿಸಬೇಕಾಗಬಹುದು ಎಂಬ ಆತಂಕವೂ ಮನೆ ಮಾಡಿರುತ್ತದೆ.
- ತುಲಾ:ಇಂದಿನ ನಿಮ್ಮ ಕೆಲಸವು ಶಿಸ್ತಿನಿಂದ ಇದ್ದರೂ ನಿಮ್ಮ ಜೊತೆಗಾರರು ಅದನ್ನು ಮೂದಲಿಸಲಿದ್ದಾರೆ. ವೈದ್ಯರನ್ನು ಬೇಟಿಯಾಗಿ ನಿಮಗೆ ಆಗುತ್ತಿರುವ ಶಾರೀರಿಕ ಸಮಸ್ಯೆಗಳನ್ನು ಅವರಲ್ಲಿ ಹೇಳಿಕೊಳ್ಳಿ. ನಿಮ್ಮವರ ಮೇಲೆ ತಪ್ಪು ತಿಳಿವಳಿಕೆಯನ್ನು ಹೊಂದಿ ಅವರ ತೇಜೋವಧೆಯನ್ನು ಮಾಡಿದ್ದಿರಿ. ಅದಕ್ಕೆ ಇಂದು ಪಶ್ಚಾತ್ತಾಪವನ್ನು ಅನುಭವಿಸುವಿರಿ. ದೂರದ ಪ್ರಯಾಣವನ್ನು ಮಾಡುವ ನಿರ್ಧಾರವನ್ನು ಮಾಡಲಿದ್ದೀರಿ. ವ್ಯವಸ್ಥೆಯ ಬಗ್ಗೆ ಮೊದಲೇ ತಿಳಿದುಕೊಳ್ಳಿ.
- ವೃಶ್ಚಿಕ:ವಿದೇಶದಲ್ಲಿ ಕೆಲಸಮಾಡಲು ನಿಮಗೆ ಅನೇಕ ಅವಕಾಶಗಳು ಸಿಗಬಹುದು. ಹಣದ ವಿಚಾರದಲ್ಲಿ ಜಾಗರೂಕರಾಗಿರಿ. ಅನಿರೀಕ್ಷಿತ ಧನವ್ಯಯವು ಆಗಬಹುದು. ವಿದ್ಯಾರ್ಥಿಗಳು ನಿಮ್ಮ ಮುಂದಿನ ವಿಷಯಗಳ ಕುರಿತು ಚರ್ವೆಗಳನ್ನು ಮಾಡಿ ಮುಂದುವರಿಯಿರಿ. ದಾಂಪತ್ಯದಲ್ಲಿ ಉಂಟಾದ ಕಲಹವು ಮಕ್ಕಳ ಮೇಲೆ ಪ್ರಭಾವವನ್ನು ಬೀರಲಿದೆ. ಉದ್ಯೋಗಸ್ಥಾನದಲ್ಲಿ ಕೆಲವು ಮಾತುಗಳು ನಿಮ್ಮ ವಿರುದ್ಧವಾಗಿಯೂ ಇರಬಹುದು.
- ಧನು:ನಿಮ್ಮ ಅಂದಿನ ಸ್ಥಿತಿಯನ್ನು ನೆನೆಸಿಕೊಂಡು ಹೆಮ್ಮೆಪಡಲಿದ್ದೀರಿ. ಪಿತ್ರಾರ್ಜಿತ ಆಸ್ತಿಯನ್ನು ಪಡೆಯಲು ಹವಣಿಸುವಿರಿ. ನೀವು ಆಪ್ತರಿಗೋಸ್ಕರ ಸಮಯವನ್ನು ಇಡಲಿದ್ದೀರಿ. ಆದರೆ ಅವರು ನಿಮಗೆ ಬೆಲೆ ಕೊಡದೇ ಇರುವದನ್ನು ಕಂಡು ಬೇಸರಿಸುವಿರಿ. ಖುಷಿಪಡುವ ಸಂಗತಿಗಳಿದ್ದರೂ ದುಃಖಿಗಳಾಗುವ ಸಾದ್ಯತೆ ಇದೆ. ಶತ್ರುಗಳು ನಿಮ್ಮನ್ನು ಮಿತ್ರರನ್ನಾಗಿ ಮಾಡಿಕೊಳ್ಳಲು ಬರಬಹುದು. ಬ್ಯಾಂಕ್ ಉದ್ಯೋಗಿಗಳಿಗೆ ಉನ್ನತಸ್ಥಾನವನ್ನು ನೀಡುವ ಪ್ರಸ್ತಾಪ ಬರಬಹುದು.
