AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಈ ರಾಶಿಯವರು ಸೋಲನ್ನು ಅಷ್ಟು ಸುಲಭವಾಗಿ ಒಪ್ಪಿಕೊಳ್ಳಲ್ಲ

ಈ ದಿನ ಯಾರಿಗೆ ಸೂಕ್ತ? ಧಾರ್ಮಿಕ ಕಾರ್ಯಕ್ರಮ ನಡೆಸಬಹುದೇ? ವೃತ್ತಿಯಲ್ಲಿ ಬದಲಾವಣೆಗಳು ಇವೆಯೇ ಎಂಬಿತ್ಯಾದಿ ಮಾಹಿತಿಗಳು ದಿನಭವಿಷ್ಯದಲ್ಲಿ ತಿಳಿದುಕೊಳ್ಳಬಹುದು. ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ ಇಂದಿನ (ಡಿಸೆಂಬರ್ 12) ಭವಿಷ್ಯ ಹೇಗಿದೆ ಎಂಬುದು ಇಲ್ಲಿದೆ.

Horoscope: ಈ ರಾಶಿಯವರು ಸೋಲನ್ನು ಅಷ್ಟು ಸುಲಭವಾಗಿ ಒಪ್ಪಿಕೊಳ್ಳಲ್ಲ
ರಾಶಿ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: ವಿವೇಕ ಬಿರಾದಾರ|

Updated on:Dec 12, 2023 | 6:22 AM

Share

ನಿತ್ಯ ಎದ್ದ ಕೂಡಲೇ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುವ ಅಭ್ಯಾಸ ಕೆಲವರಲ್ಲಿ ಇರುತ್ತದೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ? ಇದೆಯಾ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಇಂದಿನ (ಡಿಸೆಂಬರ್ 12) ನಿಮ್ಮ ರಾಶಿಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಜ್ಯೇಷ್ಠಾ, ಮಾಸ: ಕಾರ್ತಿಕ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ಅಮಾವಾಸ್ಯೆ, ನಿತ್ಯನಕ್ಷತ್ರ: ಜ್ಯೇಷ್ಠಾ, ಯೋಗ: ಧೃತಿ, ಕರಣ: ಶಕುನಿ, ಸೂರ್ಯೋದಯ ಬೆಳಗ್ಗೆ 06 ಗಂಟೆ 48 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 03 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:15 ರಿಂದ 04:39ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:38 ರಿಂದ ಮಧ್ಯಾಹ್ನ 11:02ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:26 ರಿಂದ 01: 51ರ ವರೆಗೆ.

ಸಿಂಹ ರಾಶಿ: ಸಂಕೀರ್ಣ ಕಾರ್ಯವು ನಿಮಗೆ ಪೂರ್ಣವಾಗಿ ಅರ್ಥವಾಗದು. ಸೋಲನ್ನು ಅಷ್ಟು ಸುಲಭವಾಗಿ ಒಪ್ಪಿಕೊಳ್ಳಲಾರಿರಿ. ಸರ್ಕಾರಿ ಉದ್ಯೋಗಿಗಳಿಗೆ ಹೆಚ್ಚುವರಿ ಜವಾಬ್ದಾರಿಯನ್ನು ನಿರ್ವಹಿಸಬೇಕಾಗುವುದು. ಪ್ರೀತಿಯಲ್ಲಿ ಸಣ್ಣ ಕಲಹವಾಗಬಹುದು. ಸಂಗಾತಿಯ ವಿಚಾರದಲ್ಲಿ ನಿಮಗೆ ಪೂರ್ಣ ವಿಶ್ವಾಸವಿರದು. ಇಂದು ನಿಮ್ಮ ಆರ್ಥಿಕತೆಯ ಸ್ಥಿತಿಯು ದರಿಯಾ ಗೊತ್ತಾಗಲಿದೆ. ಆಕಸ್ಮಿಕವಾಗಿ ಬರುವ ಹಣವನ್ನು ಭವಿಷ್ಯಕ್ಕಾಗಿ ಕೂಡಿ ಇಡುವಿರಿ. ಖಾಸಗಿ ಸಂಸ್ಥೆಯಲ್ಲಿ ನಿಮ್ಮ ಸ್ಥಾನವು ಏರಲಿದೆ. ಅಧಿಕಾರ ಇದೆ ಎಂದು ಏನನ್ನಾದರೂ ಹೇಳುವುದು ಬೇಡ. ಪರ ಊರಿನಲ್ಲಿರುವ ನಿಮಗೆ ಆರೋಗ್ಯವು ಹದ ತಪ್ಪುವ ಚಿಂತೆ ಇರುವುದು. ಉದ್ಯಮದಲ್ಲಿ ಊಹಿಸಲಾಗದ ಸಮಸ್ಯೆಯನ್ನು ತಂದು ಕೊಳ್ಳುವಿರಿ. ತಜ್ಞರಿಂದ ಅದನ್ನು ಸರಿ ಮಾಡಿಕೊಳ್ಳುವುದು ಉತ್ತಮ. ಯಾರನ್ನೋ ಅನುಕರಿಸುತ್ತ ನೀವು ಸಂತೋಷವನ್ನು ಪಡುವಿರಿ.

