Horoscope: ರಾಶಿಭವಿಷ್ಯ, ಈ ರಾಶಿಯವರಿಗೆ ಭವಿಷ್ಯದ ಬಗ್ಗೆ ಅತಿಯಾದ ಆಲೋಚನೆ ಇರಲಿದೆ

| Updated By: Rakesh Nayak Manchi

Updated on: Dec 11, 2023 | 12:30 AM

ಈ ದಿನ ಯಾರಿಗೆ ಸೂಕ್ತ? ಧಾರ್ಮಿಕ ಕಾರ್ಯಕ್ರಮ ನಡೆಸಬಹುದೇ? ವೃತ್ತಿಯಲ್ಲಿ ಬದಲಾವಣೆಗಳು ಇವೆಯೇ ಎಂಬಿತ್ಯಾದಿ ಮಾಹಿತಿಗಳು ದಿನಭವಿಷ್ಯದಲ್ಲಿ ತಿಳಿದುಕೊಳ್ಳಬಹುದು. ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ ಇಂದಿನ (ಡಿಸೆಂಬರ್ 11) ಭವಿಷ್ಯ ಹೇಗಿದೆ ಎಂಬುದು ಇಲ್ಲಿದೆ.

Horoscope: ರಾಶಿಭವಿಷ್ಯ, ಈ ರಾಶಿಯವರಿಗೆ ಭವಿಷ್ಯದ ಬಗ್ಗೆ ಅತಿಯಾದ ಆಲೋಚನೆ ಇರಲಿದೆ
ಇಂದಿನ ದಿನಭವಿಷ್ಯ
Image Credit source: iStock Photo
Follow us on

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿರುತ್ತದೆ. ಪ್ರತಿಯೊಂದು ರಾಶಿಗಳು ತಮ್ಮದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಕೈ ಉಜ್ಜಿ ಮುಖಕ್ಕೆ ಒತ್ತಿ ನಿಧಾನವಾಗಿ ಕಣ್ಣು ತೆರೆದು ಪ್ರಪಂಚವನ್ನು ನೋಡಿದ ನಂತರ ಇಂದು ತಮ್ಮ ಭವಿಷ್ಯ ಹೇಗಿದೆ ಎಂದು ಅರಿತುಕೊಳ್ಳುತ್ತಾರೆ. ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ ಇಂದಿನ (ಡಿಸೆಂಬರ್ 11) ರಾಶಿಭವಿಷ್ಯ (Horoscope) ಹೇಗಿದೆ ಎಂಬುದು ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಜ್ಯೇಷ್ಠಾ, ಮಾಸ: ಕಾರ್ತಿಕ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ಅನೂರಾಧಾ, ಯೋಗ: ಸುಕರ್ಮ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 48 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 03 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 08:13 ರಿಂದ 09:37ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 11:01 ರಿಂದ ಮಧ್ಯಾಹ್ನ 12:26ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 01:50 ರಿಂದ 03:14ರ ವರೆಗೆ.

ಸಿಂಹ ರಾಶಿ: ಸಣ್ಣ ಆದಾಯ ಮೂಲವನ್ನು ಕಡೆಗಣಿಸಬಹುದು. ನಿಮ್ಮ ಕ್ರಮಬದ್ಧವಾದ ನಡೆಗಳು ನಿಮಗೇ ಅಡ್ಡಗಾಲಾದಂತೆ ತೋರುವುದು. ನಿಮ್ಮದೆಂದುಕೊಂಡವು ವಸ್ತುವು ನಿಮ್ಮಿಂದ ದೂರವಾಗಬಹುದು. ಬೇಸರಪಟ್ಟುಕೊಳ್ಳುವ ಸಾಧ್ಯತೆ ಇದೆ. ಇಂದುಬಅತಿಯಾದ ನಿದ್ರೆಯಿಂದ ಜಾಡ್ಯವು ಬರುವುದು. ದೈಹಿಕ ಶ್ರಮವು ಇಂದು ಹೆಚ್ಚಿರುವುದು. ನಿಮ್ಮ ಶಿಷ್ಯರಿಂದ ನಿಮಗೆ ಉಡುಗೊರೆ ಸಿಗುವ ಸಾಧ್ಯತೆ ಇದೆ. ಭೂಮಿಯನ್ನು ಮಾರಾಟಮಾಡುವ ಸ್ಥಿತಿಯು ಬರಬಹುದು. ಉತ್ಸಾಹದಿಂದ ನೀವು ಇಂದಿನ ಕಾರ್ಯವನ್ನು ಮಾಡುತ್ತಿದ್ದರೂ ದಿನದ ಕೊನೆಗೆ ಸಲ್ಲದ ಮಾತುಗಳನ್ನು ನೀವು ಕೇಳಬೇಕಾದೀತು. ಭವಿಷ್ಯದ ಬಗ್ಗೆ ಅತಿಯಾದ ಆಲೋಚನೆ ಇರಲಿದೆ. ಸಹೋದರನಿಂದ ನಿಮಗೆ ಸಮಸ್ಯೆ ಆಗಬಹುದು. ಹಠದ ಸ್ವಭಾವದಿಂದ ಸಂಗಾತಿಗೆ ಕಿರಿಕಿರಿ ಎನಿಸಬಹುದು.

