AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nithya Bhavishya: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ ಭವಿಷ್ಯ ಹೀಗಿದೆ

2023 ಮಾರ್ಚ್ 8ರ ಬುಧವಾರ ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

Nithya Bhavishya: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ ಭವಿಷ್ಯ ಹೀಗಿದೆ
ರಾಶಿಭವಿಷ್ಯImage Credit source: Refinery29.Com
Rakesh Nayak Manchi
| Updated By: Digi Tech Desk|

Updated on:Mar 08, 2023 | 9:12 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಮಾರ್ಚ್ 8 ಬುಧವಾರ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1945, ಶುಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ: ಪೂರ್ವಾಭಾದ್ರ, ಮಾಸ: ಫಾಲ್ಗುಣ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ಉತ್ತರಾಫಲ್ಗುಣೀ, ಯೋಗ: ಶೂಲಿ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 46 ನಿಮಿಷಕ್ಕೆ, ಸೂರ್ಯಾಸ್ತ ಬೆಳಗ್ಗೆ 06 ಗಂಟೆ 40 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:44 ರಿಂದ ಮಧ್ಯಾಹ್ನ 02:13ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 08:16 ರಿಂದ ಬೆಳಗ್ಗೆ 09:45ರ ವರೆಗೆ, ಗುಳಿಕ ಕಾಲ ಬೆಳಗ್ಗೆ 11:14 ರಿಂದ ಮಧ್ಯಾಹ್ನ 12:44ರ ವರೆಗೆ.

ಸಿಂಹ: ತಂತ್ರಜ್ಞಾನಕ್ಷೇತ್ರದಲ್ಲಿ ಹೊಸ ಉದ್ಯೋಗವನ್ನು ಅರಸುತ್ತಿರುವವರಿಗೆ ಉದ್ಯೋಗಪ್ರಾಪ್ತವಾಗಲಿದೆ. ಜೋಪಾನವಾಗಿ ಇರಿಸಿಕೊಂಡಿರುವ ನಿಮ್ಮ ಅಮೂಲ್ಯವಾದ ವಸ್ತುವು ಇಲ್ಲವಾಗುವಾದುದು ಇಂದು ತಿಳಿಯಲಿದೆ. ಇಂದು ನೀವು ಏಕಾಂತವನ್ನು ಇಷ್ಟಪಡುವವರಿದ್ದೀರಿ. ನಿಮ್ಮ ಆಲೋಚನೆಗೆ ತಕ್ಕಂತೆ ಎಲ್ಲವೂ ನಡೆಯುತ್ತಿದೆ ಎಂದು ಅನ್ನಿಸಿದರೂ ಅದನ್ನು ಪರಿವರ್ತಿಸಲು ಅಸಾಧ್ಯವಾಗುವುದು. ಗೊತ್ತಿರಬೇಕಾದ ಎಷ್ಟೋ ವಿಚಾರಗಳು ಗೊತ್ತಲ್ಲವೆಂದು ಬೇಸರ ಪಡಬೇಕಾಗಿಬರಬಹುದು. ಅವಶ್ಯಕತೆ ಇದ್ದರೆ ತಿಳಿಯುತ್ತದೆ ಎಂಬುದನ್ನು ಅರಿತು ಸುಮ್ಮನಾಗಿ. ಶಿವಾರ್ಚನೆಯನ್ನು ಮಾಡಿ.

ಕನ್ಯಾ: ನಿಮ್ಮ ಮಕ್ಕಳು ನಿಮ್ಮ ಬಗ್ಗೆ ತಾತ್ಸಾಭಾವವನ್ನು ತೋರಿಸಬಹುದು. ಅದರಿಂದ ಬೇಸರಗೊಳ್ಳುವಿರಿ. ಅವರನ್ನು ಮಕ್ಕಳೆಂದು ಬಿಡಿ. ಭೂಮಿಯ ಖರೀದಿ ಹಾಗೂ ಮಾರಾಟವನ್ನು ಸ್ವಲ್ಪ ಸಮಯ ಸ್ಥಗಿತಗೊಳಿಸುವುದು ಉತ್ತಮ. ಹೊಸಶೈಲಿ ಜೀವನವನ್ನು ತನವನ್ನು ಇಷ್ಟಪಟ್ಟು ನಿಮ್ಮ ಜೀವನಶೈಲಿಯನ್ನು ಬದಲಿಸಿಕೊಳ್ಳುವ ಪ್ರಯತ್ನವನ್ನು ಮಾಡುವಿರಿ. ಭವಿಷ್ಯದ ಕುರಿತು ನಿಮಗೆ ನಿಮ್ಮದೇ ಕಲ್ಪನೆಗಳಿವೆ. ಅವುಗಳು ಸಾಕಾರಗೊಳ್ಳುವುದೋ ಇಲ್ಲವೋ ಎನ್ನುವ ಭಯವು ಕಾಡಬಹುದು. ವಿನಾಕಾರಣ ಅಪಮಾನವನ್ನು ಎದುರಿಸಬೇಕಾಗಬಹುದು ಎಂಬ ಆತಂಕವೂ ಇರಲಿದೆ‌. ಹರಿನಾಮಸಂಕೀರ್ತನೆಯನ್ನು ಮಾಡಿ.

