Horoscope: ದಿನಭವಿಷ್ಯ: ಈ ರಾಶಿಯವರ ಮೇಲೆ‌ ಕೆಲವು ಆರೋಪಗಳು ಕೇಳಿಬರಬಹುದು-ಎಚ್ಚರ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಮಾರ್ಚ್ 15ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ದಿನಭವಿಷ್ಯ: ಈ ರಾಶಿಯವರ ಮೇಲೆ‌ ಕೆಲವು ಆರೋಪಗಳು ಕೇಳಿಬರಬಹುದು-ಎಚ್ಚರ
ದಿನಭವಿಷ್ಯ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Mar 15, 2024 | 12:30 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ (ಮಾರ್ಚ್​​​​​ 15) ಭವಿಷ್ಯ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ : ಪೂರ್ವಾಭಾದ್ರ, ಮಾಸ : ಫಾಲ್ಗುಣ, ಪಕ್ಷ : ಶುಕ್ಲ, ವಾರ : ಶುಕ್ರ, ತಿಥಿ : ಪಂಚಮಿ/ ಷಷ್ಠಿ, ನಿತ್ಯನಕ್ಷತ್ರ : ಕೃತ್ತಿಕಾ, ಯೋಗ : ವೈಧೃತಿ, ಕರಣ : ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 41 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 41 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 11:11 ರಿಂದ ಮಧ್ಯಾಹ್ನ 12:42ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:42 ರಿಂದ ಸಂಜೆ 05:12ರ ವರೆಗೆ, ಗುಳಿಕ ಕಾಲ ಬೆಳಗ್ಗೆ 08:11 ರಿಂದ 09:41 ರ ವರೆಗೆ.

ಸಿಂಹ ರಾಶಿ : ಇಂದು ನಿಮ್ಮ ಮಕ್ಕಳ‌ ವಿದ್ಯಾಭ್ಯಾಸಕ್ಕೆ ಓಡಾಟ ಮಾಡಬೇಕಾದೀತು. ಹೊಸ ಉತ್ಸಾಹದಲ್ಲಿ ಏನನ್ನಾದರೂ ಮಾಡಲು ಹೋಗುವುದು ಬೇಡ. ಆಲಂಕಾರಿಕ ವಸ್ತುಗಳ ಬಗ್ಗೆ ಆಸಕ್ತಿಯು ಹೆಚ್ಚುವುದು. ಸಹನೆಯನ್ನು ಮೀರಿ ನೀವು ಇಂದು ವರ್ತಿಸುವಿರಿ. ಅಪರಿಚಿತರ ಜೊತೆ ಮಾತನಾಡಲು ನೀವು ಹಿಂಜರಿಯಬಹುದು. ಮಿತಭಾಷಿಯಾಗಿ ನೀವು ಎಲ್ಲರಿಂದ‌ ಅಪಹಾಸ್ಯಕ್ಕೆ ಒಳಗಾಗುವಿರಿ. ಶತ್ರುಗಳ ಪಿತೂರಿಯಿಂದ ನಿಮಗೆ ವ್ಯವಹಾರದಲ್ಲಿ ಹಿನ್ನಡೆಯಾದೀತು. ಎಲ್ಲರನ್ನೂ ದೂರುವುದು ನಿಮಗೆ ಇಷ್ಟವಾಗದು. ನಿಮಗೆ ವಹಿಸಿದ ಕೆಲಸವನ್ನು ಅದ್ಭುತವಾಗಿ ಮಾಡಲು ಪ್ರಯತ್ನಿಸುವಿರಿ. ಮನೋರಂಜನೆಗೆ ನಿಮಗೆ ಸಮಯವು ಸಿಗುವುದು. ನಿಮ್ಮ ಕಾಯುವಿಕೆಯು ಸಾರ್ಥಕವಾಗಬಹುದು. ಮಾತಿನಲ್ಲಿ ಮಾರ್ದವ ಇರಲಿ. ವೈಯಕ್ತಿಕ ಕಾರ್ಯದ ಕಾರಣ ಪ್ರಯಾಣ ಮಾಡುವಿರಿ. ಕಛೇರಿಯಲ್ಲಿ ನಿಮ್ಮ ಬಗ್ಗೆ ಅಸೂಯೆ ಬರಬಹುದು.