ಕನ್ಯಾ ರಾಶಿ: ಕೈ ಮೀರಿದ ಅನಂತರ ನಿಮಗೆ ಯಾವ ವಿಚಾರವನ್ನೂ ಏನನ್ನೂ ಮಾಡಲಾಗದು. ಒತ್ತಡಗಳು ನಾನಾ ಭಾಗಗಳಿಂದ ಬರಬಹುದು. ಅಧಿಕಾರವರ್ಗದಿಂದ ಶೋಷಣೆಗೆ ಒಳಗಾಗುವಿರಿ. ನಿಮ್ಮಿಂದ ಉಪಕಾರ ಪಡೆದವರು ನಿಮ್ಮ ವಿರುದ್ಧ ಬೀಳಬಹುದು. ಬದುಕಿಗೆ ತಿರುವು ಬರುವ ಸಾಧ್ಯತೆ ಇದೆ. ಇಂದಿನ ಕಾರ್ಯವು ನಿಮಗೆ ಸಮಾಧಾನ ಕೊಡದೇ ಇರಬಹುದು. ಭೋಗವಸ್ತುಗಳನ್ನು ಅನವಶ್ಯಕವಾಗಿ ಖರೀದಿಸುವಿರಿ. ನಿಮ್ಮ ಇಷ್ಟದವರು ನಿಮ್ಮ ಭೇಟಿಯಾಗಬಹುದು. ಸಣ್ಣ ಉಳಿತಾಯಕ್ಕೆ ಇಂದು ಬೆಲೆಯು ಬಂದಂತಾಗುವುದು. ಜೀವನದ ಲಕ್ಷ್ಯವು ಬೇರೆ ಕಡೆಗೆ ಇರಲಿದೆ. ಏನಾದರೂ ಮಾಡುತ್ತ ನಿಮ್ಮ ಮನಸ್ಸಿಗೆ ಕೆಲಸವನ್ನು ಕೊಡುವಿರಿ. ಜಾಣ್ಮೆಯಿಂದ ಇಂದು ನೀವು ಪ್ರಶಂಸೆಯನ್ನು ಪಡೆಯುವಿರಿ. ವೃತ್ತಿಯಲ್ಲಿ ಕೆಲವು ಸಂತೋಷದ ಕ್ಷಣಗಳು ನಿಮ್ಮದಾಗಲಿವೆ. ಮನೋವಿಕಾರವನ್ನು ಎಲ್ಲರೆದುರೂ ತೋರಿಸುವುದು ಬೇಡ.

