Horoscope: ದಿನಭವಿಷ್ಯ: ವ್ಯವಹಾರದ ಲಾಭವನ್ನು ಹೆಚ್ಚಿಸುವ ಕುರಿತು ಸ್ನೇಹಿತರಿಂದ ಸಲಹೆ ಪಡೆಯಿರಿ

ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಮಾರ್ಚ್ 13ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ದಿನಭವಿಷ್ಯ: ವ್ಯವಹಾರದ ಲಾಭವನ್ನು ಹೆಚ್ಚಿಸುವ ಕುರಿತು ಸ್ನೇಹಿತರಿಂದ ಸಲಹೆ ಪಡೆಯಿರಿ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on:Mar 13, 2024 | 6:39 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ (ಮಾರ್ಚ್​​​​​ 13) ಭವಿಷ್ಯ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ: ಪೂರ್ವಾಭಾದ್ರ, ಮಾಸ: ಫಾಲ್ಗುಣ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ತೃತೀಯಾ, ನಿತ್ಯನಕ್ಷತ್ರ: ಅಶ್ವಿನಿ, ಯೋಗ: ಬ್ರಹ್ಮ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 42 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 41 ನಿಮಿಷಕ್ಕೆ, ರಾಹುಕಾಲ ಮಧ್ಯಾಹ್ನ 12:42 ರಿಂದ 02:12ರ ವರೆಗೆ, ಯಮಘಂಡಕಾಲ ಬೆಳಿಗ್ಗೆ 08:12 ರಿಂದ 09:42ರ ವರೆಗೆ, ಗುಳಿಕಕಾಲ ಮಧ್ಯಾಹ್ನ 11:12 ರಿಂದ 12:42ರ ವರೆಗೆ.

ಸಿಂಹ ರಾಶಿ: ನೀವು ಎದುರಿಸುತ್ತಿರುವ ಮಾನಸಿಕ ಒತ್ತಡಗಳನ್ನು ಗಮನದಲ್ಲಿಟ್ಟುಕೊಂಡು ಅಗತ್ಯವಿರುವ ವಿಶ್ರಾಂತಿ ಪಡೆಯಿರಿ. ವ್ಯವಹಾರದ ಲಾಭವನ್ನು ಹೆಚ್ಚಿಸುವ ಕುರಿತು ಸ್ನೇಹಿತರಿಂದ ಸಲಹೆ ಪಡೆಯಿರಿ.‌ ಹಿತಶತ್ರುಗಳಿಂದ ನಿಮ್ಮ ವಿವಾಹವು ತಪ್ಪಬಹುದು. ಕಛೇರಿಯಿಂದ ನಿಮಗೆ ತಿಳಿಯಬೇಕಾದ ವಿಚಾರವು ತಿಳಿಯದೇಹೋಗಬಹುದು. ಯಾವುದೇ ರೀತಿಯ ಅತಿ ಭಾರವಾದ ವಸ್ತುಗಳನ್ನು ಎತ್ತುವುದು ಬೇಡ. ನಿಮ್ಮ ಉತ್ಪಾದನೆಯು ಆದಾಯಕ್ಕಿಂತ ನೆಮ್ಮದಿಯನ್ನು ಹೆಚ್ಚು ಕೊಡುವುದು. ಪ್ರಭಾವಿ ಜನರ ಸಂಸರ್ಗದಿಂದ ಹೊಸ ಆಯಾಮವು ತೆರೆದುಕೊಳ್ಳುವುದು. ಬೆನ್ನು ನೋವು ನಿಮ್ಮನ್ನು ಬಾಧಿಸೀತು. ಎಲ್ಲರಿಂದ ಪ್ರತ್ಯೇಕವಾಗಿ ಗುರುತಿಸಿಕೊಳ್ಳಲು ಇಷ್ಟಪಡುವಿರಿ. ಯಾರ ಮೇಲೇ ರೇಗದೇ ಇರುವುದು ನಿಮಗೆ ಇಷ್ಟವಾದೀತು. ನಿಮ್ಮದು ಉದ್ದೇಶಪೂರ್ವಕ ಆಡಿದ ಮಾತಾಗಿದ್ದು ಸಮಸ್ಯೆಗಳನ್ನು ಎದುರಿಸಬೇಕಾದೀತು. ಜವಾಬ್ದಾರಿಯನ್ನು ಸಡಿಲಮಾಡಿಕೊಂಡು ತಪ್ಪಿಗೆ ದಾರಿ‌ಮಾಡಿಕೊಡುವಿರಿ.