ತುಲಾ: ಇಂದು ನೀವು ಅಚ್ಚುಕಟ್ಟಾದ ಕೆಲಸವನ್ನು ಮಾಡಲಿದ್ದೀರಿ. ನಿಮ್ಮ ಶಿಸ್ತು ಇತರ ಕೋಪಕ್ಕೆ ಕಾರಣವಾಗಲಿದೆ‌. ವೈದ್ಯರನ್ನು ಭೇಟಿ ಮಾಡಿ ನಿಮಗೆ ಆಗುತ್ತಿರುವ ಶಾರೀರಿಕ ಸಮಸ್ಯೆಗಳನ್ನು ಅವರಲ್ಲಿ ಹೇಳಿಕೊಳ್ಳಿ. ಬೇಕಾದ ಚಿಕಿತ್ಸೆಯನ್ನು ಮಾಡಿ. ನಿಮ್ಮವರ ಮೇಲೆ ತಪ್ಪು ತಿಳಿವಳಿದುಕೊಂಡು ಅವರ ತೇಜೋವಧೆಯನ್ನು ಮಾಡುವಿರಿ. ಅದಕ್ಕೆ ಇಂದು ಪಶ್ಚಾತ್ತಾಪವನ್ನೂ ಅನುಭವಿಸುವಿರಿ. ದೂರ ಸುತ್ತಾಡುವುದು ನಿಮಗೆ ಇಷ್ಟವಾದ ಸಂಗತಿಯಾಗಿದ್ದು ಪ್ರಯಾಣವನ್ನು ಮಾಡಲು ಇಚ್ಛಿಸುವಿರಿ. ಅತಿಯಾದ ಆಹಾರಸೇವನೆಯಿಂದ ನಿಮಗೆ ಅನಾರೋಗ್ಯವುಂಟಾಗಲಿದೆ. ಧನ್ವಂತರಿಯ ಆರಾಧನೆ ಮಾಡಿ.

ವೃಶ್ಚಿಕ: ವಿದೇಶದಲ್ಲಿ ಕೆಲಸ ಮಾಡುತ್ತಿರುವವರು ಸ್ವದೇಶಕ್ಕೆ ಬರುವ ಸಾಧ್ಯತೆ ಇದೆ. ಇಂದು ನೀವು ಹಣದ ವಿಚಾರದಲ್ಲಿ ಎಷ್ಟೇ ಜಾಗರೂಕರಾಗಿದ್ದರೂ ಸಾಲದು. ಅನಿರೀಕ್ಷಿತ ಧನವ್ಯಯವು ಆಗಲಿದೆ. ವಿದ್ಯಾರ್ಥಿಗಳು ನಿಮ್ಮ ಮುಂದೆ ಓದಲಿರುವ ವಿಷಯಗಳ ಕುರಿತು ಚರ್ಚೆಗಳನ್ನು ಮಾಡಿ ಮುಂದುವರಿಯುವುದು ಉತ್ತಮ. ದಾಂಪತ್ಯದಲ್ಲಿ ಉಂಟಾದ ಕಲಹವು ಮಕ್ಕಳ‌ ಮೇಲೆ ಪ್ರಭಾವವನ್ನು ದುಷ್ಪರಿಣಾಮ ಬೀರಲಿದೆ. ಉದ್ಯೋಗಸ್ಥಾನದಲ್ಲಿ ಕೆಲವು ಮಾತುಗಳು ನಿಮ್ಮ ವಿರುದ್ಧವಾಗಿ ಬರುವುದು. ಹತ್ತಿರದ ಸುಬ್ರಹ್ಮಣ್ಯನ ದೇಗುಲಕ್ಕೆ ಹೋಗಿ ನಮಸ್ಕರಿಸಿ.

-ಲೋಹಿತಶರ್ಮಾ, ಇಡುವಾಣಿ

Published On - 5:15 am, Wed, 8 March 23

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