ಕನ್ಯಾ ರಾಶಿ: ನಿರಂತರ ಸೋಲಿನಿಂದ ನೀವು ಹತಾಶರಾಗುವಿರಿ. ಕೆಲವು ಸಂಗತಿಗಳನ್ನು ನಿಮ್ಮನ್ನೇ ಹುಡುಕಿಕೊಂಡು ಬಂದು ನಿಮ್ಮ ಮನಸ್ಸನ್ನು ಮತ್ತಷ್ಟು ದುರ್ಬಲಗೊಳಿಸೀತು. ಮಾರುಕಟ್ಟೆಯ ವ್ಯವಹಾರವನ್ನು ಅರಿತು ಹೂಡಿಕೆ ಮಾಡಿ. ಒಳ್ಳೆಯ ಸಮಯವನ್ನು ಕಳೆದುಕೊಳ್ಳಬೇಕಾಗುವುದು. ಮನಃಸ್ಥಿತಿಯು ಸರಿ ಇಲ್ಲದ ಕಾರಣ ನೌಕರರ ಮೇಲೆ ಸಿಟ್ಟಾಗುವಿರಿ. ಸಂಗಾತಿಯ ಮಾತಿಗೆ ಸ್ಪಂದನೆಯೂ ಇರದು. ವಾಗ್ವಾದವಾಗುವುದೆಂಬ ಭಯವೂ ನಿಮ್ಮನ್ನು ಕಾಡುವುದು. ನಿಮ್ಮ ಆರ್ಥಿಕತೆಯನ್ನು ಗೌಪ್ಯವಾಗಿ ಇಡಬೇಕು ಎನಿಸುವುದು. ಭೂಮಿಯ ವ್ಯವಹಾರವು ಪೂರ್ಣ ಲಾಭವನ್ನು ತಂದುಕೊಡದು. ಚಿಂತೆಗಳೇ ಇರುವ ಮನಸ್ಸಿನಲ್ಲಿ ದೇವರ ಭಕ್ತಿಯನ್ನು ತುಂಬಿಕೊಂಡು ಸಮಾಧಾನದಿಂದ ಇರಿ. ನಿಮ್ಮ ಶುಷ್ಕ ಮಾತು ಇತರರಿಗೆ ಇಷ್ಡವಾಗದು. ಮಾತನ್ನು ಹರಿಬಿಟ್ಟು ಎಲ್ಲರ ಸಿಟ್ಟಿಗೆ ಗುರಿಯಾಗುವಿರಿ.