ಕನ್ಯಾ ರಾಶಿ : ಇಂದು ಆತಂಕವು ನಿಮ್ಮನ್ನು ಕಾಡಬಹುದು. ನಿಮ್ಮ ಗುರಿಯನ್ನು ಸಾಧಿಸಲು ನಿಮಗೆ ಕೆಲವು ಮಾರ್ಗಗಳು ಗೊತ್ತಾಗಬಹುದು. ಯಾರ ಜೊತೆಗೋ ವಾಗ್ವಾದ ಮಾಡಲು ಹೋಗಿ ನಿಮ್ಮ ವ್ಯಕ್ತಿತ್ವವನ್ನು ತೋರಿಸಿಕೊಳ್ಳುವಿರಿ. ಒಂದಿಲ್ಲೊಂದು ಕಿರಿಕಿರಿಗಳು ನಿಮಗೆ ನೆಮ್ಮದಿಯಿಂದ ಇರಲು ಬಿಡದು. ಗೊಂದಲವೂ ನಿಮ್ಮನ್ನು ಜೋಕಾಲಿಯ‌ ಮೇಲೆ ಕುಳಿತಂತೆ ಅನ್ನಿಸಬಹುದು. ಅನೇಕ ದಿನಗಳಿಂದ ಅನಾರೋಗ್ಯದ ಕಾರಣ ಬಳಲುತ್ತಿದ್ದು ಸೂಕ್ತ ಚಿಕಿತ್ಸೆಯ ಅವಶ್ಯಕತೆ ಇರುವುದು. ಉದ್ಯೋಗದಲ್ಲಿ ಮಕ್ಕಳಿಗೆ ಪ್ರವೇಶವನ್ನು ಕೊಡುವಿರಿ. ನಿಮ್ಮ ಬಗ್ಗೆ ಶತ್ರುಗಳು ಅಪಪ್ರಚಾರ ಮಾಡುವರು. ಬಂಧುಗಳು ನಿಮ್ಮನ್ನು ಬಹಳವಾಗಿ‌ ದೂರುವರು. ಯಾರ ಬಗ್ಗೆಯೂ ಸುಮ್ಮನೆ ಆಡಿಕೊಳ್ಳುವುದು ಬೇಡ. ಮನೆಯ ಕಾರ್ಯಗಳು ಇಂದು ಅಧಿಕವಾಗಿ ಇರಬಹುದು. ಕೃಷಿಯನ್ನು ಹೊಸ ರೀತಿಯಲ್ಲಿ ಮಾಡುವ ಉತ್ಸಾಹವಿರುವುದು.

ತುಲಾ ರಾಶಿ : ಇಂದು ನಿಮಗೆ ಕುಟುಂಬದ ಹಲವು ನ್ಯೂನತೆಗಳ ಪರಿಚಯವಾಗುವುದು. ನಿಮ್ಮ ಸಹಾಯವು ನಿಷ್ಪ್ರಯೋಜಕವೆನಿಸಬಹುದು. ಅಸತ್ಯವಾಡಿ ಇಂದಿನ‌ ಕಾರ್ಯವನ್ನು ಮಾಡಬೇಕಾಗುವುದು. ಹೊಸ ವಸ್ತುಗಳ‌ ಖರೀದಿಯಿಂದ ಪೂರ್ಣ ನೆಮ್ಮದಿ ಸಿಗದು. ಸಂಗಾತಿಯ ಮಾತನ್ನು ಅಲ್ಪವಾದರೂ ಪಾಲಿಸಿ. ‌ಇದರಿಂದ ಖುಷಿಯಾಗುವುದು. ಮನಸ್ಸಿನಲ್ಲಿರುವ ಸಂಕಟವನ್ನು ಯಾರ ಬಳಿಯಾದರೂ ಹೇಳಿಕೊಳ್ಳಿ. ವಾಹನ ಚಾಲನೆಯಲ್ಲಿ ಅವಸರ ಬೇಡ. ನಿಮಗೆ ಸಂಬಂಧಿಸದ ವಿಚಾರಗಳಲ್ಲಿ ಪ್ರವೇಶವನ್ನು ಪಡೆಯುವುದು ಬೇಡ. ವ್ಯವಹಾರದ ದಾಖಲೆಗಳು ಸರಿಯಾಗಿ ಇಟ್ಟುಕೊಳ್ಳುವಿರಿ. ಉನ್ನತ ವಿದ್ಯಾಭ್ಯಾಸಕ್ಕೆ ಮನೆಯಿಂದ ದೂರವಿರಲು ಯತ್ನಿಸುವಿರಿ. ವಾಹನಕ್ಕಾಗಿ ಸಾಲ ಮಾಡಬೇಕಾಗುವುದು. ದಾಂಪತ್ಯದಲ್ಲಿ ಪರಸ್ಪರರ ಹೊಂದಾಣಿಕೆಯು ಕಾಣಿಸುವುದು. ಮಕ್ಕಳನ್ನು ಪಡೆದುಕೊಳ್ಳುವ ಚಿಂತೆಯು ಕಾಡುವುದು. ಎಂತಹ ಅವಕಾಶಗಳು ಸಿಕ್ಕರೂ ಅದನ್ನು ಕೈ ಚೆಲ್ಲಿ ಕೂರುವುದು ಬೇಡ.

ವೃಶ್ಚಿಕ ರಾಶಿ : ನಿಮ್ಮ ಸುದೀರ್ಘ ಕಾರ್ಯಗಳಿಗೆ ಒಂದು ಸಣ್ಣ ವಿರಾಮವನ್ನು ಹೇಳುವಿರಿ. ಸಂಗಾತಿಯ ಕಡೆಯಿಂದ ನಿಮಗೆ ಬೆಂಬಲವು ಸಿಕ್ಕಿದರೂ ನಿಮಗೆ ಯಾವುದೇ ಧೈರ್ಯ ಸಾಲದು. ನಿಮ್ಮ ಮೇಲೆ‌ ಕೆಲವು ಆರೋಪಗಳು ಕೇಳಿಬರಬಹುದು. ಉದ್ಯೋದ ಸ್ಥಳದಲ್ಲಿ ನಿಮ್ಮನ್ನು ಸ್ಥಾನಭ್ರಷ್ಟರಾಗುವ ಭೀತಿಯು ಇರಲಿದೆ. ವಿದ್ಯಾರ್ಥಿಗಳು ಓದಿನ ಕಡೆ ವಿಶೇಷ ಗಮನವನ್ನು ಕೊಡುವುದು ಕಷ್ಟವಾದೀತು. ಬಂಧುಗಳ ಕುಹಕಕ್ಕೆ ಸಿಲುಕುವಿರಿ. ಆಸ್ತಿಯಲ್ಲಿ ಸಮ ಪಾಲು ಸಿಗದೇ ನಿಮಗೆ ವಾದಕ್ಕಿಳಿಯುವಿರಿ. ವಿವಾಹಕ್ಕೆ ಸಂಬಂಧಿಸಿದಂತೆ ಕೆಲವು ನಿರ್ಧಾಗಳನ್ನು ನೀವು ತಪ್ಪಾಗಿ ತೆಗೆದುಕೊಳ್ಳುವಿರಿ. ಅದಕ್ಕೆ ವಿವಾಹವು ಮುಂದೂಡುವುದು. ಭೂಮಿಯ ವ್ಯವಹಾರಕ್ಕೆ ಆಪ್ತರನ್ನು ಜೋಡಿಸಿಕೊಳ್ಳುವಿರಿ. ಇನ್ನೊಬ್ಬರ ಒತ್ತಾಯದ ಕಾರಣಕ್ಕೆ ನೀವು ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗುವಿರಿ. ಮಕ್ಕಳಿಂದ ಆರ್ಥಿಕ ಸಹಾಯವು ಸಿಗುವುದು.