ಕನ್ಯಾ ರಾಶಿ: ನೀವು ಇಂದು ದಿನದ ಕಾರ್ಯದ ಯಾದಿಯನ್ನು ಮಾಡಿ ಅನಂತರ ಕಾರ್ಯವನ್ನು ಪ್ರಾರಂಭಿಸಿ. ಸಮಯ ವ್ಯರ್ಥ ಮಾಡುವುದನ್ನು ಬಿಟ್ಟು ಮುಖ್ಯವಾದ ಕಾರ್ಉದಕಡೆ ಗಮನ ಕೊಡಬೇಕಾಗುವುದು. ಸ್ನೇಹಿತರು ವೈಯಕ್ತಿಕ ಸಮಸ್ಯೆಗಳಿಗೆ ನಿಮ್ಮನ್ನು ಭೇಟಿಯಾಗುವ ಸಾಧ್ಯತೆ ಇದೆ. ಸತ್ಯವನ್ನು ಹೇಳಲು ಇಂದು ನೀವು ಹಿಂಜರಿಯುವಿರಿ. ತನಗೆ ತೊಂದರೆಯಾಗುವುದೆಂಬ ಭಯವೂ ಕಾಡಬಹುದು. ಪ್ರಭಾವಿ ವ್ಯಕ್ತಿಗಳ ಸಹಾಯಕರಾಗಿ ಹೋಗುವ ಅವಕಾಶಗಳು ಸಿಗಬಹುದು. ಕೃಷಿಗೆ ಸಂಬಂಧಿಸಿದ ನೂತನ ಅನ್ವೇಷಣೆಯನ್ನು ಮಾಡುವ ಹೊಸ ಆಲೋಚನೆಯನ್ನು ಮಾಡುವಿರಿ. ಮಕ್ಕಳ ಅನಾರೋಗ್ಯದಿಂದ ನೀವು ಆತಂಕಕ್ಕೆ ಒಳಗಾಗುವಿರಿ. ವಿದೇಶೀ ವ್ಯಾಪಾರದಲ್ಲಿ ಅನಿಶ್ಚಿತತೆ ಕಾಡಬಹುದು. ಸಾಮಾಜಿಕ ಕಾರ್ಯದಿಂದ ಪ್ರೇರಣೆ ಪಡೆದು ಸಂಸ್ಥೆಯನ್ನು ಆರಂಭಿಸುವಿರಿ. ಗೊತ್ತಿದ್ದರೂ ಗೊತ್ತಿಲ್ಲದಂತೆ ಇರುವಿರಿ. ನಿಮ್ಮ ದುರಾಲೋಚನೆಗೆ ಸ್ನೇಹಿತರು ಅಡ್ಡಿ ಮಾಡುವರು. ಶತ್ರುವಿನ ಬಲವನ್ನು ನಿಯಂತ್ರಿಸಲು ಸಿದ್ಧತೆ ನಡೆಸುವಿರಿ.

ತುಲಾ ರಾಶಿ: ನಿಮಗೆ ಹಿಂದೆ‌ ಮಾಡಿದ ಹೂಡಿಕೆಗಳು ಇಂದು ಪ್ರಯೋಜನಕ್ಕೆ ಬರಲಿವೆ. ಮಕ್ಕಳ‌ ವಿಚಾರದಲ್ಲಿ ನಿಮಗೆ ಪೂರ್ಣವಾದ ನಂಬಿಕೆ ಇರದು. ಯಾವುದೇ ಸವಾಲುಗಳನ್ನು ಧೈರ್ಯದಿಂದ ಎದುರಿಸಿ. ನಿಮ್ಮ ಭಯವೇ ಶಕ್ತಿಯನ್ನು ಕುಗ್ಗಿಸುತ್ತದೆ. ಹಣಕಾಸಿನ ವಿಚಾರದಲ್ಲಿ ಅಧಿಕವಾಗಿ ಕೊಡುವುದು ಒಳ್ಳೆಯದಲ್ಲ. ಹಾಸಿಗೆ ಇರುವಷ್ಟು ಕಾಲು ಚಾಚಿದರೆ ಸುಖ. ಆಪತ್ಕಾಲಕ್ಕೆ ಬೇಕಾದ ಹಣವನ್ನು ತೆಗೆದಿರಿಸುವಿರಿ. ಸ್ತ್ರೀಯರು ಆಭರಣಗಳನ್ನು ಜತನದಿಂದ ಇರಿಕೊಳ್ಳಿ. ಚರಾಸ್ತಿಯು ಅನ್ಯರ ಪಾಲಾಗಬಹುದು. ಅವಶ್ಯಕ ವಸ್ತುಗಳನ್ನು ನೀವು ಕಳೆದುಕೊಳ್ಳುವಿರಿ. ಇನ್ನೊಬ್ಬರನ್ನು ನೋಡಿ ಕಲಿಯುವ ವಿಚಾರವು ಸಾಕಷ್ಟಿರಬಹುದು. ಸಾಲ ಪಡೆದರವರ ಹುಡುಕಾಟವನ್ನು ಮಾಡುವಿರಿ. ಶ್ರಮವಹಿಸಿದಷ್ಟು ಫಲವು ಸಿಗಲಿಲ್ಲ ಎಂಬ ಬೇಸರವಿದ್ದರೂ ತಕ್ಕಮಟ್ಟಿನ ಖುಷಿಯು ಇರಲಿದೆ. ಪುರುಷ ಪ್ರಯತ್ನವು ಹೆಚ್ಚಿರಬೇಕಾಗುವುದು.

Published On - 6:35 am, Wed, 13 March 24