ತುಲಾ ರಾಶಿ: ನಿಮಗೆ ಸಿಗುವ ಬೆಂಬಲವನ್ನು ಸರಿಯಾಗಿ ಇಟ್ಟುಕೊಳ್ಳಿ. ಇನ್ನೊಬ್ಬರ ಮನೋಗತವನ್ನು ನೀವು ಅರ್ಥಮಾಡಿಕೊಳ್ಳಲಾರಿರಿ. ನಿಮ್ಮ ವಿದ್ಯಾಭ್ಯಾಸದ ಕನಸನ್ನು ಕುಟುಂಬದಲ್ಲಿ ಹಂಚಿಕೊಳ್ಳುವಿರಿ. ನಿಮ್ಮ ಹಳೆಯ ಪ್ರತಿಜ್ಞೆಯನ್ನು ಇಂದು ಪೂರ್ಣ ಮಾಡಿದ ಸಂತೋಷವು ಇರುವುದು. ವಿವಾಹದ ಸುಖದಲ್ಲಿ ನೀವಿರುವಿರಿ. ಪಾಪಪ್ರಜ್ಞೆಯು ನಿಮ್ಮನ್ನು ಖಿನ್ನವಾಗಿಸಬಹುದು. ಸಕಾರಾತ್ಮಕ ಆಲೋಚನೆಯನ್ನು ಪ್ರಯತ್ನಪೂರ್ವಕವಾಗಿ ಮಾಡುವಿರಿ. ಯಾರನ್ನೂ ಸರಿಯಾಗಿ ಅರ್ಥಮಾಡಿಕೊಳ್ಳದೇ ನಿಮ್ಮ ಬಳಿ ಅವರನ್ನು ಬಿಟ್ಟುಕೊಳ್ಳಬೇಡಿ. ವಿದ್ಯುತ್ ಉಪಕರಣಗಳ ಖರೀದಿಯನ್ನು ಮಾಡುವಿರಿ. ಯಾರದೋ ಕೈಗೊಂಬೆಯಾಗಿ ವರ್ತಿಸಬೇಕಗುವುದು. ವೃತ್ತಿಯಲ್ಲಿ ನಿಮ್ಮ ತಿಳಿವಳಿಕೆಯನ್ನು ಪ್ರದರ್ಶಿಸಿ ನಿಮ್ಮ ಸಾಮರ್ಥ್ಯವನ್ನು ಪರಿಚಯಿಸುವಿರಿ. ಬಹಳ ಕಾಲದ ಹಿಂದೇ ಆಲೋಚಿಸಿದ್ದ ಕಾರ್ಯವು ಇಂದು ಆರಂಭಿಸಬೇಕು ಎಂದೆನಿಸುವುದು.

ವೃಶ್ಚಿಕ ರಾಶಿ: ಒತ್ತಡವಿಲ್ಲದೇ ಇಂದಿನ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ಮುಗಿಸುವಿರಿ. ಒಂದಿಷ್ಟು ವಿಶ್ರಾಂತಿಗೆ ಸಮಯವು ಸಿಗುವುದು. ಮನೆಗೆ ಬೇಕಾದ ವಸ್ತುಗಳ ಖರೀದಿಯಲ್ಲಿ ನೀವು ಮಗ್ನರಾಗುವಿರಿ. ವ್ಯಾಪಾರದ ಹೊಸ ಅನುಭವವು ನಿಮಗೆ ಅಚ್ಚರಿಯಾದೀತು. ಗೃಹನಿರ್ಮಾಣದ ದಾಖಲಾತಿಗೆ ನೀವು ಓಡಾಟ ಮಾಡಬೇಕಾಗುವುದು. ನಿಮ್ಮ ನಿರ್ಧಾರವನ್ನು ಬದಲಿಸಿಕೊಳ್ಳುವುದು ಕಷ್ಟವಾದೀತು. ಆಡಂಬರಕ್ಕೆ ಹೆಚ್ಚು ಒತ್ತು ನೀಡುವಿರಿ. ಸಾರ್ವಜನಿಕ ಮನ್ನಣೆಯನ್ನು ಗಳಿಸವಿರಿ. ಉದ್ಯಮದ ವಿಸ್ತರಣೆಗೆ ನಿಮ್ಮ ಕ್ರಮವು ಯಶಸ್ವಿಯಾಗುವುದು. ಏಕಾಗ್ರ ಮನಸ್ಸಿನಿಂದ ನೀವು ಇಂದಿನ ಕೆಲಸದಲ್ಲಿ ತೊಡಗುವಿರಿ. ಇನ್ನೊಬ್ಬರ ಮಾತಿನ ಬಾಣವು ನಿಮ್ಮನ್ನು ತಿವಿಯಬಹುದು. ಕೆಲವು ಘಟನೆಗಳು ಕೌಟುಂಬಿಕ ಕಾಳಜಿಯನ್ನು ಹೆಚ್ಚು ಮಾಡುವುದು. ಜಾಣ್ಮೆಯ ವ್ಯವಹಾರವನ್ನು ಇಂದು ಮಾಡಬೇಕಾದೀತು. ಒಂದೇ ಶ್ರಮಕ್ಕೆ ಎರಡು ಫಲವನ್ನು ನೀವು ಪಡೆಯುವಿರಿ. ಉದ್ಯೋಗದ ಸ್ಥಳದಲ್ಲಿ ಸಿಕ್ಕ ಪ್ರಶಂಸೆಯಿಂದ ಸಂತೋಷವು ಇಮ್ಮಡಿಯಾಗುವುದು.