ತುಲಾ ರಾಶಿ: ನಾಲ್ಕಾರು ಕಾರ್ಯಗಳನ್ನು ಒಂದೇ ಸಮನಾಗಿ ಕೊಂಡೊಯ್ಯುವ ಚಾಣಕ್ಷತೆ ನಿಮಗೆ ಇರಲಿದೆ. ಗುಟ್ಟನ್ನು ಎಷ್ಟೇ ಒತ್ತಾಯ ಮಾಡಿದರೂ ಬಿಟ್ಟುಕೊಡಲಾರಿರಿ. ಇಂದಿನ ಎಲ್ಲ ಕಾರ್ಯದಲ್ಲಿಯೂ ಜಯವನ್ನು ಪಡೆಯುವಿರಿ. ಆರ್ಥಿಕಸ್ಥಿತಿಯು ಸುಧಾರಿಸಿದ್ದು ನಿಮಗೆ ಸ್ವಲ್ಪ ನೆಮ್ಮದಿ ಇರುವುದು. ಹಿರಿಯರಲ್ಲಿ ಭಕ್ತಿಯನ್ನು ತೋರಿಸುವಿರಿ. ಸಮಸ್ಯೆಯನ್ನು ಬರುವ ಮೊದಲೇ ಯೋಚಿಸಿ ಅದಕ್ಕೆ ಬೇಕಾದ ಸಿದ್ಧತೆಯಲ್ಲಿ ಇರಿ. ನಿರೋದ್ಯೋಗ ಸಮಸ್ಯೆಯಿಂದ ಮಾನಸಿಕ ಹಿಂಸೆಯನ್ನು ಅನುಭವಿಸುವಿರಿ. ನೆಚ್ಚಿನ ತಾಣವು ನಿಮಗೆ ಹೊಸ ಉತ್ಸಾಹವನ್ನು ನೀಡುವುದು. ಸಿಕ್ಕ ಸಣ್ಣ ಅವಕಾಶಗಳನ್ನು ಸದುಪಯೋಗಿಸಿಕೊಳ್ಳಿ. ಇಷ್ಟ ದೇವರನ್ನು ಪ್ರಾರ್ಥಿಸಿ ನೀವು ಮುಂದಿನ ಕಾರ್ಯಗಳಿಗೆ ತೆರಳುವಿರಿ. ನಿಮ್ಮ ಕೆಲಸದಲ್ಲಿ ಇಂದು ಅಡತಡೆಗಳು ಬರಲಿದೆ. ಅದನ್ನು ಗಂಭಿರವಾಗಿ ತೆಗೆದುಕೊಳ್ಳುವುದು ಬೇಡ.

ವೃಶ್ಚಿಕ ರಾಶಿ: ಮಕ್ಕಳನ್ನು ಅತಿಯಾದ ಸಲುಗೆಯಿಂದ ಬೆಳೆಸಿ ಕಷ್ಟಪಡುವಿರಿ. ಹೊಸ ಪ್ರದೇಶಕ್ಕೆ ಬಹಳ ದಿನಗಳ ಅನಂತರ ಹೋಗಲಿದ್ದು, ಬಹಳ ನೆಮ್ಮದಿಯನ್ನು ಪಡೆಯುವಿರಿ. ಇಂದು ಕಛೇರಿಯನ್ನು ಮಹಿಳೆಯರು ನಿರ್ವಹಿಸಬೇಕಾಗುವುದು. ಮಾಡದ ಕಾರ್ಯಕ್ಕೆ ಅಪವಾದ ಬರುವುದು. ನಿರಂತರ ಕೆಲಸವು ನಿಮಗೆ ಬೇಸರ ತಂದೀತು. ಇಂದು ವೃತ್ತಿಯಲ್ಲಿ ಆತಂಕವು ಬರಬಹುದು. ಪ್ರಾಣಿಗಳಿಂದ ಭೀತರಾಗುವ ಸಾಧ್ಯತೆ ಇದೆ. ನಿಮ್ಮ ಇಷ್ಟದವರ ಭೇಟಿಯಾಗುವಿರಿ. ಎದುರಿನವರ ಇಂಗಿತವನ್ನು ತಿಳಿದುಕೊಳ್ಳಲು ಕಷ್ಟವಾದೀತು. ನಿಮ್ಮ ಸಾಮರ್ಥ್ಯಕ್ಕೆ ಯೋಗ್ಯವಾದ ಕೆಲಸವನ್ನು ಮಾಡಿ. ಯಾರ ಬಗ್ಗೆಯೂ ಅನಗತ್ಯ ಟೀಕೆಗಳು ಬೇಡ. ನೌಕರರ ವಿಚಾರದಲ್ಲಿ ಅಸಮಾಧಾನವಿರಲಿದೆ. ಆಧ್ಯಾತ್ಮದ ಕಡೆ ಮನಸ್ಸು ಇರಬಹುದು. ಇನ್ನೊಬ್ಬರಿಗೆ ಹೋಲಿಸಿಕೊಂಡು ಸಂಕಟಪಡುವಿರಿ. ಇಂದು ನೀವು ಸಂತೋಷ ಆಗದೇಹೋಗಬಹುದು. ನಿಮ್ಮ ವ್ಯಕ್ತಿತ್ವಕ್ಕೆ ವಿರುದ್ಧವಾದ ಮಾತುಗಳು ಎಲ್ಲ ಕಡೆ ಇರಲಿವೆ.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