- ಮಕರ:ಕ್ಷಣಕಾಲದಲ್ಲಿ ಆದ ಅನಾಹುತಕ್ಕೆ ಬಹಳ ಕಷ್ಟವನ್ನು ಅನುಭವಿಸುವಿರಿ. ತಂದೆ ಮತ್ತು ಮಕ್ಕಳಲ್ಲಿ ಸ್ವಲ್ಪಮಟ್ಟಿಗೆ ಕಲಹವಿರುವುದು. ಇಂದಿನ ನಿಮ್ಮ ಕೆಲಸಗಳು ಆಯಾಸವನ್ನು ತರಿಸುವುದು. ಕಲಾವಿದರು ಅವಕಾಶಗಳನ್ನು ಸೃಷ್ಟಿಕೊಳ್ಳಲಿದ್ದಾರೆ. ಗೃಹನಿರ್ಮಾಣದ ಪ್ರಸ್ತಾಪವು ಇರಲಿದೆ. ವಾಹನವನ್ನು ನಿಧಾನವಾಗಿ ಚಲಾಯಿಸಿ. ಬೇರೆಯವರ ತಪ್ಪಿನಿಂದ ನಿಮಗೆ ತೊಂದರೆಗಳು ಆಗಬಹುದು. ಆಪ್ತರ ಭೇಟಿಯು ನಿಮಗೆ ಸಂತೋಷವನ್ನು ಕೊಡಲಿದೆ.
- ಕುಂಭ:ಹಳೆಯ ಪ್ರೇಮಪ್ರಕರಣವು ಇಂದು ಬೆಳಕಿಗೆ ಬರಬಹುದು. ಅದನ್ನು ತಾತ್ಸಾರಮಾಡದೇ ಕ್ರಮಬದ್ಧವಾಗಿ ಅದನ್ನು ಗೆಲ್ಲಿರಿ. ಕ್ರೀಡಪಟುಗಳು ತಮ್ಮ ಅವಿರತಶ್ರಮವನ್ನು ನಡೆಸಲಿದ್ದಾರೆ. ತಾಯಿಯಿಂದ ನಿಮಗೆ ಧನವು ಲಾಭವಾಗಬಹುದು. ಪಿತ್ತಕ್ಕೆ ಸಂಬಂಧಿಸಿದ ಖಾಯಿಲೆಗಳು ಬರಬಹುದು. ವ್ಯಾಪರದಲ್ಲಿ ಸ್ವಲ್ಪ ನಷ್ಟವನ್ನು ಕಾಣುವಿರಿ. ಕೃಷಿಕರು ತಮ್ಮ ಮುಂದಿನ ಯೋಚನೆಗಳನ್ನು ಮಾಡುವರು. ಸಂದರ್ಭಕ್ಕೆ ಯೋಗ್ಯವಾಗಿ ವರ್ತಿಸಿ.
- ಮೀನ:ಆಪ್ತರ ಸಹಕಾರವು ಸಿಗಲಿದೆ. ದಾಯಾದಿ ಕಲಹವು ನ್ಯಾಯಾಲಯದ ವರಗೂ ಹೋಗಬಹುದು. ಪುಣ್ಯಕ್ಷೇತ್ರಗಳ ದರ್ಶನವನ್ನು ಪಡೆಯುವಿರಿ. ನಿಮ್ಮ ಯೋಜನೆಗಳು ಎಣಿಸಿದಂತೆ ಆಗದೇ ಇರಬಹುದು. ಒತ್ತಡದಿಂದ ಹೊರಬರುವ ಪ್ರಯತ್ನಮಾಡುವಿರಿ. ಅಪರಿಚಿತಸ್ಥಳವು ಆಪ್ತವೂ ಆಗಲಿದೆ. ಮನೆಯಿಂದ ದೂರದಲ್ಲಿ ಇರುವವರಿಗೆ ಮನೆಯ ಹಂಬಲವಾಗುವುದು. ಒಂಟಿಯಾಗಿ ಇರಲು ಇಷ್ಟಪಡುವಿರಿ.
-ಲೋಹಿತಶರ್ಮಾ, ಇಡುವಾಣಿ