Published On - 12:12 am, Tue, 12 December 23

Follow Us
Lohitha Hebbar
Lohitha Hebbar

ವಿದ್ವಾನ್​ ಲೋಹಿತ ಶರ್ಮಾ. ಸಾಗರ ಮೂಲದ ಇಡುವಾಣಿ ಗ್ರಾಮ. ವೇದ ಹಾಗೂ ಸಂಸ್ಕೃತ ಅಧ್ಯಯನ, ಜ್ಯೋತಿಷ್ಯದಲ್ಲಿ ವಿದ್ವತ್ತನ್ನು ಸಂಪಾದಿಸಿರುತ್ತಾರೆ. ಹಸ್ತಪ್ರತಿಶಾಸ್ತ್ರದಲ್ಲಿ ಡಿಪ್ಲೋಮಾ ಮಾಡಿರುತ್ತಾರೆ. ಜ್ಞಾನ-ವಿಜ್ಞಾನ ಅಧ್ಯಯನ ಕೇಂದ್ರ ಬೆಂಗಳೂರಿನಲ್ಲಿ ಸಂಶೋಧಕರಾಗಿ ಮೌಲ್ಯಶಿಕ್ಷಣ ಎನ್ನುವ ಪಠ್ಯವನ್ನು ಒಂದರಿಂದ ಹತ್ತನೇ ತರಗತಿಯ ಮಕ್ಕಳಿಗೆ ರಚಿಸಿದ್ದಾರೆ. ಧರ್ಮಭಾರತೀ, ತ್ರಿವಿಕ್ರಮ ಮುಂತಾದ ಮಾಸಪತ್ರಿಕೆಯಲ್ಲಿ ಸಂಪಾದಕನಾಗಿ ಕಾರ್ಯ ಮಾಡಿರುತ್ತಾರೆ. ಹಿತೋಪದೇಶ, ಸಂತಗೋರಕ್ಷನಾಥ, ಮಹರ್ಷಿ ಶಂಖಲಿಖಿತ ಗ್ರಂಥಗಳನ್ನು ಬರೆದಿದ್ದಾರೆ. ಅನೇಕ ಲೇಖನಗಳು, ಕಥೆಗಳು ದಿನಪತ್ರಿಕೆಗಳಲ್ಲಿ ಪ್ರಕಟವಾಗಿದೆ. ಆಸಕ್ತಿಯ ವಿಷಯ ಸಂಗೀತ, ನಾಟಕ, ಓದು, ಬರಹ, ಚಾರಣ, ಡಿಜಿಟಲ್ ವಿನ್ಯಾಸ. ಸದ್ಯ ಶಿಕ್ಷಕನಾಗಿ ಕಾರ್ಯ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